Neeraj Chopra: ರತನ್ ಟಾಟಾ ಭೇಟಿಯಾಗಿ ಹೃದಯಸ್ಪರ್ಶಿ ಸಂದೇಶ ಬರೆದ ನೀರಜ್ ಚೋಪ್ರಾ​ - Vistara News

ಕ್ರೀಡೆ

Neeraj Chopra: ರತನ್ ಟಾಟಾ ಭೇಟಿಯಾಗಿ ಹೃದಯಸ್ಪರ್ಶಿ ಸಂದೇಶ ಬರೆದ ನೀರಜ್ ಚೋಪ್ರಾ​

ವಿಶ್ವ ಚಾಂಪಿಯನ್‌ ನೀರಜ್‌ ಚೋಪ್ರಾ(Neeraj Chopra) ಅವರು ಭಾರತದ ಮಹೋನ್ನತ ಬಿಸಿನೆಸ್ ಮ್ಯಾಗ್ನೆಟ್ ರತನ್ ಟಾಟಾ(Ratan Tata) ಭೇಟಿಯಾಗಿ ತಮ್ಮ ಅನುಭವವನ್ನು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

VISTARANEWS.COM


on

Neeraj Chopra
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಭಾರತದ ಸ್ಟಾರ್​ ಜಾವೆಲಿನ್‌ ಎಸೆತಗಾರ, ಒಲಿಂಪಿಕ್‌ ಮತ್ತು ವಿಶ್ವ ಚಾಂಪಿಯನ್‌ ನೀರಜ್‌ ಚೋಪ್ರಾ(Neeraj Chopra) ಅವರು ಭಾರತದ ಮಹೋನ್ನತ ಬಿಸಿನೆಸ್ ಮ್ಯಾಗ್ನೆಟ್ ರತನ್ ಟಾಟಾ(Ratan Tata) ಭೇಟಿಯಾಗಿದ್ದಾರೆ. ಜತೆಗೆ ಈ ಭೇಟಿಯ ಕುರಿತು ಇನ್​ಸ್ಟಾಗ್ರಾಮ್​ನಲ್ಲಿ ತಮ್ಮ ಅನುಭವವನ್ನು ಕೂಡ ಬರೆದುಕೊಂಡಿದ್ದಾರೆ.

“ನಿಜವಾದ ದಾರ್ಶನಿಕ ಮತ್ತು ಸ್ಫೂರ್ತಿಯ ಚಿಲುಮೆ ಶ್ರೀ ರತನ್ ಟಾಟಾ ಸರ್ ಅವರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿದ್ದಕ್ಕೆ ಕೃತಜ್ಞ. ಬಹು ದಿನದ ಆಸೆ ಈಗ ಈಡೇರಿತು” ಎಂದು ನೀರಜ್ ಚೋಪ್ರಾ ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಇತ್ತೀಚೆಗೆ ನೀರಜ್​ ಅವರು ಸಾರ್ವಕಾಲಿಕ ಶ್ರೇಷ್ಠ ಟೆನ್ನಿಸ್ ಆಟಗಾರರಲ್ಲಿ ಒಬ್ಬರಾದ ರೋಜರ್ ಫೆಡರರ್(Roger Federer) ಅವರನ್ನು ಸ್ವಿಟ್ಜರ್ಲೆಂಡ್​ನಲ್ಲಿ ಭೇಟಿಯಾಗಿದ್ದರು.

ರೋಜರ್ ಫೆಡರರ್ ಅವರನ್ನು ಭೇಟಿಯಾದ ಬಗ್ಗೆ ಮುಕ್ತವಾಗಿ ಮಾತನಾಡಿದ್ದ ನೀರಜ್​, “ಟೆನ್ನಿಸ್ ಲೋಕದ ದಂತಕಥೆ ರೋಜರ್‌ ಫೆಡರರ್ ಅವರನ್ನು ಭೇಟಿಯಾಗುವ ಮೂಲಕ ದೀರ್ಘ ಕಾಲದ ನನ್ನ ಕನಸು ನನಸಾಗಿದೆ. ಅವರ ಕೌಶಲ್ಯ, ನಿಜವಾದ ಕ್ರೀಡಾ ಮನೋಭಾವ ಮತ್ತು ಅವರ ಸಾಮರ್ಥ್ಯವನ್ನು ನಾನು ಯಾವಾಗಲೂ ಮೆಚ್ಚಿದ್ದೇನೆ” ಎಂದು ಹೇಳಿದ್ದರು.  ಇದೇ ವೇಳೆ ನೀರಜ್​ ಅವರು ಏಷ್ಯನ್ ಗೇಮ್ಸ್‌ನಲ್ಲಿ ಧರಿಸಿದ್ದ ಭಾರತದ ಜೆರ್ಸಿಯನ್ನು ಫೆಡರರ್​ಗೆ ನೀಡಿ ಗೌರವಿಸಿದ್ದರು.

ಇದನ್ನೂ ಓದಿ Neeraj Chopra: ಚಿನ್ನದ ಹುಡುಗ ನೀರಜ್‌ ಚೋಪ್ರಾಗೆ ಸ್ವಿಸ್‌ ಪ್ರವಾಸೋದ್ಯಮ ಗೌರವ

ಸ್ವಿಟ್ಜರ್ಲೆಂಡ್‌ ಪ್ರವಾಸೋದ್ಯಮ ರಾಯಭಾರಿಯಾಗಿರುವ ನೀರಜ್‌ ಚೋಪ್ರಾ ಅವರನ್ನು ಇಲ್ಲಿನ ಪ್ರವಾಸೋದ್ಯಮ ಇಲಾಖೆ ವಿಶೇಷವಾಗಿ ಗೌರವ ಸೂಚಿಸಿತ್ತು. ಯುರೋಪ್‌ನ ಉನ್ನತ ಸ್ಥಳವಾದ ಜಂಗ್‌ಫ್ರಾಜೋಸ್‌ನಲ್ಲಿರುವ (Jungfraujoch,) ಪ್ರಖ್ಯಾತ ಐಸ್‌ ಪ್ಯಾಲೇಸ್‌ನಲ್ಲಿ(Ice Palace) ನೀರಜ್​ ಅವರ ಫ‌ಲಕವೊಂದನ್ನು ಸ್ಥಾಪಿಸಿ ಗೌರವಿಸಿತ್ತು. ಈ ವೇಳೆ ಪ್ರವಾಸಿಗರ ಆಕರ್ಷಣೆಗಾಗಿ ನೀರಜ್ ತಮ್ಮ ಜಾವೆಲಿನ್‌ ಒಂದನ್ನು ದೇಣಿಗೆಯಾಗಿ ನೀಡಿದ್ದರು. ಈ ಜಾವೆಲಿನ್‌ ಅನ್ನು ಫ‌ಲಕದ ಬದಿಯಲ್ಲಿ ಇರಿಸಲಾಗಿದೆ. ಫೆಡರರ್ ಕೂಡ ಸ್ವಿಟ್ಜರ್ಲೆಂಡ್‌ ಪ್ರವಾಸೋದ್ಯಮ ರಾಯಭಾರಿಯಲ್ಲಿ ಒಬ್ಬರಾಗಿದ್ದಾರೆ. 

