MS Dhoni: ಧೋನಿ ಭಾರತ ತಂಡಕ್ಕೆ ನಾಯಕನಾದ ವಿಚಾರ ಬಹಿರಂಗಪಡಿಸಿದ ವೆಂಗ್​ಸರ್ಕರ್‌ - Vistara News

ಕ್ರಿಕೆಟ್

MS Dhoni: ಧೋನಿ ಭಾರತ ತಂಡಕ್ಕೆ ನಾಯಕನಾದ ವಿಚಾರ ಬಹಿರಂಗಪಡಿಸಿದ ವೆಂಗ್​ಸರ್ಕರ್‌

ಸಚಿನ್​ ತೆಂಡೂಲ್ಕರ್​(sachin tendulkar) ಅವರ ಸಲಹೆಯಂತೆ ಮಹೇಂದ್ರ ಸೀಂಗ್​ ಧೋನಿ ಅವರು ಭಾರತ ತಂಡದ ನಾಯಕನಾದರು ಎಂದು ಮಾಜಿ ಬಿಸಿಸಿಐ ಅಧಿಕಾರಿ ದಿಲೀಪ್‌ ವೆಂಗ್​ಸರ್ಕರ್‌(Dilip Vengsarkar) ಹೇಳಿದ್ದಾರೆ.

VISTARANEWS.COM


on

ms dhoni
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಟೀಮ್​ ಇಂಡಿಯಾಕ್ಕೆ(Team India) ಎರಡು ವಿಶ್ವ ಕಪ್​ಗಳನ್ನು ಗೆದ್ದು ಕೊಟ್ಟ ಮಹೇಂದ್ರ ಸಿಂಗ್(MS Dhoni) ಧೋನಿ​ ಅವರು ಭಾರತ ತಂಡಕ್ಕೆ ನಾಯಕನಾಗಿದ್ದು ಹೇಗೆ ಎಂಬ ವಿಚಾರವನ್ನು ಮಾಜಿ ಆಟಗಾರ ದಿಲೀಪ್‌ ವೆಂಗ್​ಸರ್ಕರ್‌(Dilip Vengsarkar) ಬಹಿರಂಗಪಡಿಸಿದ್ದಾರೆ.

2007ರಲ್ಲಿ ನಡೆದಿದ್ದ ಐಸಿಸಿ ಏಕ ದಿನ ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ತಂಡ ಲೀಗ್​ ಹಂತದಲ್ಲೇ ಸೋತು ಟೂರ್ನಿಯಿಂದ ಹೊರಬಿದ್ದಿತ್ತು. ತಂಡವನ್ನು ಮುನ್ನಡೆಸಿದ್ದ ರಾಹುಲ್​ ದ್ರಾವಿಡ್(rahul dravid)​ ಅವರು ಈ ಸೋಲಿನಿಂದ ಕಂಗೆಟ್ಟು ತಕ್ಷಣ ನಾಯಕತ್ವದಿಂದ ಕೆಳಗಿಳಿದರು.

ಟೂರ್ನಿಯ ಬಲಿಷ್ಠ ತಂಡಗಳಲ್ಲಿ ಒಂದಾಗಿದ್ದ ಭಾರತ ಲೀಗ್​ ಹಂತದಲ್ಲಿ ತನಗಿಂತ ಕೆಳಗಿನ ಶ್ರೇಯಾಂಕದ ಶ್ರೀಲಂಕಾ, ಬಾಂಗ್ಲಾದೇಶದ ವಿರುದ್ಧವೂ ಸೋತು ತೀವ್ರ ಮುಖಭಂಗಕ್ಕೆ ಒಳಗಾಗಿತ್ತು. ತಂಡದಲ್ಲಿ ಸಚಿನ್​, ದ್ರಾವಿಡ್​, ಗಂಗೂಲಿ, ಸೆಹವಾಗ್​, ಲಕ್ಷಣ್​ ಸೇರಿ ಹಲವು ಬಲಿಷ್ಠ ಆಟಗಾರರನ್ನು ನೆಚ್ಚಿಕೊಂಡಿದ್ದರೂ ಭಾರತ ಅಂತ್ಯತ ಕಳಪೆ ಪ್ರದರ್ಶನ ತೋರಿ ಎಲ್ಲಡೆ ಟೀಕೆಗೆ ಗುರಿಯಾಗಿತ್ತು.

ನಾಯಕತ್ವದಿಂದ ದ್ರಾವಿಡ್​ ಅವರು ಕೆಳಗಿಳಿದ ಬಳಿಕ ಅಂದಿನ ಶರದ್​ ಪವಾರ್​ ನೇತೃತ್ವದ ಬಿಸಿಸಿಐ ಸಚಿನ್​ ತೆಂಡೂಲ್ಕರ್​(sachin tendulkar) ಅವರಿಗೆ ನಾಯಕನಾಗುವಂತೆ ಮನವಿ ಮಾಡಿತ್ತು. ಆದರೆ ಸಚಿನ್​ ಇದಕ್ಕೆ ಒಪ್ಪಿಕೊಳ್ಳದೆ ಮಹೇಂದ್ರ ಸಿಂಗ್​ ಧೋನಿ ಅವರ ಹೆಸರನ್ನು ಸೂಚಿಸಿದರು. ಅಚ್ಚರಿ ಎಂದರೆ ಧೋನಿಗಿಂತ ಅಂದು ತಂಡದಲ್ಲಿದ್ದ ಹಿರಿಯ ಆಟಗಾರರಾದ ಯುವರಾಜ್​ ಸಿಂಗ್​, ಸೆಹವಾಗ್​ ಅವರನ್ನು ಕೈಬಿಟ್ಟು ಸಚಿನ್ ಅವರು​ ಧೋನಿ ಹೆಸರನ್ನು ಸೂಚಿಸಿದರು. ಈ ಮೂಲಕ ಧೋನಿ ಭಾರತ ತಂಡದ ನಾಯಕನಾದರು ಎಂದು ದಿಲೀಪ್‌ ವೆಂಗ್​ಸರ್ಕರ್‌ ಹೇಳಿದರು.

ಇದನ್ನೂ ಓದಿ MS Dhoni: ಓ ಕ್ಯಾಪ್ಟನ್‌, ಮೈ ಕ್ಯಾಪ್ಟನ್!‌ ಧೋನಿಗೆ ಹೀಗೆ ಅಂದಿದ್ದೇಕೆ ಚೆನ್ನೈ ಸೂಪರ್‌ ಕಿಂಗ್ಸ್?

