ಅಹಮದಾಬಾದ್: ಮಳೆಯಿಂದಾಗಿ ವಿಳಂಬಗೊಂಡ ಐಪಿಎಲ್ನ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ವಿರುದ್ಧ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಆತಿಥೇಯ ಗುಜರಾತ್ ಬ್ಯಾಟಿಂಗ್ ಆಹ್ವಾನ ಪಡೆದಿದೆ. ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಫೈನಲ್ ಪ್ರವೇಶ ಗಿಟ್ಟಿಸಿಕೊಳ್ಳಬೇಕಾದರೆ ಈ ಪಂದ್ಯದಲ್ಲಿ ಉಭಯ ತಂಡಗಳಿಗೂ ಗೆಲುವು ಅತ್ಯಗತ್ಯ. ಹೀಗಾಗಿ ಈ ಪಂದ್ಯ ರೋಚಕವಾಗಿ ಸಾಗುವ ನಿರೀಕ್ಷೆಯಿದೆ.
ಪಿಚ್ ರಿಪೋರ್ಟ್
ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನ ಪಿಚ್ ಬ್ಯಾಟಿಂಗ್ ಮತ್ತು ಬೌಲಿಂಗ್ಗೆ ಸಮಾನವಾಗಿ ಸಹಕಾರಿಸಲಿದೆ. ಆರಂಭದಲ್ಲಿ ಬೌಲಿಂಗ್ಗೆ ನೆರವಾದರೆ ಆ ಬಳಿಕ ನಿಧಾನವಾಗಿ ಬ್ಯಾಟಿಂಗ್ ಸ್ನೇಹಿಯಾಗಲಿದೆ. ಆದರೆ ಇದೀಗ ಮಳೆ ಬಂದ ಕಾರಣ ಪಿಚ್ ಹೇಗೆ ವರ್ತಿಸಲಿದೆ ಎನ್ನುವ ಆತಂಕದವೂ ಇತ್ತಂಡಗಳಿಗೆ ಕಾಡಲಾರಂಭಿಸಿದೆ. ಉಭಯ ತಂಡಗಳು ಈ ವರೆಗೆ ಐಪಿಎಲ್ನಲ್ಲಿ ಮೂರು ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಮುಂಬೈ 2 ಪಂದ್ಯ ಗೆದ್ದು ಬೀಗಿದೆ.
ಅಂಕಿ ಅಂಶಗಳು
ಅಹಮದಾಬಾದ್ನಲ್ಲಿ ಈ ವರೆಗೆ 25 ಐಪಿಎಲ್ ಪಂದ್ಯಗಳು ನಡೆದಿವೆ. ಇದರಲ್ಲಿ 12 ಬಾರಿ ಮೊದಲು ಬ್ಯಾಟಿಂಗ್ ನಡೆಸಿದ ತಂಡ ಗೆದ್ದಿದೆ. 13 ಬಾರಿ ಚೇಸಿಂಗ್ ಮಾಡಿದ ತಂಡ ಮೇಲುಗೈ ಸಾಧಿಸಿದೆ. 227 ರನ್ ಇಲ್ಲಿ ದಾಖಲಾದ ಅತ್ಯಧಿಕ ಮೊತ್ತವಾಗಿದೆ. ಇದೇ ಆವೃತ್ತಿಯಲ್ಲಿ ಗುಜರಾತ್ ತಂಡ ಲಕ್ನೋ ವಿರುದ್ಧ ಈ ಮೊತ್ತ ದಾಖಲಿಸಿತ್ತು. ಗುಜರಾತ್ ತಂಡ ಇಲ್ಲಿ 8 ಐಪಿಎಲ್ ಪಂದ್ಯಗಳನ್ನು ಆಡಿದ್ದು ಇದರಲ್ಲಿ 5 ಪಂದ್ಯಗಳನ್ನು ಗೆದ್ದಿದೆ. ಮುಂಬೈ ತಂಡ 3 ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯ ಜಯಿಸಿದೆ. ಈ ಲೆಕ್ಕಾಚಾರದಲ್ಲಿ ಗುಜರಾತ್ ಮುಂದಿದೆ.
ಇದನ್ನೂ ಓದಿ IPL 2023: ಗಾಂಧಿಯ ಮೂರು ಕೋತಿಗಳಂತೆ ಟ್ರೋಲ್ ಆದ ನವೀನ್ ಉಲ್-ಹಕ್
Battle of the blues! Forces collide! ✊🏽
— Ranveer Singh (@RanveerOfficial) May 26, 2023
Huge match tonight!! 🏏
Predictions?! Go go go👇🏽 #MIvsGT #IPLOnStar @StarSportsIndia @mipaltan @gujarat_titans pic.twitter.com/vyh5nCS2PP
ಸಂಭಾವ್ಯ ತಂಡಗಳು
ಗುಜರಾತ್ ಟೈಟಾನ್ಸ್: ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಭಮನ್ ಗಿಲ್, ಸಾಯಿ ಸುದರ್ಶನ್/ವಿಜಯ್ ಶಂಕರ್, ಹಾರ್ದಿಕ್ ಪಾಂಡ್ಯ(ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ಅಲ್ಜಾರಿ ಜೋಸೆಫ್, ಜೋಶುವಾ ಲಿಟಲ್, ಯಶ್ ದಯಾಳ್/ ಮೋಹಿತ್ ಶರ್ಮ.
ಮಂಬೈ ಇಂಡಿಯನ್ಸ್: ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್(ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಕ್ಯಾಮರೂನ್ ಗ್ರೀನ್, ತಿಲಕ್ ವರ್ಮಾ, ಟಿಮ್ ಡೇವಿಡ್, ನೆಹಾಲ್ ವಧೇರಾ, ಹೃತಿಕ್ ಶೋಕೀನ್, ಪಿಯೂಷ್ ಚಾವ್ಲಾ, ಕ್ರಿಸ್ ಜೋರ್ಡನ್, ಆಕಾಶ್ ಮಧ್ವಾಲ್.