ಪ್ಯಾರಿಸ್: ರಿಲಯನ್ಸ್ ಫೌಂಡೇಶನ್ (Reliance Foundation) ಸಂಸ್ಥಾಪಕಿ ನೀತಾ ಅಂಬಾನಿ (Nita Ambani) ಅವರು 2ನೇ ಬಾರಿಗೆ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿಯ(International Olympic Committee) ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವರು ಮರು ಆಯ್ಕೆಯಾದ ವಿಚಾರವನ್ನು ಐಒಸಿ (IOC) ತನ್ನ ಅಧಿಕೃತ ಪ್ರಕಟನೆಯಲ್ಲಿ ತಿಳಿಸಿದೆ.
“ಪ್ಯಾರಿಸ್‌ನಲ್ಲಿ ನಡೆಯಲಿರುವ 142ನೇ ಒಲಿಂಪಿಕ್ಸ್ ಅಧಿವೇಶನದಲ್ಲಿ ನೀತಾ ಅಂಬಾನಿ ಶೇ.100ರಷ್ಟು ಮತದಾನದೊಂದಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಐಒಸಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಐಒಸಿ ಸದಸ್ಯೆಯಾಗಿ ಮರು ಆಯ್ಕೆಯಾದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ನೀತಾ ಅಂಬಾನಿ, ನನಗೆ ಸಿಕ್ಕ ದೊಡ್ಡ ಗೌರವ ಇದಾಗಿದೆ ಎಂದು ಹೇಳಿದರು. 2016 ರಲ್ಲಿ ರಿಯೊ ಡಿ ಜನೈರೊ ಒಲಿಂಪಿಕ್ಸ್‌ನಲ್ಲಿ ಪ್ರತಿಷ್ಠಿತ ಕ್ರೀಡಾ ಸಂಸ್ಥೆಗೆ ನೀತಾ ಅಂಬಾನಿ ಅವರನ್ನು ಮೊದಲ ಬಾರಿ ಆಯ್ಕೆಯಾಗಿದ್ದರು. ಈ ಮೂಲಕ ಐಒಸಿಗೆ ಸೇರಿದ ಭಾರತದ ಮೊದಲ ಮಹಿಳೆ ಎನಿಸಿಕೊಂಡಿದ್ದರು.
‘ಐಒಸಿಯ ಸದಸ್ಯೆಯಾಗಿ ಮರು ಆಯ್ಕೆಯಾಗಿರುವುದು ನನಗೆ ತುಂಬಾ ಖುಷಿ ತಂದಿದೆ. ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಅಧ್ಯಕ್ಷ ಥಾಮಸ್ ಬಾಚ್ ಮತ್ತು ಐಒಸಿಯ ಸಹ ಸದಸ್ಯರಿಗೆ ನಾನು ಧನ್ಯವಾದ ಹೇಳುತ್ತೇನೆ. ಭಾರತ ಹಾಗೂ ವಿಶ್ವದಾದ್ಯಂತ ಒಲಿಂಪಿಕ್ ಕ್ರೀಡಾಕೂಟವನ್ನು ಬಲಪಡಿಸಲು ಪ್ರಯತ್ನಿಸುತ್ತೇನೆ” ಎಂದು ನೀತಾ ಅಂಬಾನಿ ಹೇಳಿದ್ದಾರೆ. ನೀತಾ ಅಂಬಾನಿ ಪ್ರಸ್ತುತ ಪ್ಯಾರಿಸ್‌ನಲ್ಲಿದ್ದಾರೆ. ಒಲಿಂಪಿಕ್ಸ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಅವರು ಪ್ಯಾರಿಸ್ಗೆ ಭೇಟಿ ನೀಡಿದ್ದಾರೆ.
ಇದನ್ನೂ ಓದಿ Paris Olympics: ಈ ಬಾರಿಯ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಲಿದ್ದಾರೆ ಭಾರತದ 24 ಸೈನಿಕರು
ಈ ಬಾರಿಯ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ(Paris Olympics) ಭಾಗಿಯಾಗುವ ಭಾರತದ ಆ್ಯತ್ಲೀಟ್‌ಗಳಿಗೆ ಮನೆಯ ತಾವರಣವನ್ನು ಕಲ್ಪಿಸಲು ಇದರ ಉದ್ದೇಶದಿಂದ ರಿಲಯನ್ಸ್ ಸಂಸ್ಥೆ “ಇಂಡಿಯಾ ಹೌಸ್”(India House) ಎಂಬ ವಿಶೇಷ ವ್ಯವಸ್ಥೆಯೊಂದನ್ನು ಮಾಡಿದೆ. ಭಾರತೀಯ ಕ್ರೀಡಾಪಟುಗಳು ಇದರಲ್ಲೇ ಉಳಿದುಕೊಳ್ಳಲಿದ್ದಾರೆ.
ಇಂಡಿಯಾ ಹೌಸ್ಗೆ ಎಲ್ಲ ದೇಶಗಳ ಪತ್ರಕರ್ತರಿಗೆ ಮುಕ್ತ ಪ್ರವೇಶವಿದೆ ಎಂದು ನೀತಾ ಅಂಬಾನಿ(Nita Ambani) ಹೇಳಿದ್ದಾರೆ. ನೀತಾ ಅಂಬಾನಿ ಅವರು ಅಂತಾರಾಷ್ಟ್ರೀಯ ಒಲಿಂಪಿಕ್ ಸಂಸ್ಥೆ (ಐಒಸಿ.) ಸದಸ್ಯೆಯಾಗಿದ್ದಾರೆ. ಅಮೆರಿಕಾದ ಲಾಸ್ ಏಂಜಲಿಸ್ನಲ್ಲಿ 2028ರಲ್ಲಿ ನಡೆಯುವ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಸೇರ್ಪಡೆಗೊಳ್ಳುವಲ್ಲಿ ನೀತಾ ಅಂಬಾನಿ ಅವರ ಪಾತ್ರವೂ ಪ್ರಮುಖವಾಗಿತ್ತು. ಕಳೆದ ವರ್ಷ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಅಧಿವೇಶನ(International Olympic Committee Session) ಮುಂಬೈಯಲ್ಲಿ ನಡೆದ ವೇಳೆಯೂ ನೀತಾ ಅಂಬಾನಿ ಈ ಸಭೆಯ ವಕಾಲತ್ತು ವಹಿಸಿದ್ದರು.
ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (IOA)ನ ಪ್ರಮುಖ ಪಾಲುದಾರರಾಗಿ ರಿಲಯನ್ಸ್ ಫೌಂಡೇಷನ್ ಸ್ಥಾಪಿಸಿದ ಇಂಡಿಯಾ ಹೌಸ್ ಎಂಬುದು ಜಾಗತಿಕವಾಗಿ ಭಾರತೀಯ ಕ್ರೀಡೆಗಳನ್ನು ಉನ್ನತ ಸ್ಥಾನಕ್ಕೆ ಒಯ್ಯುವ ಸಾಮೂಹಿಕ ಪ್ರಯತ್ನವನ್ನು ಪ್ರತಿನಿಧಿಸುತ್ತದೆ.