“ಆಟಗಾರನ ಕ್ರಿಕೆಟ್ ಕೌಶಲ, ಮುಂಚೂಣಿಯಲ್ಲಿ ನಿಂತು ತಂಡವನ್ನು ಮುನ್ನಡೆಸುವ ಸಾಮರ್ಥ್ಯ ಈ ಎಲ್ಲ ಗುಣ ಧೋನಿ ಅವರಲ್ಲಿದೆ ಎಂದು ಹೇಳುವ ಮೂಲಕ ಸಚಿನ್​ ಅವರು ಧೋನಿಗೆ ಭಾರತ ತಂಡದ ನಾಯಕತ್ವ ನೀಡುವಂತೆ ಬಿಸಿಸಿಐಗೆ ಮನವರಿಕೆ ಮಾಡಿದ್ದರು. ಸಚಿನ್​ ಅವರ ಸಲಹೆಯಂತೆ ಧೋನಿಗೆ 2007ರ ಚೊಚ್ಚಲ ಟಿ20 ವಿಶ್ವ ಕಪ್​ಗೆ ನಾಯಕತ್ವ ನೀಡಲಾಯಿತು. ಧೋನಿ ತಮ್ಮ ಚೊಚ್ಚಲ ಪ್ರಯತ್ನದಲ್ಲೇ ಕಪ್ ಎತ್ತಿ ಮೆರೆದಾಡಿದರು. ಬಳಿಕ 2011ರ ಏಕದಿನ ವಿಶ್ವ ಕಪ್​ನಲ್ಲಿಯೂ ಭಾರತ ತಂಡವನ್ನು ಚಾಂಪಿಯನ್​ ಪಟ್ಟ ಅಲಂಕರಿಸುವಂತೆ ಮಾಡಿದರು. ಭಾರತ ಕ್ರಿಕೆಟ್​ ಕಂಡ ಅತ್ಯಂತ ಶ್ರೇಷ್ಠ ನಾಯಕರ ಸಾಲಿನಲ್ಲಿ ಧೋನಿಗೆ ಈಗ ವಿಶೇಷ ಸ್ಥಾನಮಾನವಿದೆ” ಎಂದು ಹೇಳುವ ಮೂಲಕ ಧೋನಿ ಭಾರತ ತಂಡಕ್ಕೆ ನಾಯಕನಾದ ಸಂಗತಿಯನ್ನು ಅಂದಿನ ಬಿಸಿಸಿಐ ಅಧಿಕಾರಿಯಾಗಿದ್ದ ವೆಂಗ್​ಸರ್ಕರ್‌ ಬಿಚ್ಚಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

RCB IPL Records: ಕಳೆದ 16 ಆವೃತ್ತಿಯ ಐಪಿಎಲ್​ನಲ್ಲಿ ಆರ್​ಸಿಬಿ ಎಷ್ಟು ಬಾರಿ ಪ್ಲೇ ಆಫ್​ಪ್ರವೇಶಿಸಿದೆ?: ತಂಡದ ದಾಖಲೆ ಹೇಗಿದೆ?

RCB IPL Records: ಪ್ರತಿ ಆವೃತ್ತಿಯಲ್ಲಿಯೂ ಈ ಸಲ ಕಪ್​ ನಮ್ದೇ ಎಂದು ಅಭಿಯಾನ ಆರಂಭಿಸುವ ಆರ್​ಸಿಬಿ ನಿರಾಸೆ ಕಂಡಿದ್ದೇ ಹೆಚ್ಚು. ಒಟ್ಟು ಮೂರು ಬಾರಿ ಫೈನಲ್​, 5 ಬಾರಿ ಪ್ಲೇ ಆಫ್​ಗೆ ಪ್ರವೇಶ ಪಡೆದಿತ್ತು. ಆದರೆ ಒಮ್ಮೆಯೂ ಕಪ್​ ಮಾತ್ರ ಗೆಲ್ಲಲು ಸಾಧ್ಯವಾಗಿಲ್ಲ.

VISTARANEWS.COM


on

RCB IPL Records
Koo

ಅಮಹದಾಬಾದ್​: ಕೋಟೆಯ ಎಲ್ಲ ಬಾಗಿಲುಗಳನ್ನು ಮುಚ್ಚಿದರೂ, ಬೆಳಕು ತೂರುವುದಕ್ಕೊಂದು ಸಣ್ಣ ಕಿಂಡಿ ಇದ್ದರು ಸಾಕು ಜೀವನ ಹೋರಾಟ ಮುಂದುವರೆಸುವುದಕ್ಕೆ ಎನ್ನುವ ಮಾತನ್ನು ಆರ್​ಸಿಬಿ(RCB IPL Records) ನಿಜ ಮಾಡಿದೆ. ಆರಂಭಿಕ ಹಂತದಲ್ಲಿ 7 ಸೋಲು ಕೊಂಡು, ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಿಯಾಗಿ ಇನ್ನೇನು ಟೂರ್ನಿಯಿಂದ ಹೊರಬೀಳುತ್ತದೆ ಎನ್ನುವ ಸ್ಥಿತಿ ಎದುರಿಸಿತ್ತು. ಆದರೆ ಹೋರಾಡುವ ಛಲ ಮತ್ತು ನಂಬಿಕೆಯೊಂದನ್ನು ಗಟ್ಟಿಯಾಗಿರಿಸಿದ್ದ ಆಗಾರರು ತಂಡವನ್ನು ಪ್ಲೇ ಆಫ್​ ಪ್ರವೇಶಿಸುವಂತೆ ಮಾಡಿದರು. ಇದೀಗ ನಾಳೆ ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ಆಟಗಾರರು ರಾಜಸ್ಥಾನ್​ ವಿರುದ್ಧದ ಕಣಕ್ಕಿಳಿಯಲು ಸಜ್ಜಾಗಿಗೆ ನಿಂತಿದ್ದಾರೆ. ಆರ್​ಸಿಬಿಯ ಇದುವರೆಗಿನ 16 ಐಪಿಎಲ್​ನ ಸಾಧನೆಯ ಇಣುಕು ನೋಡ ಇಂತಿದೆ.

ಮೂರು ಭಾರಿ ಫೈನಲ್​


ಪ್ರತಿ ಆವೃತ್ತಿಯಲ್ಲಿಯೂ ಈ ಸಲ ಕಪ್​ ನಮ್ದೇ ಎಂದು ಅಭಿಯಾನ ಆರಂಭಿಸುವ ಆರ್​ಸಿಬಿ ನಿರಾಸೆ ಕಂಡಿದ್ದೇ ಹೆಚ್ಚು. ಒಟ್ಟು ಮೂರು ಬಾರಿ ಫೈನಲ್​ ಪ್ರವೇಶಿಸಿದರೂ ಕಪ್​ ಮಾತ್ರ ಗೆಲ್ಲಲು ಸಾಧ್ಯವಾಗಿಲ್ಲ. ಮೂರೂ ಫೈನಲ್​ ಪ್ರವೇಶದ ವೇಳೆಯೂ ತಂಡದಲ್ಲಿ ವಿಶ್ವದ ಬಲಿಷ್ಠ ಆಟಗಾರರು ಈ ತಂಡದಲ್ಲಿದ್ದರು. ಆದರೂ ಕೂಡ ಲಕ್​ ಎನ್ನುವುದು ಮಾತ್ರ ತಂಡಕ್ಕೆ ಕೈ ಹಿಡಿಯುತ್ತಿರಲಿಲ್ಲ. ಲೀಗ್​ ಹಂತದಲ್ಲಿ ಎಷ್ಟೇ ಸೊಗಸಾದ ಆಟವಾಡಿದ್ದರೂ ಕೂಡ ಫೈನಲ್​ನಲ್ಲಿ ಅತ್ಯಂತ ಕಳಪೆ ಪ್ರದರ್ಶನ ತೋರಿ ಕಪ್​ ಗೆಲ್ಲಲು ವಿಫಲವಾಗಿತ್ತು. ಒಟ್ಟು 5 ಬಾರಿ ಪ್ಲೇ ಆಫ್​ಗೆ ಪ್ರವೇಶ ಪಡೆದಿತ್ತು.

