Test Cricket : ಟೆಸ್ಟ್​ ಸರಣಿಯಲ್ಲಿ 3 ಪಂದ್ಯಗಳು ಇರಲೇಬೇಕು; ಕ್ರಿಕೆಟ್​ನಲ್ಲಿ ಹೊಸ ನಿಯಮ - Vistara News

ಕ್ರೀಡೆ

Test Cricket : ಟೆಸ್ಟ್​ ಸರಣಿಯಲ್ಲಿ 3 ಪಂದ್ಯಗಳು ಇರಲೇಬೇಕು; ಕ್ರಿಕೆಟ್​ನಲ್ಲಿ ಹೊಸ ನಿಯಮ

Test Cricket : ಟೆಸ್ಟ್​ ಕ್ರಿಕೆಟ್​ನ ಜನಪ್ರಿಯತೆ ಹೆಚ್ಚಿಸುವ ಉದ್ದೇಶದಿಂದ ಮೂರು ಪಂದ್ಯಗಳನ್ನು ಆಡಿಸುವ ಶಿಫಾರಸು ಮಾಡಿದೆ.

VISTARANEWS.COM


on

Test Cricket 1
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಟೆಸ್ಟ್ ಕ್ರಿಕೆಟ್​ನ (Test Cricket) ಜನಪ್ರಿಯತೆ ಹೆಚ್ಚಿಸಲ, ಶ್ರೀಲಂಕಾದ ದಂತಕಥೆ ಕುಮಾರ ಸಂಗಕ್ಕಾರ ನೇತೃತ್ವದ ಎಂಸಿಸಿಯ (ಮೆರಿಲ್​ಬೋನ್​ ಕ್ರಿಕೆಟ್​ ಕ್ಲಬ್​) ಐಸಿಸಿಗೆ ಕೆಲವು ಕ್ರಮಗಳನ್ನು ಶಿಫಾರಸು ಮಾಡಿದೆ. ಮೆರಿಲ್ಬೋನ್ ಕ್ರಿಕೆಟ್ ಕ್ಲಬ್ ಕ್ರಿಕೆಟ್ನ ನಿಯಮಗಳನ್ನು ವಿನ್ಯಾಸಗೊಳಿಸುವ ಜವಾಬ್ದಾರಿಯನ್ನು ಸಹ ಹೊಂದಿದೆ. ಎಂಸಿಸಿ ಪ್ರಕಾರ, ಮುಂದಿನ ಐಸಿಸಿ ಎಫ್​ಟಿಎಫ್ (ಫ್ಯೂಚರ್​ ಟೂರ್​ ಪ್ರೋಗ್ರಾಮ್​) ಋತುವಿನಿಂದ ಟೆಸ್ಟ್ ಸರಣಿಯೊಂದರಲ್ಲಿ ಪ್ರತಿ ತಂಡ ಮೂರು ಪಂದ್ಯಗಳನ್ನೇ ಆಡಲೇಬೇಕು ಎಂದು ಹೇಳಿದೆ. ಅಂದ ಹಾಗೆ ಮುಂದಿನ ಫ್ಯೂಚರ್ ಟೂರ್ಸ್ ಪ್ರೋಗ್ರಾಂ ಋತು 2028 ರಲ್ಲಿ ಪ್ರಾರಂಭವಾಗಲಿದೆ.

ಕೇಪ್​ಟೌನ್​ನಲ್ಲಿ ನಡೆದ ಸಭೆಯಲ್ಲಿ, ಎಂಸಿಸಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಹೈದರಾಬಾದ್​ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ಟೆಸ್ಟ್ ಪಂದ್ಯ ಮತ್ತು ಬ್ರಿಸ್ಬೇನ್​ನಲ್ಲಿ ನಡೆದ ಆಸ್ಟ್ರೇಲಿಯಾ-ವಿಂಡೀಸ್ ಟೆಸ್ಟ್ ಪಂದ್ಯವನ್ನು ಉಲ್ಲೇಖಿಸಲಾಗಿದೆ. ಎರಡೂ ಪಂದ್ಯಗಳು ಇತಿಹಾಸದ ಉದಾಹರಣೆಯಾಗಿದ್ದು, ಸಾಕಷ್ಟು ಕ್ರಿಕೆಟ್ ಅಭಿಮಾನಿಗಳು ಪಂದ್ಯವನ್ನು ವೀಕ್ಷಿಸಿದ್ದಾರೆ. ಹೀಗಾಗಿ ಜನಪ್ರಿಯತೆ ಹೆಚ್ಚಿಸಲು ಮೂರು ಪಂದ್ಯಗಳನ್ನೇ ಆಯೋಜಿಸಬೇಕು ಎಂದು ಸಲಹೆ ನೀಡಿದೆ.

ಯಾರೆಲ್ಲ ಇದ್ದಾರೆ ಸಮಿತಿಯಲ್ಲಿ?

ಈ ಸಮಿತಿಯಲ್ಲಿ ಕುಮಾರ ಸಂಗಕ್ಕಾರ, ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ, ಮಹಿಳಾ ತಂಡ ಮಾಜಿ ವೇಗಿ ಜೂಲನ್ ಗೋಸ್ವಾಮಿ, ರಮೀಜ್ ರಾಜಾ, ಗ್ರೇಮ್ ಸ್ಮಿತ್, ಇಯಾನ್ ಮಾರ್ಗನ್, ಹೀದರ್ ನೈಟ್, ಕುಮಾರ್ ಧರ್ಮಸೇನಾ ಮತ್ತು ಜಸ್ಟಿನ್ ಲ್ಯಾಂಗರ್ ಇದ್ದಾರೆ.

ಬ್ರಿಸ್ಬೇನ್ ಮತ್ತು ಹೈದರಾಬಾದ್​ನಲ್ಲಿ ನಡೆದ ಎರಡು ಅದ್ಭುತ ಪುರುಷರ ಟೆಸ್ಟ್ ಪಂದ್ಯಗಳ ನಂತರ ಈ ಸಭೆ ನಡೆಯಿತು, ಇದು ಟೆಸ್ಟ್ ಪಂದ್ಯಕ್ಕೆ ಹೆಚ್ಚು ಪ್ರೇಕ್ಷಕರನ್ನು ಕರೆಯಿತು. ಆದರೆ ಆಸ್ಟ್ರೇಲಿಯಾ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡು ಪಂದ್ಯಗಳ ಸರಣಿಯಲ್ಲಿ ಮೂರನೇ ಇರದ್ದಕ್ಕೆ ಅಸಮಾಧಾನ ವ್ಯಕ್ತಗೊಂಡಿತು. ಪ್ರಸ್ತುತ ಆಡಲಾಗುತ್ತಿರುವ ರೋಮಾಂಚಕ ಚುಟುಕು ಟೆಸ್ಟ್ ಕ್ರಿಕೆಟ್ ಮತ್ತು ಸಾಂಪ್ರದಾಯಿಕ ಸ್ವರೂಪವನ್ನು ಉಳಿಸಿಕೊಳ್ಳಬೇಕಾಗಿದೆ. 2028ರಿಂದ ಮುಂದಿನ ಐಸಿಸಿ ಫ್ಯೂಚರ್ ಟೂರ್ಸ್ ಪ್ರೋಗ್ರಾಂ (ಎಫ್ಟಿಪಿ) ಯಿಂದ ಪುರುಷರ ಟೆಸ್ಟ್ ಸರಣಿಯನ್ನು ಕನಿಷ್ಠ ಮೂರು ಪಂದ್ಯಗಳಲ್ಲಿ ಆಡಬೇಕು ಎಂದು ಶಿಫಾರಸು ಮಾಡಲಾಗಿದೆ.

