Site icon Vistara News

Mohammed Shami: ಸ್ಟಿಕ್​ ವಾಕರ್ ಸಹಾಯದೊಂದಿಗೆ ವ್ಯಾಯಾಮ ಆರಂಭಿಸಿದ ಶಮಿ

Mohammed Shami

ಲಕ್ನೋ: ಭಾರತ ಕ್ರಿಕೆಟ್​ ತಂಡದ ಪ್ರಧಾನ​ ವೇಗಿ ಮೊಹಮ್ಮದ್ ಶಮಿ(Mohammed Shami)ತಮ್ಮ ಕಾಲಿನ ಗಾಯದಿಂದ ಚೇತರಿಕೆ(Mohammed Shami injury update) ಕಾಣುತ್ತಿದ್ದು ಪುನರ್ವಸತಿ ಆರಂಭಿಸಿದ್ದಾರೆ. ವಾಕಿಂಗ್​ ಸ್ಟಿಕ್​ಗಳೊಂದಿಗೆ ತಮ್ಮ ನಿವಾಸದಲ್ಲಿರುವ ಕಿಕೆಟ್​ ಪಿಚ್​ನಲ್ಲಿ ನಡೆದಾಡಿದ್ದಾರೆ. ಜತೆಗೆ ಕೆಲ ಕಾಲ ವ್ಯಾಯಾಮ ಕೂಡ ಮಾಡಿದ್ದಾರೆ. ಈ ಎಲ್ಲ ಫೋಟೊಗಳನ್ನು ಶಮಿ ತಮ್ಮ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಮಂಗಳವಾರ ಪ್ರಕಟಿಸಿದ್ದಾರೆ.

2 ತಿಂಗಳ ಹಿಂದೆ ಲಂಡನ್​ನಲ್ಲಿ ಶಮಿ ಪಾದದ ಶಸ್ತ್ರಚಿಕಿತ್ಸೆಗೆ(mohammed shami injury update) ಒಳಗಾಗಿದ್ದರು. ಇದೀಗ ಶೀಘ್ರ ಚೇತರಿಸಿಕೊಳ್ಳುತ್ತಿರುವ(Mohammed Shami injury update) ಶಮಿ ಈ ವರ್ಷದ ಕೊನೆಯಲ್ಲಿ ಬಾಂಗ್ಲಾದೇಶದ ವಿರುದ್ಧ ತವರಿನಲ್ಲಿ ನಡೆಯುವ ಟೆಸ್ಟ್ ಸರಣಿಗೆ ಪುನರಾಗಮನ ಮಾಡುವ ನಿರೀಕ್ಷೆಯಲ್ಲಿದ್ದಾರೆ. ಗಾಯದಿಂದಾಗಿ ಶಮಿಗೆ ಈ ಬಾರಿ ಐಪಿಎಲ್​ ಸೇರಿ ಮಹತ್ವದ ಟಿ20 ವಿಶ್ವಕಪ್​ ಟೂರ್ನಿ ಕೈತಪ್ಪಿತು. ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ವೇಳೆ ಗಾಯಗೊಂಡಿದ್ದ ಶಮಿ, ಈ ಗಾಯವನ್ನು ಮರೆಮಾಚಿ ವಿಶ್ವಕಪ್​ನಲ್ಲಿ ಅಮೋಘ ಬೌಲಿಂಗ್​ ಪ್ರದರ್ಶನ ತೋರಿದ್ದರು.

ವಿಶ್ವಕಪ್​ ಟೂರ್ನಿಯಲ್ಲಿ ಶಮಿ ಅವರು ತಮ್ಮ ಮೊನಚಾದ ಬೌಲಿಂಗ್​ ದಾಳಿಯ ಮೂಲಕ ಟೂರ್ನಿಯಲ್ಲಿಯೇ ಅತ್ಯಧಿಕ ವಿಕೆಟ್​ ಪಡೆದ ಬೌಲರ್​ ಎನಿಸಿಕೊಂಡಿದ್ದರು. ಆಡಿದ 7 ಪಂದ್ಯಗಳಲ್ಲಿ 24 ವಿಕೆಟ್‌ ಉರುಳಿಸಿದ್ದರು. ಅವರ ಈ ಸಾಧನೆಯನ್ನು ಪರಿಗಣಿಸಿ ಅವರಿಗೆ ದೇಶದ ಎರಡನೇ ಅತ್ಯುನ್ನತ ಕ್ರೀಡಾ ಗೌರವವಾದ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಮೊಹಮ್ಮದ್ ಶಮಿ ಅರ್ಜುನ ಪ್ರಶಸ್ತಿ ಸ್ವೀಕರಿಸಿದ್ದರು. ಮೊಹಮ್ಮದ್ ಶಮಿ ಭಾರತ ಪರ 64 ಟೆಸ್ಟ್ ಪಂದ್ಯಗಳಲ್ಲಿ 229 ವಿಕೆಟ್ ಪಡೆದಿದ್ದಾರೆ. 101 ಏಕದಿನ ಪಂದ್ಯಗಳಲ್ಲಿ 195 ವಿಕೆಟ್ ಪಡೆದಿದ್ದಾರೆ. 23 ಟಿ20 ಪಂದ್ಯಗಳಲ್ಲಿ 24 ವಿಕೆಟ್ ಪಡೆದಿದ್ದಾರೆ.

ಇದನ್ನೂ ಓದಿ Mohammed Shami: ‘ಕ್ರಿಕೆಟ್​ಗೆ ಮರಳುವ ಹಸಿವು ಹೆಚ್ಚಾಗಿದೆ’; ಚೇತರಿಕೆಯ ಅಪ್‌ಡೇಟ್‌ ನೀಡಿದ ಶಮಿ

ಕ್ರಿಕೆಟ್​ಗೆ ಮರಳುವ ಹಸಿವು ಹೆಚ್ಚಾಗಿದೆ


2 ವಾರ ಹಿಂದೆ ಶಮಿ ಅವರು 2 ಸ್ಟಿಕ್​ ವಾಕರ್​ಗಳೊಂದಿಗೆ ಗಾರ್ಡನ್​ನಲ್ಲಿ ನಿಂತಿರುವ ಫೋಟೊವನ್ನು ಹಂಚಿಕೊಂಡು, ‘ಮತ್ತೆ ಟ್ರ್ಯಾಕ್‌ಗೆ ಮರಳುವ ಹಸಿದಿದೆ. ಈ ಹಾದಿ ಕಠಿಣವಾಗಿರಬಹುದು, ಆದರೆ ಇದನ್ನೇಲ್ಲ ಎದುರಿಸಿ ಶೀಘ್ರದಲ್ಲೇ ಕ್ರಿಕೆಟ್​ಗೆ ಮರಳುವ ವಿಶ್ವಾಸವಿದೆ’ ಎಂದು ಬರೆದುಕೊಂಡಿದ್ದರು. ಇದಕ್ಕೂ ಮುನ್ನ ಶಮಿ ತಮ್ಮ ಮನೆಯಲ್ಲಿ ಪಾದಕ್ಕೆ ಎಲೆಕ್ಟ್ರಿಕ್​ ಮಸಾಜ್​ ಮಾಡುತ್ತಿರುವ ಫೋಟೊವನ್ನು ಹಂಚಿಕೊಂಡಿದ್ದರು.

Exit mobile version