ಲಖನೌ : ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ (INDvsNZ T20) ಭಾರತ ತಂಡ ಟಾಸ್ ಸೋತಿದೆ. ಎದುರಾಳಿ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಮೊದಲ ಪಂದ್ಯದಲ್ಲಿ ಭಾರತ ತಂಡ ಸೋಲು ಕಂಡಿರುವ ಹಿನ್ನೆಲೆಯಲ್ಲಿ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 0-1 ಹಿನ್ನಡೆಯಲ್ಲಿದೆ. ಹೀಗಾಗಿ ಭಾರತ ಬಳಗಕ್ಕೆ ಗೆಲುವಿನ ಅನಿವಾರ್ಯತೆ ಎದುರಾಗಿದೆ.
ಲಖನೌನ ಭಾರತರತ್ನ ಅಟಲ್ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಈ ಪಂದ್ಯ ನಡೆಯುತ್ತಿದ್ದು, ಈ ಗ್ರೌಂಡ್ನಲ್ಲಿ ಇದುವರೆಗೆ ನಡೆದ ಐದು ಹಣಾಹಣಿಗಳಲ್ಲಿ ಮೊದಲು ಬ್ಯಾಟ್ ಮಾಡಿದ ತಂಡವೇ ಗೆಲುವು ಸಾಧಿಸಿದೆ. ಹೀಗಾಗಿ ನ್ಯೂಜಿಲ್ಯಾಂಡ್ ನಾಯಕ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಭಾರತ ಆಡುವ ಬಳಗದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ವೇಗಿ ಉಮ್ರಾನ್ ಮಲಿಕ್ ಬದಲಿಗೆ ಸ್ಪಿನ್ನರ್ ಯಜ್ವೇಂದ್ರ ಚಹಲ್ಗೆ ಅವಕಾಶ ನೀಡಲಾಗಿದೆ. ನ್ಯೂಜಿಲ್ಯಾಂಡ್ ಬಳಗದಲ್ಲಿ ಯಾವುದೇ ಬದಲಾವಣೆಯಿಲ್ಲ.
ಭಾರತ ತಂಡ ತವರಿನ ಟಿ20 ಸರಣಿಯಲ್ಲಿ 2019ರಿಂದ ಸೋಲು ಕಂಡಿಲ್ಲ. ಈ ಮೂಲಕವೂ ಭಾರತ ತಂಡಕ್ಕೆ ಈ ಪಂದ್ಯದ ಗೆಲುವು ಅನಿವಾರ್ಯ. ಮೂರು ವರ್ಷಗಳ ಹಿಂದೆ ಪ್ರವಾಸಿ ಆಸ್ಟ್ರೇಲಿಯಾ ಬಳಗದ ವಿರುದ್ಧದ ಭಾರತ ತಂಡ ಟಿ20 ಸರಣಿಯಲ್ಲಿ ಪರಾಜಯಗೊಂಡಿತ್ತು.
ಇದನ್ನೂ ಓದಿ : INDvsNZ T20 : ನ್ಯೂಜಿಲ್ಯಾಂಡ್ ವಿರುದ್ಧದ ಎರಡನೇ ಪಂದ್ಯ ನಡೆಯುವುದು ಎಲ್ಲಿ? ಅಲ್ಲಿನ ಪಿಚ್ ಹೇಗಿದೆ?
ತಂಡಗಳು
ಭಾರತ: ಹಾರ್ದಿಕ್ ಪಾಂಡ್ಯ (ನಾಯಕ), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಶುಭ್ಮನ್ ಗಿಲ್, ದೀಪಕ್ ಹೂಡ, ರಾಹುಲ್ ತ್ರಿಪಾಠಿ, , ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಯಜ್ವೇಂದ್ರ ಚಹಲ್, ಅರ್ಶ್ದೀಪ್ ಸಿಂಗ್, ಶಿವಂ ಮಾವಿ.
ನ್ಯೂಜಿಲ್ಯಾಂಡ್ : ಮಿಚೆಲ್ ಸ್ಯಾಂಟ್ನರ್ (ನಾಯಕ) ಫಿನ್ ಅಲೆನ್, ಡೆವೊನ್ ಕಾನ್ವೇ, ಮಾರ್ಕ್ ಚಾಪ್‌ಮನ್, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಮೈಕೆಲ್ ಬ್ರೇಸ್‌ವೆಲ್, ಇಶ್ ಸೋಧಿ, ಲಾಕಿ ಫರ್ಗ್ಯೂಸನ್, ಜಾಕೋಬ್ ಡಫ್ಫಿ, ಬ್ಲೇರ್ ಟಿಕ್ನರ್.