ಇದನ್ನೂ ಓದಿ : David Warner : ಅಪರೂಪದ ಸಾಧನೆ ಮಾಡಿದ ಆಸೀಸ್ ಬ್ಯಾಟರ್ ಡೇವಿಡ್ ವಾರ್ನರ್​

ಕಳೆದ ವರ್ಷ ಡಿಸೆಂಬರ್​ನಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಭಾರತ ಕೇವಲ ಎರಡು ಪಂದ್ಯಗಳನ್ನು ಆಡಿತ್ತು. ಕೇಪ್ ಟೌನ್ ನ ಸಹಾರಾ ಪಾರ್ಕ್ ನ್ಯೂಲ್ಯಾಂಡ್ಸ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಏಳು ವಿಕೆಟ್ ಗಳಿಂದ ಅದ್ಭುತ ಗೆಲುವು ಸಾಧಿಸಿತ್ತು. ಸರಣಿಯನ್ನು 1-1 ರಿಂದ ಸಮಬಲಗೊಳಿಸಲು ಸಾಧ್ಯವಾಯಿತು.

ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತಿದ್ದ ವೆಸ್ಟ್ ಇಂಡೀಸ್, ಬ್ರಿಸ್ಬೇನ್​ನಲ್ಲಿ ಆಡಿದ ಸರಣಿಯ ಎರಡನೇ ಪಂದ್ಯದಲ್ಲಿ ಅದ್ಭುತ ಪುನರಾಗಮನ ಮಾಡಿತು. ಈ ಪಂದ್ಯದಲ್ಲಿ ಆಸೀಸ್ 8 ರನ್​ಗಳಿಂದ ಸೋತಿತು ಮತ್ತು ವೆಸ್ಟ್ ಇಂಡೀಸ್ ವೇಗಿ ಶಮರ್ ಜೋಸೆಫ್ ‘ದಿ ಗಬ್ಬಾ’ದಲ್ಲಿ ಇತಿಹಾಸ ನಿರ್ಮಿಸಿದ್ದರು.

ಟೆಸ್ಟ್ ಕ್ರಿಕೆಟ್​​ನ ಜನಪ್ರಿಯತೆ ವರ್ಷದಿಂದ ವರ್ಷಕ್ಕೆ ಕ್ಷೀಣಿಸುತ್ತಿದೆ. ಟಿ 20 ಲೀಗ್​ಗಳು ಮತ್ತು ವೈಟ್ ಬಾಲ್ ಪಂದ್ಯಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ, ಪ್ರೇಕ್ಷಕರು 50 ಓವರ್ ಅಥವಾ ಟಿ 20 ಕ್ರಿಕೆಟ್ ವೀಕ್ಷಿಸುವತ್ತ ಗಮನ ಹರಿಸಿದ್ದಾರೆ. ​ನಲ್ಲಿ ಐದು ದಿನಗಳ ಪಂದ್ಯವನ್ನು ವೀಕ್ಷಿಸಲು ಹೆಚ್ಚಿನ ಜನರು ಸಿಗುವುದಿಲ್ಲ.

ಕೆಂಪು ಚೆಂಡಿನ ಸ್ವರೂಪದ ಜನಪ್ರಿಯತೆಯನ್ನು ಹೆಚ್ಚಿಸಲು, ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಸಹ ಅನೇಕ ಕ್ರಮಗಳನ್ನು ಕೈಗೊಂಡಿದೆ. ಪ್ರೇಕ್ಷಕರನ್ನು ಆಕರ್ಷಿಸಲು ಪಿಂಕ್ ಬಾಲ್ ಹಗಲು-ರಾತ್ರಿ ಟೆಸ್ಟ್ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಅನ್ನು ಪರಿಚಯಿಸಿದೆ. ಆಟಗಾರರು ತಮ್ಮ ಬೆನ್ನ ಹಿಂದೆ ಹೆಸರುಗಳು ಮತ್ತು ಜರ್ಸಿ ಸಂಖ್ಯೆಗಳೊಂದಿಗೆ ಆಡಲು ಅವಕಾಶ ನೀಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Amy Jones-Piepa Cleary: ನಿಶ್ಚಿತಾರ್ಥ ಮಾಡಿಕೊಂಡ ಇಂಗ್ಲೆಂಡ್​-ಆಸ್ಟ್ರೇಲಿಯಾ ತಂಡದ ಮಹಿಳಾ ಆಟಗಾರ್ತಿಯರು

Amy Jones-Piepa Cleary: ಇಂಗ್ಲೆಂಡ್​ ಆಟಗಾರ್ತಿ ಸಲಿಂಗ ವಿವಾಹವಾಗುತ್ತಿರುವ ಮೂರನೇ ನಿದರ್ಶನ ಇದಾಗಿದೆ. ಇದಕ್ಕೂ ಮುನ್ನ ಇಂಗ್ಲೆಂಡ್ ಮಹಿಳಾ ರಾಷ್ಟ್ರೀಯ ತಂಡದ ಕ್ರಿಕೆಟಿಗರಾದ ನತಾಲಿಯಾ ಸೀವರ್ ಮತ್ತು ಕ್ಯಾಥರಿನ್ ಬ್ರಂಟ್, ಡೇನಿಯಲ್ ವ್ಯಾಟ್(Danielle Wyatt) ಮತ್ತು ಜಾರ್ಜಿ ಹಾಡ್ಜ್(Georgie Hodge) ಸಲಿಂಗ ವಿವಾಹವಾಗಿದ್ದರು.