ಇದನ್ನೂ ಓದಿ IPL 2024: ಮೋದಿ ಸ್ಟೇಡಿಯಂನಲ್ಲಿ ಫುಟ್ಬಾಲ್​ ಆಡಿದ ಆರ್​ಸಿಬಿ ಆಟಗಾರರು

ಆರ್​ಸಿಬಿ ಮೊದಲ ಬಾರಿಗೆ ಫೈನಲ್​ ಪ್ರವೇಶಿಸಿದ್ದು, 2009ರಲ್ಲಿ. ಎದುರಾಳಿ ಆ್ಯಡಂ ಗಿಲ್‌ಕ್ರಿಸ್ಟ್ ನೇತೃತ್ವದ ಡೆಕ್ಕನ್ ಚಾರ್ಜರ್ಸ್(Deccan Chargers). ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಡೆಕ್ಕನ್​ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್​ಗೆ 143 ರನ್​ ಬಾರಿಸಿತು. ಅಲ್ಪ ಮೊತ್ತವನ್ನು ಬೆನ್ನಟ್ಟಿದ ಆರ್​ಸಿಬಿ 9 ವಿಕೆಟ್​ಗೆ ಕೇವಲ 137 ರನ್​ ಮಾತ್ರ ಗಳಿಸಲಷ್ಟೇ ಶಕ್ತವಾಗಿ 6 ರನ್​ ಅಂತರದಿಂದ ಸೋಲು ಕಂಡಿತ್ತು.

ಎರಡನೇ ಬಾರಿ ಆರ್​ಸಿಬಿ ಫೈನಲ್​ ಪ್ರವೇಶಿಸಿದ್ದು 2011ರಲ್ಲಿ. ಮೊದಲ ಬಾರಿಗೆ ಕಪ್​ ಗೆಲ್ಲಲು ವಿಫಲವಾಗಿದ್ದ ಆರ್​ಸಿಬಿ ತನ್ನ 2ನೇ ಪ್ರಯತ್ನದಲ್ಲಿ ಕಪ್​ ಗೆಲ್ಲಲಿದೆ ಎಂದು ಅಭಿಮಾನಿಗಳು ಬಲವಾಗಿ ನಂಬಿದ್ದರು. ಆದರೆ ಇಲ್ಲಿಯೂ ಆರ್​ಸಿಬಿ ವಿಫಲವಾಗಿತ್ತು. ಹಾಲಿ ಚಾಂಪಿಯನ್​ ಆಗಿದ್ದ ಚೆನ್ನೈ ಸೂಪರ್​ ಕಿಂಗ್ಸ್​ ಫೈನಲ್​ನಲ್ಲಿ ಗೆದ್ದು ಸತತವಾಗಿ 2ನೇ ಟ್ರೋಫಿ ಗೆದ್ದ ಸಾಧನೆ ಮಾಡಿತ್ತು. ಈ ಪಂದ್ಯದಲ್ಲಿ ಆರ್​ಸಿಬಿಗೆ 58 ರನ್​ ಸೋಲು ಎದುರಾಗಿತ್ತು.

ಆರ್​ಸಿಬಿ ಅಭಿಮಾನಿಗಳಿಗೆ ಮೂರನೇ ಬಾರಿಗೆ ನಿರಾಸೆಯಾದ ಐಪಿಎಲ್​ ಆವೃತ್ತಿ ಎಂದರೆ 2016ನೇ ಆವೃತ್ತಿ. ಬಲಿಷ್ಠ ಆಟಗಾರ ಕ್ರಿಸ್​ ಗೇಲ್​, ಎಬಿಡಿ ವಿಲಿಯರ್ಸ್​, ಶೇನ್ ವಾಟ್ಸನ್​ ಮತ್ತು ವಿರಾಟ್​ ಕೊಹ್ಲಿಯಂತಹ ಸ್ಟಾರ್​ ಆಟಗಾರರು ತಂಡದಲ್ಲಿದ್ದರೂ ಕೂಡ ಕಪ್​ ಗೆಲ್ಲುವಲ್ಲಿ ಆರ್​ಸಿಬಿ ವಿಫಲವಾಗಿತ್ತು. ಮೊದಲು ಬ್ಯಾಟಿಂಗ್​ ನಡೆಸಿದ ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad)​ 7 ವಿಕೆಟ್​ಗೆ 208 ರನ್​ ಬಾರಿಸಿತು. ದಿಟ್ಟವಾಗಿ ಗುರಿ ಬೆನ್ನಟ್ಟಿಕೊಂಡು ಹೋದ ಆರ್​ಸಿಬಿ ಮೊದಲ ವಿಕೆಟ್​ಗೆ 114 ರನ್​ ಒಟ್ಟುಗೂಡಿಸಿತು. ಈ ವೇಳೆ ಆರ್​ಸಿಬಿ ಅಭಿಮಾನಿಗಳೆಲ್ಲ ಈ ಸಲ ಕಪ್​ ನಮ್ದೇ ಎಂದು ನಂಬಿದ್ದರು. ಆದರೆ, ನಂಬುಗೆಯ ಬ್ಯಾಟರ್​ಗಳೆಲ್ಲ ಸತತವಾಗಿ ವಿಕೆಟ್​ ಒಪ್ಪಿಸಿ ತಂಡದ ಸೋಲಿಗೆ ಕಾರಣವಾದರು. ಭರ್ತಿ 200 ರನ್​ ಗಳಿಸಿ 8 ರನ್​ ಅಂತರದ ಸೋಲು ಕಂಡಿತ್ತು.

ಈ ಬಾರಿ ಹೊಸ ಅಧ್ಯಾಯ ಎಂದು ಹೇಳಿ ಅಭಿಯಾನ ಆರಂಭಿಸಿದ ಆರ್​ಸಿಬಿ ಎಲಿಮಿನೇಟರ್​ ಪಂದ್ಯದಲ್ಲಿಯೂ ಗೆದ್ದು ಆ ಬಳಿಕ ಕ್ವಾಲಿಫೈಯರ್​ನಲ್ಲಿಯೂ ಜಯಶಾಲಿಯಾಗಿ ಫೈನಲ್​ ಪ್ರವೇಶಿಸಿ ಚೊಚ್ಚಲ ಪ್ರಶಸ್ತಿ ಗೆಲ್ಲುವಂತಾಗಲಿ ಎನ್ನುವುದು ಕೋಟಿ ಆರ್​ಸಿಬಿ ಅಭಿಮಾನಿಗಳ ಹಾರೈಕೆಯಾಗಿದೆ.

