Site icon Vistara News

MS Dhoni: ಐಪಿಎಲ್​ ಆರಂಭಕ್ಕೂ ಮುನ್ನ ಟೆಂಪಲ್ ರನ್ ಶುರು ಮಾಡಿದ ಎಂ.ಎಸ್​ ಧೋನಿ

MS Dhoni visits Dewri temple in Tamar

ರಾಂಚಿ: ವಿದಾಯದ ಐಪಿಎಲ್​ ಟೂರ್ನಿ ಆಡಲಿರುವ ಟೀಮ್​ ಇಂಡಿಯಾದ ಮಾಜಿ ನಾಯಕ ಹಾಗೂ ಆಟಗಾರ ಮಹೇಂದ್ರ ಸಿಂಗ್​ ಧೋನಿ(MS Dhoni) ಅವರು 17ನೇ ಆವೃತ್ತಿಯ ಐಪಿಎಲ್​(IPL 2024 season) ಆರಂಭಕ್ಕೂ ಮುನ್ನ ತವರಿನ ಮಾ ದೇವ್ರಿ ದೇವಸ್ಥಾನಕ್ಕೆ(Dewri temple) ಭೇಟಿ ನೀಡಿ ದೇವರ ಆಶೀರ್ವಾದ ಪಡೆದಿದ್ದಾರೆ. ​ಈ ಫೋಟೊ ವೈರಲ್​ ಆಗಿದೆ.

ಮಹೇಂದ್ರ ಸಿಂಗ್ ಧೋನಿ ಅವರು ಸೋಮವಾರ(ಫೆ.5) ದೇವ್ರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. 5 ಬಾರಿ ಚಾಂಪಿಯನ್​ ಪಟ್ಟ ಅಲಂಕರಿಸಿರುವ ಚೆನ್ನೈ ಸೂಪರ್​ ಕಿಂಗ್ಸ್​ಗೆ ದಾಖಲೆಯ 6 ನೇ ಐಪಿಎಲ್ ಪ್ರಶಸ್ತಿಯನ್ನು ಗೆಲ್ಲಿಸಿ ಕೊಡುವ ಗುರಿಯೊಂದಿಗೆ ಧೋನಿ ದೇವರ ಮೊರೆ ಹೋದಂತಿದೆ. ಐಪಿಎಲ್​ ಮಾರ್ಚ್​ 22ರಿಂದ ಆರಂಭಗೊಳ್ಳುವ ನಿರೀಕ್ಷೆ ಇದೆ. 

ಈಗಾಗಲೇ ಧೋನಿ ಅವರು 17ನೇ ಆವೃತ್ತಿಯ ಐಪಿಎಲ್​ಗಾಗಿ ಅಭ್ಯಾಸವನ್ನು ಕೂಡ ಆರಂಭಿಸಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಧೋನಿ ಅವರು ಬ್ಯಾಟಿಂಗ್​ ಅಭ್ಯಾಸ ನಡೆಸುವ ವಿಡಿಯೊ ವೈರಲ್​ ಆಗಿತ್ತು. ಜತೆಗೆ ಫಿಟ್​ನೆಸ್​ಗಾಗಿ ಟೆನಿಸ್​ ಕೂಡ ಆಡುತ್ತಿದ್ದಾರೆ. ರೆಟ್ರೋ ಲುಕ್​ನಲ್ಲಿ ಕೂದಲು ಬಿಟ್ಟಿರುವ ಧೋನಿ ಈ ಬಾರಿಯ ಐಪಿಎಲ್​ನಲ್ಲಿ ವಿಭಿನ್ನ ಶೈಲಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪ್ರತಿ ಬಾರಿಯ ಸೀನಸ್​ನಲ್ಲಿಯೂ ಧೋನಿ ಹೊಸ ಲುಕ್​ನಲ್ಲಿ ಕಾಣಿಸಿಕೊಳ್ಳುವುದು ಅವರ ವಿಶೇಷತೆಯಾಗಿದೆ.

