ಕ್ರೈಸ್ಟ್ ಚರ್ಚ್: 2023-24 ಋತುವಿನ ನ್ಯೂಜಿಲ್ಯಾಂಡ್ ಕ್ರಿಕೆಟಿಗರ ಕೇಂದ್ರ ಗುತ್ತಿಗೆ ಪಟ್ಟಿ ಬಿಡುಗಡೆಗೊಂಡಿದೆ. ಅಚ್ಚರಿ ಎಂದರೆ ವೇಗದ ಬೌಲರ್ ಆ್ಯಡಂ ಮಿಲ್ನೆ ಅವರು ಐದು ವರ್ಷಗಳ ಬಳಿಕ ಈ ಕೇಂದ್ರ ಗುತ್ತಿಗೆಯಲ್ಲಿ ಸ್ಥಾನ ಪಡೆದಿದ್ದಾರೆ. ಕಳೆದ ವರ್ಷ ಭಾರತ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಒಂದೇ ಇನಿಂಗ್ಸ್ನಲ್ಲಿ 10 ವಿಕೆಟ್ ಕಬಳಿಸಿದ ಅಜಾಜ್ ಪಟೇಲ್ ಅವರನ್ನು ಈ ಪಟ್ಟಿಯಿಂದ ಕೈಬಿಡಲಾಗಿದೆ.
31 ವರ್ಷದ ವೇಗದ ಮಿಲ್ನೆ ಕಳೆದ ಋತುವಿನಲ್ಲಿ ರಾಷ್ಟ್ರೀಯ ತಂಡಕ್ಕಾಗಿ 16 ಸೀಮಿತ ಓವರ್ ಪಂದ್ಯಗಳಲ್ಲಿ ಆಡಿದ್ದರು. ಸದ್ಯ ಕೇಂದ್ರ ಗುತ್ತಿಗೆಯಲ್ಲಿ ಸ್ಥಾನ ಪಡೆದಿರುವ ಇವರು ಈ ವರ್ಷದ ಕೊನೆಯಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿಯೂ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ.
ಹಿರಿಯ ಬೌಲರ್ ಟ್ರೆಂಟ್ ಬೌಲ್ಟ್, ಕಾಲಿನ್ ಡಿ ಗ್ರ್ಯಾಂಡ್‌ಹೋಮ್ ಮತ್ತು ಮಾರ್ಟಿನ್ ಗಪ್ಟಿಲ್ ಕೂಡ ಈ ಪಟ್ಟಿಯಿಂದ ಹೊರಬಿದ್ದಿದ್ದಾರೆ. ಈ ಆಟಗಾರರು ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಹೆಚ್ಚು ಕಾಣಿಸಿಕೊಳ್ಳಲುವ ಸಲುವಾಗಿ ನ್ಯೂಜಿಲ್ಯಾಂಡ್ ಒಪ್ಪಂದಗಳಿಂದ ಬಿಡುಗಡೆ ಮಾಡಲು ವಿನಂತಿಸಿದ್ದರು. ಇದೇ ಕಾರಣಕ್ಕೆ ಇವರನ್ನು ಈ ಪಟ್ಟಿಯಿಂದ ಕೈಬಿಡಲಾಗಿದೆ.
ಇದನ್ನೂ ಓದಿ WTC Final 2023: ಪಂತ್ ದಾಖಲೆ ಮುರಿದ ಟ್ರಾವಿಸ್ ಹೆಡ್
ನ್ಯೂಜಿಲ್ಯಾಂಡ್ ಸೆಂಟ್ರಲ್ ಕಾಂಟ್ರ್ಯಾಕ್ಟ್ ಆಟಗಾರರ ಪಟ್ಟಿ
ಫಿನ್ ಅಲೆನ್, ಟಾಮ್ ಬ್ಲಂಡೆಲ್, ಮೈಕೆಲ್ ಬ್ರೇಸ್ ವೆಲ್, ಮಾರ್ಕ್ ಚಾಪ್ ಮನ್, ಡೆವೊನ್ ಕಾನ್ವೇ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ಟಾಮ್ ಲ್ಯಾಥಮ್, ಆಡಮ್ ಮಿಲ್ನೆ, ಡೇರಿಲ್ ಮಿಚೆಲ್, ಹೆನ್ರಿ ನಿಕೋಲ್ಸ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ಬ್ಲೇರ್ ಟಿಕ್ನರ್, ನೀಲ್ ವ್ಯಾಗ್ನರ್, ಕೇನ್ ವಿಲಿಯಮ್ಸನ್, ವಿಲ್ ಯಂಗ್.