Neeraj Chopra: ಇಂದು ಪಾವೊ ನೂರ್ಮಿ ಗೇಮ್ಸ್​ನಲ್ಲಿ ನೀರಜ್ ಚೋಪ್ರಾ ಸ್ಪರ್ಧೆ - Vistara News

ಕ್ರೀಡೆ

Neeraj Chopra: ಇಂದು ಪಾವೊ ನೂರ್ಮಿ ಗೇಮ್ಸ್​ನಲ್ಲಿ ನೀರಜ್ ಚೋಪ್ರಾ ಸ್ಪರ್ಧೆ

Neeraj Chopra: ಜರ್ಮನಿಯ ಯುವ ಜಾವೆಲಿನ್​ ಪಟು ಮ್ಯಾಕ್ಸ್‌ ಡ್ಹೆನಿಂಗ್(Max Dehning) ಅವರಿಂದ ತೀವ್ರ ಪೈಪೋಟಿ ಎದುರಾಗುವ ನಿರೀಕ್ಷೆಯಿದೆ. ನೀರಜ್​ ಈ ಟೂರ್ನಿಯ ಕಣದಲ್ಲಿರುವ ಏಕೈಕ ಭಾರತೀಯ ಅಥ್ಲೀಟ್‌.

VISTARANEWS.COM


on

Neeraj Chopra
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತುರ್ಕು (ಫಿನ್ಲೆಂಡ್‌): ಪ್ಯಾರಿಸ್​ ಒಲಿಂಪಿಕ್ಸ್(Paris Olympics)​ ಟೂರ್ನಿಗೂ ಮುನ್ನ ನೀರಜ್ ಚೋಪ್ರಾ(Neeraj Chopra) ಅವರು ಹೊಸ ಉತ್ಸಾಹದೊಂದಿಗೆ ಇಂದು (ಮಂಗಳವಾರ) ನಡೆಯುವ ಪಾವೊ ನೂರ್ಮಿ(Paavo Nurmi Games) ಅಥ್ಲೆಟಿಕ್‌ ಕೂಟದಲ್ಲಿ ಭಾಗವಹಿಸಲಿದ್ದಾರೆ. ಜರ್ಮನಿಯ ಯುವ ಜಾವೆಲಿನ್​ ಪಟು ಮ್ಯಾಕ್ಸ್‌ ಡ್ಹೆನಿಂಗ್(Max Dehning) ಅವರಿಂದ ತೀವ್ರ ಪೈಪೋಟಿ ಎದುರಾಗುವ ನಿರೀಕ್ಷೆಯಿದೆ. ನೀರಜ್​ ಈ ಟೂರ್ನಿಯ ಕಣದಲ್ಲಿರುವ ಏಕೈಕ ಭಾರತೀಯ ಅಥ್ಲೀಟ್‌.

19 ವರ್ಷದ ಡ್ಹೆನಿಂಗ್‌ ಇತ್ತೀಚೆಗೆ ನಡೆದ ಟೂರ್ನಿಯೊಂದರಲ್ಲಿ 90 ಮೀ. ದೂರ ಜಾವೆಲಿನ್‌ ಎಸೆದು ಈ ಸಾಧನೆ ತೋರಿದ ಅತಿ ಕಿರಿಯ ಜಾವೆಲಿನ್ ಪಟು ಎಂಬ ಹಿರಿಮೆಗೆ ಪಾತ್ರರಾಗಿದ್ದರು. ನೀರಜ್​ ಅವರು ಇದುವರೆಗೂ 90ರ ಗಡಿ ದಾಟಿಲ್ಲ. 89.94 ಮೀ. ದೂರ ಅವರ ಇದುವರೆಗಿನ ವೈಯಕ್ತಿಕ ಶ್ರೇಷ್ಠ ಪ್ರದರ್ಶನವಾಗಿದೆ. ಈ ಎಸೆತವನ್ನು ನೀರಜ್​ 2022ರ ಡೈಮಂಡ್‌ ಲೀಗ್‌ನಲ್ಲಿ ದಾಖಲಿಸಿದ್ದರು. ಹೀಗಾಗಿ ಈ ಟೂರ್ನಿಯಲ್ಲಿ ಅವರಿಗೆ ಡ್ಹೆನಿಂಗ್‌ ಅವರಿಂದ ಪೈಪೋಟಿ ಎದುರಾಗುವ ಸಾಧ್ಯತೆ ಇದೆ.

ಇದು ಮಾತ್ರವಲ್ಲದೆ 2022ರಲ್ಲಿ ನಡೆದಿದ್ದ ಇದೇ ಕೂಟದಲ್ಲಿ ನೀರಜ್​ಗೆ ಸೋಲುಣಿಸಿದ್ದ ಒಲಿವರ್‌ ಹೆಲಾಂಡರ್, ಎರಡು ಬಾರಿಯ ವಿಶ್ವ ಚಾಂಪಿಯನ್ ಆ್ಯಂಡರ್ಸನ್ ಪೀಟರ್ಸ್‌ (ಗ್ರೆನೆಡಾ) ಮತ್ತು 2012ರ ಒಲಿಂಪಿಕ್ ಚಾಂಪಿಯನ್ ಕೆಶೋರ್ನ್ ವಾಲ್ಕಾಟ್‌ (ಟ್ರಿನಿಡಾಡ್‌ ಮತ್ತು ಟೊಬಾಗೊ) ಕೂಡ ಈ ಬಾರಿ ಕಣದಲ್ಲಿದ್ದಾರೆ. ಒಟ್ಟಾರೆ ಬಲಿಷ್ಠ ಜಾವೆಲಿನ್ ಪಟುಗಳ ಮಧ್ಯೆ ಇಂದು ಜಿದ್ದಾಜಿದ್ದಿನ ಹೋರಾಟವೊಂದು ನಡೆಯಲಿದೆ ಎನ್ನಲಡ್ಡಿಯಿಲ್ಲ. ಝೆಕ್‌ ರಿಪಬ್ಲಿಕ್‌ನ ಪ್ರಮುಖ ಸ್ಪರ್ಧಿ, ಕಳೆದ ದೋಹಾ ಡೈಮಂಡ್‌ ಲೀಗ್‌ನಲ್ಲಿ ಚಿನ್ನ ಗೆದ್ದಿದ್ದ ಯಾಕುಬ್‌ ವಾಡ್ಲೆಚ್‌ ಈ ಟೂರ್ನಿಗೆ ಗೈರಾಗಿದ್ದಾರೆ.

