Site icon Vistara News

MS Dhoni: ರನ್​ ಓಡದೆ ಸ್ವಾರ್ಥ ತೋರಿದ ಧೋನಿ; ನೆಟ್ಟಿಗರಿಂದ ಭಾರೀ ಟೀಕೆ

MS Dhoni

ಚೆನ್ನೈ: ಚೆನ್ನೈ ಸೂಪರ್​ ಕಿಂಗ್ಸ್ ತಂಡದ ಮಾಜಿ ನಾಯಕ​ ಮಹೇಂದ್ರ ಸಿಂಗ್ ಧೋನಿ(MS Dhoni) ಬುಧವಾರ ನಡೆದ ಪಂಜಾಬ್​ ಲಿಂಗ್ಸ್​ ವಿರುದ್ಧದ ಪಂದ್ಯದಲ್ಲಿ ತೋರಿದ ವರ್ತನೆಯೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದು ಮಾಡುತ್ತಿದೆ. ಹಲವು ನೆಟ್ಟಿಗರು ಧೋನಿ ಇಷ್ಟೊಂದು ಸ್ವಾರ್ಥಿಯಾಗಬಾರದೆಂದು ಟೀಕಿಸಿದ್ದಾರೆ.

ಯಾವುದೇ ವಿವಾದಗಳಿಗೆ ಒಳಗಾಗದೆ ಶಾಂತ ಸ್ವಭಾವದಿಂದ ಆಡುವ ಧೋನಿ ಹಲವು ಬಾರಿ ಸಹ ಆಟಗಾರರ ಶತಕ ಮತ್ತು ಅರ್ಧಶತಕಕ್ಕೋಸ್ಕರ ರನ್​ ಗಳಿಸದೆ ಅವಕಾಶ ಒದಗಿಸಿಕೊಟ್ಟಿದ್ದಾರೆ. ಧೋನಿಯ ಈ ನಡೆಯ ಬಗ್ಗೆ ಅನೇಕರು ಮೆಚ್ಚುಗೆ ಕೂಡ ವ್ಯಕ್ತಪಡಿಸಿದ್ದರು. ಆದರೆ, ಪಂಬಾಬ್​ ವಿರುದ್ಧದ ಪಂದ್ಯದಲ್ಲಿ ಧೋನಿ ಬ್ಯಾಟಿಂಗ್​ ನಡೆಸುವ ಸಲುವಾಗಿ ಸ್ವಾರ್ಥಿಯಾಗಿ ಕಂಡು ಬಂದರು.

ಚೆನ್ನೈ ಬ್ಯಾಟಿಂಗ್​ ಇನಿಂಗ್ಸ್​ನ ಅಂತಿಮ ಓವರ್​ನಲ್ಲಿ ಅರ್ಷದೀಪ್​ ಎಸೆದ ಈ ಓವರ್​ನ ಮೂರನೇ ಎಸೆತವನ್ನು ಧೋನಿ ಬಲವಾಗಿ ಹೊಡೆದರು. ಚೆಂಡು ಬೌಂಡರಿ ಲೈನ್​ ಬಳಿ ಹೋದರೂ ಕೂಡ ಧೋನಿ ರನ್​ ಓಡದೆ ಸ್ವಾರ್ಥ ತೋರಿದರು. ನಾನ್​ಸ್ಟ್ರೈಕ್​ನಲ್ಲಿದ್ದ ಡೇರಿಯಲ್​ ಮಿಚೆಲ್​ ಅವರು ರನ್​ಗಾಗಿ ಓಡಿ ಕ್ರೀಸ್​ ಬಳಿ ಬಂದರು. ಈ ವೇಳೆ ಧೋನಿ ಅವೇಶದಲ್ಲಿಯೇ ಮಿಚೆಲ್​ಗೆ ಹಿಂದೆ ಹೋಗುವಂತೆ ತಿಳಿಸಿದರು. ಸ್ಟ್ರೈಕ್​ ತನಕ ಓಡಿದ್ದ ಮಿಚೆಲ್​ ಮತ್ತೆ ನಾನ್​ಸ್ಟ್ರೈಕರ್​ ಬಳಿಗೆ ಓಡಿ ಬಂದರು. ಮುಂದಿನ ಎಸೆತವನ್ನು ಧೋನಿ ಬೀಟ್​ ಮಾಡಿದರು. 5ನೇ ಎಸೆತದಲ್ಲಿ ಸಿಕ್ಸರ್​ ಬಾರಿಸಿ ಅಂತಿಮ ಎಸೆತದಲ್ಲಿ ರನೌಟ್​ ಆದರು.

ಇದನ್ನೂ ಓದಿ IPL 2024 Points Table: ಚೆನ್ನೈ ವಿರುದ್ಧ ಗೆದ್ದು ಅಂಕಪಟ್ಟಿಯಲ್ಲಿ ಪ್ರಗತಿ ಸಾಧಿಸಿದ ಪಂಜಾಬ್​

ಬ್ಯಾಟಿಂಗ್​ಗಾಗಿ ಆಸೆ ತೋರಿದ ಧೋನಿಯ ಈ ಸ್ವಾರ್ಥವನ್ನು ಅನೇಕ ನೆಟ್ಟಿಗರು ಟೀಕಿಸಿದ್ದಾರೆ. ಇದು ಮತ್ತೊಬ್ಬ ಆಟಗಾರನಿಗೆ ಮಾಡುವ ಅವಮಾನ ಎಂದು ಕಮೆಂಟ್​ ಮಾಡಿದ್ದಾರೆ. ಈ ಘಟನೆಯ ವಿಡಿಯೊ ಎಲ್ಲಡೆ ವೈರಲ್(viral video)​ ಆಗಿದೆ. ಧೋನಿ ಸ್ಟ್ರೈಕ್​ ಉಳಿಸಿಕಿಕೊಂಡರೂ ಕೂಡ ಅವರಿಂದ ದೊಡ್ಡ ಮೊತ್ತ ದಾಖಲಿಸಲು ಸಾಧ್ಯವಾಗಲಿಲ್ಲ. 11  ಎಸೆತಗಳಿಂದ 14 ರನ್ ಮಾತ್ರ ಗಳಿಸಿದರು.

ಎಂ.ಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ(IPL 2024) 49 ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್​ ಆಯ್ದುಕೊಂಡ ಪಂಜಾಬ್​ ಇದಕ್ಕೆ ತಕ್ಕ ಪ್ರದರ್ಶನ ನೀಡುವು ಮೂಲಕ ಚೆನ್ನೈ ತಂಡವನ್ನು 162 ರನ್​ಗೆ ಕಟ್ಟಿಹಾಕಿತು. ಸಾಧಾರಣ ಮೊತ್ತದ ಗುರಿಯನ್ನು ಅಷ್ಟೇ ಸೊಗಸಾಗಿ ಬೆನ್ನಟ್ಟಿದ ಪಂಜಾಬ್​ ಬ್ಯಾಟರ್​ಗಳು 17.5 ಓವರ್​ಗಳಲ್ಲಿ ಕೇವಲ 3 ವಿಕೆಟ್​ಗೆ 163 ರನ್​ ಬಾರಿಸಿ ಗೆಲುವು ಸಾಧಿಸಿತು.

Exit mobile version