2ನೇ ಒಲಿಂಪಿಕ್ ಪದಕ ನಿರೀಕ್ಷೆಯಲ್ಲಿ ನೀರಜ್…


ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ನೀರಜ್​ ಚೋಪ್ರಾ ಕಳೆದ ವರ್ಷ ನಡೆದಿದ್ದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದರು. ಅಲ್ಲದೆ ಡೈಮಂಡ್ ಲೀಗ್​ನಲ್ಲಿ ಬೆಳ್ಳಿ ಗೆದ್ದಿದ್ದರು. 26 ವರ್ಷದ ನೀರಜ್ ಒಲಿಂಪಿಕ್ಸ್‌ನ ಟ್ರ್ಯಾಕ್‌ ಇವೆಂಟ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಯನ್ನು ಹೊಂದಿದ್ದಾರೆ. ಇದೇ ವರ್ಷ ಪ್ಯಾರಿಸ್​ನಲ್ಲಿ ನಡೆಯುವ ಒಲಿಂಪಿಕ್ಸ್​ಗೆ ಸಿದ್ಧತೆ ಆರಂಭಿಸಿರುವ ನೀರಜ್​ ಇಲ್ಲಿಯೂ ಚಿನ್ನ ಗೆಲ್ಲುವ ಗುರಿ ಇಟ್ಟುಕೊಂಡಿದ್ದಾರೆ. ಗೆದ್ದರೆ ಸತತ 2ನೇ ಒಲಿಂಪಿಕ್ಸ್​ ಚಿನ್ನ ಗೆದ್ದ ಸಾಧಕರಾಗಲಿದ್ದಾರೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

RCB: ಆರ್​ಸಿಬಿಯ ನಂಟು ಬಿಡದ ವಿಜಯ್​ ಮಲ್ಯ; ಟ್ವೀಟ್​ ಮೂಲಕ ಅಭಿನಂದನೆ

RCB: ಆರ್​ಸಿಬಿಯ ಗೆಲುವಿಗೆ ಫ್ರಾಂಚೈಸಿಯ ಮಾಜಿ ಮಾಲಿಕ ವಿಜಯ್​ ಮಲ್ಯ(Vijay Mallya) ಟ್ವೀಟ್​ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

VISTARANEWS.COM


on

RCB
Koo

ಲಂಡನ್​: ಶನಿವಾರ ತಡರಾತ್ರಿ ನಡೆದ ಐಪಿಎಲ್​ನ(IPL 2024) ರೋಚಕ ಪಂದ್ಯದಲ್ಲಿ ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು(Royal Challengers Bengaluru) ತಂಡ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್(Chennai Super Kings)​ ತಂಡವನ್ನು ಮಣಿಸಿ ಪ್ಲೇ ಆಫ್​ಗೆ ಪ್ರವೇಶಿಸಿತು. ಆರ್​ಸಿಬಿಯ ಗೆಲುವಿಗೆ ಫ್ರಾಂಚೈಸಿಯ ಮಾಜಿ ಮಾಲಿಕ ವಿಜಯ್​ ಮಲ್ಯ(Vijay Mallya) ಟ್ವೀಟ್​ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಈ ಮೂಲಕ ಆರ್​ಸಿಬಿ ಜತೆಗಿನ ನಂಟನ್ನು ಮುಂದುವರಿಸಿದ್ದಾರೆ.

ಇಲ್ಲಿನ ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಮಳೆ ಪೀಡಿತ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಆರ್​ಸಿಬಿ ವಿರಾಟ್​ ಕೊಹ್ಲಿ ಮತ್ತು ಫಾಫ್​ ಡುಪ್ಲೆಸಿಸ್​ ಮೊದಲ ವಿಕೆಟ್​ಗೆ ನಿರ್ಮಿಸಿದ ಭದ್ರ ಅಡಿಪಾಯದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 218 ರನ್​ ಬಾರಿಸಿತು. ಜವಾಬಿತ್ತ ಚೆನ್ನೈ ಈ ಬೃಹತ್​ ಮೊತ್ತವನ್ನು ಬೆನ್ನಟ್ಟಿದ ಚೆನ್ನೈ ಹಲವು ಏರಿಳಿತ ಕಂಡು ಕೊನೆಗೆ ತನ್ನ ಪಾಲಿನ ಆಟದಲ್ಲಿ 7 ವಿಕೆಟ್​ಗೆ 191 ರನ್​ ಗಳಿಸಲಷ್ಟೇ ಶಕ್ತವಾಗಿ ಸೋಲಿಗೆ ಶರಣಾಯಿತು. ಜತೆಗೆ ಟೂರ್ನಿಯಿಂದಲೂ ಹೊರಬಿದ್ದು ಮಾಜಿ ಚಾಂಪಿಯನ್​ ಎನಿಸಿಕೊಂಡಿತು.

ಇದನ್ನೂ ಓದಿ RCB vs CSK: ಇದು ಆರ್​ಸಿಬಿಯ ಹೊಸ ಅಧ್ಯಾಯ; ಹಾಲಿ ಚಾಂಪಿಯನ್​ ಚೆನ್ನೈ ಮಣಿಸಿ ಪ್ಲೇ ಆಫ್​ಗೆ ಲಗ್ಗೆ

