ಮುಂಬಯಿ : ಗಾಯದ ಸಮಸ್ಯೆಗಳಿಂದ ಗುಣಮುಖರಾಗಿರುವ ಜಸ್‌ಪ್ರಿತ್ ಬುಮ್ರಾ ಹಾಗೂ ಹರ್ಷಲ್ ಪಟೇಲ್ ಸೇರಿದಂತೆ ೧೫ ಸದಸ್ಯರ ಭಾರತ ತಂಡವನ್ನು ಮುಂಬರುವ ಟಿ೨೦ ವಿಶ್ವ ಕಪ್‌ಗೆ ಪ್ರಕಟಿಸಲಾಗಿದೆ. ಬಿಸಿಸಿಐ ಹಿರಿಯರ ತಂಡದ ಆಯ್ಕೆ ಸಮಿತಿ ಸೋಮವಾರ ಸಭೆ ನಡೆಸಿ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿತು. ಈ ವಾರಾಂತ್ಯಕ್ಕೆ ತಂಡ ಪ್ರಕಟಗೊಳ್ಳಬಹುದು ಎಂದು ಈ ಹಿಂದೆ ನಿರೀಕ್ಷೆ ಮಾಡಲಾಗಿತ್ತು. ಆದರೆ, ಸೆಪ್ಟೆಂಬರ್ ೧೨ರಂದು ಸಭೆ ಸೇರಿ ತಂಡವನ್ನು ಪ್ರಕಟಿಸಿದೆ. ಇದೇ ವೇಳೆ ತವರಿನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಟಿ೨೦ ಸರಣಿಗೂ ತಂಡವನ್ನು ಪ್ರಕಟಿಸಲಾಗಿದೆ. ಎಲ್ಲ ತಂಡಗಳಿಗೆ ರೋಹಿತ್ ಶರ್ಮ ನಾಯಕರಾಗಿದ್ದರೆ, ಕನ್ನಡಿಗ ಕೆ. ಎಲ್ ರಾಹುಲ್ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ.
ತಂಡಗಳು ಇಂತಿವೆ
ಟಿ೨೦ ವಿಶ್ವ ಕಪ್ : ರೋಹಿತ್ ಶರ್ಮ (ನಾಯಕ), ಕೆ. ಎಲ್. ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡ, ರಿಷಭ್ ಪಂತ್, ದಿನೇಶ್ ಕಾರ್ತಿಕ್ (ವಿಕೆಟ್‌ಕೀಪರ್‌ಗಳು), ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಯಜ್ವೇಂದ್ರ ಚಹಲ್, ಅಕ್ಷರ್ ಪಟೇಲ್, ಜಸ್‌ಪ್ರಿತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಶ್‌ದೀಪ್ ಸಿಂಗ್.
ಮೀಸಲು ಆಟಗಾರರು: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯಿ, ದೀಪಕ್ ಚಾಹರ್.
ಆಸ್ಟ್ರೇಲಿಯಾ ವಿರುದ್ಧದ ಟಿ೨೦ ಸರಣಿಗೆ ತಂಡ: ರೋಹಿತ್ ಶರ್ಮ (ನಾಯಕ), ಕೆ. ಎಲ್. ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡ, ರಿಷಭ್ ಪಂತ್, ದಿನೇಶ್ ಕಾರ್ತಿಕ್ (ವಿಕೆಟ್‌ಕೀಪರ್‌ಗಳು), ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಯಜ್ವೇಂದ್ರ ಚಹಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಹರ್ಷಲ್ ಪಟೇಲ್, ದೀಪಕ್ ಚಾಹರ್, ಜಸ್‌ಪ್ರಿತ್ ಬುಮ್ರಾ.
ಅದಕ್ಷಿಣ ಆಫ್ರಿಕಾ ವಿರುದ್ಧದ ಟಿ೨೦ ಸರಣಿಗೆ ತಂಡ : ರೋಹಿತ್ ಶರ್ಮ (ನಾಯಕ), ಕೆ. ಎಲ್. ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡ, ರಿಷಭ್ ಪಂತ್, ದಿನೇಶ್ ಕಾರ್ತಿಕ್ (ವಿಕೆಟ್‌ಕೀಪರ್‌ಗಳು), ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಯಜ್ವೇಂದ್ರ ಚಹಲ್, ಅಕ್ಷರ್ ಪಟೇಲ್, ಅರ್ಶ್‌ದೀಪ್ ಸಿಂಗ್, ಮೊಹಮ್ಮದ್ ಶಮಿ, ಹರ್ಷಲ್ ಪಟೇಲ್, ದೀಪಕ್ ಚಾಹರ್, ಜಸ್‌ಪ್ರಿತ್ ಬುಮ್ರಾ.
ಭುವನೇಶ್ವರ್ ಕುಮಾರ್, ಹಾರ್ದಿಕ್ ಪಾಂಡ್ಯ ಹಾಗೂ ಅರ್ಶ್‌ದೀಪ್ ಸಿಂಗ್ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ ನಡುವೆ ಬೆಂಗಳೂರಿನ ಎನ್‌ಸಿಎನಲ್ಲಿ ನಡೆಯುವ ಫಿಟ್ನೆಸ್ ಟೆಸ್ಟ್‌ನಲ್ಲೂ ಪಾಲ್ಗೊಳ್ಳಬೇಕು ಎಂಬುದಾಗಿ ಬಿಸಿಸಿಐ ಸೂಚನೆ ಕೊಟ್ಟಿದೆ.
ಇದನ್ನೂ ಓದಿ | Team India | ಟಿ20 ವಿಶ್ವ ಕಪ್ ತಂಡದಲ್ಲಿ ಮೊಹಮ್ಮದ್ ಶಮಿಗೆ ಸ್ಥಾನ ನೀಡಲೇಬೇಕು ಎಂದರು ಸೆಹ್ವಾಗ್