ಮೊಹಾಲಿ : ಐಪಿಎಲ್ 16ನೇ ಆವೃತ್ತಿಯ 46ನೇ ಪಂದ್ಯದಲ್ಲಿ ಟಾಸ್ ಗೆದ್ದಿರುವ ಮುಂಬೈ ಇಂಡಿಯನ್ಸ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಆತಿಥೇಯ ಪಂಜಾಬ್ ಕಿಂಗ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಬೇಕಾಗಿದೆ. ಇತ್ತಂಡಗಳೂ ಈ ಹಿಂದಿನ ಪಂದ್ಯಗಳಲ್ಲಿ ಗೆಲುವು ಕಂಡಿರುವ ಕಾರಣ ವಿಶ್ವಾಸದಲ್ಲಿದೆ. ಮುಂಬಯಿ ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆಲುವು ಸಾಧಿಸಿದ್ದರೆ, ಪಂಜಾಬ್ ಕಿಂಗ್ಸ್ ತಂಡ ಚೆನ್ನೈ ವಿರುದ್ಧ ಜಯ ಸಾಧಿಸಿತ್ತು.
ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಕ್ರಿಕೆಟ್ ಗ್ರೌಂಡ್ನಲ್ಲಿ ಈ ಪಂದ್ಯ ನಡೆಯುತ್ತಿದೆ.
ತಂಡಗಳು:
ಮುಂಬೈ ಇಂಡಿಯನ್ಸ್ : ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆ), ಕ್ಯಾಮೆರಾನ್ ಗ್ರೀನ್, ತಿಲಕ್ ವರ್ಮಾ, ಟಿಮ್ ಡೇವಿಡ್, ನೇಹಾಲ್ ವಧೇರಾ, ಜೋಫ್ರಾ ಆರ್ಚರ್, ಪಿಯೂಷ್ ಚಾವ್ಲಾ, ಕುಮಾರ್ ಕಾರ್ತಿಕೇಯ, ಆಕಾಶ್ ಮಧ್ವಾಲ್, ಅರ್ಷದ್ ಖಾನ್.
ಪಂಜಾಬ್ ಕಿಂಗ್ಸ್: ಶಿಖರ್ ಧವನ್ (ನಾಯಕ), ಪ್ರಭ್ಸಿಮ್ರಾನ್ ಸಿಂಗ್, ಮ್ಯಾಥ್ಯೂ ಶಾರ್ಟ್, ಲಿಯಾಮ್ ಲಿವಿಂಗ್ಸ್ಟನ್, ಜಿತೇಶ್ ಶರ್ಮಾ , ಸ್ಯಾಮ್ ಕರ್ರನ್, ಶಾರುಖ್ ಖಾನ್, ಹರ್ಪ್ರಿತ್ ಬ್ರಾರ್, ರಿಷಿ ಧವನ್, ರಾಹುಲ್ ಚಹರ್, ಅರ್ಶ್ದೀಪ್ ಸಿಂಗ್.