ಇದನ್ನೂ ಓದಿ Neeraj Chopra: 2 ತಿಂಗಳು ವಿದೇಶದಲ್ಲಿ ಕಠಿಣ ತರಬೇತಿ ಪಡೆಯಲಿದ್ದಾರೆ ನೀರಜ್ ಚೋಪ್ರಾ

ತೊಡೆಯ ಸ್ನಾಯು ನೋವಿನಿಂದ ವಿಶ್ರಾಂತಿ ಪಡೆದಿದ್ದ ನೀರಜ್​ ಈ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ಒಲಿಂಪಿಕ್ಸ್​ಗೆ ಸಿದ್ಧತೆ ನಡೆಸಲಿದ್ದೇನೆ ಎಂದು ಹೇಳಿದ್ದಾರೆ. ಕಳೆದ ತಿಂಗಳು ಭುವನೇಶ್ವರದಲ್ಲಿ ನಡೆದ ಫೆಡರೇಷನ್ ಕಪ್ ರಾಷ್ಟ್ರೀಯ ಸೀನಿಯರ್ ಅಥ್ಲೆಟಿಕ್ ಕೂಟದಲ್ಲಿ ಚಿನ್ನ ಗೆದ್ದ ಬಳಿಕ ನೀರಜ್​ ಯಾವುದೇ ಟೂರ್ನಿಯಲ್ಲಿ ಆಡಿರಲಿಲ್ಲ. ಈ ಟೂರ್ನಿ ಮಾತ್ರವಲ್ಲದೆ ಜುಲೈ 7ರಂದು ಪ್ಯಾರಿಸ್‌ ಡೈಮಂಡ್‌ ಲೀಗ್‌ನಲ್ಲಿಯೂ ನೀರಜ್​ ಕಣಕ್ಕಿಳಿಯಲಿದ್ದಾರೆ.

ಟೋಕಿಯೊದಲ್ಲಿ ನಡೆದಿದ್ದ ಒಲಿಂಪಿಕ್ಸ್​ನಲ್ಲಿ ಚಿನ್ನ ಗೆದ್ದು ಐತಿಹಾಸಿಕ ಸಾಧನೆ ಮಾಡಿರುವ ನೀರಜ್‌ ಈ ಬಾರಿಯೂ ಚಿನ್ನ ಗೆಲ್ಲಲಿ ಎನ್ನುವುದು ಶತ ಕೋಟಿ ಭಾರತೀಯರ ಆಶಯ ಮತ್ತು ಹಾರೈಕೆಯಾಗಿದೆ. 2024ರಲ್ಲಿ ನಡೆಯುವ ಪ್ಯಾರಿಸ್ ಒಲಿಂಪಿಕ್ಸ್ ಅತಿ ದೊಡ್ಡ ಮತ್ತು ಮಹತ್ವದ ಕ್ರೀಡಾಕೂಟವಾಗಿದೆ. ಸುಮಾರು 200 ದೇಶಗಳ 10,000 ಕ್ರೀಡಾಪಟುಗಳು ಒಲಿಂಪಿಕ್ ವೈಭವಕ್ಕಾಗಿ ಸ್ಪರ್ಧಿಸಲಿದ್ದಾರೆ. ಪ್ಯಾರಿಸ್ ತನ್ನ ಮೂರನೇ ಬಾರಿಗೆ ಆತಿಥೇಯ ನಗರವಾಗಿ (1900 ಮತ್ತು 1924 ರ ನಂತರ) ಟೂರ್ನಿಯ ಆತಿಥ್ಯ ವಹಿಸಿಕೊಳ್ಳಲಿದೆ. ಜುಲೈ 26 ರಿಂದ ಆಗಸ್ಟ್ 11ರ ತನಕ ಟೂರ್ನಿ ನಡೆಯಲಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೀಡೆ

Paris Olympics: ಪ್ಯಾರಿಸ್​ ಒಲಿಂಪಿಕ್ಸ್​ಗೂ ವಕ್ಕರಿಸಿದ ಕೊರೊನಾ ಸೋಂಕು; ಮೊದಲ ಪ್ರಕರಣ ಪತ್ತೆ

Paris Olympics: ಆಸ್ಟ್ರೇಲಿಯಾದ ಒಲಿಂಪಿಕ್ಸ್‌ ತಂಡದ ಮುಖ್ಯಸ್ಥೆ ಅನ್ನಾ ಮಿಯರ್ ತಮ್ಮ ದೇಶದ ಆಟಗಾರ್ತಿಗೆ ಕೋವಿಡ್​-19 ಸೋಂಕು ತಗುಲಿದ ವಿಚಾರವನ್ನು ಮಂಗಳವಾರ ಖಚಿತಪಡಿಸಿದ್ದಾರೆ. ಆದರೆ, ಸೋಂಕು ಕಾಣಿಸಿಕೊಂಡ ಅಥ್ಲೀಟ್‌ ಹೆಸರನ್ನು ಪ್ರಕಟಿಸಿಲ್ಲ.

VISTARANEWS.COM


on

Paris Olympics
Koo

ಪ್ಯಾರಿಸ್​: ಪ್ರತಿಷ್ಠಿತ ಪ್ಯಾರಿಸ್‌ ಒಲಿಂಪಿಕ್ಸ್‌(Paris Olympics) ಕ್ರೀಡಾಕೂಟ ಆರಂಭಕ್ಕೆ ಇನ್ನು ಕೇವಲ 3 ದಿನ ಬಾಕಿ ಇರುವಾಗಲೇ ಕ್ರೀಡಾಪಟುಗಳಿಗೆ ಆತಂತವೊಂದು ಶುರುವಾಗಿದೆ. ಇಡೀ ಜಗತ್ತನ್ನೇ ತಲ್ಲಣಗೊಳಿಸಿದ್ದ ಕೋವಿಡ್ ವೈರಸ್​ ಇದೀಗ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿಯೂ(Paris Olympics 2024) ಕಾಣಿಸಿಕೊಂಡಿದೆ. ಮೊದಲ ಪ್ರಕರಣವಾಗಿ ಆಸ್ಟ್ರೇಲಿಯಾದ ವಾಟರ್‌ ಪೋಲೊ ತಂಡದ ಆಟಗಾರ್ತಿಯೊಬ್ಬರಲ್ಲಿ ಕೋವಿಡ್​ ಪಾಸಿಟಿವ್‌(First COVID case at Paris Olympics) ಕಂಡುಬಂದಿದೆ.

ಆಸ್ಟ್ರೇಲಿಯಾದ ಒಲಿಂಪಿಕ್ಸ್‌ ತಂಡದ ಮುಖ್ಯಸ್ಥೆ ಅನ್ನಾ ಮಿಯರ್ ತಮ್ಮ ದೇಶದ ಆಟಗಾರ್ತಿಗೆ ಕೋವಿಡ್​-19 ಸೋಂಕು ತಗುಲಿದ ವಿಚಾರವನ್ನು ಮಂಗಳವಾರ ಖಚಿತಪಡಿಸಿದ್ದಾರೆ. ಆದರೆ, ಸೋಂಕು ಕಾಣಿಸಿಕೊಂಡ ಅಥ್ಲೀಟ್‌ ಹೆಸರನ್ನು ಪ್ರಕಟಿಸಿಲ್ಲ. ಸೋಂಕಿತ ಕ್ರೀಡಾಪಟು ಜತೆಗಿದ್ದ ಉಳಿದವರನ್ನೂ ಪರೀಕ್ಷಿಸಲಾಗಿದ್ದು ಯಾರಲ್ಲೂ ಪಾಸಿಟಿವ್‌ ದೃಢಪಟ್ಟಿಲ್ಲ ಎಂದು ತಿಳಿದಿಬಂದಿದೆ. ಸದ್ಯ ಸೋಂಕು ಪೀಡಿತ ಆಟಗಾರ್ತಿಯನ್ನು ಕ್ವಾರಂಟೈನ್​ನಲ್ಲಿ​ ಇರುವಂತೆ ಸೂಚನೆ ನೀಡಲಾಗಿದೆ. ಯಾರು ಆತಂಕಪಡುವ ಅಗತ್ಯವಿಲ್ಲ ಎಂದು ಫ್ರಾನ್ಸ್‌ನ ಆರೋಗ್ಯ ಸಚಿವ ಫ್ರೆಡರಿಕ್‌ ವ್ಯಾಲೆಟಾಕ್ಸ್‌ ಹೇಳಿದ್ದಾರೆ.

