ಚೆನ್ನೈ: ಭಾರತ ಕ್ರಿಕೆಟ್ ಕಂಡ ಮಹಾನ್ ನಾಯಕರಲ್ಲಿ ಒಬ್ಬರಾದ ಮಹೇಂದ್ರ ಸಿಂಗ್ ಧೋನಿ(MS Dhoni) ಅವರು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿ ಕೆಳವು ವರ್ಷಗಳಾಗಿವೆ. ಕೇವಲ ಐಪಿಎಲ್ ಟೂರ್ನಿಯಲ್ಲಿ(IPL 2024) ಮಾತ್ರ ಆಡುತ್ತಿದ್ದಾರೆ. ಮುಂದಿನ ವರ್ಷ ನಡೆಯುವ ಟೂರ್ನಿಯ ಬಳಿಕ ಧೋನಿ ಎಲ್ಲ ಮಾದರಿಯ ಕ್ರಿಕಟ್ಗೂ ಗುಡ್ಬೈ ಹೇಳಲಿದ್ದಾರೆ.
ನಿವೃತ್ತಿ ಬಳಿಕ ಏನು ಮಾಡಲಿದ್ದೀರ ಎಂದು ಅಭಿಮಾನಿಯೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಧೋನಿ. ಸದ್ಯಕ್ಕೆ ನಾನು ಕ್ರಿಕೆಟ್ ಬಗ್ಗೆ ಮಾತ್ರ ಯೋಚಿಸುತ್ತಿದ್ದೇನೆ. ಆದರೆ ಒಂದಂತು ನಿಜ, ಕ್ರಿಕೆಟ್ನಿಂದ ನಿವೃತ್ತಿಯಾದ ಬಳಿಕ ಕೆಲ ಕಾಲ ಆರ್ಮಿಯಲ್ಲಿ ಕರ್ತವ್ಯ ನಿರ್ವಹಿಸುತ್ತೇನೆ ಅದು ನನ್ನ ಜೀವನದ ಪ್ರಮುಖ ಗುರಿ ಮಾಹಿ ಹೇಳಿದ್ದಾರೆ.
After Cricket, i want to spend Bit More Time With the Army ❤️😇#MSDhoni pic.twitter.com/6J7EaySSop
— Chakri Dhoni (@ChakriDhoni17) December 21, 2023
“ನಾನು ಇನ್ನೂ ಕ್ರಿಕೆಟ್ ಆಡುತ್ತಿದ್ದೇನೆ. ಕ್ರಿಕೆಟ್ ನಂತರ ನಾನು ಏನು ಮಾಡುತ್ತೇನೆ ಎಂದು ನೋಡಲು ತುಂಬಾ ಆಸಕ್ತಿದಾಯಕವಾಗಿದೆ. ನಾನು ಖಚಿತವಾಗಿ ಭಾವಿಸುತ್ತೇನೆ, ನಾನು ಸೇನೆಯೊಂದಿಗೆ ಸ್ವಲ್ಪ ಹೆಚ್ಚು ಸಮಯ ಕಳೆಯಲು ಬಯಸುತ್ತೇನೆ, ಏಕೆಂದರೆ ಕಳೆದ ಕೆಲವು ವರ್ಷಗಳಿಂದ ನಾನು ಅದನ್ನು ಮಾಡಲು ಸಾಧ್ಯವಾಗಲಿಲ್ಲ” ಎಂದು ಧೋನಿ ಹೇಳಿದ್ದಾರೆ. ಈ ವಿಡಿಯೊ ವೈರಲ್ ಆಗಿದೆ. ಧೋನಿಯ ದೇಶ ಪ್ರೇಮಕ್ಕೆ ಅವರ ಅಭಿಮಾನಿಗಳು ಸಲಾಂ ಹೇಳಿದ್ದಾರೆ.
ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಧೋನಿ
ಸೇನಾ ತರಬೇತಿ ಪಡೆದಿರುವ ಮಹೇಂದ್ರ ಸಿಂಗ್ ಧೋನಿ 2019ರಲ್ಲಿ ಜುಲೈ 31ರಿಂದ ಆಗಸ್ಟ್ 15ರ ವರೆಗೆ ಕಾಶ್ಮೀರದಲ್ಲಿ ಸೇನಾ ಕರ್ತವ್ಯ ನಿರ್ವಹಿಸಿದ್ದರು. ಪ್ಯಾರಾಚೂಟ್ ರೆಜಿಮೆಂಟ್‌ನ 106ನೇ ಬೆಟಾಲಿಯನ್‌ನೊಂದಿಗೆ ಗಸ್ತು, ನಿಗಾ ಕಾರ್ಯಾಚರಣೆ ಸೇರಿದಂತೆ ಸೇನೆಯ ವಿವಿಧ ವಿಭಾಗದಲ್ಲಿ ಧೋನಿ ಕೆಲಸ ನಿರ್ವಹಿಸಿದ್ದರು. ಧೋನಿ ಭಾರತದ ಅರೆ ಸೇನಾಪಡೆಯಲ್ಲಿ ಗೌರವ ಲೆಫ್ಟಿನೆಂಟ್ ಕರ್ನಲ್ ಆಗಿದ್ದಾರೆ.
