Site icon Vistara News

MS Dhoni: ಕಾರಿನಲ್ಲಿ ಬರುತ್ತಿದ್ದ ಧೋನಿಯನ್ನು ತಡೆದು ನಿಲ್ಲಿಸಿ ಫೋಟೊ ತೆಗೆಸಿಕೊಂಡ ಅಭಿಮಾನಿ; ವಿಡಿಯೊ ವೈರಲ್​

MS Dhoni

MS Dhoni: dhoni Stop car came big fan click photo and video in rode

ರಾಂಚಿ: ಐಪಿಎಲ್​ ಟೂರ್ನಿ ಮುಗಿಸಿ ಪ್ಯಾರಿಸ್​ ಪ್ರವಾಸ ಮಾಡಿದ್ದ ಮಹೇಂದ್ರ ಸಿಂಗ್​ ಧೋನಿ(MS Dhoni) ಅವರು ಮತ್ತೆ ತವರಿಗೆ ವಾಪಸ್​ ಆಗಿದ್ದಾರೆ. ತವರಿಗೆ ಮರಳಿದ್ದೇ ತಡ ರಾಂಚಿಯಲ್ಲಿ ಧೋನಿ ತಮ್ಮ ಐಶಾರಾಮಿ ಮರ್ಸಿಡಿಸ್‌ ಬೆಂಜ್‌ ಕಾರಿನಲ್ಲಿ ಸುತ್ತಾಡಿದ್ದಾರೆ. ಈ ವಿಡಿಯೊವನ್ನು ಧೋನಿ ಅವರ ಅಭಿಮಾನಿಯೊಬ್ಬ(ms dhoni fan) ಮೊಬೈಲ್​ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಇದೇ ವೇಳೆ ಧೋನಿ ಜತೆಗೆ ಈ ಅಭಿಮಾನಿ ಫೋಟೊ ಕೂಡ ತೆಗೆಸಿಕೊಂಡಿದ್ದಾರೆ.


ಕಳೆದ ವಾರವಷ್ಟೇ ಧೋನಿ ಅವರು ಪ್ಯಾರಿಸ್​ನ ಪ್ರವಾಸಿ ಸ್ಥಳವೊಂದಕ್ಕೆ ಭೇಟಿ ನೀಡಿದ ಸಂದರ್ಭ ಅವರ ಅಭಿಮಾನಿಯೊಬ್ಬ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದ. ಈ ಫೋಟೊ ಎಲ್ಲಡೆ ವೈರಲ್​ ಆಗಿತ್ತು. ಇದೀಗ ರಾಂಚಿಯಲ್ಲಿ ಅಭಿಮಾನಿಯೊಬ್ಬ ಕಾರಿನಲ್ಲಿ ಬರುತ್ತಿದ್ದ ಧೋನಿಯನ್ನು ನಿಲ್ಲಿಸಿ ಅವರ ಜತೆ ಫೋಟೊ ತೆಗಿಸಿಕೊಂಡಿದ್ದಾನೆ. ಈ ಫೊಟೊ ಕಂಡ ಧೋನಿ ಅಭಿಮಾನಿಗಳು ನೀವು ನಿಜವಾಗಿಯೂ ಅದೃಷ್ಟಶಾಲಿ ಎಂದು ಕಮೆಂಟ್‌ ಮಾಡಿದ್ದಾರೆ.

ಧೋನಿ(MS Dhoni) ಯಾವಾಗಲೂ ತಮ್ಮ ವ್ಯಕ್ತಿತ್ವದಿಂದ ಅವರ ಅಭಿಮಾನಿಗಳ ಹೃದಯವನ್ನು ಗೆಲ್ಲುತ್ತಾರೆ. ಹೀಗಾಗಿ ಧೋನಿ ಎಂದರೆ ಅಭಿಮಾನಿಗಳಿಗೊಂದು ಎಮೋಷನ್ (ಭಾವನೆ). ಅವರು ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು(MS Dhoni Fan) ಹೊಂದಿದ್ದಾರೆ. ಅವರ ಭೇಟಿಗಾಗಿ ಅಭಿಮಾನಿಗಳು ಚಾತಕ ಪಕ್ಷಿಗಳಂತೆ ಕಾದು ಕುಳಿತಿರುತ್ತಾರೆ. ಕೆಲ ಅಭಿಮಾನಿಗಳು ಧೋನಿಯನ್ನು ಭೇಟಿಯಾಗಿ ಅವರಿಗೆ ವಿಶೇಷ ಉಡುಗೊರೆಯನ್ನು ನೀಡುತ್ತಾರೆ. 

