ಚೆನ್ನೈ: ಮಹೇಂದ್ರ ಸಿಂಗ್ ಧೋನಿ(MS Dhoni) ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿ ಹಲವು ವರ್ಷ ಕಳೆದರೂ ಅವರು ಈಗಲೂ ಕ್ರಿಕೆಟಿನ ಸೂಪರ್ ಸ್ಟಾರ್ ಆಗಿದ್ದಾರೆ. ಅವರ ಅಭಿಮಾನಿಗಳ ಸಂಖ್ಯೆಗೇನೂ ಕೊರತೆ ಇಲ್ಲ. ಐಪಿಎಲ್ನಲ್ಲಿ(IPL 2024) ಚೆನ್ನೈ ಪರ ಆಡುತ್ತಿರುವ ಧೋನಿ ಮೈದಾನಕ್ಕೆ ಇಳಿದರೆ ಸಾಕು ಇಡೀ ಸ್ಟೇಡಿಯಂ ತುಂಬಾ ಧೋನಿಯ ಹೆಸರಿನದ್ದೇ ಸದ್ದು. ಧೋನಿಯನ್ನು ನೋಡಲೆಂದೇ ಅವರ ಅಭಿಮಾನಿಗಳು ಕಾದು ಕುಳಿತಿರುತ್ತಾರೆ. ಇದೀಗ ಅವರ ಅಪ್ಪಟ ಅಭಿಮಾನಿಯೊಬ್ಬ ತನ್ನ ಗೆಳತಿಯ ಹೆಸರಿನಲ್ಲಿ 7 ಅಕ್ಷರಗಳಿಲ್ಲದ ಕಾರಣ ಬ್ರೇಕಪ್ ಮಾಡಿದ್ದಾನೆ. ಭಾನುವಾರ ನಡೆದ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಪೋಸ್ಟರ್ ಹಿಡಿಯುವ ಮೂಲಕ ಈ ಅಭಿಮಾನಿ ತನ್ನ ಬ್ರೇಕಪ್ ವಿಚಾರವನ್ನು ಬಹಿರಂಗಪಡಿಸಿದ್ದಾನೆ.
Fans at the Chepauk. 😄👌 pic.twitter.com/Qmk3pq4b0V
— Mufaddal Vohra (@mufaddal_vohra) April 28, 2024
ಚೆನ್ನೈಯ ಚೆಪಾಕ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಐಪಿಎಲ್(IPL 2024) ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಆಹ್ವಾನ ಪಡೆದ ಚೆನ್ನೈ(Chennai Super Kings) ತಂಡ ನಾಯಕ ಋತುರಾಜ್ ಗಾಯಕ್ವಾಡ್, ಡೇರಿಯಲ್ ಮಿಚೆಲ್ ಮತ್ತು ಶಿವಂ ದುಬೆ ಅವರ ಆಕ್ರಮಣಕಾರಿ ಬ್ಯಾಟಿಂಗ್ ಸಾಹಸದಿಂದ ನಿಗದಿತ 20 ಓವರ್ಗಳಲ್ಲಿ ಕೇವಲ 3 ವಿಕೆಟ್ ನಷ್ಟಕ್ಕೆ 212 ರನ್ ಬಾರಿಸಿತು. ಈ ಹಿಂದಿನ ಪಂದ್ಯಗಳಲ್ಲಿ ಸಲೀಸಾಗಿ ಮೂರು ಬಾರಿ 250ರ ಗಡಿ ದಾಟಿದ್ದ ಸನ್ರೈಸರ್ಸ್ ತಂಡಕ್ಕೆ ಈ ಮೊತ್ತ ಎಲ್ಲಿಂದಲೂ ಸಾಲದು ಎಂದು ನಿರೀಕ್ಷೆ ಮಾಡಿದ್ದವರಿಗೆ ಚೆನ್ನೈ ತಂಡದ ಮಧ್ಯಮ ವೇಗಿ ತುಷಾರ್ ದೇಶ್ಪಾಂಡೆ ಘಾತಕ ಸ್ಫೆಲ್ ಮೂಲಕ ಕಟ್ಟಿಹಾಕಿದರು. ಅಂತಿಮವಾಗಿ ಹೈದರಾಬಾದ್ 18.5 ಓವರ್ಗಳಲ್ಲಿ 134 ರನ್ಗೆ ಸರ್ವಪತನ ಕಂಡು ಹೀನಾಯವಾಗಿ ಸೋಲೊಪ್ಪಿಕೊಂಡಿತು.
