Site icon Vistara News

MS Dhoni: ಐಪಿಎಸ್ ಅಧಿಕಾರಿ ವಿರುದ್ಧ ಧೋನಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ಮುಂದೂಡಿಕೆ

Mahendra Singh Dhoni in ICC world cup 1019

ಚೆನ್ನೈ: ನಿವೃತ್ತ ಐಪಿಎಸ್ ಅಧಿಕಾರಿ ಜಿ. ಸಂಪತ್ ಕುಮಾರ್( IPS officer G Sampath Kumar) ವಿರುದ್ಧ ಭಾರತ ತಂಡದ ಮಾಜಿ ನಾಯಕ ಎಂ.ಎಸ್ ಧೋನಿ(M S Dhoni) ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಮುಂದೂಡಿದೆ. ಮಾಜಿ ಅಧಿಕಾರಿಯ ವಿರುದ್ಧ ಮಾನನಷ್ಟ ಮೊಕದಮ್ಮೆ ಹೂಡಿದ್ದ ಸಿವಿಲ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಆದೇಶವನ್ನು ಪರಿಶೀಲಿಸಲು ನ್ಯಾಯಾಲಯ ನಿರ್ಧರಿಸಿದ್ದು ಈ ಪ್ರಕರಣವನ್ನು ಆಗಸ್ಟ್ 31 ಕ್ಕೆ ಮುಂದೂಡಿದೆ.

ನ್ಯಾಯಮೂರ್ತಿ ಎಂ. ಸುಂದರ್ ಮತ್ತು ನ್ಯಾಯಮೂರ್ತಿ ಆರ್. ಶಕ್ತಿವೇಲ್ ಅವರನ್ನೊಳಗೊಂಡ ಹೈಕೋರ್ಟ್ ವಿಭಾಗೀಯ ಪೀಠ ಗುರುವಾರದಂದು ಈ ಪ್ರಕರಣವನ್ನು ವಿಚಾರಣೆ ನಡೆಸಿ ಆದೇಶ ನೀಡಿದೆ. ವಿಚಾರಣೆಯ ಸಂದರ್ಭದಲ್ಲಿ, ಧೋನಿ ಅವರ ಕಾನೂನು ಪ್ರತಿನಿಧಿ, ಹಿರಿಯ ವಕೀಲ ಪಿಎಸ್ ರಾಮನ್, ಸಿವಿಲ್ ಮೊಕದ್ದಮೆಗೆ ಸಂಬಂಧಿಸಿದಂತೆ ನ್ಯಾಯಯುತ ಆದೇಶವನ್ನು ಸಲ್ಲಿಸಲು ಸಮಯ ಕೋರಿದರು. ಈ ಮನವಿಯ ಹಿನ್ನೆಲೆಯಲ್ಲಿ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಆಗಸ್ಟ್ 31ಕ್ಕೆ ನಿಗದಿಪಡಿಸಿದೆ.

ಏನಿದು ಪ್ರಕರಣ?

2013ರಲ್ಲಿ ಕುಖ್ಯಾತ ಐಪಿಎಲ್ ಬೆಟ್ಟಿಂಗ್ ಪ್ರಕರಣದಲ್ಲಿ ತಮ್ಮನ್ನು ಹೆಸರಿಸಿದ್ದಕ್ಕಾಗಿ ಧೋನಿ 100 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಆದಾಗ್ಯೂ ಐಪಿಎಸ್ ಅಧಿಕಾರಿ ಮತ್ತೊಂದು ಬಾರಿ ಧೋನಿಯ ಹೆಸರನ್ನು ಉಲ್ಲೇಖಿಸಿದ್ದರು. ಇದನ್ನು ವಿರೋಧಿಸಿ ಧೋನಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ Shivam Dube: ಧೋನಿ ಸಲಹೆಯಿಂದ ಐರ್ಲೆಂಡ್​ ಸರಣಿಯಲ್ಲಿ ಅವಕಾಶ ಸಿಕ್ಕಿತು; ದುಬೆ

ಐದನೇ ಐಪಿಎಲ್ ಗೆದ್ದ ಧೋನಿ

16ನೇ ಆವೃ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಧೋನಿ ಚೆನ್ನೈ ತಂಡವನ್ನು 5ನೇ ಬಾರಿ ಚಾಂಪಿಯನ್ ​ಪಟ್ಟಕ್ಕೇರಿಸಿದ್ದರು. ಐಪಿಎಲ್ 2022ರ ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದ್ದ ಚೆನ್ನೈ ಸೂಪರ್ ಕಿಂಗ್ಸ್ 2023ರಲ್ಲಿ ಚಾಂಪಿಯನ್​ ಆಗಿ ಹೊರಹೊಮ್ಮಿತು. ಅಭಿಮಾನಿಗಳ ಒತ್ತಾಸೆಯಂತೆ ಧೋನಿ ಮುಂದಿನ ಬಾರಿಯ ಐಪಿಎಲ್​ನಲ್ಲಿ ಆಡುವದಾಗಿ ತಿಳಿಸಿದ್ದಾರೆ. ಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಅವರು ಜಿಮ್​ನಲ್ಲಿ ಫಿಟ್​ನೆಸ್​ ಅಭ್ಯಾಸ ಮಾಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ತಮ್ಮ ತವರಾದ ರಾಂಚಿಯಲ್ಲಿ ವಿಂಡೆಜ್​ ಕಾರುಗಳನ್ನು ಓಡಿಸಿದ ವಿಡಿಯೊ ವೈರಲ್​ ಆಗಿತ್ತು.

Exit mobile version