Mohammed Shami: ರಣಜಿ ಟೂರ್ನಿಗೆ ಮೊಹಮ್ಮದ್ ಶಮಿ ಲಭ್ಯ? - Vistara News

ಕ್ರೀಡೆ

Mohammed Shami: ರಣಜಿ ಟೂರ್ನಿಗೆ ಮೊಹಮ್ಮದ್ ಶಮಿ ಲಭ್ಯ?

Mohammed Shami: “ಶಮಿ ಅವರು ತಮ್ಮ ಶಸ್ತ್ರಚಿಕಿತ್ಸೆಯ ನಂತರ ಮೊದಲ ಬಾರಿಗೆ ಕಳೆದ ತಿಂಗಳು ಬೌಲಿಂಗ್ ಪುನರಾರಂಭಿಸಿದ್ದಾರೆ. ಆಸ್ಟ್ರೇಲಿಯಾ ಸರಣಿಯಲ್ಲಿ ಶಮಿ ಆಡುತ್ತಾರೋ ಇಲ್ಲವೋ ಎಂಬುದು ಅವರ ಫಿಟ್‌ನೆಸ್‌ಗೆ ಸಂಬಂಧಿಸಿದ್ದು ಮತ್ತು ಎನ್‌ಸಿಎ ವರದಿಯ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದು ಶಾ ಎಎನ್‌ಐಗೆ ತಿಳಿಸಿದ್ದಾರೆ.

VISTARANEWS.COM


on

Mohammed Shami
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಟೀಮ್​ ಇಂಡಿಯಾದ ವೇಗಿ ಮೊಹಮ್ಮದ್ ಶಮಿ(Mohammed Shami) ಅವರು ಮುಂಬರುವ ರಣಜಿ ಟ್ರೋಫಿ(ranji trophy) ಕ್ರಿಕೆಟ್ ಟೂರ್ನಿಯಲ್ಲಿ ಬಂಗಾಳ ತಂಡದ ಪರ ಆಡಲಿದ್ದಾರೆ ಎಂದು ವರದಿಯಾಗಿದೆ. ಕಳೆದ ವರ್ಷ ನಡೆದಿದ್ದ ಏಕದಿನ ಕ್ರಿಕೆಟ್​ ಟೂರ್ನಿ ಬಳಿಕ ಹಿಮ್ಮಡಿಯ ಗಾಯಕ್ಕೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿರುವ ಶಮಿ ಯಾವುದೇ ಕ್ರಿಕೆಟ್​ ಟೂರ್ನಿ ಆಡಿಲ್ಲ.

ಸದ್ಯ ಬೆಂಗಳೂರಿನ ಎನ್​ಸಿಯಲ್ಲಿ ಪುನಶ್ಚೇತನ ಮತ್ತು ಫಿಟ್‌ನೆಸ್‌ ಆರೈಕೆಯಲ್ಲಿರುವ ಶಮಿ ಅಕ್ಟೋಬರ್‌ ತಿಂಗಳಲ್ಲಿ ಶುರುವಾಗಲಿರುವ ರಣಜಿ ಟ್ರೋಫಿ ಟೂರ್ನಿಯಲ್ಲಿ ಆಡುವ ಸಾಧ್ಯತೆ ಇದೆ. ಉತ್ತರ ಪ್ರದೇಶ (ಅ.11ರಿಂದ) ಮತ್ತು ಬಿಹಾರ (ಅ. 18ರಿಂದ)ವಿರುದ್ಧದ ಪಂದ್ಯಗಳಲ್ಲಿ ಅವರು ಆಡುಬಹುದು. ಈ ಮೂಲಕ ಭಾರತ ತಂಡಕ್ಕೆ ಕಮ್​ಬ್ಯಾಕ್​ ಮಾಡುವ ನಿರೀಕ್ಷೆಯಲ್ಲಿದ್ದಾರೆ.

ಶಮಿ ಕಮ್​ಬ್ಯಾಕ್​ ಬಗ್ಗೆ ಜಯ್​ ಶಾ ಹೇಳಿದ್ದೇನು?


ಈ ವರ್ಷದ ಕೊನೆಯಲ್ಲಿ ನಡೆಯುವ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ವೇಗಿ ಮೊಹಮ್ಮದ್ ಶಮಿ ಭಾಗವಹಿಸುವ ಕುರಿತು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ವರದಿಯ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ(jay shah) ಹೇಳಿದ್ದಾರೆ.

“ಶಮಿ ಅವರು ತಮ್ಮ ಶಸ್ತ್ರಚಿಕಿತ್ಸೆಯ ನಂತರ ಮೊದಲ ಬಾರಿಗೆ ಕಳೆದ ತಿಂಗಳು ಬೌಲಿಂಗ್ ಪುನರಾರಂಭಿಸಿದ್ದಾರೆ. ಆಸ್ಟ್ರೇಲಿಯಾ ಸರಣಿಯಲ್ಲಿ ಶಮಿ ಆಡುತ್ತಾರೋ ಇಲ್ಲವೋ ಎಂಬುದು ಅವರ ಫಿಟ್‌ನೆಸ್‌ಗೆ ಸಂಬಂಧಿಸಿದ್ದು ಮತ್ತು ಎನ್‌ಸಿಎ ವರದಿಯ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದು ಶಾ ಎಎನ್‌ಐಗೆ ತಿಳಿಸಿದ್ದಾರೆ.

ಇದನ್ನೂ ಓದಿ Mohammed Shami Comeback: ಟೀಮ್​ ಇಂಡಿಯಾಕ್ಕೆ ಮರಳುವ ಸೂಚನೆ ನೀಡಿದ ಶಮಿ; ಎನ್​ಸಿಎಯಲ್ಲಿ ಕಠಿಣ ಅಭ್ಯಾಸ

ಶಮಿ ಆಸ್ಟ್ರೇಲಿಯಾದಲ್ಲಿ ಉತ್ತಮ ಟೆಸ್ಟ್ ದಾಖಲೆಯನ್ನು ಹೊಂದಿದ್ದಾರೆ, ಎಂಟು ಪಂದ್ಯಗಳಲ್ಲಿ 32.16 ಸರಾಸರಿಯಲ್ಲಿ 6/56 ರ ಅತ್ಯುತ್ತಮ ಅಂಕಿ ಅಂಶಗಳೊಂದಿಗೆ 31 ವಿಕೆಟ್‌ಗಳನ್ನು ಪಡೆದಿದ್ದಾರೆ. ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ನೆಲದಲ್ಲಿ ಎರಡು ಬಾರಿ ಐದು ವಿಕೆಟ್‌ ಕಿತ್ತ ಸಾಧನೆ ಮಾಡಿದ್ದಾರೆ. ಮುಂದಿನ ವರ್ಷ ಚಾಂಪಿಯನ್ಸ್​ ಟ್ರೋಫಿ ಕೂಡ ನಡೆಯುವ ಕಾರಣ ಶಮಿ ಅವರ ಪಾತ್ರ ನಿರ್ಣಾಯಕ ಹೀಗಾಗಿ ಬಿಸಿಸಿಐ ಶಮಿಯನ್ನು ಆತುರದಿಂದ ಆಡಿಸಲು ಮುಂದಾಗುವುದು ಅನುಮಾನ. ಸಂಪೂರ್ಣ ಚೇತರಿಕೆಯ ಬಳಿಕವೇ ಅವರಿಗೆ ಆಡುವ ಅವಕಾಶ ಕಲ್ಪಿಸಬಹುದು.