VISTARANEWS.COM


on

Amy Jones-Piepa Cleary
Koo

ಲಂಡನ್​: ಇತ್ತೀಚೆಗೆ ಕ್ರೀಡಾ ಕ್ಷೇತ್ರದಲ್ಲಿ ಸಲಿಂಗಿ ಜೋಡಿ ವಿವಾಹ ಹೆಚ್ಚಾಗಿ ನಡೆಯುತ್ತಿವೆ. ಅದರಲ್ಲೂ ಕ್ರಿಕೆಟ್​ ವಲಯದಲ್ಲಿ ಹೆಚ್ಚು. ಒಂದು ತಿಂಗಳ ಹಿಂದಷ್ಟೇ ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್​ ಆಟಗಾರ್ತಿ ಡೇನಿಯಲ್ ವ್ಯಾಟ್(Danielle Wyatt) ಅವರು ತನ್ನ ಬಹುಕಾಲ ಗೆಳತಿ ಜಾರ್ಜಿ ಹಾಡ್ಜ್(Georgie Hodge) ಅವರೊಂದಿಗೆ ಮದುವೆಯಾಗಿದ್ದರು. ಇದೀಗ ಇಂಗ್ಲೆಂಡ್​​ ಮತ್ತು ಆಸ್ಟ್ರೇಲಿಯಾ ಮಹಿಳಾ ಸ್ಟಾರ್​ ಕ್ರಿಕೆಟಿಗರಿಬ್ಬರು ನಿಶ್ಚಿತಾರ್ಥ(Amy Jones-Piepa Cleary Engagement) ಮಾಡಿಕೊಂಡಿದ್ದಾರೆ.

ಇಂಗ್ಲೆಂಡ್​ ತಂಡ ವಿಕೆಟ್​ ಕೀಪರ್​ ಆಮಿ ಜೋನ್ಸ್​(Amy Jones) ಮತ್ತು ಆಸ್ಟ್ರೇಲಿಯಾದ ಕ್ರಿಕೆಟ್​​​ ಆಟಗಾರ್ತಿ ಪೈಪಾ ಕ್ಲಿಯರಿ(Piepa Cleary) ಸಲಿಂಗಿ ವಿವಾಹವಾಗಲು(Amy Jones-Piepa Cleary) ಮುಂದಾಗಿರುವ ಜೋಡಿ. ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಿಶ್ಚಿತಾರ್ಥದ ಫೋಟೊವನ್ನು ಉಭಯ ಆಟಗಾರ್ತಿಯರು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದು ನಾವು ಜತೆಯಾಗಿ ಜೀವಿಸಲು ಮೊದಲ ಹೆಜ್ಜೆ ಇಟ್ಟಿದ್ದೇವೆ. ನಿಮ್ಮೆಲ್ಲರ ಆಶೀರ್ವಾದ ಇರಲಿ ಎಂದು ಬರೆದುಕೊಂಡಿದ್ದಾರೆ.

31 ವರ್ಷದ ಆಮಿ ಜೋನ್ಸ್ 2019 ರಲ್ಲಿ ಇಂಗ್ಲೆಂಡ್​ ತಂಡದ ಪರ ಪದಾರ್ಪಣೆ ಮಾಡಿದ್ದರು. ಇದುರೆಗೆ ಇಂಗ್ಲೆಂಡ್​ ಪರ 107 ಟಿ20, 91 ಏಕದಿನ ಮತ್ತು 6 ಟೆಸ್ಟ್​ ಪಂದ್ಯಗಳನ್ನು ಆಡಿದ್ದಾರೆ. ಏಕದಿನದಲ್ಲಿ(1951), ಟಿ20ಯಲ್ಲಿ (1515), ಟೆಸ್ಟ್​ನಲ್ಲಿ (116) ರನ್​ ಗಳಿಸಿದ್ದಾರೆ. ಆಮಿಯವರು ಮಹಿಳಾ ಬಿಗ್ ಬ್ಯಾಷ್ ಲೀಗ್‌ನಲ್ಲಿ ಪರ್ತ್ ಸ್ಕಾರ್ಚರ್ಸ್‌ಗಾಗಿ ಆಡುತ್ತಿರುವಾಗ 28 ವರ್ಷದ ಆಸ್ಟ್ರೇಲಿಯಾದ ವೇಗಿ ಪೈಪಾ ಕ್ಲಿಯರಿ ಜತೆ ಪ್ರೇಮಾಂಕುರವಾಗಿತ್ತು. ಇದೀಗ ಈ ಜೋಡಿ ಒಂದಾಗಿ ಜೀವನ ನಡೆಸಲು ಸಿದ್ಧರಾಗಿದ್ದಾರೆ.

ಇಂಗ್ಲೆಂಡ್​ ಆಟಗಾರ್ತಿ ಸಲಿಂಗ ವಿವಾಹವಾಗುತ್ತಿರುವ ಮೂರನೇ ನಿದರ್ಶನ ಇದಾಗಿದೆ. ಇದಕ್ಕೂ ಮುನ್ನ ಇಂಗ್ಲೆಂಡ್ ಮಹಿಳಾ ರಾಷ್ಟ್ರೀಯ ತಂಡದ ಕ್ರಿಕೆಟಿಗರಾದ ನತಾಲಿಯಾ ಸೀವರ್ ಮತ್ತು ಕ್ಯಾಥರಿನ್ ಬ್ರಂಟ್, ಡೇನಿಯಲ್ ವ್ಯಾಟ್(Danielle Wyatt) ಮತ್ತು ಜಾರ್ಜಿ ಹಾಡ್ಜ್(Georgie Hodge) ಸಲಿಂಗ ವಿವಾಹವಾಗಿದ್ದರು.

ಇದನ್ನೂ ಓದಿ Singer Suchitra: ಶಾರುಖ್ – ಕರಣ್ ಸಲಿಂಗಿಗಳು ಎಂದು ಹೇಳಿ ವಿವಾದ ಸೃಷ್ಟಿಸಿದ ತಮಿಳು ಗಾಯಕಿ!

ಡೇನಿಯಲ್ ವ್ಯಾಟ್(Danielle Wyatt) ಮತ್ತು ಜಾರ್ಜಿ ಹಾಡ್ಜ್(Georgie Hodge) ಇದೇ ಜೂನ್​ನಲ್ಲಿ ವಿವಾಹವಾಗಿದ್ದರು. ಕಳೆದ ವರ್ಷ ಮಾರ್ಚ್ 2ರಂದು ಈ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿತ್ತು. ‘ನಮ್ಮ ಮುಂದಿನ ಜೀವನವನ್ನು ದೃಢಪಡಿಸಿಕೊಳ್ಳುತ್ತಿದ್ದೇವೆ’ ಎಂದು ಮನೆಯ ಎಮೊಜಿಗಳನ್ನು ಹಾಕಿ ಟ್ವಿಟರ್​ ಪೋಸ್ಟ್​ ಮೂಲಕ ಡೇನಿಯಲ್‌ ವ್ಯಾಟ್‌ ತಮ್ಮ ವಿವಾಹದ(Danielle Wyatt Marriage) ತಮ್ಮ ವಿವಾಹದ ವಿಚಾರವನ್ನು ಪ್ರಕಟಿಸಿ ಮದುವೆಯ ಮೂರು ಫೋಟೊಗಳನ್ನು ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದರು.