Continue Reading

ಕ್ರೀಡೆ

India Head Coach: ಭಾರತ ತಂಡದ ಕೋಚ್​ ಆಗಲು ಫ್ಲೆಮಿಂಗ್​ಗೆ ಮನವೊಲಿಸುವಂತೆ ಧೋನಿಗೆ ಮನವಿ ಮಾಡಿದ ಬಿಸಿಸಿಐ!

India Head Coach: ನೂತನ ಕೋಚ್​ ಆಗಿ ಆಯ್ಕೆಯಾದವರ ಕಾರ್ಯಾವಧಿ 2027ರ ಡಿಸೆಂಬರ್ 31ಕ್ಕೆ ಮುಕ್ತಾಯಗೊಳ್ಳುತ್ತದೆ. 2027ರಲ್ಲಿ ನಡೆಯುವ ಏಕದಿನ ವಿಶ್ವಕಪ್​ ಟೂರ್ನಿಯೂ ಈ ಕೋಚ್​ಗೆ ಸಿಗಲಿದೆ. ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಲು ಇದೇ 27ರಂದು ಕೊನೆಯ ದಿನವಾಗಿದೆ.

VISTARANEWS.COM


on

India Head Coach
Koo

ನವದೆಹಲಿ: ಟೀಮ್​ ಇಂಡಿಯಾದ(India Head Coach) ಮುಂದಿನ ಕೋಚ್​ ಯಾರಾಗಲಿದ್ದಾರೆ ಎಂಬ ಕತೂಹಲದ ಮಧ್ಯೆ ಬಿಸಿಸಿಐ(BCCI) ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ಕೋಚ್​ ಆಗಿರುವ ಸ್ಟೀಫನ್ ಫ್ಲೆಮಿಂಗ್(Stephen Fleming) ಅವರನ್ನು ಕೋಚ್​ ಹುದ್ದೆ ಅಲಂಕರಿಸುವಂತೆ ಮನವೊಲಿಸಲು ಧೋನಿ(MS Dhoni) ಬಳಿ ಮನವಿ ಮಾಡಿದೆ ಎಂದು ವರದಿಯಾಗಿದೆ.

ಹಿಂದೂಸ್ತಾನ್ ಟೈಮ್ಸ್‌ನ ವರದಿಯ ಪ್ರಕಾರ ಧೋನಿ ಬಳಿ ಬಿಸಿಸಿಐ ಸ್ಟೀಫನ್ ಫ್ಲೆಮಿಂಗ್ ಅವರನ್ನು ಟೀಮ್​ ಇಂಡಿಯಾದ ಕೋಚ್​ ಆಗುವಂತೆ ಮಾತುಕತೆ ನಡೆಸಲು ಕೇಳಿಕೊಂಡಿದೆ ಎಂದು ತಿಳಿದುಬಂದಿದೆ. ಸ್ಟೀಫನ್ ಫ್ಲೆಮಿಂಗ್ ಅವರನ್ನು ಕೋಚ್​ ಹುದ್ದೆಗೆ ನೇಮಿಸಲು ಬಿಸಿಸಿಐ ಎಲ್ಲ ಯೋಜನೆ ನಡೆಸಿತ್ತು. ಇದೇ ವೇಳೆ ಅವರು ತಾನು ಫ್ರಾಂಚೈಸಿ ಕ್ರಿಕೆಟ್​ನಲ್ಲಿ ಇನ್ನೂ ಕೆಲ ಕಾಲ ಕರ್ತವ್ಯನಿರ್ವಹಸುವ ಆಸಕ್ತಿ ಹೊಂದಿದ್ದೇನೆ ಎಂದು ಹೇಳುವ ಮೂಲಕ ಭಾರತ ತಂಡದ ಕೋಚ್​ ಹುದ್ದೆಗೆ ನಿರಾಸಕ್ತಿ ತೋರಿದ್ದರು. ಆದರೆ ಇದೀಗ ಬಿಸಿಸಿಐ ಧೋನಿಯ ಮಧ್ಯಸ್ಥಿಕೆಯಲ್ಲಿ ಅವರ ಮನವೊಲಿಸಲು ಮುಂದಾಗಿದೆ ಎನ್ನಲಾಗಿದೆ.

ರವಿಶಾಸ್ತ್ರಿ ಕೋಚಿಂಗ್​ ಅವಧಿ ಮಕ್ತಾಯದ ಬಳಿಕ ಕೋಚ್​ ಆದ ದ್ರಾವಿಡ್​ ಕೂಡ ಆರಂಭದಲ್ಲಿ ಈ ಹುದ್ದೆಗೆ ಉತ್ಸುಕರಾಗಿರಲಿಲ್ಲ. ಈ ವೇಳೆ ಬಿಸಿಸಿಐ ಅಧ್ಯಕ್ಷರಾಗಿದ್ದ ಗಂಗೂಲಿ ಅವರು ಮನವೊಲಿಸಿ ದ್ರಾವಿಡ್​ ಅವರನ್ನು ಕೋಚ್​ ಹುದ್ದೆಗೇರುವಂತೆ ಮಾಡಿದ್ದರು. ಇದೀಗ ಫ್ಲೆಮಿಂಗ್ ಅವರನ್ನು ಕೂಡ ಧೋನಿಯ ಮೂಲಕ ಕೋಚ್​ ಹುದ್ದೆಗೇರುವಂತೆ ಮಾಡುವ ಪ್ರಯತ್ನದಲ್ಲಿದೆ.

ಇನ್ನೊಂದು ಮೂಲಗಳ ಪ್ರಕಾರ ಧೋನಿ ಅವರು ಭಾರತ ತಂಡದ ಕೋಚ್​ ಆಗಲಿದ್ದಾರೆ ಎನ್ನಲಾಗಿದೆ. ಈ ಹಿಂದೆ ಧೋನಿ 2021ರಲ್ಲಿ ಭಾರತದ ಆತಿಥ್ಯದಲ್ಲಿ ಯುಎಇಯಲ್ಲಿ ನಡೆದಿದ್ದ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಧೋನಿ ಭಾರತ ತಂಡದ ಮೆಂಟರ್​ ಆಗಿ ಕರ್ತವ್ಯ ನಿರ್ವಹಿಸಿದ್ದರು. ಹೀಗಾಗಿ ಧೋನಿ ಅವರನ್ನು ಕೂಡ ಕೋಚ್​ ಮಾಡುವ ಯೋಚನೆಯೊಂದನ್ನು ಬಿಸಿಸಿಐ ನಡೆಸಿದೆ ಎನ್ನಲಾಗಿದೆ. ಧೋನಿ ನಾಯಕತ್ವದಲ್ಲಿ ಭಾರತ ಏಕದಿನ, ಟಿ20 ಮತ್ತು ಐಸಿಸಿ ಚಾಂಪಿಯನ್ಸ್​ ಟ್ರೋಫಿ ಗೆದ್ದಿತ್ತು. ಇದಾಗ ಬಳಿಕ ಭಾರತ ತಂಡ ಇದುವರೆಗೂ ಯಾವುದೇ ಐಸಿಸಿ ಟ್ರೋಫಿ ಗೆದ್ದಿಲ್ಲ.