34 ವರ್ಷದ ಶಮಿ ಕಳೆದ ವರ್ಷ ಭಾರತದ ಆತಿಥ್ಯದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಮೊನಚಾದ ಬೌಲಿಂಗ್​ ದಾಳಿಯ ಮೂಲಕ ಟೂರ್ನಿಯಲ್ಲಿಯೇ ಅತ್ಯಧಿಕ ವಿಕೆಟ್​ ಪಡೆದ ಬೌಲರ್​ ಎನಿಸಿಕೊಂಡಿದ್ದರು. ಆಡಿದ 7 ಪಂದ್ಯಗಳಲ್ಲಿ 24 ವಿಕೆಟ್‌ ಉರುಳಿಸಿದ್ದರು. ಅವರ ಈ ಸಾಧನೆಯನ್ನು ಪರಿಗಣಿಸಿ ಅವರಿಗೆ ದೇಶದ ಎರಡನೇ ಅತ್ಯುನ್ನತ ಕ್ರೀಡಾ ಗೌರವವಾದ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಮೊಹಮ್ಮದ್ ಶಮಿ ಭಾರತ ಪರ 64 ಟೆಸ್ಟ್ ಪಂದ್ಯಗಳಲ್ಲಿ 229 ವಿಕೆಟ್ ಪಡೆದಿದ್ದಾರೆ. 101 ಏಕದಿನ ಪಂದ್ಯಗಳಲ್ಲಿ 195 ವಿಕೆಟ್ ಪಡೆದಿದ್ದಾರೆ. 23 ಟಿ20 ಪಂದ್ಯಗಳಲ್ಲಿ 24 ವಿಕೆಟ್ ಪಡೆದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Manu Bhaker Dance: ‘ಕಾಲಾ ಚಷ್ಮಾ’ ಹಾಡಿಗೆ ವಿದ್ಯಾರ್ಥಿಗಳ ಜತೆ ಹೆಜ್ಜೆ ಹಾಕಿದ ಒಲಿಂಪಿಯನ್​ ಮನು ಭಾಕರ್​

Manu Bhaker Dance: ತಮಿಳುನಾಡಿನ ವೇಲಮ್ಮಾಳ್ ನೆಕ್ಸಸ್ ಗ್ರೂಪ್​ನ ಶಾಲೆಯಲ್ಲಿ ನಡೆದ ಕ್ರೀಡಾ ಸ್ಕಾಲರ್‌ಷಿಪ್‌ ವಿತರಣಾ ಕಾರ್ಯಕ್ರಮದ ವಿಶೇಷ ಅತಿಥಿಯಾಗಿ ಪಾಲ್ಗೊಂಡ ಮನು ಭಾಕರ್ ಕಾಲಾ ಚಷ್ಮಾ(‘Kala Chashma’ Song) ಹಿಂದಿ ಹಾಡೊಂದಕ್ಕೆ ನೃತ್ಯ ಮಾಡಿದ ವಿಡಿಯೊ ವೈರಲ್​ ಆಗಿದೆ.

VISTARANEWS.COM


on

Manu Bhaker Dance
Koo

ಚೆನ್ನೈ: ಪ್ಯಾರಿಸ್​ ಒಲಿಂಪಿಕ್ಸ್ ಶೂಟಿಂಗ್​ನಲ್ಲಿ ಅವಳಿ ಪದಕ ಗೆದ್ದ ಮನು ಭಾಕರ್​ ಅವರು ತಮ್ಮ ನೆಚ್ಚಿನ ಭರತನಾಟ್ಯ(Manu Bhaker Bharatnatyam) ಕಲಿಕೆಗಾಗಿ ತಮಿಳುನಾಡಿನಲ್ಲಿದ್ದಾರೆ. ಇಲ್ಲಿನ ಸ್ಥಳೀಯ ಶಾಲಾ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಪಾಲ್ಗೊಂಡ ಮನು ಭಾಕರ್(Manu Bhaker Dance)​ ವಿದ್ಯಾರ್ಥಿಗಳ ಜತೆಗೆ ವೇದಿಕೆಯಲ್ಲಿ ನೃತ್ಯ ಮಾಡಿದ್ದಾರೆ. ಸದ್ಯ ಈ ವಿಡಿಯೊ ವೈರಲ್(viral video)​ ಆಗಿದೆ.

ತಮಿಳುನಾಡಿನ ವೇಲಮ್ಮಾಳ್ ನೆಕ್ಸಸ್ ಗ್ರೂಪ್​ನ ಶಾಲೆಯಲ್ಲಿ ನಡೆದ ಕ್ರೀಡಾ ಸ್ಕಾಲರ್‌ಷಿಪ್‌ ವಿತರಣಾ ಕಾರ್ಯಕ್ರಮದ ವಿಶೇಷ ಅತಿಥಿಯಾಗಿ ಪಾಲ್ಗೊಂಡ ಮನು ಭಾಕರ್​ ವಿದ್ಯಾರ್ಥಿಗಳಲ್ಲಿ ಕ್ರೀಡೆಯ ಕುರಿತಾದ ಸಂವಾದ ನಡೆಸಿದರು. ಬಳಿಕ ವಿದ್ಯಾರ್ಥಿಗಳ ಜತೆಗೆ ಕತ್ರಿನಾ ಕೈಫ್ ಹೆಜ್ಜೆ ಹಾಕಿದ್ದ ಕಾಲಾ ಚಷ್ಮಾ(‘Kala Chashma’ Song) ಹಿಂದಿ ಹಾಡೊಂದಕ್ಕೆ ನೃತ್ಯ ಮಾಡಿದರು.