ಆರ್​ಸಿಗೆ ಪ್ಲೇ ಆಫ್​ ಪ್ರವೇಶಿಸಬೇಕಿದ್ದರೆ 18 ರನ್​ ಅಂತರದಿಂದ ಗೆಲುವು ಬೇಕಿತ್ತು. ಅಂತಿಮ ಹಂತದಲ್ಲಿ ರವೀಂದ್ರ ಜಡೇಜಾ ಮತ್ತು ಧೋನಿ ಸೇರಿಕೊಂಡು ಪಂದ್ಯ ಗೆಲ್ಲದಿದ್ದರೂ ಕೂಡ ಪ್ಲೇ ಆಫ್​ ಲೆಕ್ಕಾಚಾರದ 201 ರನ್​ ಬಾರಿಸಲು ಶಕ್ತಿ ಮೀರಿ ಪ್ರಯತ್ನಪಟ್ಟರು. 6 ಎಸೆತಗಳಲ್ಲಿ 17 ರನ್​ ಬೇಕಿದ್ದಾಗ ಧೋನಿ ಯಶ್​ ದಯಾಳ್​ ಅವರ ಮೊದಲ ಎಸೆತವನ್ನೇ ಸ್ಟೇಡಿಯಂನಿಂದ ಹೊರಗೆಡೆ ಬಾರಿಸಿ 6 ರನ್​ ಕಲೆಹಾಕಿದರು. ಈ ಸಿಕ್ಸರ್​ 110 ಮೀಟರ್​ ದೂರಕ್ಕೆ ಸಿಡಿಯಿತು. ಆದರೆ ಮುಂದಿನ ಎಸೆತದಲ್ಲಿಯೂ ಧೋನಿ ಸಿಕ್ಸರ್​ ಬಾರಿಸುವ ಪ್ರಯತ್ನದಲ್ಲಿ ಬೌಂಡರಿ ಲೈನ್​ನಲ್ಲಿ ಕ್ಯಾಚ್​ ನೀಡಿ ವಿಕೆಟ್​ ಕಳೆದುಕೊಂಡರು. ಇಲ್ಲಿಗೆ ಚೆನ್ನೈ ಸೋಲು ಕೂಡ ಖಚಿತಗೊಂಡಿತು. ಅಂತಿಮ 2 ಎಸೆತದಲ್ಲಿ 10 ರನ್​ ಗಳಿಸುವ ಯತ್ನದಲ್ಲಿ ಜಡೇಜಾ ವಿಫಲರಾದರು. ಧೋನಿ 13 ಎಸೆತಗಳಿಂದ 25 ರನ್​ ಚಚ್ಚಿದರು. ಆರ್​ಸಿಬಿ ಗೆಲುವಿನ ನಗೆ ಬೀರಿತು.

ಆರ್​ಸಿಬಿ ಗೆಲುವು ಸಾಧಿಸುತ್ತಿದ್ದಂತೆ ವಿಜಯ್​ ಮಲ್ಯ ಟ್ವೀಟ್​ ಮಾಡಿ, “ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ ಕೊಟ್ಟಿದ್ದಕ್ಕೆ ತುಂಬಾ ಸಂತೋಷವಾಗುತ್ತಿದೆ. ತಂಡಕ್ಕೆ ಹೃದಯ ಪೂರಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಸತತ ಸೋಲುಗಳಿಂದ ಗೆಲುವಿನ ಟ್ರ್ಯಾಕ್​ಗೆ ಮರಳಿರುವುದು ಅದ್ಭುತ. ಟ್ರೋಫಿ ಗೆಲ್ಲುವ ಕಡೆಗೆ ಆರ್​ಸಿಬಿ ಇನ್ನಷ್ಟು ಆಕ್ರಮಣಕಾರಿಯಾಗಿ ಆಡಬೇಕು” ಎಂದು ಮುಂದಿನ ಪಂದ್ಯಗಳಿಗೂ ಶುಭ ಹಾರೈಸಿದ್ದಾರೆ. ಇದೇ ವರ್ಷ ಆರ್​ಸಿಬಿ ಮಹಿಳಾ ತಂಡ ಡಬ್ಲ್ಯುಪಿಎಲ್​ (WPL) ಟೂರ್ನಿಯ ಕಪ್​ ಗೆದ್ದಾಗಲೂ ಕೂಡ ವಿಜಯ್ ಮಲ್ಯ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದರು.

ವಿಶೇಷವೆಂದರೆ ಆರ್​ಸಿಬಿಗೆ ಮೇ 18 ಎನ್ನುವುದು ಬಹಳ ಅದೃಷ್ಟದ ದಿನವಾಗಿತ್ತು. ಹೌದು, ಇದುವರೆಗಿನ ಐಪಿಎಲ್​ ಇತಿಹಾಸದಲ್ಲಿ ಆರ್​ಸಿಬಿ ಈ ದಿನದಂದು ಆಡಿದ ಎಲ್ಲ ಪಂದ್ಯಗಳನ್ನು ಗೆದ್ದಿತ್ತು. ಹೀಗಾಗಿ ಇಂದು ಕೂಡ ಆರ್​ಸಿಬಿ ಗೆಲುವು ಸಾಧಿಸಬಹುದು ಎನ್ನುವುದು ಅಭಿಮಾನಿಗಳ ಬಲವಾದ ನಂಬಿಕೆಯಾಗಿತ್ತು. ಅದರಂತೆ ಆರ್​ಸಿಬಿ ಗೆಲುವು ಸಾಧಿಸಿ ಅಭಿಮಾನಿಗಳ ನಂಬಿಕೆಯನ್ನು ಉಳಿಸಿಕೊಂಡಿದೆ.

Continue Reading

ರಾಯಚೂರು

IPL 2024 : ಐಪಿಎಲ್‌ ಬೆಟ್ಟಿಂಗ್‌ಗಾಗಿ ಮೈ ತುಂಬಾ ಸಾಲ; ನೇಣಿಗೆ ಶರಣಾದ ಯುವಕ

IPL 2024 : ಐಪಿಎಲ್ ಬೆಟ್ಟಿಂಗ್ (IPL Betting) ದಂಧೆಗೆ ಯುವಕನೊಬ್ಬ ಬಲಿಯಾಗಿದ್ದಾನೆ. ಐಪಿಎಲ್‌ ಮ್ಯಾಚ್‌ಗೆ ಬೆಟ್ಟಿಂಗ್‌ ಕಟ್ಟಲು ವಿಪರೀತ ಸಾಲ ಮಾಡಿಕೊಂಡಿದ್ದ. ಆದರೆ ಮಾಡಿಕೊಂಡ ಸಾಲವನ್ನು ತೀರಿಸಲು ಆಗದೆ ನೇಣು ಬಿಗಿದುಕೊಂಡು (Self Harming) ಮೃತಪಟ್ಟಿದ್ದಾನೆ.

VISTARANEWS.COM


on

By

IPL 2024 Man commits suicide after taking loan for IPL betting
Koo

ರಾಯಚೂರು: ಐಪಿಎಲ್‌ (IPL 2024) ಬೆಟ್ಟಿಂಗ್‌ನಲ್ಲಿ (IPL Betting) ಲಕ್ಷ ಲಕ್ಷ ಕಳೆದುಕೊಂಡ ಯುವಕನೊಬ್ಬ ಲಾಡ್ಜ್‌ನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾನೆ. ರಾಯಚೂರಿನ ಸಿಂಧನೂರು ನಗರದಲ್ಲಿ ಘಟನೆ ನಡೆದಿದೆ.

