ಲಕ್ನೋ: ಟೀಮ್ ಇಂಡಿಯಾದ ಸ್ಟಾರ್ ವೇಗಿ ಮೊಹಮ್ಮದ್ ಶಮಿ(Mohammed Shami) ಅವರು ತಮ್ಮ ಕಾಲಿನ ಗಾಯದಿಂದ ಚೇತರಿಕೆ ಕಾಣುತ್ತಿದ್ದಾರೆ. 2 ತಿಂಗಳ ಹಿಂದೆ ಲಂಡನ್ನಲ್ಲಿ ಶಮಿ ಪಾದದ ಶಸ್ತ್ರಚಿಕಿತ್ಸೆಗೆ(mohammed shami injury update) ಒಳಗಾಗಿದ್ದರು. ಇದೀಗ ಶೀಘ್ರ ಚೇತರಿಸಿಕೊಳ್ಳುತ್ತಿರುವ(Mohammed Shami injury update) ಫೋಟೊವನ್ನು ತಮ್ಮ ಟ್ವಿಟರ್ ಎಕ್ಸ್ ಖಾತೆಯಲ್ಲಿ ಹಂಚಿಕೊಂಡು ಮತ್ತೆ ಕ್ರಿಕೆಟ್ ಅಂಗಳಕ್ಕೆ ಮರಳುವ ಹಸಿವು ಹೆಚ್ಚಾಗಿದೆ ಎಂದು ಬರೆದುಕೊಂಡಿದ್ದಾರೆ.
ಶಮಿ ಅವರು 2 ಸ್ಟಿಕ್ ವಾಕರ್ಗಳೊಂದಿಗೆ ಗಾರ್ಡನ್ನಲ್ಲಿ ನಿಂತಿರುವ ಫೋಟೊವನ್ನು ಹಂಚಿಕೊಂಡು, ‘ಮತ್ತೆ ಟ್ರ್ಯಾಕ್‌ಗೆ ಮರಳುವ ಹಸಿದಿದೆ. ಈ ಹಾದಿ ಕಠಿಣವಾಗಿರಬಹುದು, ಆದರೆ ಇದನ್ನೇಲ್ಲ ಎದುರಿಸಿ ಶೀಘ್ರದಲ್ಲೇ ಕ್ರಿಕೆಟ್ಗೆ ಮರಳುವ ವಿಶ್ವಾಸವಿದೆ’ ಎಂದು ಬರೆದುಕೊಂಡಿದ್ದಾರೆ.
Back on track and hungry for success. The road may be tough, but the destination is worth it.
— 𝕸𝖔𝖍𝖆𝖒𝖒𝖆𝖉 𝖘𝖍𝖆𝖒𝖎 (@MdShami11) April 7, 2024
#NeverGiveUp #shami #mdshami #mdshami11 #recovery pic.twitter.com/1KZmU6gJxB
ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್ ವೇಳೆ ಗಾಯಗೊಂಡಿದ್ದ ಶಮಿ, ಈ ಗಾಯವನ್ನು ಮರೆಮಾಚಿ ವಿಶ್ವಕಪ್ನಲ್ಲಿ ಅಮೋಘ ಬೌಲಿಂಗ್ ಪ್ರದರ್ಶನ ತೋರಿದ್ದರು. ಈ ಟೂರ್ನಿ ಬಳಿಕ ಇದೇ ವರ್ಷದ ಫೆಬ್ರವರಿಯಲ್ಲಿ ಲಂಡನ್ನಲ್ಲಿ ಎಡಗಾಲಿನ ಹಿಮ್ಮಡಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಹೀಗಾಗಿ ಅವರು 17ನೇ ಆವೃತ್ತಿಯ ಐಪಿಎಲ್(IPL 2024)ನಿಂದ ಹೊರಗುಳಿದಿದ್ದರು.
ಕೆಲವು ವಾರಗಳ ಹಿಂದೆ ಶಮಿ ತಮ್ಮ ಮನೆಯಲ್ಲಿ ಪಾದಕ್ಕೆ ಎಲೆಕ್ಟ್ರಿಕ್ ಮಸಾಜ್ ಮಾಡುತ್ತಿರುವ ಫೋಟೊವನ್ನು ಹಂಚಿಕೊಂಡಿದ್ದರು. ಇದಿಗ ವಾಕ್ ಸ್ಟಿಕ್ನೊಂದಿಗೆ(ಊರುಗೋಲಿನ ಸಹಾಯದಿಂದ) ಇರುವ ಫೋಟೊವನ್ನು ಹಂಚಿಕೊಂಡು ಮತ್ತಷ್ಟು ಚೇತರಿಕೆ ಕಂಡಿದ್ದೇನೆ ಎನ್ನುವ ಅಪ್‌ಡೇಟ್ ನೀಡಿದ್ದಾರೆ.