ಇದನ್ನೂ ಓದಿ Yashasvi Jaiswal : ಧೋನಿ, ಸೆಹ್ವಾಗ್​ ಇರುವ ವಿಶೇಷ ಪಟ್ಟಿಗೆ ಸೇರ್ಪಡೆಗೊಂಡ ಯಶಸ್ವಿ ಜೈಸ್ವಾಲ್​

ಹಾಲಿ ಚಾಂಪಿಯನ್​ ಆಗಿರುವ ಚೆನ್ನೈ ತಂಡ ಈ ಬಾರಿಯ ಆವೃತ್ತಿಗಾಗಿ ಆಟಗಾರರ ಮಿನಿ ಹರಾಜಿನಲ್ಲಿ ಸ್ಟಾರ್​ ಆಟಗಾರರನ್ನು ಖರೀದಿಸಿ ತಂಡವನ್ನು ಬಲಿಷ್ಠಗೊಳಿಸಿದೆ. ಕಳೆದ ಬಾರಿಯ ಟೂರ್ನಿಯಲ್ಲಿ ಬೆರಳೆಣಿಕೆಯ ಅನುಭವಿ ಆಟಗಾರರನ್ನು ಹೊಂದಿದ್ದರೂ ಕಪ್​ ಗೆದ್ದು ಇತಿಹಾಸ ನಿರ್ಮಿಸಿತ್ತು. ಈ ಬಾರಿ ಬಲಿಷ್ಠವಾಗಿ ಗೋಚರಿಸಿದ ಚೆನ್ನೈ ತಂಡ ಮತ್ತೆ ಕಪ್​ ಗೆಲ್ಲುವುದು ಖಚಿತ ಎಂದು ಟೂರ್ನಿ ಆರಂಭಕ್ಕೂ ಮುನ್ನವೇ ಅಭಿಮಾನಿಗಳು ಭವಿಷ್ಯ ನುಡಿಯಲಾರಂಭಿಸಿದ್ದಾರೆ.

ಧೋನಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿ ಕೆಳವು ವರ್ಷಗಳಾಗಿವೆ. ಕೇವಲ ಐಪಿಎಲ್​ ಟೂರ್ನಿಯಲ್ಲಿ(IPL 2024) ಮಾತ್ರ ಆಡುತ್ತಿದ್ದಾರೆ. ಕಳೆದ ವರ್ಷವೇ ಅವರು ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿಯಾಗಲಿದೆ. ಈ ಮೂಲಕ ಧೋನಿ ಎಲ್ಲ ಮಾದರಿಯ ಕ್ರಿಕಟ್​ಗೂ ಗುಡ್​ಬೈ ಹೇಳಲಿದ್ದಾರೆ. ನಿವೃತ್ತಿ ಬಳಿಕ ಏನು ಮಾಡಲಿದ್ದೀರ ಎಂದು ಅಭಿಮಾನಿಯೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದ ಧೋನಿ. ಸದ್ಯಕ್ಕೆ ನಾನು ಕ್ರಿಕೆಟ್​ ಬಗ್ಗೆ ಮಾತ್ರ ಯೋಚಿಸುತ್ತಿದ್ದೇನೆ. ಆದರೆ ಒಂದಂತು ನಿಜ, ಕ್ರಿಕೆಟ್​ನಿಂದ ನಿವೃತ್ತಿಯಾದ ಬಳಿಕ ಕೆಲ ಕಾಲ ಆರ್ಮಿಯಲ್ಲಿ ಕರ್ತವ್ಯ ನಿರ್ವಹಿಸುತ್ತೇನೆ ಅದು ನನ್ನ ಜೀವನದ ಪ್ರಮುಖ ಗುರಿ ಎಂದು ಮಾಹಿ ಹೇಳಿದ್ದರು.

Exit mobile version