ಮಸ್ಕಿ ತಾಲೂಕಿನ ಉದ್ಬಾಳ ಗ್ರಾಮದ ಮುದಿಬಸವ (29) ಎಂಬಾತ ಆತ್ಮಹತ್ಯೆ ಮಾಡಿಕೊಂಡವರು. ಮುದಿಬಸವ ಐಪಿಎಲ್ ಬೆಟ್ಟಿಂಗ್‌ಗಾಗಿ ಸಾಕಷ್ಟು ಸಾಲವನ್ನು ಮಾಡಿಕೊಂಡಿದ್ದ. ಆದರೆ ಬೆಟ್ಟಿಂಗ್‌ ಕಟ್ಟಿದ ಎಲ್ಲ ಮ್ಯಾಚ್‌ಗಳು ಸೋತಿದ್ದವು. ಸಾಲದಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ. ಸಾಲಗಾರರ ಕಾಟಕ್ಕೆ ಬೇಸತ್ತ ಮುದಿಬಸವ ಲಾಡ್ಜ್‌ವೊಂದರ ರೂಮಿನಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರೂಮಿನ ಬಾಗಿಲು ತೆರೆಯದೆ ಇದ್ದಾಗ ಅನುಮಾನಗೊಂಡು ಲಾಡ್ಜ್‌ ಸಿಬ್ಬಂದಿ ಒಳಹೊಕ್ಕಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಸಿಂಧನೂರು ನಗರ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಸಿಂಧನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: IPL 2024: ರಾಯಲ್‌ ಆಗಿ ಪ್ಲೇ ಆಫ್‌ ಪ್ರವೇಶಿಸಿದ ಬೆಂಗಳೂರು; ಮುಗಿಲು ಮುಟ್ಟಿದ ಸಂಭ್ರಮ

IPL 2024 : ಕ್ಯಾಚ್​ ಆಫ್​​ ದಿ ಸೀಸನ್​, ಫಾಫ್​ ಡು ಪ್ಲೆಸಿಸ್​ ಹಿಡಿದ ಅದ್ಭುತ್​ ಕ್ಯಾಚ್​​ನ ವಿಡಿಯೊ ಇಲ್ಲಿದೆ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಮಾಡು ಇಲ್ಲವೇ ಮಡಿ ಐಪಿಎಲ್​ (IPL 2024) ಪಂದ್ಯದಲ್ಲಿ ಆರ್​ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ (Faf du pelssis) ಹಿಡಿದ ಕ್ಯಾಚ್​ ಈ ಋತುವಿನ ಅದ್ಭುತ ಕ್ಯಾಚ್​ ಎನಿಸಿಕೊಂಡಿದೆ. ಪಂದ್ಯದ ಆರಂಭದಲ್ಲಿ ಅದ್ಭುತ ಅರ್ಧಶತಕ ಗಳಿಸಿದ ನಂತರ, ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಮಿಚೆಲ್ ಸ್ಯಾಂಟ್ನರ್ ಅವರನ್ನು ಪೆವಿಲಿಯನ್​ಗೆ ಕಳುಹಿಸಲು ಅದ್ಭುತ ಕ್ಯಾಚ್​ ಹಿಡಿದರು. 15ನೇ ಓವರ್​ನ ಕೊನೆಯ ಎಸೆತದಲ್ಲಿ ಮೊಹಮ್ಮದ್ ಸಿರಾಜ್ ಆಫ್ ಸ್ಟಂಪ್ನಲ್ಲಿ ಲೊ ಫುಲ್ ಟಾಸ್ ಎಸೆದರು. ಚೆಂಡು ಫಾಫ್ ಡು ಪ್ಲೆಸಿಸ್ ಅವರ ತಲೆಯ ಮೇಲಿಂದ ಹಾರಿ ಹೋಗುತ್ತಿತ್ತು. ಆದಾಗ್ಯೂ, ಆರ್​ಸಿಬಿ ನಾಯಕನಿಗೆ ಬೇರೆ ಆಲೋಚನೆಗಳು ಇರಲಿಲ್ಲ. ವಿಶ್ವದ ಅತ್ಯುತ್ತಮ ಫೀಲ್ಡರ್​ಗಳಲ್ಲಿ ಒಬ್ಬರಾದ ಅವರು ಸಮಯೋಚಿತವಾಗಿ ಜಿಗಿದು ಒಂದು ಕೈಯಿಂದ ಚೆಂಡನ್ನು ಹಿಡಿದರು.

ಈ ಪಂದ್ಯದ ಆರಂಭದಲ್ಲಿ, ಫಾಫ್ ಡು ಪ್ಲೆಸಿಸ್ ಆರ್​ಸಿಬಿಯನ್ನು ಮುನ್ನಡೆಸಿದರು. ಅವರ ತಂಡದ ಪರ ಗರಿಷ್ಠ ಸ್ಕೋರ್ ಗಳಿಸಿದರು. ಅವರು 54 ರನ್ ಗಳಿಸಿ ಆರ್​ಸಿಬಿಗೆ ಮಾಡು ಇಲ್ಲವೇ ಮಡಿ ಹೋರಾಟದಲ್ಲಿ ಉತ್ತಮ ಆರಂಭವನ್ನು ನೀಡಿದರು. ವಿರಾಟ್ ಕೊಹ್ಲಿ (47), ರಜತ್ ಪಾಟಿದಾರ್ (41) ಮತ್ತು ಕ್ಯಾಮರೂನ್ ಗ್ರೀನ್ (38*) ಕೂಡ ನಿರ್ಣಾಯಕ ಶತಕಗಳ ನೆರವಿನಿಂದ ಆರ್ಸಿಬಿ 5 ವಿಕೆಟ್ ನಷ್ಟಕ್ಕೆ 218 ರನ್ ಗಳಿಸಿತು.

ಡ್ಯಾರಿಲ್​ ಮಿಚೆಲ್ ಕ್ಯಾಚ್ ಹಿಡಿದ ಬಳಿಕ ಕೊಹ್ಲಿಯ ಆಕ್ರಮಣಕಾರಿ ಸಂಭ್ರಮ ಹೀಗಿತ್ತು

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2024 ರಲ್ಲಿ (IPL 2024)ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಮೈದಾನದಲ್ಲಿ ತಮ್ಮ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಉಭಯ ತಂಡಗಳ ನಡುವಿನ 69ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದೆ. ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ (Virat kohli) ತಮ್ಮ ತಂಡದ ಪರವಾಗಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಅಂತೆಯೇ ಸಿಎಸ್​ಕೆ ಬ್ಯಾಟರ್​ಗಳು ಔಟಾಗುತ್ತಿದ್ದಂತೆ ಅವರ ಅಬ್ಬರವೂ ಜೋರಾಗಿತ್ತು.

