Site icon Vistara News

MS Dhoni | ಐಪಿಎಲ್​ಗೆ ಭರ್ಜರಿ ಅಭ್ಯಾಸ ಆರಂಭಿಸಿದ ಧೋನಿ; ವಿಡಿಯೊ ವೈರಲ್​

MS Dhoni

ಚೆನ್ನೈ: 16ನೇ ಆವೃತ್ತಿಯ ಐಪಿಎಲ್​ಗೆ ಈಗಾಗಲೇ ಎಲ್ಲ ರೀತಿಯ ಸಿದ್ಧತೆ ಆರಂಭವಾಗಿದೆ. ಇದರ ಬೆನ್ನಲ್ಲೇ ಟೀಮ್​ ಇಂಡಿಯಾದ ಮಾಜಿ ಆಟಗಾರ ಚೆನ್ನೈ ಸೂಪರ್ ಕಿಂಗ್ಸ್‌ ತಂಡದ ನಾಯಕ ಎಂ.ಎಸ್‌.ಧೋನಿ(MS Dhoni) ಅವರು ಭರ್ಜರಿ ಅಭ್ಯಾಸ ಆರಂಭಿಸಿದ್ದಾರೆ. ಧೋನಿ ಅಭ್ಯಾಸ ನಡೆಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಧೋನಿ ಅವರು ಅಭ್ಯಾಸ ನಡೆಸುತ್ತಿರುವ ವಿಡಿಯೊ ಕಂಡ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಸತತ ಸಿಕ್ಸರ್‌ಗಳನ್ನು ಸಿಡಿಸುವ ಮೂಲಕ ಧೋನಿ ಗಮನ ಸೆಳೆದಿದ್ದಾರೆ.

ಈ ಬಾರಿಯೂ ಧೋನಿ ಅವರೇ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಈಗಾಗಲೇ ಸಿಎಸ್‌ಕೆ ಫ್ರಾಂಚೈಸಿಯ ಸಿಇಒ ಕೆ.ಎಸ್. ವಿಶ್ವನಾಥನ್ ಖಚಿತಪಡಿಸಿದ್ದಾರೆ. ಇನ್ನೊಂದೆಡೆ ಧೋನಿ ಅವರು ಈ ಬಾರಿಯ ಐಪಿಎಲ್​ ಬಳಿಕ ವಿದಾಯ ಹೇಳಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದೆ. ಹೀಗಾಗಿ ಧೋನಿ ಅವರ ಆಟವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ.

ಇದನ್ನೂ ಓದಿ | MS Dhoni | ಈ ಬಾರಿಯೂ ಸಿಎಸ್​ಕೆಗೆ ಮಹೇಂದ್ರ ಸಿಂಗ್​ ಧೋನಿಯೇ ಸಾರಥಿ; ಕೆ.ಎಸ್. ವಿಶ್ವನಾಥನ್

Exit mobile version