ತಮಿಳುನಾಡಿನ ಶಿಕ್ಷಕರೊಬ್ಬರ ಸಹಾಯದಿಂದ ಆನ್​ಲೈನ್​ನಲ್ಲಿಯೇ ಭರತನಾಟ್ಯವನ್ನು ಅಭ್ಯಾಸ ಮಾಡುತ್ತಿದ್ದ 22 ವರ್ಷದ ಮನು ಭಾಕರ್​ ಇದೀಗ ಶೂಟಿಂಗ್​ನಿಂದ ಮೂರು ತಿಂಗಳ ವಿಶ್ರಾಂತಿ ಪಡೆದು ನೇರವಾಗಿ ತರಗತಿಗೆ ಹಾಜರಾಗಿ ನೃತ್ಯ ಕಲಿಯಲಿದ್ದಾರೆ. ಜತೆಗೆ ವಯೋಲಿನ್​ ಕಲಿಕೆ ಕೂಡ ಮಾಡಲಿದ್ದಾರೆ. ಇದಾದ ಬಳಿಕ ಕುದುರೆ ಸವಾರಿ ಮಾರ್ಷಿಯಲ್​ ಆರ್ಟ್ಸ್​ ಮತ್ತು ಸ್ಕೇಟಿಂಗ್ ಅಭ್ಯಾಸ ಕೂಡ ಮಾಡಲಿದ್ದೇನೆ ಎಂದು ಮನು ಅವರು ಹೇಳಿದ್ದರು.​

ಪ್ಯಾರಿಸ್​ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಮೊದಲ ಮಹಿಳಾ ಶೂಟರ್ ಎಂಬ ಹೆಗ್ಗಳಿಕೆಗೆ ಮನು ಭಾಕರ್​ ಪಾತ್ರರಾಗಿದ್ದರು. ಜತೆಗೆ 12 ವರ್ಷಗಳ ಬಳಿಕ ಒಲಿಂಪಿಕ್​ ಶೂಟಿಂಗ್​ನಲ್ಲಿ ದೇಶಕ್ಕೆ ಪದಕ ಗೆದ್ದ ಸಾಧನೆ ಮಾಡಿದ್ದರು.

ಇದನ್ನೂ ಓದಿ Manu Bhaker: 3 ತಿಂಗಳ ರಜೆಯಲ್ಲಿ ಭರತನಾಟ್ಯ, ಕುದುರೆ ಸವಾರಿ, ಸ್ಕೇಟಿಂಗ್ ಕಲಿಯಲಿದ್ದಾರೆ ಮನು ಭಾಕರ್

ಭಾಕರ್(Manu Bhaker)​ ಅವರ ಜಾಹೀರಾತು ಮೌಲ್ಯದಲ್ಲಿ ಇದೀಗ ಭಾರೀ ಏರಿಕೆ ಕಂಡಿದೆ. ಮನು ಅವರ ಬ್ರ್ಯಾಂಡ್​ ಮೌಲ್ಯ ಈಗ 1.5 ರೂ. ಆಗಿದೆ. ಅವರು ಪ್ರತಿ ಡಿಜಿಟಲ್​ ಜಾಹೀರಾತಿಗೂ 30 ಲಕ್ಷ ರೂ. ಸಂಭಾವನೆ ಪಡೆಯಲಿದ್ದಾರೆ ಎನ್ನಲಾಗಿದೆ. ಪ್ರಮುಖವಾಗಿ ತಂಪು ಪಾನೀಯ, ಸ್ಕಿನ್​ ಕೇರ್​, ನ್ಯೂಟ್ರೀಷಿಯನ್​ ಕಂಪನಿಗಳು ಮನು ಅವರನ್ನು ಸಂಪರ್ಕಿಸಿವೆ ಎಂದು ತಿಳಿದುಬಂದಿದೆ. ಕೆಲ ದಿನಗಳ ಹಿಂದೆ 40 ಕಂಪನಿಗಳು(40 brands chasing Manu Bhaker) ಮನು ಅವರನ್ನು ಸಂಪರ್ಕಿಸಿದ್ದವು ಎಂದು ವರದಿಯಾಗಿತ್ತು.

ಭಾರತ ತಂಡದ ಸ್ಟಾರ್​ ಕ್ರಿಕೆಟಿಗರು ಜಾಹೀರಾತು ಒಪ್ಪಂದಗಳಿಗೆ ವಾರ್ಷಿಕ 3 ರಿಂದ 6 ಕೋಟಿ ರೂ. ಪಡೆಯುತ್ತಾರೆ. ಬ್ಯಾಡ್ಮಿಂಟನ್​ ಆಟಗಾರ್ತಿ ಪಿ,ವಿ ಸಿಂಧು 2022ರಲ್ಲಿ 2.21 ಕೋಟಿ ರೂ. ಮೊತ್ತದ ಒಪ್ಪಂದ ಪಡೆದಿದ್ದೇ ಭಾರತದಲ್ಲಿ ಕ್ರಿಕೆಟಿಗರ ಹೊರತಾಗಿ ಇತರ ಕ್ರೀಡಾಪಟುಗಳು ಪಡೆದ ಇದುವರೆಗಿನ ಗರಿಷ್ಠ ಮೊತ್ತವಾಗಿದೆ. ಒಲಿಂಪಿಕ್ಸ್​ ಪದಕ ಗೆಲ್ಲುವ ಮೊದಲು ಮನು ಪ್ರತಿ ಒಪ್ಪಂದವನ್ನು 20-25 ಲಕ್ಷ ರೂ.ಗೆ ಮಾಡಿಕೊಳ್ಳುತ್ತಿದ್ದರು. ಸದ್ಯ ಮನು ಪಾಮ್ಯಾಕ್ಸ್​ ಆಕ್ಟಿವ್​ವೇರ್​ಗೆ ಮಾತ್ರ ಪ್ರಚಾರ ರಾಯಭಾರಿಯಾಗಿದ್ದಾರೆ.