ಇದನ್ನೂ ಓದಿ ನಾನು ಭಾರತೀಯ, ಮುಸ್ಲಿಂ ಎಂದು ಹೆಮ್ಮೆಪಡುತ್ತೇನೆ; ಮೊಹಮ್ಮದ್ ಶಮಿ
— 𝕸𝖔𝖍𝖆𝖒𝖒𝖆𝖉 𝖘𝖍𝖆𝖒𝖎 (@MdShami11) March 20, 2024
ಟಿ20 ವಿಶ್ವಕಪ್ಗೆ ಅಲಭ್ಯ
ಶಮಿ ಅವರು ಜೂನ್ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿಯಿಂದಲೂ ಹೊರಗುಳಿಯಲಿದ್ದಾರೆ ಎನ್ನಲಾಗಿದೆ. ಶಮಿ ಗಾಯದ ಬಗ್ಗೆ ಮಾಹಿತಿ ಕಳೆದ ವಾರ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮಾಹಿತಿ ನೀಡಿದ್ದರು. ‘ಶಮಿ ಅವರಿಗೆ ಶಸ್ತ್ರಚಿಕಿತ್ಸೆ ಮುಗಿದಿದೆ. ಅವರು ಭಾರತಕ್ಕೆ ವಾಪಸಾಗಿದ್ದಾರೆ. ಈ ವರ್ಷದ ಕೊನೆಯಲ್ಲಿ ಬಾಂಗ್ಲಾದೇಶದ ವಿರುದ್ಧ ತವರಿನಲ್ಲಿ ನಡೆಯುವ ಟೆಸ್ಟ್ ಸರಣಿಗೆ ಪುನರಾಗಮನ ಮಾಡುವ ನಿರೀಕ್ಷೆಯಿದೆ‘ ಹೇಳಿದ್ದರು. ಭಾರತ ತಂಡವು ಮುಂದಿನ ಸೆಪ್ಟೆಂಬರ್‌ನಲ್ಲಿ ಬಾಂಗ್ಲಾದೇಶದ ವಿರುದ್ಧ ಎರಡು ಟೆಸ್ಟ್ ಮತ್ತು ಮೂರು ಟಿ20 ಪಂದ್ಯಗಳಿಗೆ ಆತಿಥ್ಯ ವಹಿಸಲಿದೆ.
Sending the best wishes to our Gujrat Titans good luck #aavade #GujratTitans #TitansPride pic.twitter.com/e8Evq4gAuX
— 𝕸𝖔𝖍𝖆𝖒𝖒𝖆𝖉 𝖘𝖍𝖆𝖒𝖎 (@MdShami11) March 31, 2024
ವಿಶ್ವಕಪ್ ಟೂರ್ನಿಯಲ್ಲಿ ಶಮಿ ಅವರು ತಮ್ಮ ಮೊನಚಾದ ಬೌಲಿಂಗ್ ದಾಳಿಯ ಮೂಲಕ ಟೂರ್ನಿಯಲ್ಲಿಯೇ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದರು. ಆಡಿದ 7 ಪಂದ್ಯಗಳಲ್ಲಿ 24 ವಿಕೆಟ್ ಉರುಳಿಸಿದ್ದರು. ಅವರ ಈ ಸಾಧನೆಯನ್ನು ಪರಿಗಣಿಸಿ ಅವರಿಗೆ ದೇಶದ ಎರಡನೇ ಅತ್ಯುನ್ನತ ಕ್ರೀಡಾ ಗೌರವವಾದ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಮೊಹಮ್ಮದ್ ಶಮಿ ಅರ್ಜುನ ಪ್ರಶಸ್ತಿ ಸ್ವೀಕರಿಸಿದ್ದರು. ಮೊಹಮ್ಮದ್ ಶಮಿ ಭಾರತ ಪರ 64 ಟೆಸ್ಟ್ ಪಂದ್ಯಗಳಲ್ಲಿ 229 ವಿಕೆಟ್ ಪಡೆದಿದ್ದಾರೆ. 101 ಏಕದಿನ ಪಂದ್ಯಗಳಲ್ಲಿ 195 ವಿಕೆಟ್ ಪಡೆದಿದ್ದಾರೆ. 23 ಟಿ20 ಪಂದ್ಯಗಳಲ್ಲಿ 24 ವಿಕೆಟ್ ಪಡೆದಿದ್ದಾರೆ.