ಡೇನಿಯಲ್ ವ್ಯಾಟ್(Danielle Wyatt) ಮತ್ತು ಜಾರ್ಜಿ ಹಾಡ್ಜ್ ಜೋಡಿಗಳಿಗೆ ಭಾರತ ಮಹಿಳಾ ತಂಡದ ಆಟಗಾರ್ತಿ ಶೆಫಾಲಿ ವರ್ಮಾ, ಸ್ಮೃತಿ ಮಂಧಾನ, ಜೆಮೀಮಾ ರೋಡ್ರಿಗಸ್​ ಸೇರಿ ಹಲವು ದೇಶದ ಆಟಗಾರ್ತಿಯರು ಮತ್ತು ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಕೂಡ ಶುಭ ಕೋರಿದ್ದರು. ವಿವಾಹ ಸಮಾರಂಭದಲ್ಲಿ ಇಂಗ್ಲೆಂಡ್​ ನಾಯಕಿ ನಾಯಕಿ ಹೀದರ್ ನೈಟ್, ಡ್ಯಾನಿ ವ್ಯಾಟ್, ಇಶಾ ಗುಹಾ, ಜೆನ್ನಿ ಗನ್ ಸೇರಿದಂತೆ ಇಂಗ್ಲೆಂಡ್ ತಂಡದ ಪ್ರಸ್ತುತ ಮತ್ತು ಹಿಂದಿನ ಸದಸ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.

Continue Reading

ಕ್ರೀಡೆ

Team India: ನೂತನ ಕೋಚ್​ ಗಂಭೀರ್​ ಮಾರ್ಗದರ್ಶನದಲ್ಲಿ ಅಭ್ಯಾಸ ನಡೆಸಿದ ಟೀಮ್​ ಇಂಡಿಯಾ ಆಟಗಾರರು

Team India: 2021ರ ಬಳಿಕ ಭಾರತ ಮೊದಲ ಬಾರಿಗೆ ಶ್ರೀಲಂಕಾದಲ್ಲಿ ದ್ವಿಪಕ್ಷೀಯ ಸರಣಿ ಆಡಲಿದೆ. ಉಭಯ ತಂಡಗಳು ಹೊಸ ಕೋಚ್​ ಮಾರ್ಗದರ್ಶನದಲ್ಲಿ ಕಣಕ್ಕಿಳಿಯುತ್ತಿರುವುದು ವಿಶೇಷ. ಲಂಕಾ ತಂಡಕ್ಕೆ ಮಾಜಿ ಆಟಗಾರ ಸನತ್​ ಜಯಸೂರ್ಯ ಮಾರ್ಗದರ್ಶನ ನೀಡಲಿದ್ದಾರೆ.

VISTARANEWS.COM


on

Team India
Koo

ಕೊಲಂಬೊ: ನೂತನ ಕೋಚ್​ ಗೌತಮ್ ಗಂಭೀರ್(Gautam Gambhir) ಅವರ ಉಸ್ತುವಾರಿಯಲ್ಲಿ ಭಾರತ ತಂಡ(Team India) ಇಂದು(ಮಂಗಳವಾರ) ಅಭ್ಯಾಸ ನಡೆಸಿತು. ​ಭಾರತ ಮತ್ತು ಶ್ರೀಲಂಕಾ ನಡುವಣ ಟಿ20 ಸರಣಿಯು ಜುಲೈ 27 ರಿಂದ ಶುರುವಾಗಲಿದೆ. ಗಂಭೀರ್ ಅವರ ಕೋಚಿಂಗ್​ನಲ್ಲಿ ಭಾರತ ತಂಡ​ ಆಡುವ ಮೊದಲ ಸರಣಿ ಇದಾಗಲಿದೆ. ಹೀಗಾಗಿ ನಿರೀಕ್ಷೆ ಹೆಚ್ಚಾಗಿಯೇ ಇದೆ.

2021ರ ಬಳಿಕ ಭಾರತ ಮೊದಲ ಬಾರಿಗೆ ಶ್ರೀಲಂಕಾದಲ್ಲಿ ದ್ವಿಪಕ್ಷೀಯ ಸರಣಿ ಆಡಲಿದೆ. ಉಭಯ ತಂಡಗಳು ಹೊಸ ಕೋಚ್​ ಮಾರ್ಗದರ್ಶನದಲ್ಲಿ ಕಣಕ್ಕಿಳಿಯುತ್ತಿರುವುದು ವಿಶೇಷ. ಲಂಕಾ ತಂಡಕ್ಕೆ ಮಾಜಿ ಆಟಗಾರ ಸನತ್​ ಜಯಸೂರ್ಯ ಮಾರ್ಗದರ್ಶನ ನೀಡಲಿದ್ದಾರೆ.

ಮಂಗಳವಾರ ಭಾರತ ಟಿ20 ತಂಡದ ನೂತನ ನಾಯಕ ಸೂರ್ಯಕುಮಾರ್​ ಯಾದವ್​, ಮೊಹಮ್ಮದ್​ ಸಿರಾಜ್​, ರಿಷಭ್​ ಪಂತ್​, ರಿಂಕು ಸಿಂಗ್​, ಶುಭಮನ್​ ಗಿಲ್​, ರವಿ ಬಿಷ್ಟೋಯಿ ಸೇರಿದಂತೆ ಎಲ್ಲ ಆಟಗಾರರು ಗಂಭೀರ್​ ಮಾರ್ಗದರ್ಶನದಲ್ಲಿ ಮೊದಲು ಬ್ಯಾಟಿಂಗ್​ ಅಭ್ಯಾಸ ನಡೆಸಿ ಬಳಿಕ ಫೀಲ್ಡಿಂಗ್​, ಬೌಲಿಂಗ್​ ಅಭ್ಯಾಸ ನಡೆಸಿದರು. ಭಾರತೀಯ ಆಟಗಾರರ ಅಭ್ಯಾಸ ನಡೆಸುತ್ತಿರುವ ವಿಡಿಯೊಗಳನ್ನು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದೆ.