100 ವರ್ಷಗಳ ಬಳಿಕ ಪ್ಯಾರಿಸ್​ ಆತಿಥ್ಯ


ಪ್ಯಾರಿಸ್‌ ಆತಿಥ್ಯದಲ್ಲಿ ನಡೆಯಲಿರುವ 3ನೇ ಒಲಿಂಪಿಕ್ಸ್‌ ಕೀಡಾಕೂಟ ಇದಾಗಿದೆ. ಮೊದಲ ಒಲಿಂಪಿಕ್ಸ್‌ ನಡೆದದ್ದು 1900ರಲ್ಲಿ. ಇದಾದ ಬಳಿಕ 1924ರಲ್ಲಿ ಆತಿಥ್ಯ ವಹಿಸಿತ್ತು. ಇದೀಗ ಬರೋಬ್ಬರಿ 100 ವರ್ಷಗಳ ಬಳಿಕ ಇಲ್ಲಿ ಪ್ಯಾರಿಸ್​ನಲ್ಲಿ ಒಲಿಂಪಿಕ್ಸ್​ ನಡೆಯುತ್ತಿದೆ. ಈ ಬಾರಿಯ ಒಲಿಂಪಿಕ್ಸ್​ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಒಲಿಂಪಿಕ್ಸ್​ ಇತಿಹಾಸದಲ್ಲೇ ವಿಶೇಷ ಮಹತ್ವ ಪಡೆದಿದೆ. ಇದೇ ಮೊದಲ ಬಾರಿಗೆ ಕ್ರೀಡಾಂಗಣದ ಹೊರಗಡೆ ನಡೆಯುವ ಉದ್ಘಾಟನಾ ಸಮಾರಂಭ ಇದಾಗಿದೆ. 10,500ಕ್ಕೂ ಹೆಚ್ಚು ಅಥ್ಲೀಟ್‌ಗಳು ಪ್ಯಾರಿಸ್‌ನಿಂದ ಸುಮಾರು 6 ಕಿಲೋಮೀಟರ್‌ ವರೆಗೆ ಬೋಟ್‌ಗಳಲ್ಲೇ ಪರೇಡ್‌ ನಡೆಸಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸೀನ್ ನದಿಯಲ್ಲಿ ಉದ್ಘಾಟನಾ ಸಮಾರಂಭ


ಉದ್ಘಾಟನಾ ಸಮಾರಂಭ(paris olympics 2024 opening ceremony) ಜುಲೈ 26ರಂದು ಸೀನ್ ನದಿಯಲ್ಲಿ ಸಂಜೆ 7.30ಕ್ಕೆ ಅದ್ಧೂರಿ ಕಾರ್ಯಕ್ರಮದೊಂದಿಗೆ ನೆರವೇರಲಿದೆ. ಕ್ರೀಡಾಕೂಟ ಜುಲೈ 26ರಿಂದ ಆರಂಭವಾಗಿ, ಆಗಸ್ಟ್‌ 11ರವರೆಗೆ ನಡೆಯಲಿದೆ. ಪ್ಯಾರಾಲಿಂಪಿಕ್ಸ್‌ ಆಗಸ್ಟ್‌ 28 ರಿಂದ ಸೆಪ್ಟೆಂಬರ್‌ 8ರವರೆಗೆ ನಿಗದಿಯಾಗಿದೆ. ಇದಕ್ಕೆ ಬೇಕಾದ ಎಲ್ಲ ಸಿದ್ಧತೆಯನ್ನು ಈಗಾಗಲೇ ಕ್ರೀಡಾಕೂಟದ ಆಯೋಜಕರು ಮಾಡಿದ್ದಾರೆ. ಗೇಮ್ಸ್‌ಗಾಗಿಯೇ ಇಲ್ಲಿನ ಸೀನ್‌ ನದಿಯನ್ನು ಸಾರ್ವಜನಿಕ ನಿಧಿಯಿಂದ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಿ ಈ ನದಿಯನ್ನು ಸ್ನಾನಮಾಡಲು ಯೋಗ್ಯವೆನಿಸುವ ರೀತಿಯಲ್ಲಿ ಸ್ವಚ್ಛ ಮಾಡಲಾಗಿದೆ.

ಇದನ್ನೂ ಓದಿ Paris Olympics 2024 : ಅಪಾಯಕಾರಿ ರಾಸಾಯನಿಕ ಪತ್ತೆ; ಪ್ಯಾರಿಸ್​ ಒಲಿಂಪಿಕ್ಸ್​​ ಬ್ರಾಂಡ್​​ನ ಬಾಟಲ್​​ಗಳಿಗೆ ನಿಷೇಧ

Continue Reading

ಕ್ರೀಡೆ

Womens Asia Cup: ಶಫಾಲಿ ಬ್ಯಾಟಿಂಗ್​ ಆರ್ಭಟ; ಭಾರತಕ್ಕೆ ಹ್ಯಾಟ್ರಿಕ್​ ಜಯ

Womens Asia Cup: ಶಫಾಲಿ ವಿಕೆಟ್​ ಪತನದ ಬಳಿಕ ಮಧ್ಯಮ ಕ್ರಮಾಂಕದಲ್ಲಿ ಆಡಲಿಳಿದ ಅನುಭವಿ ಆಟಗಾರ್ತಿ ಜೆಮಿಮಾ ರಾಡ್ರಿಗಸ್ ಆಕ್ರಮಣಕಾರಿ ಬ್ಯಾಟಿಂಗ್​ ನಡೆಸಿ 15 ಎಸೆತಗಳಿಂದ ಅಜೇಯ 28 ರನ್​ ಬಾರಿಸಿದರು.

VISTARANEWS.COM


on

Womens Asia Cup
Koo

ದಂಬುಲ್ಲಾ(ಶ್ರೀಲಂಕಾ): ಲೇಡಿ ಸೆಹವಾಗ್​ ಖ್ಯಾತಿಯ ಡ್ಯಾಶಿಂಗ್​ ಓಪನರ್​ ಶಫಾಲಿ ವರ್ಮಾ(81) ಅವರ ಪ್ರಚಂಡ ಬ್ಯಾಟಿಂಗ್ ಹಾಗೂ ಬೌಲರ್​ಗಳ ಸಂಘಟಿತ ಪ್ರದರ್ಶನದ ನೆರವು ಪಡೆದ ಭಾರತ ತಂಡ ಮಹಿಳಾ ಏಷ್ಯಾಕಪ್​ ಟಿ20 ಟೂರ್ನಿಯಲ್ಲಿ(Womens Asia Cup) ನೇಪಾಳ(India Women vs Nepal Women) ವಿರುದ್ಧ 82 ರನ್​ಗಳ ಗೆಲುವು ಸಾಧಿಸಿದೆ. ಈ ಮೂಲಕ ಆಡಿದ ಎಲ್ಲ ಪಂದ್ಯಗಳನ್ನು ಗೆದ್ದು ಅಜೇಯವಾಗಿ ಸೆಮಿಫೈನಲ್​ ಹಂತಕ್ಕೇರಿದೆ.