ಡ್ಯಾರಿಲ್ ಮಿಚೆಲ್ ಕ್ಯಾಚ್ ಪಡೆದ ನಂತರ ವಿರಾಟ್ ಕೊಹ್ಲಿ ಆಕ್ರಮಣಕಾರಿ ಸಂಭ್ರಮವನ್ನು ಆಚರಿಸಿದರು. ಮೂರನೇ ಯಶ್ ದಯಾಳ್ ಎಸೆತದ ತಮ್ಮ ಓವರ್​ನ ಎರಡನೇ ಎಸೆತದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಬ್ಯಾಟ್ಸ್ಮನ್ ದೊಡ್ಡ ಹೊಡೆತ ಹೊಡೆದರು. ಚೆಂಡು ಗಾಳಿಯಲ್ಲಿ ಹಾರಿತು. ಅಲ್ಲಿ ನಿಂತಿದ್ದ ವಿರಾಟ್ ಕೊಹ್ಲಿ ವೇಗವಾಗಿ ಓಡಿ ಸುರಕ್ಷಿತ ಕ್ಯಾಚ್ ಪಡೆದರು. ಬಳಿಕ ಜೋರಾಗಿ ಕಿರುಚಿದರು. ಆದರೆ, ಅನೇಕರ ಗಮನ ಸೆಳೆದದ್ದು ಕೊಹ್ಲಿಯ ಸಂಭ್ರಮಾಚರಣೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬ್ಯಾಟರ್​ ಆಕ್ರಮಣಕಾರಿಯಾಗಿ ಸಂಭ್ರಮಿಸಿದರು.

ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಕೂಡ ಸಂಭ್ರಮಾಚರಣೆಯಲ್ಲಿ ತೊಡಗಿದ್ದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಎರಡನೇ ವಿಕೆಟ್ ಪಡೆದಾಗ ಬಾಲಿವುಡ್ ನಟಿ ತನ್ನ ಸೀಟಿನಲ್ಲಿ ಎದ್ದು ನಿಂತು ಸಂತೋಷ ವ್ಯಕ್ತಪಡಿಸಿದ್ದು ಕೂಡ ಕ್ಯಾಮೆರಾ ಕಣ್ಣಿಗೆ ಬಿತ್ತು. ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಕೂಡ ಸಂಭ್ರಮಾಚರಣೆಯಲ್ಲಿ ತೊಡಗಿದ್ದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಎರಡನೇ ವಿಕೆಟ್ ಪಡೆದಾಗ ಬಾಲಿವುಡ್ ನಟಿ ತನ್ನ ಸೀಟಿನಲ್ಲಿ ಎದ್ದು ನಿಂತು ಸಂತೋಷ ವ್ಯಕ್ತಪಡಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಐಪಿಎಲ್ 2024

IPL 2024: ಸಿಎಸ್‌ಕೆ ತಂಡವನ್ನು ಸೋಲಿಸಿದ ಆರ್‌ಸಿಬಿ; ಪ್ಲೇ ಆಫ್‌ನಲ್ಲಿ ಯಾರು ಯಾರಿಗೆ ಎದುರಾಳಿ? ಇಲ್ಲಿದೆ ವೇಳಾಪಟ್ಟಿ

IPL 2024: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ 2024ರ 68ನೇ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್ (CSK) ವಿರುದ್ಧ 27 ರನ್‌ಗಳಿಂದ ಜಯಗಳಿಸಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) 4ನೇ ತಂಡವಾಗಿ ಪ್ಲೇ ಆಫ್‌ ಪ್ರವೇಶಿಸಿದೆ. ಇದೀಗ ಪ್ಲೇ ಆಫ್‌ ಪಂದ್ಯಗಳ ಲೆಕ್ಕಾಚಾರ ಆರಂಭವಾಗಿದೆ. ಹಾಗಾದರೆ ಯಾರು ಯಾರನ್ನು ಎದುರಿಸುತ್ತಾರೆ? ಪಂದ್ಯ ಯಾವಾಗ? ಮುಂತಾದ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

VISTARANEWS.COM


on

IPL 2024
Koo

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ 2024ರ 68ನೇ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್ (CSK) ವಿರುದ್ಧ 27 ರನ್‌ಗಳಿಂದ ಜಯಗಳಿಸಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) 4ನೇ ತಂಡವಾಗಿ ಪ್ಲೇ ಆಫ್‌ ಪ್ರವೇಶಿಸಿದೆ. ಈಗಾಗಲೇ ಕೋಲ್ಕತ್ತಾ ನೈಟ್ ರೈಡರ್ಸ್ (KKR), ರಾಜಸ್ಥಾನ್ ರಾಯಲ್ಸ್ (RR) ಮತ್ತು ಸನ್‌ ರೈಸರ್ಸ್‌ ಹೈದರಾಬಾದ್ (SRH) ಪ್ಲೇ ಆಫ್‌ನಲ್ಲಿ ಸ್ಥಾನ ಪಡೆದಿವೆ. ಹಾಗಾದರೆ ಪ್ಲೇ ಆಫ್‌ ಯಾವಾಗ ಎಲ್ಲಿ ನಡೆಯಲಿದೆ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ಪ್ಲೇ ಆಫ್‌ ವೇಳಾಪಟ್ಟಿ

ದಿನಾಂಕ ಪ್ಲೇ ಆಫ್‌ತಂಡಸಮಯ (ರಾತ್ರಿ)ಸ್ಥಳ
ಮೇ 21ಕ್ವಾಲಿಫೈರ್‌ 1ಕೋಲ್ಕತ್ತಾ ನೈಟ್‌ ರೈಡರ್ಸ್‌ ಮತ್ತು ರಾಜಸ್ಥಾನ್​ ರಾಯಲ್ಸ್​ / ಸನ್​ರೈಸರ್ಸ್​ ಹೈದರಾಬಾದ್​7.30ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್​
ಮೇ 22ಎಲಿಮಿನೇಟರ್‌ ರಾಜಸ್ಥಾನ್​ ರಾಯಲ್ಸ್​ / ಸನ್​ರೈಸರ್ಸ್​ ಹೈದರಾಬಾದ್ ಮತ್ತು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು7.30ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್​
ಮೇ 24ಕ್ವಾಲಿಫೈರ್‌ 2ಎಲಿಮಿನೇಟರ್‌ನ ವಿಜೇತರು ಮತ್ತು ಕ್ವಾಲಿಫೈರ್‌ 1ರ ಸೋತ ತಂಡ7.30ಎಂ.ಎ.ಚಿದಂಬರಂ ಸ್ಟೇಡಿಯಂ, ಚೆನ್ನೈ
ಮೇ 26ಫೈನಲ್‌ಕ್ವಾಲಿಫೈರ್‌ 1ರ ವಿಜೇತರು ಮತ್ತು ಕ್ವಾಲಿಫೈರ್‌ 2ರ ವಿಜೇತರು7.30ಎಂ.ಎ.ಚಿದಂಬರಂ ಸ್ಟೇಡಿಯಂ, ಚೆನ್ನೈ