ಲಂಕಾಗೆ ತೆರಳುವ ಮುನ್ನ ಗಂಭೀರ್​ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಜತೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ, ಹಲವು ಪ್ರಶ್ನೆಗಳಿಗೆ ಉತ್ತರಿಸಿದ್ದರು. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ರಾಷ್ಟ್ರೀಯ ತಂಡಕ್ಕಾಗಿ ಉತ್ತಮ ಕೆಲಸಗಳನ್ನು ಮಾಡುವುದನ್ನು ಮುಂದುವರಿಸಲು ಬೆಂಬಲಿಸಿದರು, ಇಬ್ಬರೂ ಮುಂದೆ ಏಕದಿನ ಮತ್ತು ಟೆಸ್ಟ್‌ಗಳಲ್ಲಿ ಪ್ರಮುಖ ಭಾಗವಾಗಲಿದ್ದಾರೆ ಎಂದು ಹೇಳಿದ್ದರು. ಇದೇ ವೇಳೆ ರೋಹಿತ್ ಮತ್ತು ಕೊಹ್ಲಿ ಚಾಂಪಿಯನ್ಸ್ ಟ್ರೋಫಿ ಮತ್ತು ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಸರಣಿಗಾಗಿ ಆಡಲಿದ್ದು, 2025 ರ ಋತುವಿನ ನಂತರವೂ ಅವರು ಮುಂದುವರಿಯಲು ಬಾಗಿಲು ತೆರೆದೇ ಇದೆ ಎಂದು ಗಂಭೀರ್ ಹೇಳಿದ್ದರು.

ಇದನ್ನೂ ಓದಿ IND vs SL: ಭಾರತ ವಿರುದ್ಧದ ಟಿ20 ಸರಣಿಗೆ ತಂಡ ಪ್ರಕಟಿಸಿದ ಶ್ರೀಲಂಕಾ

ಪ್ರವಾಸದ ಮೊದಲ 3 ಟಿ20 ಪಂದ್ಯಗಳು ಜುಲೈ 27, 28 ಮತ್ತು 30ರಂದು ಪಲ್ಲೆಕಿಲೆಯಲ್ಲಿ ನಡೆಯಲಿವೆ. ಮೊದಲು ಪ್ರಕಟಗೊಂಡಿದ್ದ ವೇಳಾಪಟ್ಟಿಯಲ್ಲಿ 26ರಿಂದ ಟಿ20 ಪಂದ್ಯ ಆರಂಭವಾಗಬೇಕಿತ್ತು. ಏಕದಿನ ಸರಣಿ ಕೂಡ ಒಂದು ದಿನ ತಡವಾಗಿ ಶುರುವಾಗಬೇಕಿತ್ತು. ಏಕದಿನ ಆಗಸ್ಟ್​ 1ರದ ಬದಲಾಗಿ ಆಗಸ್ಟ್​ 2ರಿಂದ ಆರಂಭಗೊಳ್ಳಲಿದೆ. ಉಳಿದ ಪಂದ್ಯಗಳ ದಿನಾಂಕ ಬದಲಾಗಲಿಲ್ಲ. ಈ ಹಿಂದಿನಂತೆ ಆಗಸ್ಟ್​ 4 ಮತ್ತು 7ರಂದೇ ನಡೆಯಲಿದೆ.

ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ್, ರಿಷಭ್ ಪಂತ್ (ವಿ.ಕೀ ), ಸಂಜು ಸ್ಯಾಮ್ಸನ್ (ವಿ.ಕೀ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ , ಅರ್ಶದೀಪ್​ ಸಿಂಗ್, ಖಲೀಲ್ ಅಹ್ಮದ್, ಮೊಹಮ್ಮದ್​ ಸಿರಾಜ್.

ಏಕದಿನ ತಂಡ: ರೋಹಿತ್ ಶರ್ಮ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್ (ವಿ.ಕೀ), ರಿಷಬ್ ಪಂತ್ (ವಿ.ಕೀ), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ.

Continue Reading

ಕ್ರೀಡೆ

Rahul Dravid: ಆರ್​ಸಿಬಿ ಅಲ್ಲ ಈ ತಂಡದ ಕೋಚ್​ ಆಗಲಿದ್ದಾರೆ ರಾಹುಲ್​ ದ್ರಾವಿಡ್

Rahul Dravid: ದ್ರಾವಿಡ್​ ಆರ್​ಸಿಬಿ ಬದಲಾಗಿ ರಾಜಸ್ಥಾನ್​ ಪರ ಕೋಚಿಂಗ್​ ನಡೆಸುವುದು ಖಚಿತವಾಗಿದೆ ಎಂದು ತಿಳಿದುಬಂದಿದೆ. ಆದರೆ ಅಧಿಕೃತ ಮಾಹಿತಿ ಇದುವರೆಗೂ ಪ್ರಕಟಗೊಂಡಿಲ್ಲ.

VISTARANEWS.COM


on

Rahul Dravid
Koo

ಬೆಂಗಳೂರು: ಟೀಮ್​ ಇಂಡಿಯಾದ ಮಾಜಿ ಕೋಚ್​ ರಾಹುಲ್​ ದ್ರಾವಿಡ್(Rahul Dravid)​ ಐಪಿಎಲ್(IPL 2025)​ ಕೋಚಿಂಗ್​ ನಡೆಸುವುದು ಬಹುತೇಕ ಖಚಿತ ಎಂದು ತಿಳಿದುಬಂದಿದೆ. ಈ ಹಿಂದೆ ಕೋಚಿಂಗ್​ ನಡೆಸಿದ್ದ ರಾಜಸ್ಥಾನ್ ರಾಯಲ್ಸ್​(Rajasthan Royals) ತಂಡದ ಪರವೇ ಮತ್ತೆ ಕೋಚಿಂಗ್​ ನಡೆಸಲಿದ್ದಾರೆ ಎಂದು ಫ್ರಾಂಚೈಸಿಯ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

ಟಿ20 ವಿಶ್ವಕಪ್​ ಬಳಿಕ ದ್ರಾವಿಡ್​ ಭಾರತ ತಂಡದ ಕೋಚಿಂಗ್​ ಹುದ್ದೆಯಿಂದ ನಿವೃತ್ತಿ ಹೊಂದಿದ್ದರು. ಅದಾಗಲೇ ದ್ರಾವಿಡ್​ ಐಪಿಎಲ್​ ಕೋಚಿಂಗ್​ ನಡೆಸುತ್ತಾರೆ ಎನ್ನಲಾಗಿತ್ತು. ಜತೆಗೆ ಕನ್ನಡಿಗರ ನೆಚ್ಚಿನ ತಂಡವಾದ ಆರ್​ಸಿಬಿ ಪರ ಕೋಚಿಂಗ್​ ಮಾಡಲಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗಿತ್ತು. ಇದೀಗ ದ್ರಾವಿಡ್​ ಆರ್​ಸಿಬಿ ಬದಲಾಗಿ ರಾಜಸ್ಥಾನ್​ ಪರ ಕೋಚಿಂಗ್​ ನಡೆಸುವುದು ಖಚಿತವಾಗಿದೆ ಎಂದು ತಿಳಿದುಬಂದಿದೆ. ಆದರೆ ಅಧಿಕೃತ ಮಾಹಿತಿ ಇದುವರೆಗೂ ಪ್ರಕಟಗೊಂಡಿಲ್ಲ.