ಇದನ್ನೂ ಓದಿ IPL 2024: ‘ಆರ್ಸಿಬಿಗೆ ಒಂದು ಕಪ್ ಗೆಲ್ಲಿಸಿ ಕೊಡಿ’; ಧೋನಿಗೆ ಮನವಿ ಮಾಡಿದ ಅಭಿಮಾನಿ
ಈ ಬಾರಿ ನಿವೃತ್ತಿ ಖಚಿತ
ಮಹೇಂದ್ರ ಸಿಂಗ್ ಧೋನಿ ಅವರು ಇದೇ ವರ್ಷ ನಡೆದ 16ನೇ ಆವೃತ್ತಿಯ ಐಪಿಎಲ್ ಬಳಿಕ ವಿದಾಯ ಹೇಳುತ್ತಾರೆ ಎನ್ನಲಾಗಿತ್ತು. ಅದರಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ಫೈನಲ್ ತಲುಪಿದಾಗ ಅಭಿಮಾನಿಗಳಲ್ಲಿ ಧೋನಿ ಖಚಿತವಾಗಿ ತಮ್ಮ ನಿವೃತ್ತಿ ನಿರ್ಧಾರ ಘೋಷಿಸುತ್ತಾರೆ ಎಂದು ಬೇಸರಗೊಂಡಿದ್ದರು. ಆದರೆ ಧೋನಿ ಅವರು ಕಪ್ ಗೆದ್ದ ಬಳಿಕ ಅಭಿಮಾನಿಗಳ ಒತ್ತಾಯದ ಮೇರೆಗೆ ನಾನು ಮುಂದಿನ ಬಾರಿಯ ಐಪಿಎಲ್ನಲ್ಲಿ ಆಡುತ್ತೇನೆ ಎಂದು ಹೇಳಿದ್ದರು. ಆದರೆ ಈ ಬಾರಿಯ ಐಪಿಎಲ್ ಬಳಿಕ ಅವರು ನಿವೃತ್ತಿ ಹೇಳುವುದು ಖಚಿತವಾಗಿದೆ.
17ನೇ ಆವೃತ್ತಿಯ ಐಪಿಎಲ್ಗೆ ಚೆನ್ನೈ ತಂಡ
ಎಂ.ಎಸ್ ಧೋನಿ (ನಾಯಕ), ಡೆವೊನ್ ಕಾನ್ವೇ, ಋತುರಾಜ್ ಗಾಯಕ್ವಾಡ್, ಅಜಿಂಕ್ಯ ರಹಾನೆ, ಶೇಕ್ ರಶೀದ್, ರವೀಂದ್ರ ಜಡೇಜಾ, ಮಿಚೆಲ್ ಸ್ಯಾಂಟ್ನರ್, ಮೊಯೀನ್ ಅಲಿ, ಶಿವಂ ದುಬೆ, ನಿಶಾಂತ್ ಸಿಂಧು, ಅಜಯ್ ಮಂಡಲ್, ರಾಜವರ್ಧನ್ ಹಂಗರ್ಗೇಕರ್, ದೀಪಕ್ ಚಹರ್, ಮಹೇಶ್ ದೀಕ್ಷಾನಾ, ಮುಖೇಶ್ ಚೌಧರಿ, ಪ್ರಶಾಂತ್ ಸೋಲಂಕಿ, ಸಿಮರ್ಜೀತ್ ಸಿಂಗ್, ತುಷಾರ್ ದೇಶಪಾಂಡೆ, ಮಥೀಶಾ ಪತಿರಾನಾ, ಶಾರ್ದೂಲ್ ಠಾಕೂರ್, ರಚಿನ್ ರವೀಂದ್ರ, ಡ್ಯಾರಿಲ್ ಮಿಚೆಲ್, ಸಮೀರ್ ರಿಜ್ವಿ.