Continue Reading

ಕ್ರೀಡೆ

Rishabh Pant: ‘ಕಬಾಲಿ ಡಾ’, ‘ನೆರಪ್ಪು ಡಾ’; ತಲೈವಾ ರಜನಿಕಾಂತ್​ಗೆ ಸಡ್ಡು ಹೊಡೆದ ರಿಷಭ್​ ಪಂತ್​

Rishabh Pant: ರಿಷಭ್​ ಪಂತ್​ ಅವರು ರಜನಿಕಾಂತ್ ಶೈಲಿಯಲ್ಲೇ ಫೋಟೊ ಶೂಟ್​ ಮಾಡಿಸಿದನ್ನು ನೋಡುವಾಗ ಪಂತ್​ ಮುಂದಿನ ಆವೃತ್ತಿಯಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ಪರ ಆಡುವುದು ಬಹುತೇಕ ಖಚಿತ ಎನ್ನುವ ಸುಳಿವು ಬಿಟ್ಟುಕೊಟ್ಟಂತಿದೆ

VISTARANEWS.COM


on

Rishabh Pant
Koo

ನವದೆಹಲಿ: ಟೀಮ್​ ಇಂಡಿಯಾದ ಸ್ಟಾರ್​ ಕ್ರಿಕೆಟಿಗ ರಿಷಭ್​ ಪಂತ್​(Rishabh Pant)​ ಅವರು ‘ತಲೈವಾ’ ಖ್ಯಾತಿಯ ಸ್ಟಾರ್​ ನಟ, ರಜನಿಕಾಂತ್(Star Actor Rajinikanth) ಅವರ ಶೈಲಿಯಲ್ಲೇ ಫೋಟೊ ಶೂಟ್​ ಮಾಡಿಸಿಕೊಂಡಿದ್ದಾರೆ. 2016ರಲ್ಲಿ ತೆರೆ ಕಂಡ ಕಬಾಲಿ ಸಿನಿಮಾದಲ್ಲಿ ರಜನಿಕಾಂತ್ ಅವರು ಸೋಫಾದ ರೀತಿಯ ಕುರ್ಚಿಯೊಂದರಲ್ಲಿ ಕುಳಿತ ಶೈಲಿಯಲ್ಲೇ ಪಂತ್​ ಕೂಡ ಕುಳಿತು ಫೋಟೊ(Thalaiva Look Rishabh Pant) ತೆಗೆಸಿಕೊಂಡಿದ್ದಾರೆ. ಈ ಫೋಟೊವನ್ನು ತಮ್ಮ ಇನ್​ಸ್ಟಾಗ್ರಾಮ್​ ಮತ್ತು ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿರುವ ಪಂತ್​ ‘ತಲೈವಾ’ ಎಂದು ಬರೆದುಕೊಂಡಿದ್ದಾರೆ. ಸದ್ಯ ಈ ಫೋಟೊ ವೈರಲ್​ ಆಗುತ್ತಿದೆ.

ರಿಷಭ್​ ಪಂತ್​ ಅವರು ರಜನಿಕಾಂತ್ ಶೈಲಿಯಲ್ಲೇ ಫೋಟೊ ಶೂಟ್​ ಮಾಡಿಸಿದನ್ನು ನೋಡುವಾಗ ಪಂತ್​ ಮುಂದಿನ ಆವೃತ್ತಿಯಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ಪರ ಆಡುವುದು ಬಹುತೇಕ ಖಚಿತ ಎನ್ನುವ ಸುಳಿವು ಬಿಟ್ಟುಕೊಟ್ಟಂತಿದೆ. ಕೆಲವು ದಿನಗಳ ಹಿಂದೆಯೇ ಪಂತ್​ ಡೆಲ್ಲಿ ತಂಡದ ಪರ ರಿಟೈನ್ ಆಸಕ್ತಿ ಹೊಂದಿಲ್ಲ ಅವರು ಚೆನ್ನೈ ತಂಡ ಸೇರಲಿದ್ದಾರೆ ಎನ್ನಲಾಗಿತ್ತು. ಇದೀಗ ತಲೈವಾ ಎಂದು ರಜನಿಕಾಂತ್ ಶೈಲಿಯಲ್ಲೇ ಫೋಟೊ ತೆಗೆಸಿಕೊಂಡಿರುವುದನ್ನು ನೋಡುವಾಗ ಈ ವರದಿ ಸತ್ಯವಾದಂತೆ ತೋರುತ್ತಿದೆ.

ಮಹೇಂದ್ರ ಸಿಂಗ್​ ಧೋನಿ ಮುಂದಿನ ವರ್ಷ ಐಪಿಎಲ್​ ಆಡುವುದು ಖಚಿತತೆ ಇಲ್ಲ. ಇಂಪ್ಯಾಕ್ಟ್​ ನಿಯಮ ಇದ್ದರೆ ಆಡುವುದಾಗಿ ಫ್ರಾಂಚೈಸಿ ಮೂಲಗಳು ಈಗಾಗಲೇ ಮಾಹಿತಿ ನೀಡಿದೆ. ಈ ಬಾರಿಯೇ ಧೋನಿ ನಿವೃತ್ತಿಯಾಗಬೇಕಿತ್ತು. ಆದರೆ ಅವರು ಇನ್ನೂ ನಿವೃತ್ತಿ ಪ್ರಕಟಿಸಿಲ್ಲ. ತಂಡದಲ್ಲಿ ಸೂಕ್ತ ವಿಕೆಟ್​ ಕೀಪರ್​ ಇಲ್ಲದ ಕಾರಣ ಧೋನಿ ತಮ್ಮ ಕಾಲು ನೋವಿನ ಮಧ್ಯೆಯೂ ಸಂಪೂರ್ಣವಾಗಿ ಕೀಪಿಂಗ್​ ನಡೆಸಿದ್ದರು. ಧೋನಿ ಸ್ಥಾನಕ್ಕೆ ಪಂತ್​ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯೊಂದು ಕಂಡುಬಂದಿದೆ.

ಮಹೇಂದ್ರ ಸಿಂಗ್​ ಧೋನಿ ಮನೆಯ ಯಾವುದೇ ವಿಶೇಷ ಕಾರ್ಯಕ್ರಮದಲ್ಲೂ, ರಿಷಭ್​ ಪಂತ್​ ಕಾಣಿಸಿಕೊಳ್ಳುವುದು ಸರ್ವೇ ಸಾಮಾನ್ಯ. ಅಣ್ಣನ ಸ್ಥಾನದಲ್ಲಿ ನಿಂತು ಧೋನಿ ಅವರು ಪಂತ್​ಗೆ ಸಲಹೆ ನೀಡುತ್ತಾರೆ. ಪಂತ್​ ಕೂಡ ಧೋನಿ ಪರಿವಾರದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಹೀಗಾಗಿ ಧೋನಿಯೇ ಪಂತ್​ ಅವರನ್ನು ಸಿಎಸ್​ಕೆ ತಂಡಕ್ಕೆ ಆಹ್ವಾನಿಸಬಹುದು. ಪಂತ್​ ಚೆನ್ನೈ ಸೇರಿದರೆ ಕೀಪಿಂಗ್​ ನಡೆಸಬಹುದು. ಧೋನಿ ಇಂಪ್ಯಾಕ್ಟ್​ ಆಟಗಾರನಾಗಿ ಬ್ಯಾಟಿಂಗ್​ ಮಾತ್ರ ನಡೆಸುವ ಸಾಧ್ಯತೆ ಇದೆ.

