ಮುಂಬಯಿ: ಇಲ್ಲಿನ ಮೀರಾರೋಡ್ನಲ್ಲಿ(Mira Road Tragedy) ಕ್ರಿಕೆಟ್ ಆಡುತ್ತಿದ್ದ ವೇಳೆ ಆಟಗಾರನೊಬ್ಬ ಇದ್ದಕ್ಕಿದ್ದಂತೆ ಕ್ರೀಡಾಂಗಣದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿರುವ ದುರಂತ ನಡೆದಿದೆ. ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲವಾಗಿದ್ದರೂ ಕೂಡ ಬಿಸಿಗಾಳಿಯಿಂದ ಈ ಆಟಗಾರ ಸಾವನ್ನಪ್ಪಿದ್ದಾನೆ ಎಂದು ಊಹಿಸಲಾಗಿದೆ.
ಸ್ಥಳೀಯ ಟೂರ್ನಿಯಲ್ಲಿ ಬ್ಯಾಟಿಂಗ್ ನಡೆಸುತ್ತಿದ್ದ ವೇಳೆ ಈ ಬ್ಯಾಟರ್ ಚೆಂಡನ್ನು ಸಿಕ್ಸರ್ಗೆ ಬಡಿದಟ್ಟಿತ ಮರು ಕ್ಷಣವೇ ಪಿಚ್ನಲ್ಲಿ ಕುಸಿದು ಬಿದ್ದಿದ್ದಾನೆ. ಈ ವೇಳೆ ಸಹ ಆಟಗಾರರು ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅವರು ಅದಾಗಲೇ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಈ ದುರಂತದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಖಾಸಗಿ ಭಾಗಕ್ಕೆ ಚೆಂಡು ಬಡಿದು ಬಾಲಕ ದಾರುಣ ಸಾವು
ಕೆಲವು ತಿಂಗಳುಗಳ ಹಿಂದೆ ಸ್ನೇಹಿತರೊಂದಿಗೆ ಕ್ರಿಕೆಟ್ ಅಭ್ಯಾಸ ಮಾಡುತ್ತಿದ್ದ ವೇಳೆ ಚೆಂಡು ತನ್ನ ಖಾಸಗಿ(Ball hit boy’s private part) ಭಾಗಕ್ಕೆ ಬಡಿದು 11 ವರ್ಷದ(11-year-old ) ಬಾಲಕ ಮೃತಪಟ್ಟಿರುವ ದಾರುಣ ಘಟನೆಯೊಂದು ಪುಣೆಯಲ್ಲಿ ನಡೆದಿತ್ತು. ಈ ಘಟನೆ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.
ಬೌಲಿಂಗ್ ಮಾಡುತ್ತಿದ್ದಾಗ ಬ್ಯಾಟ್ಸ್ಮನ್ ಹೊಡೆದ ಚೆಂಡು ನೇರವಾಗಿ ಶೌರ್ಯನ ಖಾಸಗಿ ಭಾಗಕ್ಕೆ ಬಡಿದಿತ್ತು. ನೋವಿನಿಂದ ನರಳಿದ ಆತ ತಕ್ಷಣ ನೆಲದ ಮೇಲೆ ಕುಸಿದು ಬಿದ್ದಿದ್ದ. ತಕ್ಷಣ ಆತನ ಸ್ನೇಹಿತರು ಆರೈಕೆ ಮಾಡಿದರೂ ಕೂಡ ಯಾವುದೇ ಸ್ಪಂದನೆ ನೀಡದ ಕಾರಣ ಶೌರ್ಯನನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಆತ ಈ ಮೊದಲೇ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದ್ದರು. ಚೆಂಡಿನ ಬಲವಾದ ಹೊಡೆತಕ್ಕೆ ಆತ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ.
ಇದಕ್ಕೂ ಮುನ್ನ ಕ್ರಿಕೆಟ್ ಪಂದ್ಯದ ವೇಳೆ ತಲೆಗೆ ಚೆಂಡು ಬಡಿದು 52 ವರ್ಷದ ಕ್ರಿಕೆಟಿಗ ಮೃತಪಟ್ಟ ಘಟನೆ ಮುಂಬೈನಲ್ಲಿ ನಡೆದಿತ್ತು. ಒಂದೇ ಮೈದಾನದಲ್ಲಿ ಎರಡು ಪಂದ್ಯಗಳು ನಡೆಯುತ್ತಿದ್ದ ವೇಳೆ ಮತ್ತೊಂದು ಪಂದ್ಯದ ಕ್ರಿಕೆಟ್ ಚೆಂಡು ತಲೆಗೆ ಬಡಿದು ಕ್ರಿಕೆಟಿಗ ಮೃತಪಟ್ಟಿದ್ದ. ಮುಂಬೈಯಲ್ಲೇ ಇಂತಹ ಘಟನೆಗಳು ಪದೇಪದೆ ಮರುಕಳಿಸುತ್ತಿರುವುದು ನಿಜ್ಜಕೂ ಬೇಸರದ ಸಂಗತಿಯಾಗಿದೆ.
ಇದನ್ನೂ ಓದಿ Fire Accident: ಗೇಮಿಂಗ್ ಜೋನ್ನಲ್ಲಿ ಅಗ್ನಿ ದುರಂತ; ಮಹಿಳೆಯರು, ಮಕ್ಕಳು ಸೇರಿ 24 ಮಂದಿ ದಾರುಣ ಸಾವು
ಹೃದಯಾಘಾತದಿಂದ ಮೈದಾನದಲ್ಲೇ ಮೃತಪಟ್ಟ ಇಂಜಿನಿಯರ್
ಕ್ರಿಕೆಟ್ ಆಡುವಾಗಲೇ ಹೃದಯಾಘಾತಕ್ಕೆ ಒಳಗಾಗಿ ಸಾಫ್ಟ್ ವೇರ್ ಇಂಜಿನಿಯರ್ ಮೈದಾನದಲ್ಲೇ ಕುಸಿದುಬಿದ್ದು ಮೃತಪಟ್ಟ ಘಟನೆ ಕಳೆದ ಡಿಸೆಂಬರ್ನಲ್ಲಿ ನೋಯ್ಡಾದಲ್ಲಿ ಸಂಭವಿಸಿತ್ತು. ವಿಕಾಸ್ ಅವರು ಸ್ಟ್ರೈಕ್ನಲ್ಲಿದ್ದ ಸಹ ಬ್ಯಾಟರ್ ಜತೆ ಮಾತುಕತೆ ನಡೆಸಿ ಹಿಂದಿರುಗುವ ವೇಳೆ ಹಠಾತ್ ಆಗಿ ಪಿಚ್ನಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದರು.