ಮುಂಬಯಿ : ಭಾರತ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿ ಕೊರೊನಾ ಸೋಂಕಿಗೆ ಒಳಗಾಗಿದ್ದು, ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಅವರು ಅಲಭ್ಯರಾಗಿದ್ದಾರೆ. ಅವರ ಸ್ಥಾನವನ್ನು ಮತ್ತೊಬ್ಬ ವೇಗಿ ಉಮೇಶ್ ಯಾದವ್ ತುಂಬಲಿದ್ದಾರೆ ಎಂದು ವರದಿಗಳು ಹೇಳಿವೆ.
ಮೊಹಮ್ಮದ್ ಶಮಿ ಕಳೆದ ವರ್ಷದ ಟಿ20 ವಿಶ್ವ ಕಪ್ ಬಳಿಕ ಭಾರತದ ಚುಟಕು ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿರಲಿಲ್ಲ. ಆದರೆ, ಆಸ್ಟ್ರೇಲಿಯಾ ವಿರುದ್ಧದ ತವರಿನ ಸರಣಿಯಲ್ಲಿ ಅವಕಾಶ ಪಡೆದುಕೊಂಡಿದ್ದರು. ಆದರೀಗ ಕೊರೊನಾ ಕಾರಣಕ್ಕೆ ಅವಕಾಶ ಕಳೆದುಕೊಂಡಿದ್ದಾರೆ. ಅಂತೆಯೇ ಅವರು ಮುಂಬರುವ ಟಿ20 ವಿಶ್ವ ಕಪ್ನಲ್ಲಿ ಭಾರತ ತಂಡದ ಮೀಸಲು ಆಟಗಾರರಾಗಿ ಆಯ್ಕೆಗೊಂಡಿದ್ದಾರೆ.
ಹೌದು, ಮೊಹಮ್ಮದ್ ಶಮಿ ಅವರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಸಣ್ಣ ಪ್ರಮಾಣದಲ್ಲಿ ಲಕ್ಷಣಗಳಿದ್ದು ಆತಂಕಪಡುವ ಅಗತ್ಯವಿಲ್ಲ. ಅವರು ಈಗ ಐಸೋಲೇಷನ್ಗೆ ಒಳಗಾಗಿದ್ದು ವರದಿ ನೆಗೆಟಿವ್ ಬಂದ ಬಳಿಕ ತಂಡವನ್ನು ಸೇರಿಕೊಳ್ಳಲಿದ್ದಾರೆ. ಇದು ದುರದೃಷ್ಟ. ಆದರೆ, ಜೀವನ ಇರುವುದೇ ಹೀಗೆ ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೊಹಮ್ಮದ್ ಶಮಿ ಮುಂದಿನ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಸುಧಾರಿಸಿಕೊಳ್ಳಬಹುದು ಎಂಬುದಾಗಿ ಅವರು ಹೇಳಿದ್ದಾರೆ.
ಇದನ್ನೂ ಓದಿ | T20 World Cup | ಬುಮ್ರಾ, ಹರ್ಷಲ್ ವಾಪಸ್; ಟಿ20 ವಿಶ್ವ ಕಪ್‌ಗೆ 15 ಸದಸ್ಯರ ಟೀಮ್ ಇಂಡಿಯಾ ಪ್ರಕಟ