ಇದನ್ನೂ ಓದಿ Rishabh Pant: ಕೀಪಿಂಗ್​ ಬಿಟ್ಟು ಬೌಲಿಂಗ್​ ನಡೆಸಿದ ರಿಷಭ್​ ಪಂತ್​; ವಿಡಿಯೊ ವೈರಲ್​

ಬೌಲಿಂಗ್​ ನಡೆಸಿದ್ದ ಪಂತ್​


ಕೆಲ ದಿನಗಳ ಹಿಂದಷ್ಟೇ ರಿಷಭ್​ ಪಂತ್​ ದೆಹಲಿ ಪ್ರೀಮಿಯರ್ ಲೀಗ್ 2024 ರ(Delhi Premier League T20 2024) ಉದ್ಘಾಟನಾ ಆವೃತ್ತಿಯ ಪಂದ್ಯದಲ್ಲಿ ಬೌಲಿಂಗ್(rishabh pant bowling)​ ನಡೆಸುವ ಮೂಲಕ ಗಮನಸೆಳೆದಿದ್ದರು. ಪಂತ್ ಪಂದ್ಯದ ಅಂತಿಮ ಓವರ್​ನಲ್ಲಿ ಎದುರಾಳಿ ಸೌತ್​ ಡೆಲ್ಲಿ ತಂಡಕ್ಕೆ 6 ಎಸೆತಗಳಲ್ಲಿ ಗೆಲುವಿಗೆ ಒಂದು ರನ್​ ಬೇಕಿದ್ದಾಗ ಸ್ಪಿನ್​ ಬೌಲಿಂಗ್​ ನಡೆಸಿದ್ದರು. ಬೌಲಿಂಗ್​ ನಡೆಸಿದ್ದ ವಿಡಿಯೊ ವೈರಲ್ ಆಗಿತ್ತು.

Continue Reading

ಕ್ರೀಡೆ

Paralympic 2024: ಒತ್ತಡಕ್ಕೆ ಒಳಗಾಗಬೇಡಿ; ಭಾರತದ ಕ್ರೀಡಾಳುಗಳಿಗೆ ಪ್ರಧಾನಿ ಮೋದಿ ಸಲಹೆ

Paralympic 2024: ಕಳೆದ ಟೋಕಿಯೊ ಪ್ಯಾರಾಲಿಂಪಿಕ್ಸ್​ನಲ್ಲಿ 19 ಪದಕ ಗೆದ್ದ ಭಾರತ, ಈ ಬಾರಿ 25 ಪದಕ ಗೆಲ್ಲುವ ಗುರಿಯೊಂದಿಗೆ ಪ್ಯಾರಿಸ್​ಗೆ ಪ್ರಯಾಣ ಬೆಳೆಸಿದೆ. ಈ ಬಾರಿ ದಾಖಲೆಯ 84 ಮಂದಿ ಪ್ಯಾರಾ ಕ್ರೀಡಾಪಟುಗಳು ವಿವಿಧ 12 ಕ್ರೀಡೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

VISTARANEWS.COM


on

Paralympic 2024
Koo

ನವದೆಹಲಿ: ಇದೇ ತಿಂಗಳು ಆಗಸ್ಟ್​ 28ರಿಂದ ಪ್ಯಾರಿಸ್​ನಲ್ಲಿ(Paralympic 2024) ಆರಂಭಗೊಳ್ಳಲಿರುವ ಪ್ಯಾರಾಲಿಂಪಿಕ್ಸ್(Paris Paralympics)​ ಕ್ರೀಡಾಕೂಟದಲ್ಲಿ ಈ ಬಾರಿ ಭಾರತದಿಂದ ದಾಖಲೆಯ 84 ಮಂದಿ ಪ್ಯಾರಾ ಕ್ರೀಡಾಪಟುಗಳು ಸ್ಪರ್ಧಿಸಲಿದ್ದಾರೆ. ಕಳೆದ ಶುಕ್ರವಾರ ಭಾರತ ಪ್ಯಾರಾಲಿಂಪಿಕ್‌ ಸಮಿತಿ (ಪಿಸಿಐ) ಮತ್ತು ಭಾರತ ಕ್ರೀಡಾ ಪ್ರಾಧಿಕಾರ (ಎಸ್‌ಎಐ) ಎಲ್ಲ ಕ್ರೀಡಾಪಟುಗಳಿಗೆ ಅದ್ಧೂರಿ ಬೀಳ್ಕೊಡುಗೆ ನೀಡಿತ್ತು. ಇದೀಗ ಪ್ರಧಾನಿ ನರೇಂದ್ರ ಮೋದಿ(PM Modi) ಅವರು ಭಾರತದ ಕ್ರೀಡಾಪಟುಗಳಿಗೆ ಶುಭ ಹಾರೈಸಿದ್ದಾರೆ. ಜತೆಗೆ ಆತ್ಮ ವಿಶ್ವಾಸ ತುಂಬಿದ್ದಾರೆ.

ಸೋಮವಾರ ರಾತ್ರಿ ನಡೆದಿದ್ದ ವರ್ಚುವಲ್‌ ಸಂವಾದದಲ್ಲಿ ಮೋದಿ ಅವರು ಅಥ್ಲೀಟ್​ಗಳ ಜತೆ ಸಂವಾದ ನಡೆಸಿದ್ದರು. ಇದೇ ವೇಳೆ ಹಲವು ಕ್ರೀಡಾಪಟುಗಳು ತಮ್ಮ ತಯಾರಿಯ ಬಗ್ಗೆ ಮತ್ತು ಈ ಬಾರಿ ಪದಕ ಗೆಲ್ಲುವ ವಿಶ್ವಾಸವನ್ನು ಮೋದಿ ಜತೆ ಹಂಚಿಕೊಂಡರು. ಕಳೆದ ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ಜಾವೆಲಿನ್‌ ತ್ರೋವರ್‌ ಸುಮಿತ್‌ ಅಂಟಿಲ್‌ ಈ ಬಾರಿಯೂ ಚಿನ್ನ ಗೆಲ್ಲುವುದಾಗಿ ಮೋದಿಗೆ ಭರವಸೆ ನೀಡಿದರು. ಸುಮಿತ್‌ ಅಂಟಿಲ್‌ ಪ್ಯಾರಾಲಿಂಪಿಕ್ಸ್‌ ಉದ್ಘಾಟನ ಸಮಾರಂಭದಲ್ಲಿ ಶಾಟ್‌ಪುಟರ್‌ ಭಾಗ್ಯಶ್ರೀ ಜಾಧವ್‌ ಅವರೊಂದಿಗೆ ಭಾರತದ ಧ್ವಜಧಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಒತ್ತಡಕ್ಕೆ ಒಳಗಾಗಬೇಡಿ