ರಾಜಸ್ಥಾನ್ ರಾಯಲ್ಸ್ ಪರ ನಾಯಕರಾಗಿ ದ್ರಾವಿಡ್ ಒಮ್ಮೆ ತಂಡವನ್ನು ಪ್ಲೇ ಆಪ್​ಗೆ ಕೊಂಡೊಯ್ದಿದ್ದರು. ಚಾಂಪಿಯನ್ಸ್ ಲೀಗ್​ನಲ್ಲಿ ತಂಡ ಫೈನಲ್​ಗೇರಿತ್ತು. ರಾಜಸ್ಥಾನ್ ತಂಡದ ಪರ 40 ಪಂದ್ಯಗಳಲ್ಲಿ ನಾಯಕರಾಗಿದ್ದ ದ್ರಾವಿಡ್ 23 ಗೆಲುವು ಕಂಡಿದ್ದಾರೆ. ಎರಡು ಸೀಸನ್​ಗಳಲ್ಲಿ ರಾಜಸ್ಥಾನ್ ತಂಡದ ಕೋಚ್ ಆಗಿಯೂ ಕರ್ತವ್ಯ ನಿರ್ವಹಿಸಿದ್ದರು. ಅಂಡರ್ 19 ತಂಡದ ಕೋಚ್ ಆದ ಕಾರಣ ಐಪಿಎಲ್​ ಕೋಚಿಂಗ್​ನಿಂದ ದೂರ ಉಳಿದಿದ್ದರು. ಇದಾದ ಬಳಿಕ ಟೀಮ್​ ಇಂಡಿಯಾ ಕೋಚ್​ ಆಗಿ ಕಾರ್ಯನಿರ್ವಹಿಸಿದ್ದರು. ಇದೀಗ ಎಲ್ಲ ಹುದ್ದೆಗಳಿಂದ ನಿವೃತ್ತಿ ಹೊಂದಿರುವ ಅವರು ಐಪಿಎಲ್​ ಕೋಚಿಂಗ್​ ಕಡೆ ಗಮನಹರಿಸಿದ್ದಾರೆ.

ಇದನ್ನೂ ಓದಿ Mumbai Indians : ಮುಂದಿನ ಐಪಿಎಲ್​ಗೆ ಮುಂಬೈ ತೊರೆಯಲಿದ್ದಾರೆ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್​

ಆರ್​ಸಿಬಿ ಸೇರಲಿದ್ದಾರಾ ರಾಹುಲ್​?

ಲಕ್ನೋ ತಂಡದ ಮಾಲಿಕ ಗೋಯೆಂಕಾ ತೋರಿದ್ದ ವರ್ತನೆನಿಂದ ಬೇಸರಗೊಂಡಿರು ರಾಹುಲ್ ಈ ಬಾರಿ ಲಕ್ನೋ ತೊರೆಯುವುದು ಖಚಿತವಾಗಿದೆ. ಮೂಲ್ಳ ಪ್ರಕಾರ ಅವರು ಆರ್​ಸಿಬಿ ತಂಡ ಸೇರಲಿದ್ದಾರೆ ಎನ್ನಲಾಗಿದೆ. ಆರ್​ಸಿಬಿ ಪರ ಆಡುವುದು ಕೂಡ ಅವರ ಬಯಕೆಯಾಗಿದೆ. ಇದೇ ವರ್ಷ ನಡೆದಿದ್ದ ಐಪಿಎಲ್​ ವೇಳೆ ಆರ್.ಅಶ್ವಿನ್ ಜತೆಗಿನ ಕುಟ್ಟಿ ಸ್ಟೋರೀಸ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕೆಎಲ್ ರಾಹುಲ್, 2013ರಲ್ಲಿ ವಿರಾಟ್ ಕೊಹ್ಲಿ ಅವರು ತನ್ನನ್ನು ಆರ್​ಸಿಬಿ ತಂಡಕ್ಕೆ ಸೇರಿಸಿಕೊಂಡರು. ನಾನು ಬೆಂಗಳೂರು ತಂಡದಲ್ಲಿ ಆಡಲು ಇಷ್ಟಪಡುತ್ತೇನೆ. ನಾನು ಅಲ್ಲಿದಂದಲೇ ಈ ಪಯಣ ಆರಂಭಿಸಿದೆ. ಅಲ್ಲಿಯೇ ಇದನ್ನು ಅಂತ್ಯಗೊಳಿಸಲು ಬಯುಸುತ್ತೇನೆ. ಅದು ತನ್ನ ತಲೆಯಲ್ಲಿದೆ ಎಂದು ಹೇಳಿದ್ದರು. 

ರಾಹುಲ್​ ಆರ್​ಸಿಬಿ ಸೇರಲಿದ್ದಾರೆ ಎಂಬ ಸುದ್ದಿ ಕೇಳಿದ್ದೇ ತಡ ಕನ್ನಡಿಗರು ಮತ್ತು ಆರ್​ಸಿಬಿ ಅಭಿಮಾನಿಗಳು ಆರ್​ಸಿಬಿ ಜೆರ್ಸಿಯಲ್ಲಿ ರಾಹುಲ್​ ಅವರ ಫೋಟೊ ಎಡಿಟ್​ ಮಾಡಿ ತವರಿಗೆ ಸ್ವಾಗತ ಎನ್ನುವ ಪೋಸ್ಟರ್​ ಶೇರ್​ ಮಾಡಲಾರಂಭಿಸಿದ್ದಾರೆ. ಈ ಪೋಸ್ಟರ್​ಗಳು ವೈರಲ್​ ಆಗುತ್ತಿವೆ.

Continue Reading

ಕ್ರೀಡೆ

Paris Olympic 2024:’ಆ್ಯಂಟಿ-ಸೆಕ್ಸ್ ಬೆಡ್’ನ ಸಾಮರ್ಥ್ಯ ಪರೀಕ್ಷೆ ನಡೆಸಿದ ಆಸ್ಟ್ರೇಲಿಯಾದ ಟೆನಿಸ್​ ಆಟಗಾರ್ತಿಯರು; ವಿಡಿಯೊ ವೈರಲ್​

Paris Olympic 2024: ಒಬ್ಬ ವ್ಯಕ್ತಿ ಮಾತ್ರ ಮಲಗಬಹುದಾದ ಹಾಸಿಗೆ ಇದಾಗಿದೆ. ಮರುಬಳಕೆ ಮಾಡಬಹುದಾದಂಥ ವಸ್ತುಗಳಿಂದ ಇದನ್ನು ಸಿದ್ಧಪಡಿಸಲಾಗಿದೆ.