ಇದನ್ನೂ ಓದಿ Head Coach: ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಮ್​ ಇಂಡಿಯಾದ ಸ್ಟಾರ್​ ಮಾಜಿ ಆಟಗಾರ

ನೂತನ ಕೋಚ್​ ಆಗಿ ಆಯ್ಕೆಯಾದವರ ಕಾರ್ಯಾವಧಿ 2027ರ ಡಿಸೆಂಬರ್ 31ಕ್ಕೆ ಮುಕ್ತಾಯಗೊಳ್ಳುತ್ತದೆ. 2027ರಲ್ಲಿ ನಡೆಯುವ ಏಕದಿನ ವಿಶ್ವಕಪ್​ ಟೂರ್ನಿಯೂ ಈ ಕೋಚ್​ಗೆ ಸಿಗಲಿದೆ. ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಲು ಇದೇ 27ರಂದು ಕೊನೆಯ ದಿನವಾಗಿದೆ. ಆಯ್ಕೆ ಪ್ರಕ್ರಿಯೆ ಅರ್ಜಿಗಳ ಸಂಪೂರ್ಣ ಪರಿಶೀಲನೆಯನ್ನು ನಡೆಸಿ ನಂತರ ವೈಯಕ್ತಿಕ ಸಂದರ್ಶನಗಳು ಮತ್ತು ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಮೌಲ್ಯಮಾಪನ ಒಳಗೊಂಡಿರುತ್ತದೆ. ಆಯ್ಕೆಯಾದ ಹೊಸ ಕೋಚ್‌ ಟಿ20 ವಿಶ್ವಕಪ್‌ ಟೂರ್ನಿಯ ನಂತರ ತಕ್ಷಣವೇ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.

ಆಸ್ಟ್ರೇಲಿಯಾದ ಮಾಜಿ ಆಟಗಾರ ಹಾಗೂ ಕೋಚ್​, ಪ್ರಸ್ತುತ ಲಕ್ನೋ ಸೂಪರ್​ ಜೈಂಟ್ಸ್​ ತಂಡದ ಕೋಚ್​ ಆಗಿರುವ ಜಸ್ಟಿನ್ ಲ್ಯಾಂಗರ್(Justin Langer) ಕೂಡ ಭಾರತ ತಂಡದ ಕೋಚಿಂಗ್​ ಬಗ್ಗೆ ಆಸಕ್ತರಾಗಿದ್ದಾರೆ. ಐಪಿಎಲ್​ ವೇಳೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಅವರು, ಭಾರತ ತಂಡ ಕೋಚಿಂಗ್​ ಮಾಡುವುದು ಅಸಾಮಾನ್ಯ ಪಾತ್ರವಾಗಿದೆ. ನನಗೂ ಕೋಚಿಂಗ್​ ಮಾಡಲು ಕುತೂಹಲವಿದೆ. ಇಲ್ಲಿ ಅಪಾರ ಸಂಖ್ಯೆಯ ಕ್ರಿಕೆಟ್ ಪ್ರತಿಭೆಗಳಿದ್ದಾರೆ ಎಂದು ಹೇಳಿದ್ದಾರೆ. ಅವರ ಈ ಹೇಳಿಕೆಯನ್ನು ಗಮನಿಸುವಾಗ ಕೋಚಿಂಗ್​ ಹುದ್ದೆಗೆ ಅರ್ಜಿ ಸಲ್ಲಿಸುವ ಸೂಚನೆಯೊಂದು ಲಭಿಸಿದೆ. 

Continue Reading

ಕ್ರೀಡೆ

RCB: ಅಮೆರಿಕದ ಘಟಿಕೋತ್ಸವದಲ್ಲೂ ಆರ್​ಸಿಬಿಯದ್ದೇ ಹವಾ: ವಿಡಿಯೊ ವೈರಲ್​

RCB: ಆರ್​ಸಿಬಿಯ ಗೆಲುವಿಗೆ ಫ್ರಾಂಚೈಸಿಯ ಮಾಜಿ ಮಾಲಿಕ ವಿಜಯ್​ ಮಲ್ಯ(Vijay Mallya) ಟ್ವೀಟ್​ ಮೂಲಕ ಅಭಿನಂದನೆ ಸಲ್ಲಿಸಿದ್ದರು. “ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ ಕೊಟ್ಟಿದ್ದಕ್ಕೆ ತುಂಬಾ ಸಂತೋಷವಾಗುತ್ತಿದೆ. ತಂಡಕ್ಕೆ ಹೃದಯ ಪೂರಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಸತತ ಸೋಲುಗಳಿಂದ ಗೆಲುವಿನ ಟ್ರ್ಯಾಕ್​ಗೆ ಮರಳಿರುವುದು ಅದ್ಭುತ. ಟ್ರೋಫಿ ಗೆಲ್ಲುವ ಕಡೆಗೆ ಆರ್​ಸಿಬಿ ಇನ್ನಷ್ಟು ಆಕ್ರಮಣಕಾರಿಯಾಗಿ ಆಡಬೇಕು” ಎಂದು ಮುಂದಿನ ಪಂದ್ಯಗಳಿಗೂ ಶುಭ ಹಾರೈಸಿದ್ದರು.

VISTARANEWS.COM


on

RCB
Koo

ನ್ಯೂಯಾರ್ಕ್​: ಅಮೆರಿಕದಲ್ಲಿರುವ ಕರ್ನಾಟಕ ಮೂಲಕದ ಆರ್​ಸಿಬಿಯ(RCB) ಅಪಟ್ಟ ಅಭಿಮಾನಿಯೊಬ್ಬ(RCB fan) ತನ್ನ ಕಾಲೇಜಿನ ಘಟಿಕೋತ್ಸವ(ಕಾನ್ವೋಕೇಷನ್)(convocation) ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸುವಾಗ ಆರ್​ಸಿಬಿ ತಂಡದ ಜೆರ್ಸಿಯನ್ನು ಪ್ರದರ್ಶಸಿದ್ದಾನೆ. ಈ ವಿಡಿಯೊ ವೈರಲ್​ ಆಗಿದೆ.

ಯಾವುದೇ ಒಂದು ವಿಶ್ವವಿದ್ಯಾನಿಲಯದ ಅಥವಾ ಇತರ ಅಂಗೀಕೃತ ಉನ್ನತ ಶಿಕ್ಷಣ ಸಂಸ್ಥೆಗಳ ಅಧ್ಯಯನ ಘಟಕವೊಂದರ ಶಿಕ್ಷಣವನ್ನು ಯಶಸ್ವಿಯಾಗಿ ಮುಗಿಸಿದ ಬಳಿಕ ಇಲ್ಲವೇ ಯಾವುದಾದರೊಂದು ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಅಥವಾ ಪಾಂಡಿತ್ಯ ಸಾಧಿಸಿದ ಖ್ಯಾತ ವ್ಯಕ್ತಿಗಳಿಗೆ ಪದವಿ/ಪ್ರಶಸ್ತಿಯನ್ನು ನೀಡಲು ಏರ್ಪಡಿಸುವ ಸಾಂಪ್ರದಾಯಿಕ ಸಮಾರಂಭವನ್ನು ಘಟಿಕೋತ್ಸವ ಎಂದು ಕರೆಯಲಾಗುತ್ತದೆ. ಆರ್​ಸಿಬಿಯ ಈ ಅಭಿಮಾನಿ ಕೂಡ ಇತಂಹದ್ದೇ ಸಾಧನೆ ಮಾಡಿದ್ದ. ಆದರೆ ಆತನ ಸಾಧನೆಗಿಂತ ಆರ್​ಸಿಬಿ ಚೆನ್ನೈ ವಿರುದ್ಧ ಗೆದ್ದು ಪ್ಲೇ ಆಫ್​ ಪ್ರವೇಶಿಸಿದ್ದೇ ಆತನಿಗೆ ಎಲ್ಲಿಲ್ಲದ ಸಂತಸ ತಂದಿದೆ. ಕರಣ್​ ಎನ್ನುವಾತ ಈ ವಿಡಿಯೊವನ್ನು ತನ್ನ ಸಾಮಾಜಿಕ ಜಾಲತಾಣದಲ್ಲಿ ಶೇರ್​ ಮಾಡಿದ್ದಾನೆ.