ಇದನ್ನೂ ಓದಿ MS Dhoni Fan: ಪ್ಯಾರಿಸ್​ನಲ್ಲಿ ಧೋನಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಅಭಿಮಾನಿ

ಧೋನಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿ ಕೆಳವು ವರ್ಷಗಳಾಗಿವೆ. ಕೇವಲ ಐಪಿಎಲ್​ ಟೂರ್ನಿಯಲ್ಲಿ(IPL 2024) ಮಾತ್ರ ಆಡುತ್ತಿದ್ದಾರೆ. ಈ ಆವೃತ್ತಿಯಲ್ಲಿ ಧೋನಿ ಅವರು ಐಪಿಎಲ್​ಗೆ ವಿದಾಯ ಹೇಳಲಿದ್ದಾರೆ ಎನ್ನಲಾಗಿತ್ತು. ಆದರೆ ಧೋನಿ ಇದುವರೆಗೆ ತಮ್ಮ ನಿವೃತ್ತಿ ಪ್ರಕಟಿಸಿಲ್ಲ. ಮುಂದಿನ ಬಾರಿಯೂ ಅವರು ಆಡಲಿದ್ದಾರೆ ಎಂದು ಫ್ರಾಂಚೈಸಿ ಮೂಲಗಳು ಮಾಹಿತಿ ನೀಡಿದೆ.

ಆರ್​ಸಿಬಿ ವಿರುದ್ಧ ಸೋಲುವ ಮೂಲಕ ಚೆನ್ನೈ ಸೂಪರ್​ ಕಿಂಗ್ಸ್​(CSK) ತಂಡ 17ನೇ ಆವೃತ್ತಿಯ ಐಪಿಎಲ್​ನಿಂದ ಹೊರಬಿದ್ದಿತ್ತು. ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ನಡೆದಿದ್ದ ಪಂದ್ಯದಲ್ಲಿ ಚೆನ್ನೈ 27 ರನ್​ಗಳ ಅಂತರದಿಂದ ಸೋಲು ಕಂಡಿತ್ತು. ಈ ಸೋಲಿನ ಮರು ದಿನವೇ ಧೋನಿ(MS Dhoni) ತಮ್ಮ ತವರಾದ ರಾಂಚಿಗೆ ಮರಳಿದ್ದರು. ತವರಿನಲ್ಲಿ ಬೈಕ್​ ರೈಡಿಂಗ್​ ಮಾಡಿದ್ದರು. ಅವರು ಬೈಕ್​ನಲ್ಲಿ ಸುತ್ತಾಡಿಕೊಂಡು ವಾಪಸ್​ ಮನೆಗೆ ಬರುತ್ತಿರುವ ವಿಡಿಯೊ ವೈರಲ್​ ಆಗಿತ್ತು.

ಧೋನಿ ತಮ್ಮ ಬೈಕ್ ಮತ್ತು ಕಾರ್​ಗಳನ್ನು ಇರಿಸಲು ತಮ್ಮ ಮನೆಯ ಪಕ್ಕದಲ್ಲಿ ದೊಡ್ಡ ಕಟ್ಟಡವನ್ನೇ ಹೊಂದಿದ್ದಾರೆ. ಕೆಳವು ದಿನಗಳ ಹಿಂದೆ ವೆಂಕಟೇಶ್ ಪ್ರಸಾದ್ ಮತ್ತು ಸುನಿಲ್ ಜೋಶಿ ಅವರು ಧೋನಿಯ ರಾಂಚಿಯಲ್ಲಿರುವ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಧೋನಿ ಫಾರ್ಮ್ ಹೌಸ್​ನಲ್ಲಿರುವ ಬೈಕ್​(ms dhoni bike collection) ಮತ್ತು ಕಾರುಗಳ ವಿಡಿಯೊವನ್ನು ಹಂಚಿಕೊಂಡಿದ್ದರು. ಇದನ್ನು ಕಂಡ ಅನೇಕರು ಅಬ್ಬಾ… ಎಂದು ಆಶ್ಚರ್ಯವಾಗಿದ್ದರು. ಈ ಫಾರ್ಮ್​ಹೌಸ್​ನ ವಿಡಿಯೊ ವೈರಲ್​ ಆಗಿತ್ತು.

Exit mobile version