ದುಬೈ: 2024ರ ಸಾಲಿನ ಐಪಿಎಲ್ ಆಟಗಾರರ ಮಿನಿ ಹರಾಜು(IPL Auction 2024) ಪ್ರಕ್ರಿಯೆಯಲ್ಲಿ ಕಾಣಿಸಿಕೊಂಡಿದ್ದ ರಿಷಭ್ ಪಂತ್(Rishabh Pant) ಇದೀಗ ಮಹೇಂದ್ರ ಸಿಂಗ್ ಧೋನಿ(MS Dhoni) ಜತೆ ಟೆನಿಸ್ ಆಡಿದ ವಿಡಿಯೊ ವೈರಲ್ ಆಗಿದೆ.
ಪಂತ್ ಅವರು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಜತೆ ಬಿಡ್ಡಿಂಗ್ ಕಾರ್ಯದಲ್ಲಿ ತೊಡಗಿಕೊಂಡಿದ್ದ ಫೋಟೊ ಮತ್ತು ವಿಡಿಯೊಗಳು ವೈರಲ್ ಆಗಿತ್ತು. ಹರಾಜು ಮುಗಿದ ಬಳಿಕ ಪಂತ್ ಅವರು ಧೋನಿ ಜತೆ ಟೆನಿಸ್ ಆಡಿದ್ದಾರೆ. ಆಶೀಸ್ ನೆಹ್ರಾ ಕೂಡ ಇವರ ಜತೆಗಿದ್ದರು. ಚೇತರಿಕೆ ಕಾಣುತ್ತಿರುವ ಪಂತ್ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (NCA) ಪುನಶ್ಚೇತನ ಕಾರ್ಯದಲ್ಲಿ ತೊಡಗಿದ್ದು ಮುಂದಿನ ವರ್ಷ ಕ್ರಿಕೆಟ್ಗೆ ಮರಳುವ ವಿಶ್ವಾಸದಲ್ಲಿದ್ದಾರೆ.
MS Dhoni and Rishabh Pant playing Tennis in Dubai. 🔥pic.twitter.com/1RRqqsrT5S
— Johns. (@CricCrazyJohns) December 20, 2023
ಅಣ್ಣನ ಸ್ಥಾನದಲ್ಲಿ ನಿಂತು ಸಲಹೆ ನೀಡುವ ಧೋನಿ…
ಟೀಮ್ ಇಂಡಿಯಾದ ಮಾಜಿ ನಾಯಕ ಹಾಗೂ ಆಟಗಾರ ಮಹೇಂದ್ರ ಸಿಂಗ್ ಧೋನಿ ಮನೆಯ ಯಾವುದೇ ವಿಶೇಷ ಕಾರ್ಯಕ್ರಮದಲ್ಲೂ, ರಿಷಭ್ ಪಂತ್ ಕಾಣಿಸಿಕೊಳ್ಳುವುದು ಸರ್ವೇ ಸಾಮಾನ್ಯ. ಅಣ್ಣನ ಸ್ಥಾನದಲ್ಲಿ ನಿಂತು ಧೋನಿ ಅವರು ಪಂತ್ಗೆ ಸಲಹೆ ನೀಡುತ್ತಾರೆ. ಪಂತ್ ಕೂಡ ಧೋನಿ ಪರಿವಾರದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಈ ವರ್ಷದ ದೀಪಾವಳಿ ಹಬ್ಬವನ್ನು ಪಂತ್ ಧೋನಿ ಅವರು ಮನೆಯಲ್ಲಿ ಆಚರಿಸಿದ್ದರು.
ಇದನ್ನೂ ಓದಿ Rishabh Pant: ಮಹೇಂದ್ರ ಸಿಂಗ್ ಧೋನಿ ಜತೆ ಪಾರ್ಟಿ ಮಾಡಿದ ರಿಷಭ್ ಪಂತ್
ಐಪಿಎಲ್ ಮೂಲಕ ಕಮ್ಬ್ಯಾಕ್
ರಿಷಭ್ ಪಂತ್ ಪಂತ್ ಅವರು 2024ರ ಐಪಿಎಲ್ ಆವೃತ್ತಿಯಲ್ಲಿ ಕಣಕ್ಕಿಳಿಯುವುದು ಖಚಿತ ಎಂದು ಈಗಾಗಕೇ ಡೆಲ್ಲಿ ಕ್ಯಾಪಿಟಲ್ಸ್ ದೃಢಪಡಿಸಿದೆ. “ಸುಮಾರು ಒಂದು ವರ್ಷದಿಂದ ಕ್ರಿಕೆಟ್ ಕ್ಷೇತ್ರದಿಂದ ಹೊರಗುಳಿದಿರುವ ಭಾರತೀಯ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ 2024ರ ಐಪಿಎಲ್ ಋತುವಿನಲ್ಲಿ ಆಡುವ ಜತೆಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಲಿದ್ದಾರೆ” ಎಂದು ಮ್ಯಾನೇಜ್‌ಮೆಂಟ್ ಖಚಿತಪಡಿಸಿತ್ತು. ಈ ಸುದ್ದಿ ಕೇಳಿ ಪಂತ್ ಅವರ ಅಭಿಮಾನಿಗಳು ಸಂತಸಗೊಂಡಿದ್ದರು.
ಬಹುತೇಕ ಚೇತರಿಕೆ ಕಂಡಿರುವ ಅವರ ಫಿಟ್ನೆಸ್ ಮೇಲೆ ಬಿಸಿಸಿಐ ವೈದ್ಯಕಿಯ ತಂಡ ನಿಗಾ ಇರಿಸಿದೆ. ಪಂತ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಮರಳ ಬೇಕಾದರ ದೇಶೀಯ ಕ್ರಿಕೆಟ್ನಲ್ಲಿ ಆಡಿ ತಮ್ಮ ಫಿಟ್ಸೆನ್ ಸಾಬೀತುಪಡಿಸಬೇಕಿದೆ.
ಕ್ರಿಸ್ಮಸ್ ಪಾರ್ಟಿ ಬಳಿಕ ಅಪಘಾತ
ಕಳೆದ ವರ್ಷ ಧೋನಿ ಪರಿವಾರದೊಂದಿಗೆ ಪಂತ್ ಅವರು ದುಬೈಯಲ್ಲಿ ಕ್ರಿಸ್ಮಸ್ ಪಾರ್ಟಿಯಲ್ಲಿ ಪಾಲ್ಗೊಂಡು ಮರಳಿ ಭಾರತಕ್ಕೆ ಬಂದು ತಾಯಿಗೆ ಹೊಸ ವರ್ಷದ ಸರ್ಪ್ರೈಸ್ ನೀಡಲೆಂದು ದೆಹಲಿಯಿಂದ ಡೆಹ್ರಾಡೂನ್ಗೆ ತೆರಳುತ್ತಿದ್ದ ವೇಳೆ ಅವರು ಚಲಾಯಿಸಿಕೊಂಡು ಹೋಗುತ್ತಿದ್ದ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಅವರ ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿತ್ತು. ಸುಟ್ಟ ಗಾಯಗಳು ಹಾಗೂ ಮಂಡಿಯ ಗಾಯಗೊಂಡಿಗೆ ರಿಷಭ್ ಪಂತ್ ಪಾರಾಗಿದ್ದರು. ಡೆಹ್ರಾಡೂನ್ನಲ್ಲಿ ಆರಂಭದಲ್ಲಿ ಚಿಕಿತ್ಸೆ ಪಡೆದಿದ್ದ ಅವರನ್ನು ಬಳಿಕ ಮುಂಬಯಿಯ ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ನೀಡಲಾಗಿತ್ತು.