ಆರ್​ಸಿಬಿ ಅಭಿಮಾನಿಗಳು ತಮ್ಮ ಭಾವೋದ್ರಿಕ್ತ ಮತ್ತು ಅಚಲ ಬೆಂಬಲಕ್ಕೆ ಹೆಸರುವಾಸಿಯಾಗಿದ್ದಾರೆ. ಫ್ರ್ಯಾಂಚೈಸಿಯು ಭೌಗೋಳಿಕ ಗಡಿಗಳು ಮತ್ತು ಸಂಸ್ಕೃತಿಗಳನ್ನು ಮೀರಿದ ನಿಷ್ಠಾವಂತ ಅಭಿಮಾನಿಗಳನ್ನು ಹೊಂದಿದೆ. ಈ ಬಾರಿ ಆರಂಭಿಕ ಹಂತದಲ್ಲಿ ಸತತ ಸೋಲು ಕಂಡಿದ್ದ ಆರ್​ಸಿಬಿ ಆ ಬಳಿಕ ಪವಾಡ ಸೃಷ್ಟಿಸಿದಂತೆ ಸತತ 6 ಪಂದ್ಯಗಳನ್ನು ಗೆದ್ದು ಪ್ಲೇ ಆಫ್​ ಪ್ರವೇಶಿಸಿತ್ತು. ಬುಧವಾರ ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ರಾಜಸ್ಥಾನ್​ ವಿರುದ್ಧ ಆಡಲಿದೆ. ಗೆದ್ದರೆ 2ನೇ ಕ್ವಾಲಿಫೈಯರ್​ ಪಂದ್ಯವನ್ನಾಡಲಿದೆ.

ಶನಿವಾರ ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದಿದ್ದ ಮಳೆ ಪೀಡಿತ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಆರ್​ಸಿಬಿ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 218 ರನ್​ ಬಾರಿಸಿತು. ಈ ಬೃಹತ್​ ಮೊತ್ತವನ್ನು ಬೆನ್ನಟ್ಟಿದ ಚೆನ್ನೈ ಹಲವು ಏರಿಳಿತ ಕಂಡು ಕೊನೆಗೆ ತನ್ನ ಪಾಲಿನ ಆಟದಲ್ಲಿ 7 ವಿಕೆಟ್​ಗೆ 191 ರನ್​ ಗಳಿಸಲಷ್ಟೇ ಶಕ್ತವಾಗಿ ಸೋಲಿಗೆ ಶರಣಾಗಿತ್ತು. ಈ ಪಂದ್ಯ ಫೈನಲ್​ ಪಂದ್ಯಕ್ಕೂ ಮಿಗಿಲಾದ ಕಾತುಕ ಸೃಷ್ಟಿಸಿತ್ತು.

ಇದನ್ನೂ ಓದಿ IPL 2024: ಮೋದಿ ಸ್ಟೇಡಿಯಂನಲ್ಲಿ ಫುಟ್ಬಾಲ್​ ಆಡಿದ ಆರ್​ಸಿಬಿ ಆಟಗಾರರು

ಆರ್​ಸಿಬಿ ಗೆಲುವಿನ ಬಳಿಕ ಅಭಿಮಾನಿಗಳ ಜೈಕಾರ ಮುಗಿಲು ಮುಟ್ಟಿತ್ತು. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರೀ ಸಂಭ್ರಮಾಚರಣೆ ಕಂಡು ಬಂದಿತ್ತು. ಪಂದ್ಯ ಮುಕ್ತಾಯವಾದಾಗ ತಡರಾತ್ರಿಯಾಗಿದ್ದರೂ ಅಭಿಮಾನಿಗಳ ಸಡಗರಕ್ಕೆ ಕೊರತೆ ಇರಲಿಲ್ಲ. ಪುಟ್ಟ ಮಕ್ಕಳು ಸೇರಿದಂತೆ ಆರ್‌ಸಿಬಿ ಫ್ಯಾನ್ಸ್‌ ರಸ್ತೆಯಲ್ಲೇ ಕುಣಿದು ಕುಪ್ಪಳಿಸಿದ್ದರು. ಮಕ್ಕಳಂತೂ ಈ ಸಲ ಕಪ್ ನಮ್ದೆ ಎನ್ನುವ ಘೋಷಣೆ ಕೂಗುತ್ತಿರುವುದು ಕಂಡು ಬಂದಿತ್ತು. ಚಿನ್ನಸ್ವಾಮಿ ಕ್ರೀಡಾಂಗಣದ ಎದುರಿನ ರಸ್ತೆ ಬ್ಲಾಕ್ ಮಾಡಿ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದರು. ಇದು ನಿಜವಾದ ಹೊಸ ಅಧ್ಯಾಯ ಎನ್ನುವ ಮಾತು ಎಲ್ಲೆಡೆ ಕೇಳಿ ಬಂದಿತ್ತು.

ಆರ್​ಸಿಬಿಯ ಗೆಲುವಿಗೆ ಫ್ರಾಂಚೈಸಿಯ ಮಾಜಿ ಮಾಲಿಕ ವಿಜಯ್​ ಮಲ್ಯ(Vijay Mallya) ಟ್ವೀಟ್​ ಮೂಲಕ ಅಭಿನಂದನೆ ಸಲ್ಲಿಸಿದ್ದರು. “ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ ಕೊಟ್ಟಿದ್ದಕ್ಕೆ ತುಂಬಾ ಸಂತೋಷವಾಗುತ್ತಿದೆ. ತಂಡಕ್ಕೆ ಹೃದಯ ಪೂರಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಸತತ ಸೋಲುಗಳಿಂದ ಗೆಲುವಿನ ಟ್ರ್ಯಾಕ್​ಗೆ ಮರಳಿರುವುದು ಅದ್ಭುತ. ಟ್ರೋಫಿ ಗೆಲ್ಲುವ ಕಡೆಗೆ ಆರ್​ಸಿಬಿ ಇನ್ನಷ್ಟು ಆಕ್ರಮಣಕಾರಿಯಾಗಿ ಆಡಬೇಕು” ಎಂದು ಮುಂದಿನ ಪಂದ್ಯಗಳಿಗೂ ಶುಭ ಹಾರೈಸಿದ್ದರು.