ಕ್ವಾಲಿಫೈರ್‌ ಪಂದ್ಯಗಳು

ಕ್ವಾಲಿಫೈರ್‌ 1ರಲ್ಲಿ ಅಗ್ರ ಎರಡು ತಂಡಗಳ ನಡುವೆ ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮೇ 21ರ ರಾತ್ರಿ 7.30ಕ್ಕೆ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್ ಪ್ರವೇಶಿಸಲಿದೆ. ಮೇ 22ರ ರಾತ್ರಿ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುವ ಎಲಿಮಿನೇಟರ್‌ ಪಂದ್ಯದಲ್ಲಿ ಮೂರನೇ ಮತ್ತು ನಾಲ್ಕನೇ ತಂಡದ ನಡುವೆ ಜಿದ್ದಾಜಿದ್ದು ನಡೆಯಲಿದೆ. ಇದರಲ್ಲಿ ಗೆದ್ದವರು ಮೇ 24ರಂದು ಚೆನ್ನೈ ಎಂ.ಎ.ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಕ್ವಾಲಿಫೈರ್‌ 2ರ ಪಂದ್ಯದಲ್ಲಿ ಕ್ವಾಲಿಫೈರ್‌ 1ರ ಸೋತ ತಂಡದೊಂದಿಗೆ ಸೆಣಸಾಡಲಿದ್ದಾರೆ. ಈ ಪಂದ್ಯ ರಾತ್ರಿ 7.30ಕ್ಕೆ ನಡೆಯಲಿದೆ. ಇದರಲ್ಲಿ ಗೆದ್ದವರು ಫೈನಲ್‌ನಲ್ಲಿ ಕ್ವಾಲಿಫೈರ್‌ 1ರ ವಿಜೇತರೊಂದಿಗೆ ಕಪ್‌ಗಾಗಿ ಹೋರಾಡಲಿದ್ದಾರೆ. ಫೈನಲ್‌ ಪಂದ್ಯ ಚೆನ್ನೈಯ ಎಂ.ಎ.ಚಿದಂಬರಂ ಸ್ಟೇಡಿಯಂನಲ್ಲಿ ಮೇ 26ರ ರಾತ್ರಿ 7.30ಕ್ಕೆ ಆಯೋಜಿಸಲಾಗಿದೆ.

ಲೀಗ್‌ ಹಂತದಲ್ಲಿ ಇನ್ನೂ ಕೆಲವು ಪಂದ್ಯ ಬಾಕಿ ಇರುವುದರಿಂದ ಅಂಕಪಟ್ಟಿ ಬದಲಾಗುವ ಸಾಧ್ಯತೆ ಇದೆ. ಅಗ್ರ ಮೂರು ಸ್ಥಾನಗಳಲ್ಲಿ ಇರುವ ಕೆಕೆಆರ್‌, ಆರ್‌ಆರ್‌ ಮತ್ತು ಎಸ್‌ಆರ್‌ಎಚ್‌ ತಂಡಗಳಿಗೆ ಇನ್ನು ತಲಾ 1 ಪಂದ್ಯಗಳಿವೆ. ಎಸ್‌ಆರ್‌ಎಚ್‌-ಪಂಜಾಬ್‌, ರಾಜಸ್ಥಾನ-ಕೋಲ್ಕತ್ತಾ ಪರಸ್ಪರ ಸೆಣಸಾಡಲಿರುವುದರಿಂದ ಪ್ಲೇ ಆಫ್‌ಗೆ ಅರ್ಹತೆ ಪಡೆದ ತಂಡಗಳ ಸ್ಥಾನಗಳಲ್ಲಿ ಏರುಪೇರಾಗಲಿದೆ. ಅದಾಗ್ಯೂ ಸೋತರೂ ಕೋಲ್ಕತ್ತಾ ಅಗ್ರ ಸ್ಥಾನದಲ್ಲೇ ಮುಂದುವರಿಯಲಿದ್ದು, ಆರ್‌ಸಿಬಿಗೆ ನಾಲ್ಕನೇ ಸ್ಥಾನ ಫಿಕ್ಸ್‌. ಎರಡು ಮತ್ತು ಮೂರನೇ ಸ್ಥಾನಗಳ ಸ್ಪಷ್ಟ ಚಿತ್ರಣ ಪಂದ್ಯದ ಬಳಿಕವಷ್ಟೇ ದೊರೆಯಲಿದೆ.

ಇದನ್ನೂ ಓದಿ: IPL 2024 : ಗೆಲುವೊಂದೇ ಗುರಿ; ಅಂಪೈರ್​ಗಳ ಜತೆ ಮತ್ತೆ ವಾಗ್ವಾದ ನಡೆಸಿದ ಕೊಹ್ಲಿ

ಸಿಎಸ್‌ಕೆ ಸೋಲಿಸಿ ಪ್ಲೇ ಆಫ್‌ಗೆ ಏರಿದ ಬೆಂಗಳೂರು

ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ಶನಿವಾರ ನಡೆದ ಮಳೆ ಪೀಡಿತ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಆರ್​ಸಿಬಿ ವಿರಾಟ್​ ಕೊಹ್ಲಿ ಮತ್ತು ಫಾಫ್​ ಡುಪ್ಲೆಸ್​ ಮೊದಲ ವಿಕೆಟ್​ಗೆ ನಿರ್ಮಿಸಿದ ಭದ್ರ ಅಡಿಪಾಯದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 218 ರನ್​ ಬಾರಿಸಿತು. ಈ ಬೃಹತ್​ ಮೊತ್ತವನ್ನು ಬೆನ್ನಟ್ಟಿದ ಚೆನ್ನೈ ಹಲವು ಏರಿಳಿತ ಕಂಡು ಕೊನೆಗೆ ತನ್ನ ಪಾಲಿನ ಆಟದಲ್ಲಿ 7 ವಿಕೆಟ್​ಗೆ 191 ರನ್​ ಗಳಿಸಲಷ್ಟೇ ಶಕ್ತವಾಗಿ ಸೋಲಿಗೆ ಶರಣಾಯಿತು. ಜತೆಗೆ ಟೂರ್ನಿಯಿಂದಲೂ ಹೊರಬಿದ್ದು ಮಾಜಿ ಚಾಂಪಿಯನ್​ ಎನಿಸಿಕೊಂಡಿತು. ಒಂದೊಮ್ಮೆ ಚೆನ್ನೈ 201 ರನ್​ ಬಾರಿಸುತ್ತಿದ್ದರೂ ಆರ್​ಸಿಬಿ ಪ್ಲೇ ಆಫ್​ನಿಂದ ಹೊರ ಬೀಳುತ್ತಿತ್ತು.

