ರಾಂಚಿ: ಮಹೇಂದ್ರ ಸಿಂಗ್ ಧೋನಿ(MS Dhoni) ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್ ಬೈ ಹೇಳಿ ಕೆಲವು ವರ್ಷಗಳು ಕಳೆದರೂ ಅಭಿಮಾನಿಗಳಿಗೆ ಅವರ ಮೇಲಿರುವ ಕ್ರೇಜ್ ಮಾತ್ರ ಇನ್ನೂ ಕಡಿಮೆಯಾಗಿಲ್ಲ. ಧೋನಿಯ ಒಂದು ಆಟೋಗ್ರಾಫ್ಗಾಗಿ ಈಗಲೂ ಅಭಿಮಾನಿಗಳು ಕಾದು ಕುಳಿತಿರುತ್ತಾರೆ.
ನಿವೃತ್ತಿ ಜೀವನವನ್ನು ಎಂಜಾಯ್ ಮಾಡುತ್ತಿರುವ ಧೋನಿ(MS Dhoni) ತಮ್ಮ ತವರಾದ ರಾಂಚಿಯಲ್ಲಿ ಆಗಾಗ ಕಾರು ಮತ್ತು ಬೈಕ್‌ಗಳ ಮೂಲಕ ಸವಾರಿ ಮಾಡುತ್ತಿರುತ್ತಾರೆ. ಹೀಗೆ ಜಾಲಿ ರೈಡ್ ಹೋಗುತ್ತಿದ್ದ ಸಂದರ್ಭದಲ್ಲಿ ಅಭಿಮಾನಿಯೊಬ್ಬರ ಬಯಕೆಯಂತೆ ಅವರ ಬೈಕ್ನ(Dhoni signs bike for a fan) ಹೈಡ್ ಲೈಟ್ ಬಳಿ ಧೋನಿ ತಮ್ಮ ಸಹಿ ಹಾಕಿ ಆಟೋಗ್ರಾಫ್ ನೀಡಿದ್ದಾರೆ. ಈ ಫೋಟೊ ವೈರಲ್(viral Photo) ಆಗಿದೆ. ಈ ಫೋಟೊ ಕಂಡ ನೆಟ್ಟಿಗರು ನೀವು ಅದೃಷ್ಟಶಾಲಿ ಎಂದು ಕಮೆಂಟ್ ಮಾಡಿದ್ದಾರೆ.
ಮೋಟಾಸೈಕಲ್ಗಳು ಹಾಗೂ ಕಾರುಗಳ ಬಗ್ಗೆ ಎಂಎಸ್ ಧೋನಿ ಅವರ ಕ್ರೇಜ್ ಎಲ್ಲರಿಗೂ ತಿಳಿದಿದೆ. ಅವರು ತಮ್ಮ ಗ್ಯಾರೇಜ್ನಲ್ಲಿ ಹಲವಾರು ಆಕರ್ಷಕ ವಾಹನಗಳ ಸಂಗ್ರಹವನ್ನು ಹೊಂದಿದ್ದಾರೆ. ಬಿಡುವಿನ ವೇಳೆಯಲ್ಲಿ ಧೋನಿ ತಮಗಿಷ್ಟವಾದ ಕಾರು ಮತ್ತು ಬೈಕ್ಗಳನ್ನು ಓಡಿಸುವ ಹಲವು ವಿಡಿಯೊಗಳು ವೈರಲ್ ಆಗುತ್ತಿರುತ್ತದೆ. ಅವರ ಅಭಿಮಾನಿಗಳು ಈ ವಿಡಿಯೊವನ್ನು ತಮ್ಮ ಸಾಮಾಜಿಕ ಜಾಲತಾಣದ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.
ಕೆಲವು ತಿಂಗಳ ಹಿಂದೆ ಧೋನಿ ಅವರು ಅಭಿಮಾನಿಯ ಬೈಕ್ ಒಂದಕ್ಕೆ ಆಟೋಗ್ರಾಫ್ ಹಾಕುವ ಮೊದಲು ಬೈಕಿನ ಮುಂಭಾಗದ ಪ್ರದೇಶವನ್ನು ತಮ್ಮ ಟಿಶರ್ಟ್ನಿಂದ ಒರೆಸಿ ಆ ಬಳಿಕ ಸಹಿ ಹಾಕಿದ್ದರು. ಬಳಿಕ ಧೋನಿ ಈ ಬೈಕ್ ರೈಡ್ ಮಾಡಿದ್ದರು.
ಮುಂದಿನ ಆವೃತ್ತಿ ಐಪಿಎಲ್ನಲ್ಲಿ ಧೋನಿ ಅನ್‌ಕ್ಯಾಪ್ಡ್ ಆಟಗಾರ?
ವರದಿಯೊಂದರ ಪ್ರಕಾರ ಬಿಸಿಸಿಐ(BCCI) ಕನಿಷ್ಠ ಐದು ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾದ ಆಟಗಾರರನ್ನು ಅನ್‌ಕ್ಯಾಪ್ಡ್ ವಿಭಾಗದಲ್ಲಿ ಇರಿಸುವ ನಿಯಮವನ್ನು ಮರಳಿ ತರಲು ಮುಂದಾಗಿದೆ ಎನ್ನಲಾಗಿದೆ. ಹೀಗಾಗಿ ಧೋನಿ ಅನ್‌ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ Rohit Sharma : ಧೋನಿಯ ನಾಯಕತ್ವದ ದಾಖಲೆಯೊಂದನ್ನು ಮುರಿದ ರೋಹಿತ್ ಶರ್ಮಾ
ಅನ್‌ಕ್ಯಾಪ್ಡ್ ಆಟಗಾರನಿಗೆ ಫ್ರಾಂಚೈಸಿ ಕೇವಲ 4 ಕೋಟಿ ರೂ. ನೀಡಲಿದೆ. ಈ ನಿಯಮ ಜಾರಿಗೆ ಬಂದರೆ ಧೋನಿ ಇದೇ ಮೊತ್ತದಲ್ಲಿ ಚೆನ್ನೈಗಾಗಿ ಆಡುವುದನ್ನು ಮುಂದುವರಿಸಲು ಅನುವು ಮಾಡಿಕೊಡುತ್ತದೆ. ಇದೇ ಮೊತ್ತಕ್ಕೆ ಚೆನ್ನೈ ತಂಡ ಧೋನಿಯನ್ನು ಮತ್ತೆ ರೀಟೈನ್ ಮಾಡಿಕೊಳ್ಳಬಹುದು.
ಧೋನಿ(MS Dhoni) ಅವರು ಕಳೆದ ವರ್ಷವೇ ಐಪಿಎಲ್ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಒಂದು ವರ್ಷದ ಮಟ್ಟಿಗೆ ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿ ಎಂದೇ ಹೇಳಲಾಗಿತ್ತು. ಆದ್ಯಾಗೂ ಧೋನಿ ತಮ್ಮ ನಿವೃತ್ತಿ ಬಗ್ಗೆ ಯಾವುದೇ ಅಂತಿಮ ನಿರ್ಧಾರ ಪ್ರಕಟಿಸಿಲ್ಲ.