ಮುಂಬಯಿ : ಕೊರೊನಾ ಸೋಂಕಿನಿಂದಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ೨೦ ಸರಣಿಯಲ್ಲಿ ಆಡುವ ಅವಕಾಶ ಕಳೆದುಕೊಂಡಿದ್ದ ಭಾರತ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿ ಅವರು ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ. ಇತ್ತೀಚಿನ ಅವರ ಆರ್‌ಟಿಪಿಸಿಆರ್ ವರದಿ ನೆಗೆಟಿವ್ ಆಗಿದ್ದು ಅದನ್ನವರು ಸಾಮಾಜಿಕ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಮೊಹಮ್ಮದ್ ಶಮಿ ಅವರು ಆಸ್ಟ್ರೇಲಿಯಾ ವಿರುದ್ಧ ಮುಕ್ತಾಯಗೊಂಡ ಟಿ೨೦ ಸರಣಿ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದರು. ಆದರೆ, ಆಸ್ಟ್ರೇಲಿಯಾದಲ್ಲಿ ನಡೆಯುವ ವಿಶ್ವ ಕಪ್‌ಗೆ ಮೀಸಲು ಆಟಗಾರರಾಗಿ ಆಯ್ಕೆಯಾಗಿದ್ದರು. ಆದರೆ, ಆಸ್ಟ್ರೇಲಿಯಾ ವಿರುದ್ಧದ ತವರಿನ ಸರಣಿಗೆ ಮೊದಲು ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಹೀಗಾಗಿ ಆಡುವ ಅವಕಾಶ ಕಳೆದುಕೊಂಡಿದ್ದರು. ಆದರೆ, ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ತಂಡ ಸೇರುವ ನಿರಿಕ್ಷೆಯಿತ್ತು. ಆದರೆ ಸರಣಿಗೆ ಮೊದಲು ಅವರು ಗುಣಮುಖರಾಗಿರಲಿಲ್ಲ. ಹೀಗಾಗಿ ಉಮೇಶ್ ಯಾದವ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಏತನ್ಮಧ್ಯೆ, ಶಮಿಯ ಕೊರೊನಾ ಆರ್‌ಟಿಪಿಸಿಆರ್ ವರದಿ ನೆಗೆಟಿವ್ ಬಂದಿದೆ.
ತಮ್ಮ ಕೊರೊನಾ ನೆಗೆಟಿವ್ ವರದಿಯನ್ನು ಅವರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ. ಆದರೆ, ಅವರು ಬುಧವಾರ ಆರಂಭಗೊಂಡಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ತಂಡ ಸೇರುವರೇ ಎಂಬುದು ತಿಳಿದು ಬಂದಿಲ್ಲ. ಒಂದು ಬಾರಿ ಕೊರೊನಾ ಸೋಂಕು ಬಂದಿವರಿಗೆ ಹೆಚ್ಚಿನ ವಿಶ್ರಾಂತಿ ನೀಡಲಾಗುತ್ತದೆ. ಹೀಗಾಗಿ ಅವರು ಆಸ್ಟ್ರೇಲಿಯಾ ಪ್ರವಾಸ ಮಾಡುವ ತಂಡಕ್ಕೆ ಮಾತ್ರ ಆಯ್ಕೆಯಾಗುವ ಸಾಧ್ಯತೆಗಳಿವೆ.
ಇದನ್ನೂ ಓದಿ | Team India | ಮೊಹಮ್ಮದ್ ಶಮಿಗೆ ಕೊರೊನಾ ಪಾಸಿಟಿವ್, ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಅಲಭ್ಯ