Site icon Vistara News

MS Dhoni: ಸಿಟ್ಟಿನಲ್ಲಿ ಕ್ಯಾಮೆರಾಗೆ ನೀರಿನ ಬಾಟಲ್​ ಎಸೆಯಲು ಮುಂದಾದ ಧೋನಿ; ವಿಡಿಯೊ ವೈರಲ್​

MS Dhoni

ಚೆನ್ನೈ: ವಿದಾಯದ ಐಪಿಎಲ್(IPL 2024)​ ಟೂರ್ನಿ ಆಡುತ್ತಿರುವ ಚೆನ್ನೈ ಸೂಪರ್​ ಕಿಂಗ್ಸ್(CSK)​ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್​ ಧೋನಿ(MS Dhoni) ಅವರ ಬ್ಯಾಟಿಂಗ್​ ಕುಣ್ತುಂಬಿಕೊಳ್ಳಲು ಅವರ ಅಭಿಮಾನಿಗಳು ಪ್ರತಿ ಪಂದ್ಯದ ವೇಳೆಯೂ ಬಹಳ ನಿರೀಕ್ಷೆಯಿಂದ ಕಾಯುತ್ತಿರುತ್ತಾರೆ. ಕ್ಯಾಮೆರಾಮೆನ್​ಗಳು ಧೋನಿಯನ್ನು ಪಂದ್ಯದ ನಡುವೆ ತೋರಿಸಿದಾಗಲೆಲ್ಲವೂ ಸ್ಟೇಡಿಯಂನಲ್ಲಿ ಧೋನಿಯ ಹೆಸರು ಜೋರಾಗಿ ಕೇಳಿ ಬರುತ್ತದೆ. ಮಂಗಳವಾರದ ಲಕ್ನೋ(Lucknow Super Giants) ವಿರುದ್ಧದ ಪಂದ್ಯದ ವೇಳೆಯೂ ಧೋನಿ ಬ್ಯಾಟಿಂಗ್​ಗೆ ರೆಡಿಯಾಗಿ ಡ್ರೆಸ್ಸಿಂಗ್​ ರೂಮ್​ನಲ್ಲಿ ಇರುವುದನ್ನು ದೊಡ್ಡ ಪರದೆಯಲ್ಲಿ ತೋರಿಸಲಾಯಿತು. ಈ ವೇಳೆ ಧೋನಿ ಕೋಪಗೊಂಡು ಕ್ಯಾಮೆರಾಗೆ ನೀರಿನ ಬಾಟಲ್​ ಎಸೆಯಲು ಮುಂದಾಗಿದ್ದಾರೆ. ತಕ್ಷಣ ಕ್ಯಾಮೆರಾಮೆನ್​ ತನ್ನ ಕ್ಯಾಮೆರಾವನ್ನು ಬೇರೆಡೆಗೆ ತಿರುಗಿಸಿದ್ದಾನೆ. ಈ ವಿಡಿಯೊ ವೈರಲ್(viral video)​ ಆಗಿದೆ.

ಎಂ.ಎಸ್.ಧೋನಿ(MS Dhoni), ಕ್ಯಾಪ್ಟನ್‌ ಕೂಲ್‌, ಮಾಹಿ, ತಾಲಾ… ಎಂದೆಲ್ಲ ಪ್ರೀತಿಯಿಂದ ಕರೆಸಿಕೊಳ್ಳುವ ಮಹೇಂದ್ರ ಸಿಂಗ್‌ ಧೋನಿ ಎಂದರೆ ಅಭಿಮಾನಿಗಳಿಗೊಂದು ಎಮೋಷನ್ (ಭಾವನೆ). ಅವರು ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಕಳೆದ ವರ್ಷವೇ ಧೋನಿ ಅವರು ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿಯಾಗಲಿದೆ. ಈ ಮೂಲಕ ಧೋನಿ ಎಲ್ಲ ಮಾದರಿಯ ಕ್ರಿಕಟ್​ಗೂ ಗುಡ್​ಬೈ ಹೇಳಲಿದ್ದಾರೆ.

ಮೊಣಕಾಲು ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಧೋನಿ ಕಳೆದ ವರ್ಷ ಮುಂಬೈಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಬಾರಿಯ ಐಪಿಎಲ್​ನ ಮೊದಲ ಪಂದ್ಯದಲ್ಲಿಯೇ ಧೋನಿ ಗಾಯದ ಸಮಸ್ಯೆಯಿಂದ ಬಳಲುತ್ತಿರುವುದು ಕಂಡು ಬಂದಿತ್ತು. ಕಳೆದ ಮುಂಬೈ ಮತ್ತು ಕೆಕೆಆರ್​ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್​ ನಡೆಸಿದ ವೇಳೆ ಕುಂಟುತಾ ನಡೆದಾಡಿದ ಫೋಟೊ ಮತ್ತು ವಿಡಿಯೊ ವೈರಲ್​ ಆಗಿತ್ತು. ಕಳೆದ ಮುಂಬೈ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್​ ಪಾಂಡ್ಯಗೆ ಹ್ಯಾಟ್ರಿಕ್​ ಸಿಕ್ಸರ್​ಗಳ ರುಚಿ ತೋರಿಸಿದ್ದರು. ವಯಸ್ಸು 42 ಆದರೂ, ತಮ್ಮ ಬ್ಯಾಟಿಂಗ್​ ಫಾರ್ಮ್​ ಮಾತ್ರ ಈ ಹಿಂದಿನಂತೆಯೇ ಇದೆ.​

ಇದನ್ನೂ ಓದಿ IPL 2024: 13 ವರ್ಷದ ಐಪಿಎಲ್​ ದಾಖಲೆ ಮುರಿದ ಮಾರ್ಕಸ್​ ಸ್ಟೋಯಿನಿಸ್

ಧೋನಿ ಅವರು ಲಕ್ನೋ ವಿರುದ್ಧ ಕೇವಲ ಒಂದು ಎಸೆತ ಎದುರಿಸಿ ಬೌಂಡರಿ ಮೂಲಕ ಅಜೇಯ 4 ರನ್ ಗಳಿಸಿದರು. ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಇತ್ತಂಡಗಳ ನಡುವಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಚೆನ್ನೈ 20 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 210 ರನ್‌ ಗಳಿಸಿತು. ಇದನ್ನು ಬೆನ್ನತ್ತಿದ ಲಕ್ನೋ 19.3 ಓವರ್‌ ಗಳಲ್ಲಿ 4 ವಿಕೆಟ್‌ಗೆ 213 ರನ್‌ ಗಳಿಸಿ, 6 ವಿಕೆಟ್‌ ಗಳಿಂದ ಜಯಭೇರಿ ಬಾರಿಸಿತು.

Exit mobile version