ಅಥ್ಲೀಟ್‌ಗಳ ಜತೆ ಮುಕ್ತವಾಗಿ ಮಾತನಾಡಿದ ಮೋದಿ, ಯಾವುದೇ ಒತ್ತಡಕ್ಕೊಳಗಾಗದಂತೆ ನೋಡಿಕೊಳ್ಳಿ ಎಂದು ಸಲಹೆ ನೀಡಿದರು. ‘ನಿಮ್ಮ ಪಯಣ ನಿಮಗೆ ಮಾತ್ರವಲ್ಲ, ಇಡೀ ದೇಶಕ್ಕೆ ಮುಖ್ಯವಾದದ್ದು. ನೀವು ಮಾಡಿದ ಸಾಧನೆಯಿಂದ ಭಾರತೀಯರು ಹೆಮ್ಮೆ ಪಡುತ್ತಾರೆ. ಇಡೀ ದೇಶವೇ ನಿಮ್ಮ ಬೆಂಬಲಕ್ಕಿದೆ. 140 ಕೋಟಿ ಭಾರತೀಯರ ಆಶೀರ್ವಾದ ನಿಮ್ಮ ಮೇಲಿದೆ. ನಿಮ್ಮ ಇಷ್ಟು ವರ್ಷದ ಪರಿಶ್ರಮಕ್ಕೆ ಪ್ಯಾರಿಸ್​ನಲ್ಲಿ ಉತ್ತಮ ಪ್ರತಿಫಲ ಸಿಗುವಂತಾಗಲಿ” ಎಂದು ಮೋದಿ ಹಾರೈಸಿದ್ದಾರೆ.

ಕಳೆದ ಟೋಕಿಯೊ ಪ್ಯಾರಾಲಿಂಪಿಕ್ಸ್​ನಲ್ಲಿ 19 ಪದಕ ಗೆದ್ದ ಭಾರತ, ಈ ಬಾರಿ 25 ಪದಕ ಗೆಲ್ಲುವ ಗುರಿಯೊಂದಿಗೆ ಪ್ಯಾರಿಸ್​ಗೆ ಪ್ರಯಾಣ ಬೆಳೆಸಿದೆ. ಈ ಬಾರಿ ದಾಖಲೆಯ 84 ಮಂದಿ ಪ್ಯಾರಾ ಕ್ರೀಡಾಪಟುಗಳು ವಿವಿಧ 12 ಕ್ರೀಡೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಕಳೆದ ಬಾರಿ 24 ಮಂದಿ ಸ್ಪರ್ಧಿಸಿದ್ದರು.

ಇದನ್ನೂ ಓದಿ Paralympics 2024: ಪ್ಯಾರಾಲಿಂಪಿಕ್ಸ್​ನಲ್ಲಿ ಭಾಗ್ಯಶ್ರೀ, ಸುಮಿತ್ ತ್ರಿವರ್ಣ ಧ್ವಜಧಾರಿಗಳು

ಭಾರತದ ಸ್ಪರ್ಧಿಗಳು– ಆರ್ಚರಿ, ಅಥ್ಲೆಟಿಕ್ಸ್‌, ಬ್ಯಾಡ್ಮಿಂಟನ್‌, ಕೆನೊಯಿಂಗ್‌, ಸೈಕ್ಲಿಂಗ್‌, ಅಂಧರ ಜುಡೊ, ಪವರ್‌ಲಿಫ್ಟಿಂಗ್‌, ರೋಯಿಂಗ್‌, ಶೂಟಿಂಗ್, ಈಜು, ಟೇಬಲ್ ಟೆನಿಸ್ ಮತ್ತು ಟೇಕ್ವಾಂಡೊ ಕ್ರೀಡೆಗಳಲ್ಲಿ ಸ್ಪರ್ಧಿಸಲಿದ್ದಾರೆ. ದೇಶದ ಅಥ್ಲೀಟ್​ಗಳು ಈ ಬಾರಿಯೂ ಉತ್ತಮ ಪ್ರದರ್ಶನ ನೀಡುವ ಮೂಲಕ ದೇಶದ ಕೀರ್ತಿ ಪತಾಕೆಯನ್ನು ಹಾರಿಸುವ ವಿಶ್ವಾಸ ನನಗಿದೆ ಎಂದು ಭಾರತ ಪ್ಯಾರಾಲಿಂಪಿಕ್ ಸಮಿತಿ ಅಧ್ಯಕ್ಷ ದೇವೇಂದ್ರ ಝಜಾರಿಯಾ ವಿಶ್ವಾಸ ವ್ಯಕ್ತಪಡಿಸಿದರು. ಕಳೆದ ವರ್ಷ ಹಾಂಗ್‌ಝೌನ ಪ್ಯಾರಾ ಏಷ್ಯನ್ ಗೇಮ್ಸ್‌ನಲ್ಲೂ ಭಾರತದ ಪ್ಯಾರಾಲಿಂಪಿಕ್ಸ್‌ ತಂಡ 111 ಪದಕಗಳನ್ನು ಜಯಿಸಿ, ಉತ್ತಮ ಸಾಧನೆ ಮೆರೆದಿತ್ತು. ಹೀಗಾಗಿ ಈ ಬಾರಿ ಹೆಚ್ಚಿನ ನಿರೀಕ್ಷೆ ಇರಿಸಲಾಗಿದೆ.

Continue Reading

ದೇಶ

Vinesh Phogat: ಸಹೋದರಿಯ ವಿರುದ್ಧವೇ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ವಿನೇಶ್​ ಫೋಗಟ್​?

Vinesh Phogat: ಮೂಲಗಳ ಪ್ರಕಾರ ಮಾಜಿ ಕಾಮನ್​ವೆಲ್ತ್​ ಗೇಮ್​ ಚಿನ್ನದ ಪದಕ ವಿಜೇತೆ, ಬಿಜೆಪಿ ಪಕ್ಷದ ಕಾರ್ಯಕರ್ತೆ ಬಬಿತಾ ಫೋಗಟ್(Babita Phogat) ವಿರುದ್ಧ ವಿನೇಶ್​ ಅವರು ಈ ಬಾರಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.

