Site icon Vistara News

IPL 2023: ಟಾಸ್​ ಗೆದ್ದ ಮುಂಬೈ; ಆರ್​ಸಿಬಿಗೆ ಬ್ಯಾಟಿಂಗ್​ ಆಹ್ವಾನ

Wankhede Stadium At Mumbai

ಮುಂಬಯಿ: ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡದ ವಿರುದ್ಧ ಟಾಸ್​ ಗೆದ್ದ ಮುಂಬೈ ಇಂಡಿಯನ್ಸ್​ ಬೌಲಿಂಗ್​ ಆಯ್ಕೆ ಮಾಡಿಕೊಂಡಿದೆ. ಆರ್​ಸಿಬಿ ಬ್ಯಾಟಿಂಗ್​ ಆಹ್ವಾನ ಪಡೆದಿದೆ. ಪ್ಲೇ ಆಫ್​ ರೇಸ್​ನಲ್ಲಿ ಉಳಿದುಕೊಳ್ಳುವ ನಿಟ್ಟಿನಲ್ಲಿ ಉಭಯ ತಂಡಗಳಿಗೂ ಈ ಪಂದ್ಯ ಮಹತ್ವದ್ದಾಗಿದೆ.

ಮುಂಬೈ ಇಂಡಿಯನ್ಸ್​ ಮುತ್ತು ಆರ್​ಸಿಬಿ ತಂಡಗಳು ಇದುವರೆಗಿನ ಐಪಿಎಲ್​ ಪಂದ್ಯಗಳಲ್ಲಿ 31 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ 17 ಪಂದ್ಯಗಳಲ್ಲಿ ಮುಂಬೈ ಮೇಲುಗೈ ಸಾಧಿಸಿದರೆ 14 ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿದೆ. ಬಲಾಬಲದ ಲೆಕ್ಕಾಚಾರದಲ್ಲಿ ಮುಂಬೈ ಬಲಿಷ್ಠವಾಗಿದೆ. ಆದರೆ ಈ ಆವೃತ್ತಿಯ ಮೊದಲ ಸುತ್ತಿನ ಮುಖಾಮುಖಿಯಲ್ಲಿ ಆರ್​ಸಿಬಿ ತವರಿನಲ್ಲಿ ಮುಂಬೈಗೆ ಸೋಲುಣಿಸಿತ್ತು.

ಪಿಚ್​ ರಿಪೋರ್ಟ್​

ಮುಂಬೈಯ ವಾಂಖೆಡೆ ಸ್ಟೇಡಿಯಂನ ಪಿಚ್​ ಬ್ಯಾಟಿಂಗ್ ಸ್ನೇಹಿ ಆಗಿದೆ. ಹೀಗಾಗಿ ಈ ಪಂದ್ಯದಲ್ಲಿ ದೊಡ್ಡ ಮೊತ್ತ ದಾಖಲಾಗುವ ಸಾಧ್ಯತೆ ಅಧಿಕ. ಉಭಯ ತಂಡಗಳಲ್ಲಿಯೂ ಬಲಿಷ್ಠ ಬ್ಯಾಟರ್​ಗಳು ಕಾಣಿಸಿಕೊಂಡಿದ್ದಾರೆ. ಇಲ್ಲಿ ನಡೆದ ಐಪಿಎಲ್​ನ ಬಹುತೇಕ ಪಂದ್ಯಗಳು ಹೈಸ್ಕೋರಿಂಗ್ ಆಗಿದೆ. 2017ರಲ್ಲಿ ಮುಂಬೈ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ 235 ರನ್​ ಬಾರಿಸಿತ್ತು. ಇದು ಇಲ್ಲಿ ದಾಖಲಾದ ಅತ್ಯಧಿಕ ಮೊತ್ತವಾಗಿದೆ. ಇನ್ನು ಚೇಸಿಂಗ್​ ನಡೆಸಿದ ತಂಡಗಳೇ ಹೆಚ್ಚು ಬಾರಿ ಮೇಲುಗೈ ಸಾಧಿಸಿದೆ. ಬೌಲರ್​ಗಳು ಈ ಪಿಚ್​ನಲ್ಲಿ ಶಕ್ತಿ ಮೀರಿ ಪ್ರದರ್ಶನ ತೋರಬೇಕಿದೆ.

ಸಂಭಾವ್ಯ ತಂಡಗಳು

ಆರ್​ಸಿಬಿ: ವಿರಾಟ್ ಕೊಹ್ಲಿ (ನಾಯಕ), ಫಾಫ್ ಡು ಪ್ಲೆಸಿಸ್ (ಸಿ), ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್ವೆಲ್, ಮಹಿಪಾಲ್ ಲೊಮ್ರೊರ್, ದಿನೇಶ್ ಕಾರ್ತಿಕ್ (ವಿಕೆ), ಕೇದಾರ್ ಜಾಧವ್, ವನಿಂದು ಹಸರಂಗ, ಕರಣ್ ಶರ್ಮಾ, ಮೊಹಮ್ಮದ್ ಸಿರಾಜ್, ಜೋಶ್ ಹೇಜಲ್​ವುಡ್​.

ಇದನ್ನೂ ಓದಿ IPL 2023: ಗೆಲುವಿನ ಬಳಿಕ ತಾಯಿಯನ್ನು ಅಪ್ಪಿಕೊಂಡ ಕೆಕೆಆರ್​ ನಾಯಕ ನಿತೀಶ್​ ರಾಣಾ

ಮಂಬೈ ಇಂಡಿಯನ್ಸ್​: ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್(ವಿಕೆಟ್​ ಕೀಪರ್​), ಸೂರ್ಯಕುಮಾರ್ ಯಾದವ್, ಕ್ಯಾಮರೂನ್ ಗ್ರೀನ್, ತಿಲಕ್ ವರ್ಮಾ, ಟಿಮ್ ಡೇವಿಡ್, ನೆಹಾಲ್ ವಧೇರಾ, ಹೃತಿಕ್ ಶೋಕೀನ್, ಪಿಯೂಷ್ ಚಾವ್ಲಾ, ಜೋಫ್ರಾ ಆರ್ಚರ್, ಅರ್ಷದ್ ಖಾನ್.

Exit mobile version