Continue Reading

ಕ್ರಿಕೆಟ್

T20 World Cup 2024: ಆಸ್ಟ್ರೇಲಿಯಾ ತಂಡ ಸೇರಿದ ಸ್ಫೋಟಕ ಬ್ಯಾಟರ್​ ಫ್ರೇಸರ್-ಮೆಕ್‌ಗುರ್ಕ್​

T20 World Cup 2024: ಮೇ 25 ರ ತನಕ ಐಸಿಸಿ ಅನುಮತಿ ಇಲ್ಲದೆ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಬಹುದು. ಆ ಬಳಿಕದ ಯಾವುದೇ ಬದಲಾವಣೆ ಮಾಡಬೇಕಿದ್ದರೆ ಐಸಿಸಿ ತಾಂತ್ರಿಕ ಸಮಿತಿಯ ಅನುಮತಿ ಅತ್ಯಗತ್ಯ. ಇದು ಕೂಡ ಆಟಗಾರರು ಗಾಯಗೊಂಡರೆ ಮಾತ್ರ ಬದಲಿ ಆಟಗಾರನ ಆಯ್ಕೆಯನ್ನು ಐಸಿಸಿ ಮಾನ್ಯ ಮಾಡುತ್ತದೆ.

VISTARANEWS.COM


on

T20 World Cup 2024
Koo

ಸಿಡ್ನಿ: ಈ ಬಾರಿಯ ಐಪಿಎಲ್​ ಟೂರ್ನಿಯಲ್ಲಿ(IPL 2024) ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಪರ ವಿಸ್ಫೋಟಕ ಬ್ಯಾಟಿಂಗ್​ ಮೂಲಕ ಭಾರೀ ಸಂಚಲನ ಸೃಷ್ಟಿಸಿದ್ದ ಯುವ ಬ್ಯಾಟರ್​ ಜೇಕ್ ಫ್ರೇಸರ್-ಮೆಕ್‌ಗುರ್ಕ್(Jake Fraser-McGurk) ಅವರನ್ನು ಕೊನೆಗೂ ಕ್ರಿಕೆಟ್​ ಆಸ್ಟ್ರೇಲಿಯಾ ಮುಂದಿನ ತಿಂಗಳು ಆರಂಭಗೊಳ್ಳಲಿರುವ ಟಿ20 ವಿಶ್ವಕಪ್(T20 World Cup 2024)​ ಟೂರ್ನಿಗೆ ಪ್ರಯಾಣದ ಮೀಸಲು ಆಟಗಾರನಾಗಿ ಆಯ್ಕೆ ಮಾಡಿದೆ. ಇವರ ಜತೆಗೆ ಮ್ಯಾಟ್ ಶಾರ್ಟ್ ಕೂಡ ಅವಕಾಶ ಪಡೆದಿದ್ದಾರೆ. ಉಭಯ ಆಟಗಾರರನ್ನು ತಂಡಕ್ಕೆ ಸೇರ್ಪಡೆಗೊಳಿಸಿದ ವಿಚಾರವನ್ನು ಕ್ರಿಕೆಟ್​ ಆಸ್ಟ್ರೇಲಿಯಾ ತನ್ನ ಅಧಿಕೃತ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟಿಸಿದೆ. ಆಸ್ಟ್ರೇಲಿಯಾ(Australia T20 World Cup squad) ತನ್ನ ಮೊದಲ ಪಂದ್ಯವನ್ನು ಜೂನ್​ 3ರಂದು ಉಗಾಂಡ ವಿರುದ್ಧ ಆಡಲಿದೆ.

ಮೇ 25 ರ ತನಕ ಐಸಿಸಿ ಅನುಮತಿ ಇಲ್ಲದೆ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಬಹುದು. ಆ ಬಳಿಕದ ಯಾವುದೇ ಬದಲಾವಣೆ ಮಾಡಬೇಕಿದ್ದರೆ ಐಸಿಸಿ ತಾಂತ್ರಿಕ ಸಮಿತಿಯ ಅನುಮತಿ ಅತ್ಯಗತ್ಯ. ಇದು ಕೂಡ ಆಟಗಾರರು ಗಾಯಗೊಂಡರೆ ಮಾತ್ರ ಬದಲಿ ಆಟಗಾರನ ಆಯ್ಕೆಯನ್ನು ಐಸಿಸಿ ಮಾನ್ಯ ಮಾಡುತ್ತದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. 

ಡೆಲ್ಲಿ ತಂಡದ ಪರ ಅತಿ ಕಡಿಮೆ ಎಸೆತಗಳಿಂದ ಅರ್ಧಶತಕ ಬಾರಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೂ ಫ್ರೇಸರ್-ಮೆಕ್‌ಗುರ್ಕ್ ಪಾತ್ರರಾಗಿದ್ದರು. ಜತೆಗೆ ಈ ಆವೃತ್ತಿಯ ಐಪಿಎಲ್​ನಲ್ಲಿ ಅತಿ ಕಡಿಮೆ ಎಸೆತಗಳಿಂದ(15) ಅರ್ಧಶತಕ ಬಾರಿಸಿದ ಆಟಗಾರ ಎಂಬ ದಾಖಲೆಯನ್ನು ಕೂಡ ಬರೆದಿದ್ದರು. ಈ ಬಾರಿ ಒಟ್ಟು 9 ಐಪಿಎಲ್​ ಪಂದ್ಯಗಳನ್ನಾಡಿದ ಮೆಕ್‌ಗುರ್ಕ್ 330 ರನ್​ ಬಾರಿಸಿದ್ದಾರೆ. 84 ರನ್​ ವೈಯಕ್ತಿಕ ಗರಿಷ್ಠ ಮೊತ್ತವಾಗಿದೆ.

ಇದನ್ನೂ ಓದಿ T20 World Cup 2024: ಇಂಡೋ-ಪಾಕ್​ ಮಿನಿ ವಿಶ್ವಕಪ್​ ಸಮರ ನಡೆಯುವ ಸ್ಟೇಡಿಯಂನ ವಿಡಿಯೊ ವೈರಲ್​

ಲುಂಗಿ ಎನ್‌ಗಿಡಿ ಬದಲಿಗೆ ಆಲ್​ರೌಂಡರ್ ಜೇಕ್ ಫ್ರೇಸರ್-ಮೆಕ್‌ಗುರ್ಕ್(Jake Fraser-McGurk) ಅವರನ್ನು ಡೆಲ್ಲಿ ತಂಡ ಬದಲಿ ಆಟಗಾರನಾಗಿ ಮೂಲಬೆಲೆ 50 ಲಕ್ಷ ರೂ.ಗೆ ತನ್ನ ತಂಡಕ್ಕೆ ಸೇರಿಸಿಕೊಂಡಿತ್ತು. ಮೆಕ್‌ಗುರ್ಕ್ ಲಿಸ್ಟ್ ಎ ಪಂದ್ಯದಲ್ಲಿ ಕೇವಲ 29 ಎಸೆತದಲ್ಲಿ ಶತಕ ಬಾರಿಸಿ ಅತ್ಯಂತ ವೇಗದ ಶತಕದ ವಿಶ್ವದಾಖಲೆ ಬರೆದಿದ್ದರು. ಈ ಬಾರಿಯ ಐಪಿಎಲ್​ನಲ್ಲಿಯೂ ತಮ್ಮ ಬ್ಯಾಟಿಂಗ್​ ಪ್ರತಾಪ ತೋರಿಸಿದ್ದರು. ಮುಂದಿನ ಬಾರಿ ಇವರಿಗೆ ಹರಾಜಿನಲ್ಲಿ ದುಬಾರಿ ಬೆಲೆ ಸಿಗುವ ಸಾಧ್ಯತೆ ಇದೆ.