VISTARANEWS.COM


on

Vinesh Phogat
Koo

ನವದೆಹಲಿ: ನಿಗದಿತ ತೂಕಗಿಂತ ಹೆಚ್ಚಿನ ಭಾರ ಇದ್ದ ಕಾರಣ ಪ್ಯಾರಿಸ್​ ಒಲಿಂಪಿಕ್ಸ್(Paris Olympics)​ ಚಿನ್ನದ ಪದಕದ ಸ್ಪರ್ಧೆಯಿಂದ ಅನರ್ಹಗೊಂಡ ಬೇಸರದಲ್ಲಿ ಕುಸ್ತಿಗೆ ವಿದಾಯ ಹೇಳಿದ್ದ ವಿನೇಶ್‌ ಪೋಗಟ್‌(Vinesh Phogat) ಇದೀಗ ರಾಜಕೀಯಕ್ಕೆ ಎಂಟ್ರಿ(Vinesh Phogat Join Politics) ಕೊಡಲು ಸಿದ್ಧರಾಗಿದ್ದಾರೆ ಎಂದು ತಿಳಿದುಬಂದಿದೆ.

ಹೌದು, ವಿನೇಶ್ ಫೋಗಟ್ ಮುಂಬರುವ ಹರಿಯಾಣ(Haryana Polls) ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಅವರ ನಿಕಟ ಮೂಲಗಳು ಮಂಗಳವಾರ ಐಎಎನ್‌ಎಸ್‌ಗೆ ತಿಳಿಸಿವೆ. ಆದರೆ, ಸಕ್ರಿಯ ರಾಜಕಾರಣಕ್ಕೆ ಬರುವುದಿಲ್ಲ ಎಂದು ವಿನೇಶ್ ಈ ಹಿಂದೆಯೇ ಹೇಳಿದ್ದರು. ಆದರೆ, ಇತ್ತೀಚಿನ ವರದಿಯ ಪ್ರಕಾರ, ಕೆಲವು ರಾಜಕೀಯ ಪಕ್ಷಗಳು ವಿನೇಶ್​ ಅವರನ್ನು ರಾಜಕೀಯಕ್ಕೆ ಬರುವಂತೆ ಮನವೊಲಿಸಲು ಪ್ರಯತ್ನಿಸುತ್ತಿವೆ ಎನ್ನಲಾಗಿದೆ.

ವಿನೇಶ್ ಯಾವ ಪಕ್ಷ ಸೇರಲಿದ್ದಾರೆ ಎಂಬುದು ಇನ್ನೂ ಖಚಿತವಾಗಿಲ್ಲವಾದರೂ, ಮೂಲಗಳ ಪ್ರಕಾರ ಅವರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎನ್ನಲಾಗಿದೆ. ವಿನೇಶ್​ ಪ್ಯಾರಿಸ್​ನಿಂದ ಭಾರತಕ್ಕೆ ಬಂದ ವೇಳೆ ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಸಂಸದ ದೀಪೇಂದರ್ ಹೂಡಾ ಅವರು ಭರ್ಜರಿ ಸ್ವಾಗತ ಕೋರಿದ್ದರು. ಬಳಿಕ ತವರಿನಲ್ಲಿಯೂ ವಿನೇಶ್​ಗೆ ಹಲವು ಕಾಂಗ್ರೆಸ್​ ನಾಯಕರು ಮತ್ತು ರೈತ ನಾಯಕರು ಸನ್ಮಾನ ಮಾಡಿದ್ದರು.

ಮೂಲಗಳ ಪ್ರಕಾರ ಮಾಜಿ ಕಾಮನ್​ವೆಲ್ತ್​ ಗೇಮ್​ ಚಿನ್ನದ ಪದಕ ವಿಜೇತೆ, ಬಿಜೆಪಿ ಪಕ್ಷದ ಕಾರ್ಯಕರ್ತೆ ಬಬಿತಾ ಫೋಗಟ್(Babita Phogat) ವಿರುದ್ಧ ವಿನೇಶ್​ ಅವರು ಈ ಬಾರಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ. ವಿನೇಶ್​ ಮತ್ತು ಬಬಿತಾ ಸಹೋದರಿಗಳಾಗಿದ್ದಾರೆ. ವಿನೇಶ್​ ಮಾತ್ರವಲ್ಲದೆ ಬಜರಂಗ್​ ಪೂನಿಯಾ ಕೂಡ ಕಾಂಗ್ರೆಸ್​ ಪಕ್ಷದಿಂದ ಚುನಾವಣೆಗೆ ನಿಲ್ಲುತ್ತಾರೆ ಎನ್ನಲಾಗಿದೆ. 90 ಸದಸ್ಯ ಬಲದ ಹರಿಯಾಣ ವಿಧಾನಸಭೆಗೆ ಚುನಾವಣಾ ಆಯೋಗವು ಕಳೆದ ಶುಕ್ರವಾರ ಚುನಾವಣೆ ದಿನಾಂಕ ಘೋಷಣೆ ಮಾಡಿತ್ತು. ಅಕ್ಟೋಬರ್ 1ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಅಕ್ಟೋಬರ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ Vinesh Phogat: ಸನ್ಮಾನ ಸಮಾರಂಭದಲ್ಲಿ ದಿಢೀರ್​ ಪ್ರಜ್ಞೆ ತಪ್ಪಿ ಬಿದ್ದ ವಿನೇಶ್​ ಪೋಗಟ್​