ಇಲ್ಲಿನ ರಂಗಿರಿ ದಂಬುಲ್ಲಾ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ(Rangiri Dambulla International Stadium) ನಡೆದ ಅಂತಿಮ ಲೀಗ್​ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಭಾರತ ತಂಡ ಆರಂಭಿಕ ಆಟಗಾರ್ತಿಯಾದ ದಯಾಳನ್‌ ಹೇಮಲತಾ(47) ಮತ್ತು ಶಫಾಲಿ ವರ್ಮಾ ಅವರ ಬಿರುಸಿನ ಬ್ಯಾಟಿಂಗ್​ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್​ಗೆ 178 ರನ್​ ಪೇರಿಸಿತು. ಗುರಿ ಬೆನ್ನಟ್ಟಿದ ನೇಪಾಳ ಆರಂಭದಲ್ಲೇ ಸತತವಾಗಿ ವಿಕೆಟ್​ ಕಳೆದುಕೊಂಡು ಅಂತಿಮವಾಗಿ  9 ವಿಕೆಟ್​ಗೆ 96 ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು.

ಟೂರ್ನಿಯ ಆರಂಭಿಕ ಪಂದ್ಯದಲ್ಲಿ ಯುಎಇ ವಿರುದ್ಧ ಆರು ವಿಕೆಟ್​ ಗೆಲುವಿನೊಂದಿಗೆ ಐತಿಹಾಸಿಕ ಸಾಧನೆ ಮಾಡಿದ್ದ ನೇಪಾಳ ತಂಡ ಇಂದಿನ ಪಂದ್ಯದಲ್ಲಿ ಭಾರತ ವಿರುದ್ಧ ದೊಡ್ಡ ಅಂತರದ ಗೆಲುವು ಸಾಧಿಸುತ್ತಿದ್ದರೆ ಪಾಕಿಸ್ತಾನವನ್ನು ಹಿಂದಿಕ್ಕಿ ಸೆಮಿಫೈನಲ್​ ಹಂತಕ್ಕೇರುವ ಅವಕಾಶವಿತ್ತು. ಆದರೆ ಸೋಲು ಕಂಡು ಈ ಅವಕಾಶದಿಂದ ವಂಚಿತವಾಯಿತು. ಭಾರತ ಪರ ಬೌಲಿಂಗ್​ನಲ್ಲಿ ಅರುಂಧತಿ ರೆಡ್ಡಿ(2), ದೀಪ್ತಿ ಶರ್ಮಾ(3), ರಾಧಾ ಯಾದವ್​(2) ವಿಕೆಟ್​ ಕಿತ್ತು ಮಿಂಚಿದರು.

ಉತ್ತಮ ಆರಂಭ ಪಡೆದ ಭಾರತ


ಮೊದಲು ಬ್ಯಾಟಿಂಗ್​ ನಡೆಸಿದ ಭಾರತ ಪರ ಆರಂಭಿಕ ಆಟಗಾರ್ತಿಯಾದ ದಯಾಳನ್‌ ಹೇಮಲತಾ ಮತ್ತು ಶಫಾಲಿ ವರ್ಮಾ ಜಿದ್ದಿಗೆ ಬಿದ್ದವರಂತೆ ಬ್ಯಾಟಿಂಗ್​ ನಡೆಸಿದರು. ಉಭಯ ಆಟಗಾರ್ತಿಯರ ಈ ಬ್ಯಾಟಿಂಗ್​ ಪೈಪೋಟಿಯಿಂದಾಗಿ ತಂಡ ಉತ್ತಮ ಆರಂಭ ಪಡೆಯಿತು. ಮೊದಲ ವಿಕೆಟ್​ಗೆ ಈ ಜೋಡಿ ಬರೋಬ್ಬರಿ 122 ರನ್​ ಒಟ್ಟುಗೂಡಿಸಿತು. ಬಿರುಸಿನ ಬ್ಯಾಟಿಂಗ್​ ನಡೆಸುತ್ತಿದ್ದ ಹೇಮಲತಾ 47 ರನ್​ ಗಳಿಸಿದ್ದ ವೇಳೆ ವಿಕೆಟ್​ ಕೈಚೆಲ್ಲಿದರು. ಕೇವಲ 3 ರನ್​ ಅಂತೆದಿಂದ ಅರ್ಧಶತಕ ತಪ್ಪಿಸಿಕೊಂಡರು. ಅವರ ಈ ಸೊಗಸಾದ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ 5 ಬೌಂಡರಿ ಮತ್ತು 1 ಸಿಕ್ಸರ್​ ದಾಖಲಾಯಿತು.

ಇದನ್ನೂ ಓದಿ

ದಾಖಲೆ ಬರೆದ ಶಫಾಲಿ


ಜತೆಗಾರ್ತಿ ಹೇಮಲತಾ ವಿಕೆಟ್​ ಬಿದ್ದರೂ ಕೂಡ ಶಫಾಲಿ ಬ್ಯಾಟಿಂಗ್​ ಆರ್ಭಟಕ್ಕೇನು ಅಡ್ಡಿಯಾಗಲಿಲ್ಲ. ಅವರು ಮುನ್ನುಗ್ಗಿ ಬಾರಿಸುತ್ತಲೇ ಇದ್ದರು. ಕೇವಲ 26 ಎಸೆತಗಳಿಂದ ಅರ್ಧಶತಕ ಪೂರ್ತಿಗೊಳಿಸಿದರು. ಇದು ಅವರ 10ನೇ ಟಿ20 ಅರ್ಧಶತಕ. ಇನ್ನೇನು ಶತಕ ಬಾರಿಸುತ್ತಾರೆ ಎನ್ನುವಷ್ಟರಲ್ಲಿ ಅವಸರ ಮಾಡಿಕೊಂಡು ಸ್ಟಂಪ್ಡ್​ ಆಗಿ ವಿಕೆಟ್​ ಕಳೆದುಕೊಂಡರು. 48 ಎಸೆತ ಎದುರಿಸಿದ ಶಫಾಲಿ 12 ಬೌಂಡರಿ ಮತ್ತು 1 ಸಿಕ್ಸರ್​ ನೆರವಿನಿಂದ 81 ರನ್​ ಬಾರಿಸಿದರು. ಇದೇ ವೇಳೆ ಏಷ್ಯಾಕಪ್​ ಟೂರ್ನಿಯಲ್ಲಿ ಭಾರತ ಪರ ಅತ್ಯಧಿಕ ವೈಯಕ್ತಿಕ ರನ್​ ಬಾರಿಸಿದ 2ನೇ ಆಟಗಾರ್ತಿ ಎನಿಸಿಕೊಂಡರು. ದಾಖಲೆ ಮಾಜಿ ಆಟಗಾರ್ತಿ ಮಿಥಾಲಿ ರಾಜ್​ ಹೆಸರಿನಲ್ಲಿದೆ. ಮಿಥಾಲಿ 2018 ರಲ್ಲಿ ಮಲೇಷ್ಯಾ ವಿರುದ್ಧ ಅಜೇಯ 97 ರನ್​ ಬಾರಿಸಿದ್ದರು. 2022 ರಲ್ಲಿ ಶ್ರೀಲಂಕಾ ವಿರುದ್ಧ 76 ರನ್​ ಬಾರಿಸಿದ್ದ ಜೆಮಿಮಾ ರಾಡ್ರಿಗಸ್ ದಾಖಲೆ ಪತನಗೊಂಡಿತು. ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 3 ಸಾವಿರ ರನ್​ ಪೂರೈಸಿದ ದಾಖಲೆಯನ್ನೂ ಕೂಡ ಶಫಾಲಿ ಈ ಪಂದ್ಯದಲ್ಲಿ ನಿರ್ಮಿಸಿದರು.

