ಬೆಂಗಳೂರು: 2024ನೇ ಆವೃತ್ತಿಯ ಐಪಿಎಲ್ನ ಹರಾಜಿನಲ್ಲಿ (IPL 2024 Auction) ಸಾರ್ವಕಾಲಿಕ ದಾಖಲೆಯೊಂದು ಸೃಷ್ಟಿಯಾಗಿದೆ. ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್ ಐಪಿಎಲ್ ಹರಾಜಿನ ಇತಿಹಾಸದಲ್ಲಿಯೇ ಅತ್ಯಧಿಕ ಮೊತ್ತಕ್ಕೆ ಸೇಲ್ ಆಗಿದ್ದಾರೆ. ಅವರು 24.75 ಕೋಟಿ ರೂಪಾಯಿಗೆ ಕೋಲ್ಕೊತಾ ನೈಟ್ ರೈಡರ್ಸ್ ತಂಡ ಸೇರಿಕೊಂಡಿದ್ದಾರೆ. ಅದಕ್ಕಿಂತಲೂ ಹೆಚ್ಚಾಗಿ ಅವರು ತಮ್ಮದೇ ದೇಶದ ಆಟಗಾರ ಹಾಗೂ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಕೆಲವೇ ಕ್ಷಣದ ಹಿಂದೆ ಸೃಷ್ಟಿ ಮಾಡಿದ್ದ 20.50 ಕೋಟಿ ರೂಪಾಯಿಯ ದಾಖಲೆ ಮುರಿದ್ದಾರೆ.
ಪ್ಯಾಟ್ ಕಮಿನ್ಸ್ 2 ಕೋಟಿ ರೂಪಾಯಿ ಮೂಲ ಬೆಲೆಯನ್ನು ಹೊಂದಿದ್ದರು. ಆರಂಭದಲ್ಲಿ ಅವರಿಗೆ ಮುಂಬಯಿ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟನ್ಸ್ ತಂಡ ಜಿದ್ದಿಗೆ ಬಿದ್ದು ಬಿಡ್ ಮಾಡಿತು. ಆದರೆ, ಒಂದು ಬಾರಿ 10 ಕೋಟಿ ಗಡಿ ದಾಟುತ್ತಿದ್ದಂತೆ ಕೋಲ್ಕೊತಾ ಹಾಗೂ ಗುಜರಾತ್ ಜೈಂಟ್ಸ್ ತಂಡ ಎಡಗೈ ಬೌಲರ್ಗಾಗಿ ಸತತವಾಗಿ ಬಿಡ್ ಮಾಡಿತು. ವೇಗದ ಬೌಲರ್ ಗರಿಷ್ಠ 20 ಕೋಟಿ ರೂಪಾಯಿ ಪಡೆಬಹುದು ಎಂಬ ನಿರೀಕ್ಷೆ ಇಟ್ಟುಕೊಂಡಿದ್ದ ಹೊರತಾಗಿಯೂ ಎರಡೂ ತಂಡಗಳು ಎಲ್ಲರ ನಿರೀಕ್ಷೆಯನ್ನ ಮೀರಿ 24.75 ಕೋಟಿ ರೂಪಾಯಿ ಪಡೆದ ಕೆಕೆಆರ್ ತಂಡ ಸೇರಿಕೊಂಡರು.
20 ಕೋಟಿ ಗಡಿ ದಾಟಿಸಿದ ಪ್ಯಾಟ್ ಕಮಿನ್ಸ್
ಪ್ರಸಕ್ತ ಸಾಗುತ್ತಿರುವ ಐಪಿಎಲ್ 2024 ಮಿನಿ ಹರಾಜಿನಲ್ಲಿ ಆಸ್ಟ್ರೇಲಿಯಾದ ವಿಶ್ವಕಪ್ ವಿಜೇತ ನಾಯಕ ಪ್ಯಾಟ್ ಕಮಿನ್ಸ್ ಅವರು 20.50 ಕೋಟಿ ರೂಪಾಯಿ ಪಡೆದಿದ್ದಾರೆ. ಇಂಗ್ಲೆಂಡ್ ಆಲ್ ರೌಂಡರ್ ಸ್ಯಾಮ್ ಕರ್ರನ್ ಅವರು ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಹಣ ಪಡೆದ ಆಟಗಾರ ಎನಿಸಿಕೊಂಡಿದ್ದರು. 2023ರಲ್ಲಿ ಅವರನ್ನು ಪಂಜಾಬ್ ಕಿಂಗ್ಸ್ ತಂಡವು 18.50 ಕೋಟಿ ರೂ ನೀಡಿ ಖರೀದಿ ಮಾಡಿತ್ತು.
ನಿರೀಕ್ಷೆಯಂತೆ ದೊಡ್ಡ ಮೊತ್ತ ಪಡೆದ ಡ್ಯಾರಿಲ್ ಮಿಚೆಲ್
ನ್ಯೂಜಿಲ್ಯಾಂಡ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್ ಮತ್ತು ಆಲ್ರೌಂಡರ್ ಆಗಿರುವ ಡ್ಯಾರಿಲ್ ಮಿಚೆಲ್ ಅವರಿಗೂ ದೊಡ್ಡ ಮೊತ್ತ ಸಿಗುವ ನಿರೀಕ್ಷೆ ಮಾಡಲಾಗಿತ್ತು. ಅದರಂತೆ ಅವರು ದೊಡ್ಡ ಮೊತ್ತ ಜೇಬಿಗಿಳಿಸಿದ್ದಾರೆ.14 ಕೋಟಿ ರೂ. ಮೊತ್ತಕ್ಕೆ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸೇಲ್ ಆಗಿದ್ದಾರೆ
ಇದನ್ನೂ ಓದಿ: IPL 2024 Auction : ಆರ್ಸಿಬಿ ಕೈಬಿಟ್ಟ ಹರ್ಷಲ್ಗೆ ಸಿಕ್ಕಿತು ದೊಡ್ಡ ಮೊತ್ತ!