VISTARANEWS.COM


on

Paris Olympic 2024
Koo

ಪ್ಯಾರಿಸ್​: ಕ್ರೀಡಾಪಟುಗಳು ಲೈಂಗಿಕಾಸಕ್ತಿ ತೋರದು ಕೇವಲ ಕ್ರೀಡಾಸ್ಪರ್ಧೆಗಳತ್ತ ಗಮನ ಹರಿಸಲಿ ಎಂಬ ಧ್ಯೇಯದೊಂದಿಗೆ ಟೋಕಿಯೊ ಒಲಿಂಪಿಕ್ ಕ್ರೀಡಾ ಗ್ರಾಮದಲ್ಲಿ ಜಾರಿಗೆ ತಂದಿದ್ದ ‘ಆ್ಯಂಟಿ-ಸೆಕ್ಸ್ ಬೆಡ್’ಗಳ(‘Anti-Sex Beds’) ಅಳವಡಿಕೆಯನ್ನು ಈ ಬಾರಿಯ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿಯೂ(Paris Olympic 2024) ಮುಂದುವರಿಸಲಾಗಿದೆ. ಆಸ್ಟ್ರೇಲಿಯಾದ ಟೆನಿಸ್ ಆಟಗಾರ್ತಿಯರು ಈ ಬೆಡ್​ನ ಸಾಮರ್ಥ್ಯ ಪರೀಕ್ಷೆ ನಡೆಸಿದ ವಿಡಿಯೊವನ್ನು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ಪ್ಯಾರಿಸ್​ ಒಲಿಂಪಿಕ್ಸ್​ ಆರಂಭಕ್ಕೂ ಮುನ್ನವೇ ಕೆಲವು ಅಥ್ಲೀಟ್​ಗಳು ಈ ಬಾರಿ ‘ಆ್ಯಂಟಿ ಸೆಕ್ಸ್‌ ಬೆಡ್‌’ಗಳು ಅಳವಡಿಸ ಬಾರದೆಂದು ಆಗ್ರಹಿಸಿದ್ದರು. ಆದರೆ, ಸಂಘಟಕರು ಕ್ರೀಡಾಗ್ರಾಮದಲ್ಲಿ ಆ್ಯಂಟಿ ಸೆಕ್ಸ್‌ ಬೆಡ್​ಗಳು ಅಳವಡಿಸಿದ್ದಾರೆ. ಒಬ್ಬ ವ್ಯಕ್ತಿ ಮಾತ್ರ ಮಲಗಬಹುದಾದ ಹಾಸಿಗೆ ಇದಾಗಿದೆ. ಮರುಬಳಕೆ ಮಾಡಬಹುದಾದಂಥ ವಸ್ತುಗಳಿಂದ ಇದನ್ನು ಸಿದ್ಧಪಡಿಸಲಾಗಿದೆ.

ಪ್ರತಿ ಬೆಡ್ ಸುಮಾರು 200 ಕೆಜಿ ಭಾರವನ್ನಷ್ಟೇ ಹೊರಬಲ್ಲಷ್ಟು ಸಾಮರ್ಥ್ಯ ಹೊಂದಿದೆ ಎನ್ನಲಾಗುತ್ತಿದೆ. ಕಾರ್ಡ್‌ಬೋರ್ಡ್‌ನಿಂದ ತಯಾರಿಸಲಾಗಿರುವ ಬೆಡ್‌ಗಳ ಬಗ್ಗೆ ಕ್ರೀಡಾಪಟುಗಳು, ಕ್ರೀಡಾಪ್ರೇಮಿಗಳಿಂದ ಸಾಮಾಜಿಕ ಜಾಲತಾಣದಲ್ಲಿ ಹಲವು ತಮಾಷೆಯ ಕಾಮೆಂಟ್‌ಗಳೂ ಹರಿದುಬರುತ್ತಿವೆ. ಈ ಮಧ್ಯೆ ಆಸ್ಟ್ರೇಲಿಯಾದ ಟೆನಿಸ್ ತಾರೆಯರಾದ ಡೇರಿಯ ಸಾವಿಲ್ಲೆ ಮತ್ತು ಎಲೆನ್ ಪೆರೆಜ್‌ ಜತೆಯಾಗಿ ‘ಆ್ಯಂಟಿ ಸೆಕ್ಸ್‌ ಬೆಡ್‌’ಗಳ ಕ್ವಾಲಿಟಿ ಟೆಸ್ಟ್ ಮಾಡಿದ್ದಾರೆ. ಈ ಬೆಡ್‌ನ ಮೇಲೆ ಈ ಜೋಡಿ ವಾಲಿ ಪ್ರಾಕ್ಟೀಸ್, ಸ್ಕ್ವಾಟ್‌ ಜಂಪ್ಸ್‌, ಸ್ಟೆಪ್‌-ಅಪ್ಸ್ ಸೇರಿದಂತೆ ಹಲವು ಅಭ್ಯಾಸಗಳನ್ನು ನಡೆಸಿ ತಮ್ಮ ತಮಾಷೆಯಾಗಿ ತಮ್ಮ ಅನುಭವ ಹಂಚಿಕೊಂಡಿದ್ದಾರೆ. ‘ಒಲಿಂಪಿಕ್ಸ್‌ ಗ್ರಾಮದಲ್ಲಿರುವ ಕಾರ್ಡ್‌ಬೋರ್ಡ್‌ಗಳನ್ನು ಟೆಸ್ಟ್‌ ಮಾಡಿದ್ದೇವೆ” ಎನ್ನುವ ಕ್ಯಾಪ್ಶನ್ ನೀಡಿ ಈ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಸದ್ಯ ಈ ವಿಡಿಯೊ ಎಲ್ಲಡೆ ವೈರಲ್​ ಆಗುತ್ತಿದೆ.


ಕ್ರೀಡಾ ಗ್ರಾಮಕ್ಕೆ​ ದಾಖಲೆಯ 3 ಲಕ್ಷ ಕಾಂಡೋಮ್ ಪೂರೈಕೆ!


ಈ ಕ್ರೀಡಾಕೂಡದ ಯಶಸ್ಸಿಗಾಗಿ ಪ್ಯಾರಿಸ್(Paris Olympic 2024)​ ಸರ್ವ ಸನ್ನದ್ಧವಾಗಿದೆ. ಜುಲೈ 26ರಿಂದ ಟೂರ್ನಿ ಆರಂಭವಾಗಲಿದೆ. ಇದೀಗ ಒಲಿಂಪಿಕ್ಸ್​ ಕ್ರೀಡಾ ಗ್ರಾಮದಲ್ಲಿ(Olympic Game Village) ಕ್ರೀಡಾಪಟುಗಳಿಗೆ ಸಂಘಟಕರು 3 ಲಕ್ಷ ಕಾಂಡೋಮ್​ಗಳನ್ನು ಪೂರೈಕೆ ಮಾಡಿದ್ದಾರೆ. ಇದು ಒಲಿಂಪಿಕ್ಸ್​ ಇತಿಹಾಸದಲ್ಲೇ ಗರಿಷ್ಠ ಸಂಖ್ಯೆಯ ಕಾಂಡೋಮ್​ ಪೂರೈಕೆಯಾಗಿರಲಿದೆ.

2021ರ ಟೋಕಿಯೊ ಒಲಿಂಪಿಕ್ಸ್​ ವೇಳೆ ಕರೊನಾ ಹಾವಳಿ ಇದ್ದ ಕಾರಣದಿಂದಾಗಿ ​ಸಂಟಕರು 1.5 ಲಕ್ಷ ಕಾಂಡೋಮ್​ಗಳನ್ನು ಕ್ರೀಡಾಪಟುಗಳಿಗೆ ಪೂರೈಕೆ ಮಾಡಿದ್ದರು. ಈ ಆದರೆ ಬಾರಿ ದಾಖಲೆಯ ಸಂಖ್ಯೆಯಲ್ಲಿ ಕಾಂಡೋಮ್​ಗಳನ್ನು ಪೂರೈಕೆ ಮಾಡಲಾಗಿದೆ. ಇದಕ್ಕೂ ಒಂದು ಕಾರಣವಿದೆ. ಪ್ಯಾರಿಸ್ ಎಂದರೆ ಪ್ರಣಯ ನಗರ ಎಂದೇ ಪ್ರಸಿದ್ಧಿ ಹೀಗಾಗಿ ಇಷ್ಟು ದೊಡ್ಡ ಸಂಖ್ಯೆಯ ಕಾಂಡೋಮ್​ಗಳನ್ನು ಸಂಘಟಕರು ಪೂರೈಕೆ ಮಾಡಿದ್ದಾರೆ. ಜತೆಗೆ ನಿಮ್ಮ ದೇಶದಲ್ಲಿ ಎಚ್​ಐವಿ ಜಾಗೃತಿ ಮೂಡಿಸಲು ಇದನ್ನು ಬಳಸಿ ಎಂಬ ಕಿವಿಮಾತು ಹೇಳಿದ್ದಾರೆ. ಈ ಕಾಂಡೋಮ್ ಕವರ್​ನಲ್ಲಿ ಪ್ಯಾರಿಸ್​ ಒಲಿಂಪಿಕ್ಸ್​ 2024 ಎಂದು ಬರೆದಿದೆ.

‘ಕ್ರೀಡಾಪಟುಗಳು ಕಾಂಡೋಮ್ ಅನ್ನು ಒಲಿಂಪಿಕ್ಸ್ ಗ್ರಾಮದಲ್ಲಿ ಬಳಸಬಾರದು. ಸ್ಮರಣಿಕೆಗಳ ರೀತಿಯಲ್ಲಿ ತವರಿಗೆ ಕೊಂಡೊಯ್ಯಿರಿ ಎಂದು ಐಒಸಿ ಸೂಚಿಸಿದೆ’. 1988ರ ಸಿಯೋಲ್ ಒಲಿಂಪಿಕ್ಸ್‌ನಿಂದ ಏಡ್ಸ್ ರೋಗದ ಜಾಗೃತಿಗಾಗಿ ಪ್ರತಿ ಗೇಮ್ಸ್‌ನಲ್ಲಿ ಕಾಂಡೋಮ್‌ಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ.

Continue Reading
Advertisement
Union Budget 2024
ಬಜೆಟ್ 20243 mins ago

Union Budget 2024: ಇನ್ನೊಂದು ವರ್ಷದಲ್ಲಿ ಹಳೇ ತೆರಿಗೆ ಪದ್ಧತಿ ರದ್ದು? ಕೇಂದ್ರ ವಿತ್ತ ಸಚಿವೆ ಹೇಳಿದ್ದಿಷ್ಟು

Union Budget 2024
ಕರ್ನಾಟಕ4 mins ago

Union Budget 2024: ಪ್ರಧಾನಿ ಮೋದಿ ಕುರ್ಚಿ ಉಳಿಸೋಕೆ ಆಂಧ್ರ, ಬಿಹಾರಕ್ಕೆ ವಿಶೇಷ ಅನುದಾನ: ಸಿಎಂ ಕಿಡಿ

NEET UG 2024
ದೇಶ8 mins ago

NEET UG 2024: ನೀಟ್‌ ಮರು ಪರೀಕ್ಷೆ ನಡೆಸುವುದಿಲ್ಲ; ಸುಪ್ರೀಂಕೋರ್ಟ್‌ನಿಂದ ಮಹತ್ವದ ತೀರ್ಪು

Amy Jones-Piepa Cleary
ಕ್ರೀಡೆ17 mins ago

Amy Jones-Piepa Cleary: ನಿಶ್ಚಿತಾರ್ಥ ಮಾಡಿಕೊಂಡ ಇಂಗ್ಲೆಂಡ್​-ಆಸ್ಟ್ರೇಲಿಯಾ ತಂಡದ ಮಹಿಳಾ ಆಟಗಾರ್ತಿಯರು

Union Budget 2024
ದೇಶ23 mins ago

Union Budget 2024 : ಹೂಡಿಕೆಗಳನ್ನು ಉತ್ತೇಜಿಸಲು ‘ಏಂಜಲ್ ಟ್ಯಾಕ್ಸ್’ ರದ್ದು ಮಾಡಿದ ಕೇಂದ್ರ ಸರ್ಕಾರ

Viral Video
Latest26 mins ago

Viral Video: ಎರಡು ಮುಖ, ನಾಲ್ಕು ತೋಳು, ನಾಲ್ಕು ಕಾಲುಗಳ ಮಗು ಜನನ!

Udupi News
ಉಡುಪಿ30 mins ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

ರಾಜಕೀಯ47 mins ago

BJP Padayatra: ಮುಡಾ ಹಗರಣ ಖಂಡಿಸಿ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ಬಿಜೆಪಿ ನಿರ್ಧಾರ

Parashuram D
ಕರ್ನಾಟಕ57 mins ago

Parashuram D : ವಿಸ್ತಾರ ಮೀಡಿಯಾದ ನೂತನ ಜಿ.ಎಮ್ ಆಗಿ ಪರಶುರಾಮ ಡಿ

Train Tragedy
Latest1 hour ago

Train Tragedy: ರೈಲ್ವೆ ಹಳಿಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಪ್ರಾಣ ತ್ಯಾಗ ಮಾಡಿದ ತಂದೆ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Udupi News
ಉಡುಪಿ30 mins ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ5 hours ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ3 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ4 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ4 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ5 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ5 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ1 week ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

ಟ್ರೆಂಡಿಂಗ್‌