Continue Reading

ಐಪಿಎಲ್ 2024

IPL 2024: ರಾಯಲ್‌ ಆಗಿ ಪ್ಲೇ ಆಫ್‌ ಪ್ರವೇಶಿಸಿದ ಬೆಂಗಳೂರು; ಮುಗಿಲು ಮುಟ್ಟಿದ ಸಂಭ್ರಮ

IPL 2024: ಶನಿವಾರ ನಡೆದ ಐಪಿಎಲ್‌ 2024 (IPL 2024)ರ ಹೈವೋಲ್ಟೇಜ್‌ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ತಂಡವನ್ನು ಮಣಿಸಿ ಆರ್‌ಸಿಬಿ ಪ್ಲೇ ಆಫ್‌ ಪ್ರವೇಶಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಕೊನೆಗೂ ಹಾಲಿ ಚಾಂಪಿಯನ್‌ ಚೆನ್ನೈಯನ್ನು 27 ರನ್‌ಗಳ ಅಂತರದಿಂದ ಸೋಲಿಸುವುದರೊಂದಿಗೆ ಆರ್‌ಸಿಬಿ ಅಭಿಮಾನಿಗಳ ಜೈಕಾರ ಮುಗಿಲು ಮುಟ್ಟಿತು. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸಂಭ್ರಮಾಚರಣೆ ಕಂಡು ಬಂತು.

VISTARANEWS.COM


on

IPL 2024
Koo

ಬೆಂಗಳೂರು: ಆರ್‌ಸಿಬಿ (RCB) ಅಭಿಮಾನಿಗಳು ಗೆಲುವಿನ ನಿಟ್ಟುಸಿರು ಬಿಟ್ಟಿದ್ದಾರೆ. ಶನಿವಾರ ನಡೆದ ಐಪಿಎಲ್‌ 2024 (IPL 2024)ರ ಹೈವೋಲ್ಟೇಜ್‌ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್ (CSK)​ ತಂಡವನ್ನು ಮಣಿಸಿ ಆರ್‌ಸಿಬಿ ಪ್ಲೇ ಆಫ್‌ ಪ್ರವೇಶಿಸಿದೆ. ಅಭಿಮಾನಿಗಳು ಈ ಪಂದ್ಯವನ್ನು ಅಕ್ಷರಶಃ ಫೈನಲ್‌ ಎಂದೇ ಪರಿಗಣಿಸಿದ್ದರು. ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಕೊನೆಗೂ ಹಾಲಿ ಚಾಂಪಿಯನ್‌ ಚೆನ್ನೈಯನ್ನು 27 ರನ್‌ಗಳ ಅಂತರದಿಂದ ಸೋಲಿಸುವುದರೊಂದಿಗೆ ಆರ್‌ಸಿಬಿ ಅಭಿಮಾನಿಗಳ ಜೈಕಾರ ಮುಗಿಲು ಮುಟ್ಟಿತು. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸಂಭ್ರಮಾಚರಣೆ ಕಂಡು ಬಂತು.

ಪಂದ್ಯ ಮುಕ್ತಾಯವಾದಾಗ ತಡರಾತ್ರಿಯಾಗಿದ್ದರೂ ಅಭಿಮಾನಿಗಳ ಸಡಗರಕ್ಕೆ ಕೊರತೆ ಇರಲಿಲ್ಲ. ಪುಟ್ಟ ಮಕ್ಕಳು ಸೇರಿದಂತೆ ಆರ್‌ಸಿಬಿ ಫ್ಯಾನ್ಸ್‌ ರಸ್ತೆಯಲ್ಲೇ ಕುಣಿದು ಕುಪ್ಪಳಿಸಿದರು. ಮಕ್ಕಳಂತೂ ಈ ಸಲ ಕಪ್ ನಮ್ದೆ ಎನ್ನುವ ಘೋಷಣೆ ಕೂಗುತ್ತಿರುವುದು ಕಂಡು ಬಂತು. ಚಿನ್ನಸ್ವಾಮಿ ಕ್ರೀಡಾಂಗಣದ ಎದುರಿನ ರಸ್ತೆ ಬ್ಲಾಕ್ ಮಾಡಿ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದರು. ಇದು ನಿಜವಾದ ಹೊಸ ಅಧ್ಯಾಯ ಎನ್ನುವ ಮಾತು ಎಲ್ಲೆಡೆ ಕೇಳಿ ಬಂದಿದೆ.

ಸೋಷಿಯಲ್‌ ಮೀಡಿಯಾದಲ್ಲಿ ಆರ್‌ಸಿಬಿಯದ್ದೇ ಹವಾ

ಇನ್ನು ಸೋಷಿಯಲ್‌ ಮೀಡಿಯಾದಲ್ಲಂತೂ ಆರ್‌ಸಿಬಿ ಹವಾ ಕಂಡು ಬಂದಿದೆ. ಸತತ ಸೋಲಿನ ಬಳಿಕ ಗ್ರೇಟ್‌ ಕಂಬ್ಯಾಕ್‌ ಎಂದೆಲ್ಲ ಫ್ಯಾನ್ಸ್‌ ಹೊಗಳುತ್ತಿದ್ದಾರೆ. ಮೊದಲ 8 ಪಂದ್ಯಗಳ ಪೈಕಿ 1ರಲ್ಲಿ ಮಾತ್ರ ಗೆಲುವು ಒಲಿದಿತ್ತು. ಆದರೆ ಬಳಿಕದ 6 ಪಂದ್ಯಗಳ ಪೈಕಿ 6ರಲ್ಲಿಯೂ ಗೆಲುವು ಸಾಧಿಸಿದ್ದೇವೆ. ಇದು ನಿಜವಾದ ಹೊಸ ಅಧ್ಯಾಯ ಎಂದು ಅಭಿಮಾನಿಗಳು ಹೇಳಿಕೊಂಡಿದ್ದಾರೆ. ನಿಜವಾಗಿಯೂ ಒಂದು ಥ್ರಿಲ್ಲರ್‌ ಸಿನಿಮಾ ನೋಡಿದ ಅನುಭವವಾಯಿತು ಎಂದು ಪಂದ್ಯ ಮುಗಿದ ಬಳಿಕ ರೋಮಾಂಚಿತರಾದ ಆರ್‌ಸಿಬಿಯ ಕಟ್ಟಾ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. 6 ಸತತ ಗೆಲುವಿನ ಮೂಲಕ ಪ್ಲೇ ಆಫ್‌ ಪ್ರವೇಶಿಸುವುದು ಸುಲಭದ ಮಾತಲ್ಲ. ಅತ್ಯುತ್ತಮ ಪ್ರದರ್ಶನ ಎಂದು ಹಲವರು ಅಭಿಪ್ರಾಯ ಪಟ್ಟಿದ್ದಾರೆ.