ಮಿಚೆಲ್​ ಮಾರ್ಷ್​ ತಂಡದ ನಾಯಕನಾಗಿದ್ದಾರೆ.

ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ವೇಡ್, ಟೆಸ್ಟ್​ ಮತ್ತು ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಿರುವ ಡೇವಿಡ್ ವಾರ್ನರ್, ಟಿಮ್‌ ಡೇವಿಡ್ ಅವರನ್ನು ಬ್ಯಾಟಿಂಗ್​ ವಿಭಾಗದಲ್ಲಿ ಆಯ್ಕೆ ಮಾಡಲಾಗಿದೆ. ಗ್ಲೆನ್​ ಮ್ಯಾಕ್ಸ್‌ವೆಲ್‌, ಮಾರ್ಕಸ್ ಸ್ಟೊಯಿನಿಸ್, ಕ್ಯಾಮರೂನ್ ಗ್ರೀನ್ ತಂಡದ ಸ್ಟಾರ್​ ಆಲ್​ರೌಂಡರ್​ಗಳಾಗಿದ್ದಾರೆ. ಸ್ಪಿನ್ಸ್‌ ಬೌಲರ್​ಗಳಾಗಿ ಆ್ಯಡಂ ಝಂಪಾ ಮತ್ತು ಆ್ಯಶ್ಟನ್​ ಅಗರ್ ಸ್ಥಾನ ಪಡೆದಿದ್ದಾರೆ. ವೇಗಿಗಳಾಗಿ ಜೋಶ್ ಹ್ಯಾಜಲ್‌ವುಡ್, ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ನಾಥನ್ ಎಲ್ಲಿಸ್ ಅವರನ್ನು ಆಯ್ಕೆ ಮಾಡಲಾಗಿದೆ.

ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಆ್ಯಶ್ಟನ್​ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆ್ಯಡಂ ಝಂಪಾ. ಪ್ರಯಾಣದ ಮೀಸಲು ಆಟಗಾರರು: ಮ್ಯಾಟ್ ಶಾರ್ಟ್, ಜೇಕ್ ಫ್ರೇಸರ್-ಮೆಕ್‌ಗುರ್ಕ್

Continue Reading
Advertisement
Chitta Ranjan Dash
ದೇಶ14 mins ago

Chitta Ranjan Dash: ಆರ್‌ಎಸ್‌ಎಸ್‌ನ ಸ್ವಯಂಸೇವಕನಾಗಿದ್ದೆ; ಈಗಲೂ ಮರಳಲು ಸಿದ್ಧ ಎಂದ ಹೈಕೋರ್ಟ್‌ ನಿವೃತ್ತ ಜಡ್ಜ್‌ ಚಿತ್ತರಂಜನ್‌ ದಾಸ್‌

Road Accident
ಕ್ರೈಂ16 mins ago

Road Accident : ತಾಯಿ-ಮಗನ ಬಲಿ ಪಡೆದ ಕಂಟೇನರ್‌; ಆಟೋ ಪ್ರಯಾಣಿಕ ಸೇರಿ ಸವಾರರಿಬ್ಬರ ಪ್ರಾಣ ಕಸಿದ ಬೈಕ್‌

DK Shivakumar statement in KPCC. no leadership if the booth lead is not given DK Shivakumar warns leaders
ರಾಜಕೀಯ25 mins ago

‌DK Shivakumar: ಬೂತ್ ಲೀಡ್ ಕೊಡಿಸದಿದ್ದರೆ ನಾಯಕತ್ವ ಇಲ್ಲ; ಜಾಗ ಖಾಲಿ ಮಾಡಿ: ಮುಖಂಡರಿಗೆ ಡಿಕೆಶಿ ವಾರ್ನಿಂಗ್

Mysuru News actress Vidhya Nandish congress leader killed by her husband
ಕ್ರೈಂ45 mins ago

Actress Murder: ‘ಭಜರಂಗಿ’ ಸಿನಿಮಾ ನಟಿ ಗಂಡನಿಂದಲೇ ಭೀಕರ ಕೊಲೆ!

Anant Ambani Radhika 2nd pre wedding bash
ಬಾಲಿವುಡ್54 mins ago

Anant Ambani Radhika: ಐಷಾರಾಮಿ ಹಡಗಿನಲ್ಲಿ ನಡೆಯಲಿದೆ ಅಂಬಾನಿ ಮಗನ ಮತ್ತೊಂದು ಪ್ರಿ ವೆಡ್ಡಿಂಗ್‌ ಶೋ!

NIA raid rameshwaram cafe blast
ಪ್ರಮುಖ ಸುದ್ದಿ1 hour ago

Rameshwaram Cafe Blast: ಬೆಂಗಳೂರಿನ 4 ಕಡೆ ಸೇರಿ ದೇಶಾದ್ಯಂತ ಎನ್‌ಐಎ ದಾಳಿ

Viral Video
ವೈರಲ್ ನ್ಯೂಸ್1 hour ago

Viral Video: ಮದುವೆಗೆ ಬಂದ ಮಾಜಿ ಪ್ರಿಯಕರ; ಆಮೇಲೆ ನಡೆದಿದ್ದೇ ಬೇರೆ- ಸಿನಿಮಾ ಸ್ಟೈಲ್‌ನಲ್ಲಿ ಟ್ವಿಸ್ಟ್‌ ಎಂದ ನೆಟ್ಟಿಗರು

Love Case Father throws hot water on man who loved his daughter for coming home
ಕೊಡಗು1 hour ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

RCB IPL Records
ಕ್ರೀಡೆ1 hour ago

RCB IPL Records: ಕಳೆದ 16 ಆವೃತ್ತಿಯ ಐಪಿಎಲ್​ನಲ್ಲಿ ಆರ್​ಸಿಬಿ ಎಷ್ಟು ಬಾರಿ ಪ್ಲೇ ಆಫ್​ಪ್ರವೇಶಿಸಿದೆ?: ತಂಡದ ದಾಖಲೆ ಹೇಗಿದೆ?

Emirates Flight
ದೇಶ1 hour ago

Emirates Flight: ವಿಮಾನ ಡಿಕ್ಕಿ ಹೊಡೆದು 36 ಫ್ಲೆಮಿಂಗೊ ಪಕ್ಷಿಗಳಿಗೆ ದಾರುಣ ಅಂತ್ಯ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