ಶಫಾಲಿ ವಿಕೆಟ್​ ಪತನದ ಬಳಿಕ ಮಧ್ಯಮ ಕ್ರಮಾಂಕದಲ್ಲಿ ಆಡಲಿಳಿದ ಅನುಭವಿ ಆಟಗಾರ್ತಿ ಜೆಮಿಮಾ ರಾಡ್ರಿಗಸ್ ಆಕ್ರಮಣಕಾರಿ ಬ್ಯಾಟಿಂಗ್​ ನಡೆಸಿ 15 ಎಸೆತಗಳಿಂದ ಅಜೇಯ 28 ರನ್​ ಬಾರಿಸಿದರು. ರಿಚಾ ಘೋಷ್​ 6 ರನ್​ ಗಳಿಸಿ ಅಜೇಯರಾಗಿ ಉಳಿದರು. ಎಸ್​ ಸಜನಾ 10 ರನ್​ ಬಾರಿಸಿದರು. ನೇಪಾಳ ಪರ ಸೀತಾ ರಾಣಾ ಮಗರ್ 25 ರನ್​ ವೆಚ್ಚದಲ್ಲಿ 2 ವಿಕೆಟ್​ ಕಿತ್ತರು.

ಹರ್ಮನ್​ಪ್ರೀತ್​ಗೆ ವಿಶ್ರಾಂತಿ

ಖಾಯಂ ನಾಯಕಿ ಹರ್ಮನ್​ಪ್ರೀತ್​ ಕೌರ್​ ಅನುಪಸ್ಥಿತಿಯಲ್ಲಿ ಸ್ಮೃತಿ ಮಂಧಾನ ಹಂಗಾಮಿಯಾಗಿ ತಂಡವನ್ನು ಮುನ್ನಡೆಸಿದರು. ಆದರೆ ಅವರು ಬ್ಯಾಟಿಂಗ್​ ನಡೆಸಲಿಲ್ಲ. ಯುವ ಆಟಗಾರ್ತಿಯರಿಗೆ ಅವಕಾಶ ನೀಡಿದರು.

Continue Reading

ಕ್ರೀಡೆ

Manika Batra: ಪ್ಯಾರಿಸ್​ನಲ್ಲಿ ಪದಕ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಮಣಿಕಾ ಬಾತ್ರಾ

Manika Batra: ಟೋಕಿಯೊದಲ್ಲಿ ನಡೆದಿದ್ದ ಒಲಿಂಪಿಕ್ಸ್​ನಲ್ಲಿ ಮಣಿಕಾ ಬಾತ್ರಾ ಮಹಿಳಾ ಸಿಂಗಲ್ಸ್‌ನಲ್ಲಿ 3ನೇ ಸುತ್ತಿನಲ್ಲಿ ಸೋಲು ಕಂಡು ಟೂರ್ನಿಯಿಂದ ಹೊರಬಿದ್ದಿದ್ದರು.

VISTARANEWS.COM


on

Manika Batra
Koo

ನವದೆಹಲಿ: ಭಾರತದ ಖ್ಯಾತ ಟೇಬಲ್‌ ಟೆನಿಸ್‌(Indian table tennis player) ಆಟಗಾರ್ತಿ ಮಣಿಕಾ ಬಾತ್ರಾ(Manika Batra) ಪ್ಯಾರಿಸ್​ ಒಲಿಂಪಿಕ್ಸ್(Paris Olympics 2024)​ನಲ್ಲಿ ಪದಕ ಗೆಲ್ಲುವುದೇ ನನ್ನ ಪ್ರಮುಖ ಗುರಿ ಎಂದಿದ್ದಾರೆ. ಜತೆಗೆ ಕಳೆದ ಟೋಕಿಯೋದಲ್ಲಿ ಮಾಡಿದ ತಪ್ಪನ್ನು ಮತ್ತೆ ಮಾಡಲಾರೆ ಎಂದು ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಮಣಿಕಾ ಬಾತ್ರಾ, “ಕಳೆದ ಒಲಿಂಪಿಕ್ಸ್‌ ವೇಳೆ ಕೆಲವು ತಪ್ಪುಗಳಾದವು. ಈಗ ನನ್ನ ಮನಸ್ಥಿತಿ ಬದಲಾಗಿದೆ. ಹೆಚ್ಚು ಆತ್ಮವಿಶ್ವಾಸದಿಂದ ಇದ್ದೇನೆ. ಈ ಬಾರಿ ಎಚ್ಚರಿಕೆಯಿಂದ ಮತ್ತು ಎಲ್ಲ ಪೂರ್ವ ಸಿದ್ಧತೆಯೊಂದಿಗೆ ಆಡುವ ಮೂಲಕ ಪದಕವೊಂದನ್ನು ಗೆಲ್ಲುವುದು ನನ್ನ ಪ್ರಮುಖ ಗುರಿ” ಎಂದು ಹೇಳಿದ್ದಾರೆ. ಈ ಬಾರಿ ಒಟ್ಟು ಟೇಬಲ್‌ ಟೆನಿಸ್​ನಲ್ಲಿ 8 ಮಂದಿ ಆಟಗಾರರು ಕಣಕ್ಕಿಳಿಯಲಿದ್ದಾರೆ.

ಟೋಕಿಯೊದಲ್ಲಿ ನಡೆದಿದ್ದ ಒಲಿಂಪಿಕ್ಸ್​ನಲ್ಲಿ ಮಣಿಕಾ ಬಾತ್ರಾ ಮಹಿಳಾ ಸಿಂಗಲ್ಸ್‌ನಲ್ಲಿ 3ನೇ ಸುತ್ತಿನಲ್ಲಿ ಸೋಲು ಕಂಡು ಟೂರ್ನಿಯಿಂದ ಹೊರಬಿದ್ದಿದ್ದರು. ಗೋಲ್ಡ್‌ಕೋಸ್ಟ್‌ ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಚಿನ್ನ ಗೆಲ್ಲುವ ಮೂಲಕ ಮಣಿಕಾ ಎಲ್ಲರ ಗಮನ ಸೆಳೆದಿದ್ದರು. ಏಷ್ಯಾ ಕಪ್‌ ಟೇಬಲ್ ಟೆನಿಸ್(Asian Cup Table Tennis) ಟೂರ್ನಿಯಲ್ಲಿ ಪದಕ ಗೆದ್ದ ಭಾರತದ ಮೊದಲ ಆಟಗಾರ್ತಿ ಎಂಬ ಹಿರಿಮೆಯೂ ಇವರದ್ದಾಗಿದೆ. ಕಂಚಿನ ಪದಕ ಜಯಿಸಿದ್ದರು.