ಇದನ್ನೂ ಓದಿ IPL 2024 Points Table: ಚೆನ್ನೈ ಗೆಲುವಿನಿಂದ ಅಂಕಪಟ್ಟಿಯಲ್ಲಿ 3 ತಂಡಗಳಿಗೆ ಭಾರೀ ಹೊಡೆತ
ಎಂ.ಎಸ್.ಧೋನಿ(MS Dhoni), ಕ್ಯಾಪ್ಟನ್ ಕೂಲ್, ಮಾಹಿ, ತಾಲಾ… ಎಂದೆಲ್ಲ ಪ್ರೀತಿಯಿಂದ ಕರೆಸಿಕೊಳ್ಳುವ ಮಹೇಂದ್ರ ಸಿಂಗ್ ಧೋನಿ ಎಂದರೆ ಅಭಿಮಾನಿಗಳಿಗೊಂದು ಎಮೋಷನ್ (ಭಾವನೆ). ಅವರು ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಕಳೆದ ವರ್ಷವೇ ಧೋನಿ ಅವರು ಐಪಿಎಲ್ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿಯಾಗಲಿದೆ. ಈ ಮೂಲಕ ಧೋನಿ ಎಲ್ಲ ಮಾದರಿಯ ಕ್ರಿಕಟ್ಗೂ ಗುಡ್ಬೈ ಹೇಳಲಿದ್ದಾರೆ. ಹೀಗಾಗಿ ಧೋನಿ ಅವರ ಬ್ಯಾಟಿಂಗ್ ಕುಣ್ತುಂಬಿಕೊಳ್ಳಲು ಅವರ ಅಭಿಮಾನಿಗಳು ಪ್ರತಿ ಪಂದ್ಯದ ವೇಳೆಯೂ ಬಹಳ ನಿರೀಕ್ಷೆಯಿಂದ ಕಾಯುತ್ತಿರುತ್ತಾರೆ.
ಮೊಣಕಾಲು ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಧೋನಿ ಕಳೆದ ವರ್ಷ ಮುಂಬೈಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಬಾರಿಯ ಐಪಿಎಲ್ನ ಮೊದಲ ಪಂದ್ಯದಲ್ಲಿಯೇ ಧೋನಿ ಗಾಯದ ಸಮಸ್ಯೆಯಿಂದ ಬಳಲುತ್ತಿರುವುದು ಕಂಡು ಬಂದಿತ್ತು. ಕಳೆದ ಮುಂಬೈ ಮತ್ತು ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್ ನಡೆಸಿದ ವೇಳೆ ಕುಂಟುತಾ ನಡೆದಾಡಿದ ಫೋಟೊ ಮತ್ತು ವಿಡಿಯೊ ವೈರಲ್ ಆಗಿತ್ತು. ಕಳೆದ ಮುಂಬೈ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯಗೆ ಹ್ಯಾಟ್ರಿಕ್ ಸಿಕ್ಸರ್ಗಳ ರುಚಿ ತೋರಿಸಿದ್ದರು. ವಯಸ್ಸು 42 ಆದರೂ, ತಮ್ಮ ಬ್ಯಾಟಿಂಗ್ ಫಾರ್ಮ್ ಮಾತ್ರ ಈ ಹಿಂದಿನಂತೆಯೇ ಇದೆ.