ಮತ್ತೆ ಸದ್ದು ಮಾಡುತ್ತಿದೆ ಈ ಸಲ ಕಪ್‌ ನಮ್ದೆ

ಬ್ಯಾಕ್‌ ಟು ಬ್ಯಾಕ್‌ ಗೆಲುವಿನ ಮೂಲಕ ರಾಯಲ್‌ ಆಗಿಯೇ ಪ್ಲೇ ಆಫ್‌ ಪ್ರವೇಶಿಸಿದ ಬೆಂಗಳೂರು ತಂಡಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಜತೆಗೆ ಈ ಸಲ ಜಪ್‌ ನಮ್ದೆ ಘೋಷ ವಾಕ್ಯ ಮತ್ತೆ ಮೊಳಗತೊಡಗಿದೆ. ಈ ಹಿಂದೆ ಆರ್‌ಸಿಬಿ ಮಹಿಳಾ ತಂಡ ಕಪ್‌ ಜಯಿಸಿತ್ತು. ಇದೀಗ ಪುರುಷರ ತಂಡದ ಸರದಿ ಎಂಬ ಲೆಕ್ಕಾಚಾರವೂ ಶುರುವಾಗಿದೆ.

ಇದನ್ನೂ ಓದಿ: RCB vs CSK: ಇದು ಆರ್​ಸಿಬಿಯ ಹೊಸ ಅಧ್ಯಾಯ; ಹಾಲಿ ಚಾಂಪಿಯನ್​ ಚೆನ್ನೈ ಮಣಿಸಿ ಪ್ಲೇ ಆಫ್​ಗೆ ಲಗ್ಗೆ

ಹೊರ ಬಿದ್ದ ಚೆನ್ನೈ

ಇಲ್ಲಿನ ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ಶನಿವಾರ ನಡೆದ ಮಳೆ ಪೀಡಿತ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಆರ್​ಸಿಬಿ ವಿರಾಟ್​ ಕೊಹ್ಲಿ ಮತ್ತು ಫಾಫ್​ ಡುಪ್ಲೆಸ್​ ಮೊದಲ ವಿಕೆಟ್​ಗೆ ನಿರ್ಮಿಸಿದ ಭದ್ರ ಅಡಿಪಾಯದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 218 ರನ್​ ಬಾರಿಸಿತು. ಈ ಬೃಹತ್​ ಮೊತ್ತವನ್ನು ಬೆನ್ನಟ್ಟಿದ ಚೆನ್ನೈ ಹಲವು ಏರಿಳಿತ ಕಂಡು ಕೊನೆಗೆ ತನ್ನ ಪಾಲಿನ ಆಟದಲ್ಲಿ 7 ವಿಕೆಟ್​ಗೆ 191 ರನ್​ ಗಳಿಸಲಷ್ಟೇ ಶಕ್ತವಾಗಿ ಸೋಲಿಗೆ ಶರಣಾಯಿತು. ಜತೆಗೆ ಟೂರ್ನಿಯಿಂದಲೂ ಹೊರಬಿದ್ದು ಮಾಜಿ ಚಾಂಪಿಯನ್​ ಎನಿಸಿಕೊಂಡಿತು. ಒಂದೊಮ್ಮೆ ಚೆನ್ನೈ 201 ರನ್​ ಬಾರಿಸುತ್ತಿದ್ದರೂ ಆರ್​ಸಿಬಿ ಪ್ಲೇ ಆಫ್​ನಿಂದ ಹೊರ ಬೀಳುತ್ತಿತ್ತು.

Continue Reading
Advertisement
RCB
ಕ್ರಿಕೆಟ್5 mins ago

RCB: ಆರ್​ಸಿಬಿಯ ನಂಟು ಬಿಡದ ವಿಜಯ್​ ಮಲ್ಯ; ಟ್ವೀಟ್​ ಮೂಲಕ ಅಭಿನಂದನೆ

Pavithra Jayaram Trinayani Serial Son Prajwal Reaction
ಸಿನಿಮಾ33 mins ago

Pavithra Jayaram: ಅಮ್ಮ ಮತ್ತು ಚಂದ್ರಕಾಂತ್‌ ಒಡನಾಟ ಹೇಗಿತ್ತು ಅಂತ ನಮಗೆ ಗೊತ್ತು ಎಂದ ಪವಿತ್ರ ಜಯರಾಮ್ ಮಗ!

Karnataka Rain
ಮಳೆ59 mins ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Viral News
ವೈರಲ್ ನ್ಯೂಸ್1 hour ago

Viral News: ಬಾಯ್‌ಫ್ರೆಂಡ್‌ನ ಗುಪ್ತಾಂಗವನ್ನೇ ಕಟ್‌ ಮಾಡಿ ಕಸದ ಬುಟ್ಟಿಗೆ ಎಸೆದ ಮಹಿಳೆ

Job Alert
ಉದ್ಯೋಗ1 hour ago

Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆಯ ದಿನ

Electric shock in udupi
ಉಡುಪಿ2 hours ago

Electric shock : ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ; ಶಾಕ್‌ನಿಂದ ವ್ಯಕ್ತಿ ಸ್ಪಾಟ್‌ ಡೆತ್‌

Anjali Murder Case
ಕರ್ನಾಟಕ2 hours ago

Anjali Murder Case: ಅಂಜಲಿ ಹತ್ಯೆ ಪ್ರಕರಣ; ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ ಚೇತರಿಕೆ

IT Raid
ದೇಶ2 hours ago

IT Raid: ಶೂ ವ್ಯಾಪಾರಿಗಳಿಗೆ ಐಟಿ ಶಾಕ್‌; 40 ಕೋಟಿ ರೂ. ಸೀಜ್‌-ಕಂತೆ ಕಂತೆ ನೋಟು ನೋಡಿ ದಂಗಾದ ಅಧಿಕಾರಿಗಳು

Suspicious Case in Mysuru
ಮೈಸೂರು2 hours ago

Suspicious Case : ಮೈಸೂರಿನಲ್ಲಿ ದಂಪತಿ ಅನುಮಾನಾಸ್ಪದ ಸಾವು; ಕೊಲೆಯೋ.. ಆತ್ಮಹತ್ಯೆಯೋ?

IPL 2024 The people paid revenge for the controversial post ashwini Puneeth Rajkumar
ಸ್ಯಾಂಡಲ್ ವುಡ್2 hours ago

IPL 2024 : ʻಅಶ್ವಿನಿ ದೊಡ್ಮನೆಯ ಅದೃಷ್ಟ ದೇವತೆ’: ತುಚ್ಛ ಪದ ಬಳಸಿದವರಿಗೆ ಭಾರೀ ತಿರುಗೇಟು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ5 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20245 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