ಈ ಬಾರಿಯ ಒಲಿಂಪಿಕ್ಸ್​ನಲ್ಲಿ 117 ಕ್ರೀಡಾಪಟುಗಳು ಪದಕ ನಿರೀಕ್ಷೆಯೊಂದಿಗೆ ಸ್ಪರ್ಧಿಸಲಿದ್ದಾರೆ. ಕಳೆದ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತದ 119 ಮಂದಿ ಕ್ರೀಡಾಪಟುಗಳು ಪ್ರತಿನಿಧಿಸಿದ್ದರು.

ಅಥ್ಲೆಟಿಕ್ಸ್​ನಲ್ಲಿ 29 ಸ್ಪರ್ಧಿಗಳು ಭಾರತವನ್ನು ಪ್ರತಿನಿಧಿಸಲಿದ್ದಾರೆ. 18 ಪುರುಷರು ಹಾಗೂ 11 ಮಹಿಳೆಯರು ಸೇರಿದ್ದಾರೆ. ಆರಂಭದಲ್ಲಿ ಅಥ್ಲೀಟ್​ಗಳ ಸಂಖ್ಯೆ​ 30 ಇತ್ತು. ಆದರೆ ವನಿತಾ ಶಾಟ್‌ಪುಟರ್‌ ಅಭಾ ಖತುವಾ ಗೈರಿನಿಂದ 29ಕ್ಕೆ ಇಳಿಯಿತು. ಆದರೆ ಅವರನ್ನು ಕೈಬಿಟ್ಟ ಬಗ್ಗೆ ಯಾವುದೇ ಕಾರಣ ಅಥವಾ ವಿವರಣೆ ನೀಡಲಾಗಿಲ್ಲ.  29 ಸದಸ್ಯರನ್ನು ಒಳಗೊಂಡ ಟ್ರ್ಯಾಕ್ ಆ್ಯಂಡ್ ಫೀಲ್ಡ್ ತಂಡಕ್ಕೆ ಟೋಕಿಯೊ ಒಲಿಂಪಿಕ್​ ಚಿನ್ನದ ಪದಕ ವಿಜೇತ, ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ನಾಯಕನಾಗಿದ್ದಾರೆ.

ಇದನ್ನೂ ಓದಿ PR Sreejesh: ಪ್ಯಾರಿಸ್​ ಒಲಿಂಪಿಕ್ಸ್ ಕೊನೆಯ ಟೂರ್ನಿ ಎಂದು ಅಂತಾರಾಷ್ಟ್ರೀಯ ಹಾಕಿಗೆ ವಿದಾಯ ಘೋಷಿಸಿದ ಪಿಆರ್ ಶ್ರೀಜೇಶ್

ಶೂಟಿಂಗ್​ನಲ್ಲಿ ಒಟ್ಟು 21 ಮಂದಿ ಸ್ಥಾನ ಪಡೆದಿದ್ದಾರೆ. 10 ಮಂದಿ ಪುರುಷರು ಹಾಗೂ 11 ಮಂದಿ ಮಹಿಳಾ ಸ್ಪರ್ಧಿಗಳು ಕಾಣಿಸಿಕೊಂಡಿದ್ದಾರೆ. ಹಾಕಿ ತಂಡದಲ್ಲಿ 19 ಆಟಗಾರರಿದ್ದಾರೆ. ಟೇಬಲ್‌ ಟೆನಿಸ್​ನಲ್ಲಿ 8 ಮಂದಿ ಆಟಗಾರರು, ಬ್ಯಾಡ್ಮಿಂಟನ್​ನಲ್ಲಿ 7 ಮಂದಿ ಕಣಕ್ಕಿಳಿಯಲಿದ್ದಾರೆ. ಅವಳಿ ಒಲಿಂಪಿಕ್‌ ಪದಕ ಗೆದ್ದ ಪಿ.ವಿ. ಸಿಂಧು ಮೇಲೆ ಹ್ಯಾಟ್ರಿಕ್​ ಪದಕವೊಂದನ್ನು ನಿರೀಕ್ಷೆ ಮಾಡಲಾಗಿದೆ. ಉಳಿದಂತೆ ಕುಸ್ತಿ, ಆರ್ಚರಿ ಮತ್ತು ಬಾಕ್ಸಿಂಗ್‌ನಲ್ಲಿ ತಲಾ 6 ಮಂದಿ ಸ್ಪರ್ಧಿಸಲಿದ್ದಾರೆ.

ಗಾಲ್ಫ್​ನಲ್ಲಿ 4, ಟೆನಿಸ್‌ನಲ್ಲಿ 3, ಈಜು ಮತ್ತು ಹಾಯಿದೋಣಿಯಲ್ಲಿ ತಲಾ ಇಬ್ಬರು ಕಣಕ್ಕಿಳಿಯಲಿದ್ದಾರೆ. ಈಕ್ವೇಸ್ಟ್ರಿಯನ್‌(ಕುದುರೆ ಸವಾರಿ), ಜೂಡೋ, ರೋಯಿಂಗ್‌ ಮತ್ತು ವೇಟ್‌ಲಿಫ್ಟಿಂಗ್‌ನಲ್ಲಿ ಒಬ್ಬರಷ್ಟೇ ಸ್ಪರ್ಧಿಸಲಿದ್ದಾರೆ. ಪಿ.ವಿ.ಸಿಂಧು(PV Sindhu) ಮತ್ತು ಹಿರಿಯ ಟೇಬಲ್ ಟೆನಿಸ್ ಆಟಗಾರ ಶರತ್ ಕಮಲ್(Sharath Kamal) ಉದ್ಘಾಟನಾ ಸಮಾರಂಭದಲ್ಲಿ ಭಾರತದ ಧ್ವಜಧಾರಿಯಾಗಲಿದ್ದಾರೆ.

