ದೋಹಾ: ಭಾರತದ ಜಾವೆಲಿನ್ ಥ್ರೋ ಪಟು ನೀರಜ್ ಚೋಪ್ರಾ (Neeraj Chopra) ಅವರು ಮತ್ತೊಂದು ಮೈಲುಗಲ್ಲು ಸಾಧಿಸಿದ್ದಾರೆ. ದೋಹಾ ಡೈಮಂಡ್ ಲೀಗ್‌ನಲ್ಲಿ ನೀರಜ್ ಚೋಪ್ರಾ ಅವರು ಚಿನ್ನದ ಪದಕಕ್ಕೆ ಕೊರಳೊಡ್ಡುವ ಮೂಲಕ ಸಾಧನೆ ಮೆರೆದಿದ್ದಾರೆ.
ಒಲಿಂಪಿಕ್ಸ್‌ನಲ್ಲಿ ಪುರುಷರ ಜಾವೆಲಿನ್ ಎಸೆತದಲ್ಲಿ ಚಿನ್ನ ಗೆದ್ದ ಏಷ್ಯಾದ ಮೊದಲ ಅಥ್ಲಿಟ್ ಎನಿಸಿರುವ ನೀರಜ್ ಚೋಪ್ರಾ ಅವರು ದೋಹಾ ಡೈಮಂಡ್ ಲೀಗ್‌ನಲ್ಲಿ 88.67 ಮೀಟರ್ ಜಾವೆಲಿನ್ ಎಸೆಯುವ ಮೂಲಕ ಚಿನ್ನದ ಪದಕ ಗೆದ್ದಿದ್ದಾರೆ. ಇನ್ನು ವಿಶ್ವ ಚಾಂಪಿಯನ್ ಆ್ಯಂಡರ್‌ಸನ್ ಪೀಟರ್ಸ್ ಅವರು 85.88 ಮೀಟರ್ ದೂರಕ್ಕೆ ಜಾವೆಲಿನ್ ಎಸೆದು ದ್ವಿತೀಯ ಸ್ಥಾನಿಯಾದರೆ, 85.51 ಮೀಟರ್ ದೂರ ಎಸೆದು ಜಾಕುಬ್ ವಾಡ್ಲೆಚ್ ಅವರು ತೃತೀಯ ಸ್ಥಾನಕ್ಕೆ ತೃಪ್ತಿಪಟ್ಟರು.
ಕೇಂದ್ರ ಸಚಿವ ಕಿರಣ್ ರಿಜಿಜು ಸಂತಸ
ಇದನ್ನೂ ಓದಿ: Neeraj Chopra: ಟರ್ಕಿಯಲ್ಲಿ ನೀರಜ್ ಚೋಪ್ರಾಗೆ 61 ದಿನಗಳ ಕಾಲ ತರಬೇತಿ
ಕಳೆದ ಬಾರಿಯೂ ನೀರಜ್ ಚೋಪ್ರಾ ಅವರು ಡೈಮಂಡ್ ಲೀಗ್‌ನಲ್ಲಿ ಕೂಡ ಚಿನ್ನದ ಪದಕ ಗೆದ್ದಿದ್ದರು. ಈಗ ಸತತ ಎರಡನೇ ಬಾರಿಯೂ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ. ಇನ್ನು ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ಅವರಿಗೆ ಕೇಂದ್ರ ಸಚಿವ ಕಿರಣ್ ರಿಜಿಜು ಸೇರಿ ಸಾವಿರಾರು ಜನ ಅಭಿನಂದನೆ ಸಲ್ಲಿಸಿದ್ದಾರೆ.