ಬ್ರಿಜ್​ ಭೂಷಣ್​ ವಿರುದ್ಧದ ಪ್ರತಿಭಟನೆ ವೇಳೆ ವಿನೇಶ್​ ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದರು. ಅಲ್ಲದೆ ತಮಗೆ ನೀಡಿದ್ದ ಖೇಲ್​ ರತ್ನ ಮತ್ತು ಅರ್ಜುನ ಪ್ರಶಸ್ತಿಯನ್ನು ದೆಹಲಿಯ ಕರ್ತವ್ಯ ಪಥದಲ್ಲಿ ತ್ಯಜಿಸುವ ಮೂಲಕ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಬಳಿಕ ರಾಹುಲ್​ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಜತೆ ಕಾಣಿಸಿಕೊಂಡಿದ್ದರು. ಇದನೆಲ್ಲ ನೋಡುವಾಗ ಅವರು ಈ ಬಾರಿ ಕಾಂಗ್ರೆಸ್​ ಪಕ್ಷದಿಂದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಬ್ರಿಜ್​ ಭೂಷಣ್​ ವಿರುದ್ಧದ ಪ್ರತಿಭಟನೆ ವೇಳೆ ಟ್ವೀಟ್​ ಮಾಡಿದ್ದ ಬಬಿತಾ “ಗೌರವಾನ್ವಿತ ಪ್ರಧಾನಿ ಮೋದಿ ಮತ್ತು ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲೆ ನನಗೆ ನಂಬಿಕೆ ಇದೆ. ಖಂಡಿತವಾಗಿಯೂ ಸತ್ಯ ಹೊರಬರುತ್ತದೆ. ಒಬ್ಬ ಮಹಿಳಾ ಆಟಗಾರ್ತಿಯಾಗಿ ನಾನು ದೇಶದ ಎಲ್ಲ ಆಟಗಾರ್ತಿಯರ ಜತೆಗಿರುತ್ತೇನೆ, ಮುಂದೆಯೂ ಕೂಡ ಇರುತ್ತೇನೆ. ಆದರೆ ಸಾಕ್ಷಿ ಮತ್ತು ವಿನೇಶ್​ ಈ ಪ್ರಕರಣದಲ್ಲಿ ಕಾಂಗ್ರೆಸ್​ನ ಕೈಗೊಂಬೆಯಾಗಿದ್ದಾರೆ ಎಂದು ನನಗೆ ಸ್ಪಷ್ಟವಾಗಿ ಗೋಚರಿಸುತ್ತಿದೆ” ಎಂದು ಹೇಳಿದ್ದರು.

“ನೀವು ಬಾದಾಮಿ ಹಿಟ್ಟಿನಿಂದ ಮಾಡಿದ ರೊಟ್ಟಿಯನ್ನು ತಿನ್ನಬಹುದು, ಆದರೆ ನಾವು ನನ್ನ ದೇಶದ ಜನರು ಗೋಧಿಯಿಂದ ತಯಾರಿಸಿದ ಬ್ರೆಡ್ ಕೂಡ ತಿನ್ನುತ್ತೇವೆ. ನೀವು ಕಾಂಗ್ರೆಸ್ ಕೈಗೊಂಬೆಯಾಗಿದ್ದೀರಿ ಎಂದು ದೇಶದ ಜನರಿಗೆ ಅರ್ಥವಾಗಿದೆ. ನಿಮ್ಮ ನಿಜವಾದ ಉದ್ದೇಶವನ್ನು ಹೇಳಬೇಕಾದ ಸಮಯ ಬಂದಿದೆ” ಬಬಿತಾ ಫೋಗಟ್ ಹೇಳಿದ್ದರು.

Continue Reading
Advertisement
ವೈರಲ್ ನ್ಯೂಸ್2 mins ago

Road Rage Incident: ಒಳಗೆ ಮಗು ಇದೆ ಅಂದ್ರೂ ಬಿಡದ ಕಿಡಿಗೇಡಿ; ಕಾರಿನ ಗ್ಲಾಸ್‌ ಒಡೆದು ದಾಂಧಲೆ!

Fashion Show news
ಫ್ಯಾಷನ್14 mins ago

Fashion Show news: ವೈವಿಧ್ಯಮಯ ವಜ್ರಾಭರಣ ಧರಿಸಿ ಫ್ಯಾಷನ್‌ ಶೋನಲ್ಲಿ ಮಿಂಚಿದ ರೂಪದರ್ಶಿಯರು

Manu Bhaker Dance
ಕ್ರೀಡೆ21 mins ago

Manu Bhaker Dance: ‘ಕಾಲಾ ಚಷ್ಮಾ’ ಹಾಡಿಗೆ ವಿದ್ಯಾರ್ಥಿಗಳ ಜತೆ ಹೆಜ್ಜೆ ಹಾಕಿದ ಒಲಿಂಪಿಯನ್​ ಮನು ಭಾಕರ್​

KEA
ಕರ್ನಾಟಕ36 mins ago

KEA: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಕನ್ನಡ ಕಡ್ಡಾಯ; ಅರ್ಜಿ ಅಂಗೀಕೃತವಾಗಿರದಿದ್ದರೆ ದಾಖಲೆ ಸಲ್ಲಿಸಲು ಆ.26 ಕೊನೆಯ ದಿನ

badlapur tension vistara explainer
EXPLAINER58 mins ago

Vistara Explainer: ಪುಟ್ಟ ಹೆಣ್ಣುಮಕ್ಕಳ ಮೇಲೆ ಕಾಮುಕ ಅಟೆಂಡರ್‌ನಿಂದ ಅತ್ಯಾಚಾರದ ಬಳಿಕ ಬದ್ಲಾಪುರ ಉದ್ವಿಗ್ನ; ಏನಾಗ್ತಿದೆ ಅಲ್ಲಿ?

DK Shivakumar
ಕಲಬುರಗಿ1 hour ago

DK Shivakumar: ಆರ್ಟಿಕಲ್ 371 ಜೆ ಜಾರಿಗೆ 10 ವರ್ಷ; ಸಂಭ್ರಮಾಚರಣೆಗೆ ಸರ್ಕಾರದ ಸಿದ್ಧತೆ

DK Shivakumar
ಕಲಬುರಗಿ1 hour ago

DK Shivakumar: ಸಿದ್ದರಾಮಯ್ಯ ಅವರದು ಹೆದರುವ ರಕ್ತವಲ್ಲ ಎಂದ ಡಿ.ಕೆ.ಶಿವಕುಮಾರ್!

Congress Protest
ಕರ್ನಾಟಕ1 hour ago

Congress Protest: ಪ್ರಧಾನಿ, ಗವರ್ನರ್‌ಗೆ ಬೆದರಿಕೆ; ಐವನ್ ಡಿಸೋಜಾ, ಜಮೀರ್‌, ರಕ್ಷಿತ್ ಶಿವರಾಮ್ ವಿರುದ್ಧ ದೂರು

Mosquitoes Bite
ಆರೋಗ್ಯ1 hour ago

World Mosquito Day: ಸೊಳ್ಳೆಗಳಿಗೂ ಒಂದು ದಿನ! ಇವುಗಳ ಕುರಿತ 7 ಸುಳ್ಳುಗಳಿಗೆ ಇಲ್ಲಿದೆ ಉತ್ತರ!

Naga Chaitanya Sobhita Dhulipala
ಸಿನಿಮಾ1 hour ago

Naga Chaitanya Sobhita Dhulipala: ನಾಗ ಚೈತನ್ಯ, ಶೋಭಿತಾ ಧೂಳಿಪಾಲ ನಿಶ್ಚಿತಾರ್ಥದಿಂದ ಅಕ್ಕಿನೇನಿ- ದಗ್ಗುಬಾಟಿ ಕುಟುಂಬದಲ್ಲಿ ಬಿರುಕು?

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