Continue Reading

ಕ್ರೀಡೆ

PR Sreejesh: ಪ್ಯಾರಿಸ್​ ಒಲಿಂಪಿಕ್ಸ್ ಕೊನೆಯ ಟೂರ್ನಿ ಎಂದು ಅಂತಾರಾಷ್ಟ್ರೀಯ ಹಾಕಿಗೆ ವಿದಾಯ ಘೋಷಿಸಿದ ಪಿಆರ್ ಶ್ರೀಜೇಶ್

PR Sreejesh: ಕಳೆದ ಬಾರಿ ಕಂಚಿನ ಪದಕ ಜಯಿಸಿದ್ದ ಭಾರತ ಹಾಕಿ ತಂಡ ಈ ಬಾರಿ ಹಾಲಿ ಚಾಂಪಿಯನ್‌ ಬೆಲ್ಜಿಯಂ, ಆಸ್ಟ್ರೇಲಿಯಾ, ಅರ್ಜೆಂಟೀನಾ, ನ್ಯೂಜಿಲ್ಯಾಂಡ್​ ಹಾಗೂ ಐರ್ಲೆಂಡ್‌ ಜತೆ ‘ಬಿ’ ಗುಂಪಿನಲ್ಲಿದೆ. ಜುಲೈ 27ರಂದು ಕಿವೀಸ್​ ವಿರುದ್ಧ ಆಡುವ ಮೂಲಕ ಭಾರತ ತನ್ನ ಅಭಿಯಾನ ಆರಂಭಿಸಲಿದೆ

VISTARANEWS.COM


on

PR Sreejesh
Koo

ಬೆಂಗಳೂರು: ಪ್ಯಾರಿಸ್​ ಒಲಿಂಪಿಕ್ಸ್(Paris Olympics 2024)​ ಕ್ರೀಡಾಕೂಟಕ್ಕೆ ಇನ್ನು ಕೇವಲ ಮೂರು ದಿನ ಮಾತ್ರ ಬಾಕಿ ಉಳಿದಿವೆ. ಈ ಬಾರಿ 117 ಭಾರತೀಯ ಕ್ರೀಡಾಪಟುಗಳು ಪದಕ ನಿರೀಕ್ಷೆಯೊಂದಿಗೆ ಸ್ಪರ್ಧಿಸಲಿದ್ದಾರೆ. ಒಲಿಂಪಿಕ್ಸ್​ ಆರಂಭಕ್ಕೂ ಮುನ್ನ ಭಾರತೀಯ ಹಾಕಿ ತಂಡದ ಹಿರಿಯ ಆಟಗಾರ, ಗೋಲ್ ಕೀಪರ್ ಪಿಆರ್ ಶ್ರೀಜೇಶ್ (PR Sreejesh) ಅವರು ಅಂತಾರಾಷ್ಟ್ರೀಯ ಹಾಕಿಗೆ (International Hockey) ವಿದಾಯ ಹೇಳಲು ನಿರ್ಧರಿಸಿದ್ದಾರೆ(PR Sreejesh Announces Retirement). ಪ್ಯಾರಿಸ್ ಒಲಿಂಪಿಕ್ಸ್ (Paris Olympics) ತನ್ನ ಕೊನೆಯ ಅಂತಾರಾಷ್ಟ್ರೀಯ ಕೂಟವಾಗಿರಲಿದೆ ಎಂದು ಹೇಳುವ ಮೂಲಕ ವಿದಾಯ ಘೋಷಿಸಿದ್ದಾರೆ. ಇದು ಅವರ ನಾಲ್ಕನೇ ಒಲಿಂಪಿಕ್ಸ್​ ಟೂರ್ನಿಯಾಗಿದೆ.

ಕೇರಳ ಮೂಲದ ಶ್ರೀಜೇಶ್ 2006ರಲ್ಲಿ ಭಾರತೀಯ ಹಾಕಿ ತಂಡಕ್ಕೆ ಪದಾರ್ಪಣೆ ಮಾಡಿದ್ದರು. ಕಳೆದ ಟೊಕಿಯೋ ಒಲಿಂಪಿಕ್ಸ್​ನಲ್ಲಿ ಭಾರತ ಕಂಚಿನ ಪದಕ ಗೆದ್ದುಕೊಂಡಿತ್ತು. ಭಾರತ ತಂಡದ ಈ ಪದಕ ಗೆಲುವಿನಲ್ಲಿ ಶ್ರೀಜೇಶ್ ಪ್ರಮುಖ ಪಾತ್ರವಹಿಸಿದ್ದರು. ವಿಶ್ವದ ಅತ್ಯುತ್ತಮ ಗೋಲ್ ಕೀಪರ್ ಎಂಬ ಪುರಸ್ಕಾರವೂ ಸಂದಿತ್ತು.

‘ನನ್ನ ಮೊದಲ ಕಿಟ್ ಖರೀದಿಸಲು ತಂದೆ ನಮ್ಮ ಹಸುವನ್ನು ಮಾರಾಟ ಮಾಡಿದ್ದು ನನಗೆ ಈಗಲೂ ನೆನಪಿದೆ. ಅವರ ತ್ಯಾಗವು ನನ್ನನ್ನು ಈ ಮಟ್ಟಕೆ ತಂದು ನಿಲ್ಲಿದೆ. ಮತ್ತು ದೊಡ್ಡ ಕನಸು ಕಾಣುವಂತೆ ಪ್ರೇರೇಪಿಸಿತು. ನನ್ನ ಕುಟುಂಬ, ತಂಡದ ಸಹ ಆಟಗಾರರು, ತರಬೇತುದಾರರು ಮತ್ತು ಅಭಿಮಾನಿಗಳ ಪ್ರೀತಿ ಮತ್ತು ಬೆಂಬಲಕ್ಕಾಗಿ ನಾನು ಶಾಶ್ವತವಾಗಿ ಕೃತಜ್ಞನಾಗಿದ್ದೇನೆ. ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಧನ್ಯವಾದಗಳು” ಎಂದು ಹೇಳುವ ಮೂಲಕ ತಮ್ಮ ನಿವೃತ್ತಿಯನ್ನು ಪ್ರಕಟಿಸಿದ್ದಾರೆ. ಒಲಿಂಪಿಕ್, ಏಷ್ಯನ್ ಚಾಂಪಿಯನ್ಸ್ ಟ್ರೋಫಿ, ಏಷ್ಯನ್ ಗೇಮ್ಸ್ ಪದಕ ಸಾಧನೆ ಶ್ರೀಜೇಶ್ ಅವರ ಅಂತಾರಾಷ್ಟ್ರೀಯ ವೃತ್ತಿಜೀವನದ ಪ್ರಮುಖ ಮೈಲುಗಲ್ಲು.

ಕಳೆದ ಬಾರಿ ಕಂಚಿನ ಪದಕ ಜಯಿಸಿದ್ದ ಭಾರತ ಹಾಕಿ ತಂಡ ಈ ಬಾರಿ ಹಾಲಿ ಚಾಂಪಿಯನ್‌ ಬೆಲ್ಜಿಯಂ, ಆಸ್ಟ್ರೇಲಿಯಾ, ಅರ್ಜೆಂಟೀನಾ, ನ್ಯೂಜಿಲ್ಯಾಂಡ್​ ಹಾಗೂ ಐರ್ಲೆಂಡ್‌ ಜತೆ ‘ಬಿ’ ಗುಂಪಿನಲ್ಲಿದೆ. ಜುಲೈ 27ರಂದು ಕಿವೀಸ್​ ವಿರುದ್ಧ ಆಡುವ ಮೂಲಕ ಭಾರತ ತನ್ನ ಅಭಿಯಾನ ಆರಂಭಿಸಲಿದೆ. ಒಲಿಂಪಿಕ್ಸ್‌ ಇತಿಹಾಸವನ್ನೊಮ್ಮೆ ಕೆದಕಿದರೆ ಪುರುಷರ ಹಾಕಿಯಲ್ಲಿ 8 ಬಾರಿ ಸ್ವರ್ಣ ಗೆದ್ದ ಏಕೈಕ ತಂಡವೆಂಬ ಹೆಗ್ಗಳಿಕೆ ಭಾರತ ಉಳಿಸಿಕೊಂಡಿದೆ.