ಯಾವುದೇ ಹಂತದಲ್ಲಿಯೂ ತಂಡಕ್ಕೆ ಆಸರೆಯಾಗಿ ನಿಂತು ಪಂದ್ಯವನ್ನು ಗೆಲ್ಲಿಸುವ ಸಾಮರ್ಥ್ಯ ಇವರಿಗಿದೆ. ಈ ಬಾರಿಯ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿಯೂ ಮಿಚೆಲ್ ಗಮನಾರ್ಹ ಪ್ರದರ್ಶನ ತೋರಿದ್ದರು. 552 ರನ್ ಬಾರಿಸಿ ವಿಶ್ವಕಪ್ನಲ್ಲಿ ಅತ್ಯಧಿಕ ರನ್ಗಳಿಸಿದ 5ನೇ ಆಟಗಾರನಾಗಿ ಹೊರಮೊಮ್ಮಿದ್ದರು.
ಹೆಡ್-ರಚಿನ್ಗೆ ಸಿಗಲಿಲ್ಲ ದೊಡ್ಡ ಮೊತ್ತ‘
ಟ್ರಾವಿಸ್ ಹೆಡ್ ಮತ್ತು ರಚಿನ್ ರವೀಂದ್ರ ಅವರಿಗೆ ಈ ಬಾರಿಯ ಹರಾಜಿನಲ್ಲಿ ಕನಿಷ್ಠ 15 ಕೋಟಿ ಮೊತ್ತಕ್ಕೆ ಸೇಲ್ ಆಗಬಹುದೆಂದು ನಿರೀಕ್ಷೆ ಮಾಡಲಾಗಿತ್ತು. ಅಲ್ಲದೆ ಉಭಯ ಆಟಗಾರರು ಹರಾಜಿನ ಹೈಲೆಟ್ ಕೂಡ ಆಗಿದ್ದರು. ಆದರೆ ಈ ಎಲ್ಲ ನಿರೀಕ್ಷೆ ಹುಸಿಯಾಗಿದೆ. ಹಡ್ ಕೇವಲ 6.80 ಕೋಟಿ ರೂ.ಗೆ ಸನ್ರೈಸರ್ಸ್ ಹೈದರಾಬಾದ್ ತಂಡಕ್ಕೆ ಸೇಲ್ ಆದರೆ, ರಚಿನ್ ಅವರು 1.80 ಕೋಟಿ ರೂ.ಗೆ ಚೆನ್ನೈ ಸೂಪರ್ ಕಿಂಗ್ಸ್ ಸೇರಿದ್ದಾರೆ. ಅವರ ಮೂಲಬೆಲೆ 50 ಲಕ್ಷ ಆಗಿತ್ತು.
ಆಸ್ಟ್ರೇಲಿಯಾದ ಸ್ಟಾರ್ ಅನುಭವಿ ಆಟಗಾರ ಸ್ಟೀವನ್ ಸ್ಮಿತ್ ಅವರು ಮೊದಲ ಸುತ್ತಿನ ಹರಾಜಿನಲ್ಲಿ ಅನ್ ಸೋಲ್ಡ್ ಆಗಿದ್ದಾರೆ. ಕಳೆದ ಬಾರಿಯೂ ಅವರನ್ನು ಯಾವುದೇ ತಂಡ ಖರೀದಿ ಮಾಡಿರಲಿಲ್ಲ. ಹೀಗಾಗಿ ಅವರು ಐಪಿಎಲ್ ಕಾಮೆಂಟ್ರಿಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಆರ್ಸಿಬಿಯ ಮಾಜಿ ಆಟಗಾರ ಹರ್ಷಲ್ ಪಟೇಲ್ ಅವರನ್ನು ಪಂಜಾಬ್ ಕಿಂಗ್ಸ್ ತಂಡ 11.75 ಕೋಟಿ. ರೂ ನೀಡಿ ಖರೀದಿ ಮಾಡಿದೆ.
ಇತ್ತೀಚೆಗೆ ಮುಕ್ತಾಯ ಕಂಡಿದ್ದ ಏಕದಿನ ವಿಶ್ವಕಪ್ನಲ್ಲಿ ಉತ್ತಮ ಬೌಲಿಂಗ್ ಪ್ರದರ್ಶಿಸಿದ್ದ ದಕ್ಷಿಣ ಆಫ್ರಿಕಾದ ಯುವ ಬೌಲರ್ ಜೆರಾಲ್ಡ್ ಕೊಯೆಟ್ಜಿ ಅವರನ್ನು 5 ಕೋಟಿ ಮೊತ್ತ ನೀಡಿ ಮುಂಬೈ ಇಂಡಿಯನ್ಸ್ ಖರೀದಿ ಮಾಡಿದೆ. ವೆಸ್ಟ್ ಇಂಡೀಸ್ನ ರೋಮನ್ ಪೊವೆಲ್ ಅವರನ್ನು ರಾಜಸ್ಥಾನ್ ರಾಯಲ್ಸ್ ತಂಡ 7.40 ಕೋಟಿ ರೂ. ನೀಡಿ ಖರೀದಿಸಿದೆ. ಅವರ ಮೂಲಬೆಲೆ 1 ಕೋಟಿ ಆಗಿತ್ತು. ಕಳೆದ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದರು.