Site icon Vistara News

Mohammed Shami: ಪತ್ನಿಗೆ ಪ್ರತಿ ತಿಂಗಳು 50 ಸಾವಿರ ರೂ. ನೀಡುವಂತೆ ಟೀಮ್​ ಇಂಡಿಯಾ ವೇಗಿಗೆ ಕೋರ್ಟ್ ಆದೇಶ

Mohammed Shami

ಕೋಲ್ಕೊತಾ: ಟೀಮ್​ ಇಂಡಿಯಾದ ವೇಗಿ ಮೊಹಮ್ಮದ್ ಶಮಿ(Mohammed Shami) ತಮ್ಮ ಪತ್ನಿ ಹಸಿನ್ ಜಹಾನ್​ಗೆ ಮಾಸಿಕ 50 ಸಾವಿರ ರೂ. ಜೀವನಾಂಶ ನೀಡುವಂತೆ ಕೋಲ್ಕೊತಾ ನ್ಯಾಯಾಲಯ ಸೋಮವಾರ ಆದೇಶಿಸಿದೆ.

2018 ರಲ್ಲಿ ಹಸಿನ್ ಜಹಾನ್ ಅವರು ಮಾಸಿಕ 10 ಲಕ್ಷ ರೂ ಜೀವನಾಂಶವನ್ನು ಕೋರಿ ಶಮ್ಮಿ ವಿರುದ್ಧ ಕಾನೂನು ಮೊಕದ್ದಮೆ ಹೂಡಿದ್ದರು. ವೈಯಕ್ತಿಕ ವೆಚ್ಚಕ್ಕಾಗಿ 7 ಲಕ್ಷ ರೂ., ತಮ್ಮ ಮಗಳ ನಿರ್ವಹಣೆಗಾಗಿ 3 ಲಕ್ಷ ರೂ. ಕೇಳಿದ್ದರು. ಇದರ ವಿಚಾರಣೆ ನಡೆಸಿದ ಕೋಲ್ಕೊತಾ ನ್ಯಾಯಾಲಯ ಸೋಮವಾರ ತೀರ್ಪು ಪ್ರಕಟಿಸಿದ್ದು ಶಮಿ ಅವರು ಪತ್ಯೇಕವಾಗಿ ವಾಸಿಸುತ್ತಿರುವ ಪತ್ನಿ ಜಹಾನ್​ಗೆ ತಿಂಗಳಿಗೆ 50 ಸಾವಿರ ರೂ. ನೀಡುವಂತೆ ಸೂಚಿಸಿದೆ.

16 ಆಗಸ್ಟ್ 2018 ರಂದು, ಹಸಿನ್ ಜಹಾನ್ ಪತ್ನಿ ಮೊಹಮ್ಮದ್ ಶಮಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲದೆ ಹಲ್ಲೆ, ಅತ್ಯಾಚಾರ, ಕೊಲೆ ಯತ್ನ ಮತ್ತು ಕೌಟುಂಬಿಕ ಹಿಂಸಾಚಾರದ ಆರೋಪದಡಿಯಲ್ಲಿ ಟೀಮ್ ಇಂಡಿಯಾ ಕ್ರಿಕೆಟಿಗನ ಮೇಲೆ ಪ್ರಕರಣ ದಾಖಲಿಸಲಾಗಿತ್ತು. ಇದೇ ವೇಳೆ ಮಗಳ ಖರ್ಚಿಗೆ ಹಾಗೂ ತನಗೆ ಯಾವುದೇ ರೀತಿಯ ಹಣಕಾಸಿನ ನೆರವು ನೀಡುತ್ತಿಲ್ಲ ಎಂದು ಹಸಿನ್ ಜಹಾನ್ ದೂರಿನಲ್ಲಿ ಅಪಾದಿಸಿದ್ದರು.

ಇದೀಗ ಮೊಹಮ್ಮದ್ ಶಮಿ ಅವರ ವಾರ್ಷಿಕ ಆದಾಯ ತೆರಿಗೆ 7.19 ಕೋಟಿ ರೂ. ಪರಿಗಣಿಸಿ ಪ್ರತಿ ತಿಂಗಳು 10ನೇ ತಾರೀಖಿನಂದು 50 ಸಾವಿರ ರೂ. ಪಾವತಿಗೆ ಕೋರ್ಟ್​ ಆದೇಶಿಸಿದೆ. ಅಷ್ಟೇ ಅಲ್ಲದೆ ಹಸಿನ್ ಜಹಾನ್ ಅವರ ಮಾಸಿಕ 10 ಲಕ್ಷ ರೂ. ಬೇಡಿಕೆಯನ್ನು ತಿರಸ್ಕರಿಸಿದೆ. ಸದ್ಯ ಪತ್ಯೇಕವಾಗಿ ವಾಸಿಸುತ್ತಿರುವ ಈ ಜೋಡಿ ಇನ್ನೂ ವಿಚ್ಛೇದನ ಪಡೆದಿಲ್ಲ.

ಇದನ್ನೂ ಓದಿ | Team India | ಟಿ20 ವಿಶ್ವ ಕಪ್ ತಂಡದಲ್ಲಿ ಮೊಹಮ್ಮದ್‌ ಶಮಿಗೆ ಸ್ಥಾನ ನೀಡಲೇಬೇಕು ಎಂದರು ಸೆಹ್ವಾಗ್‌

Exit mobile version