ಇದನ್ನೂ ಓದಿ Raghu Dixit : ಪ್ಯಾರಿಸ್​ ಒಲಿಂಪಿಕ್ಸ್​ಗೆ ಕನ್ನಡ ಹಾಡುಗಳ ಮೆರುಗು ; ರಘು ದೀಕ್ಷಿತ್ ತಂಡದಿಂದ ವಿಶೇಷ ಕಾರ್ಯಕ್ರಮ

ಭಾರತ ತಂಡ ಜುಲೈ 29ರಂದು ಅರ್ಜೆಂಟೀನಾ, 30ರಂದು ಐರ್ಲೆಂಡ್‌, ಆಗಸ್ಟ್ 1ರಂದು ಬೆಲ್ಜಿಯಂ, ಆಗಸ್ಟ್​ 2ರಂದು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ. ಕಳೆದ ಬಾರಿ ಕಂಚು ಗೆದ್ದ ಭಾರತ ಈ ಬಾರಿ ಚಿನ್ನದ ಪದಕ್ಕೆ ಕೊರಳೊಡ್ಡಲಿ ಎನ್ನುವುದು ಭಾರತೀಯರ ಆಶಯ. ‘ಎ’ ಗುಂಪಿನಲ್ಲಿ ನೆದರ್ಲೆಂಡ್ಸ್‌, ಸ್ಪೇನ್‌, ಜರ್ಮನಿ, ಫ್ರಾನ್ಸ್, ಬ್ರಿಟನ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳಿವೆ. ಕ್ವಾರ್ಟರ್‌ಫೈನಲ್ ಪಂದ್ಯಗಳು ಆಗಸ್ಟ್​ 4ರಂದು ಮತ್ತು ಸೆಮಿಫೈನಲ್ ಪಂದ್ಯಗಳು ಆಗಸ್ಟ್​ 6 ರಂದು ನಡೆಯಲಿವೆ. ಕಂಚಿನ ಪದಕದ ಮತ್ತು ಫೈನಲ್ ಪಂದ್ಯ ಆಗಸ್ಟ್​ 8ರಂದು ನಡೆಯಲಿವೆ.

ಪ್ಯಾರಿಸ್​ನಲ್ಲಿ ನಡೆಯುವ ಒಲಿಂಪಿಕ್ಸ್ ಅತಿ ದೊಡ್ಡ ಮತ್ತು ಮಹತ್ವದ ಕ್ರೀಡಾಕೂಟವಾಗಿದೆ. ಸುಮಾರು 200 ದೇಶಗಳ 10,000 ಕ್ರೀಡಾಪಟುಗಳು ಒಲಿಂಪಿಕ್ ವೈಭವಕ್ಕಾಗಿ ಸ್ಪರ್ಧಿಸಲಿದ್ದಾರೆ. ಪ್ಯಾರಿಸ್ ತನ್ನ ಮೂರನೇ ಬಾರಿಗೆ ಆತಿಥೇಯ ನಗರವಾಗಿ (1900 ಮತ್ತು 1924 ರ ನಂತರ) ಟೂರ್ನಿಯ ಆತಿಥ್ಯ ವಹಿಸಿಕೊಳ್ಳಲಿದೆ. ಜುಲೈ 26 ರಿಂದ ಆಗಸ್ಟ್ 11ರ ತನಕ ಟೂರ್ನಿ ನಡೆಯಲಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

Continue Reading
Advertisement
Vastu Tips
ಧಾರ್ಮಿಕ1 min ago

Vastu Tips: ಮಕ್ಕಳ ಮದುವೆ ವಿಳಂಬವಾಗುತ್ತಿದೆಯೆ? ವಾಸ್ತು ದೋಷವೂ ಕಾರಣವಿರಬಹುದು!

Ayushman Card
ಮನಿ-ಗೈಡ್6 mins ago

Ayushamn Card: 5 ಲಕ್ಷದವರೆಗೆ ಉಚಿತ ಚಿಕಿತ್ಸೆ; ಆಯುಷ್ಮಾನ್ ಕಾರ್ಡ್ ಪಡೆಯುವುದು ಹೇಗೆ?

karnataka Weather Forecast
ಮಳೆ21 mins ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

Khajjiar Tour
ಪ್ರವಾಸ27 mins ago

Khajjiar Tour: ಖಜ್ಜಿಯಾರ್! ಇದು ಹಿಮಾಲಯದ ತಪ್ಪಲಿನಲ್ಲಿರುವ ಮಿನಿ ಸ್ವಿಟ್ಜರ್ಲೆಂಡ್!

Allergies During Monsoon
ಆರೋಗ್ಯ51 mins ago

Allergies During Monsoon: ಮಳೆಗಾಲದಲ್ಲಿ ಅಲರ್ಜಿ ಸಮಸ್ಯೆಯಿಂದ ಪಾರಾಗುವುದು ಹೇಗೆ?

Dina Bhavishya
ಭವಿಷ್ಯ2 hours ago

Dina Bhavishya : ಈ ರಾಶಿಯವರಿಗೆ ಸಂಗಾತಿಯ ಮಧುರ ಪ್ರೀತಿ ಸಿಗಲಿದೆ

INDIA Bloc To Protest
ದೇಶ7 hours ago

INDIA Bloc To Protest: ಬಜೆಟ್‌ ತಾರತಮ್ಯ ಖಂಡಿಸಿ ನಾಳೆ ಸಂಸತ್ತಿನಲ್ಲಿ ‘ಇಂಡಿಯಾ’ ಒಕ್ಕೂಟದಿಂದ ಪ್ರತಿಭಟನೆ

Paris Olympics
ಕ್ರೀಡೆ8 hours ago

Paris Olympics: ಪ್ಯಾರಿಸ್​ ಒಲಿಂಪಿಕ್ಸ್​ಗೂ ವಕ್ಕರಿಸಿದ ಕೊರೊನಾ ಸೋಂಕು; ಮೊದಲ ಪ್ರಕರಣ ಪತ್ತೆ

Union Minister Pralhad Joshi statement about Union Budget
ಕರ್ನಾಟಕ8 hours ago

Pralhad Joshi: ನವಭಾರತ ನಿರ್ಮಾಣಕ್ಕೆ ಅತ್ಯುತ್ತಮ ಬಜೆಟ್: ಸಚಿವ ಪ್ರಲ್ಹಾದ್‌ ಜೋಶಿ ಶ್ಲಾಘನೆ

The Kaftan kannada Album Song Release
ಕರ್ನಾಟಕ8 hours ago

The Kaptan Song: ‘ದ ಕಪ್ತಾನ್’ ಆಲ್ಬಂ ಸಾಂಗ್ ಬಿಡುಗಡೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ21 mins ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ13 hours ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ13 hours ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ18 hours ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ4 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ5 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ5 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ6 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ6 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

ಟ್ರೆಂಡಿಂಗ್‌