ನವದೆಹಲಿ: ಗಡಿಯಾಚೆಗಿನ ಭಯೋತ್ಪಾದನೆ(Terrorism) ಮತ್ತು ಭಾರತ ಅಕ್ರಮ ಗಡಿ ಒಳನುಸುಳುವಿಕೆಯನ್ನು ನಿಲ್ಲಿಸುವವರೆಗೆ ಪಾಕಿಸ್ತಾನದೊಂದಿಗೆ ಯಾವುದೇ ದ್ವಿಪಕ್ಷೀಯ(IND vs PAK) ಕ್ರಿಕೆಟ್ ಇರುವುದಿಲ್ಲ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್(Anurag Thakur) ಹೇಳಿದ್ದಾರೆ. ಬಿಸಿಸಿಐ(BCCI) ಈಗಾಗಲೇ ಈ ನಿಯವನ್ನು ಪಾಲಿಸುತ್ತಿದೆ.
ಎರಡು ತಂಡಗಳು ಐಸಿಸಿ(ICC) ಮತ್ತು ಏಷ್ಯಾ ಕಪ್(Asia Cup) ಈವೆಂಟ್ಗಳಲ್ಲಿ ಮಾತ್ರ ಪಂದ್ಯಗಳನ್ನು ಆಡುತ್ತಿದೆ. ಆದರೆ ಮುಂಬಯಿ ದಾಳಿಯ ಬಳಿಕ ಪಾಕಿಸ್ತಾನ ಮತ್ತು ಭಾರತ ನಡುವಿನ ದ್ವಿಪಕ್ಷೀಯ ಕ್ರಿಕೆಟ್ ಸಂಬಂಧಗಳನ್ನು ಸ್ಥಗಿತಗೊಳಿಸಲಾಗಿತ್ತು. ಕೆಲವು ದಿನಗಳ ಹಿಂದೆ ಏಷ್ಯಾಕಪ್ ವೀಕ್ಷಿಸಲು ಅಧ್ಯಕ್ಷ ರೋಜರ್ ಬಿನ್ನಿ(Roger Binny) ಮತ್ತು ಉಪಾಧ್ಯಕ್ಷ ರಾಜೀವ್ ಶುಕ್ಲಾ(Rajeev Shukla) ಅವರು ಏಷ್ಯಾಕಪ್ನ(Asia Cup 2023) ಪಂದ್ಯಕ್ಕೆ ಪಾಕಿಸ್ತಾನಕ್ಕೆ ತೆರಳಿದ್ದರು. ಈ ವೇಳೆ ಉಭಯ ದೇಶಗಳ ನಡೆಉವೆ ಮತ್ತೆ ದ್ವಿಪಕ್ಷೀಯ ಸರಣಿ ಆರಂಭವಾಗಲಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿತ್ತು. ಆದರೆ ಇದೀಗ ಅನುರಾಗ್ ಠಾಕೂರ್ ಅವರು ಈ ವಿಚಾರವನ್ನು ತಳ್ಳಿಹಾಕಿದ್ದಾರೆ.
“ಕ್ರೀಡೆಗೆ ಸಂಬಂಧಿಸಿದಂತೆ, ಒಳನುಸುಳುವಿಕೆ ಮತ್ತು ಗಡಿಯಾಚೆಗಿನ ಭಯೋತ್ಪಾದನೆಯನ್ನು ನಿಲ್ಲಿಸುವವರೆಗೆ ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಪಂದ್ಯಗಳನ್ನು ನಡೆಸುವುದಿಲ್ಲ ಎಂದು ಬಿಸಿಸಿಐ ಬಹಳ ಹಿಂದೆಯೇ ನಿರ್ಧರಿಸಿತ್ತು. ಇದು ಈ ದೇಶದ ಪ್ರತಿಯೊಬ್ಬ ಸಾಮಾನ್ಯ ನಾಗರಿಕನ ಭಾವನೆ ಎಂದು ನಾನು ಭಾವಿಸುತ್ತೇನೆ” ಎಂದು ಅನುರಾಗ್ ಠಾಕೂರ್ ಶುಕ್ರವಾರ ಹೇಳಿದ್ದಾರೆ.
ಇದನ್ನೂ ಓದಿ Cricket Australia: ವಿಶ್ವಕಪ್ಗೂ ಮುನ್ನ ಆಸೀಸ್ ಆಟಗಾರರಿಗೆ ನೂತನ ನಿಯಮ ಜಾರಿ; ತಪ್ಪಿದ್ದಲ್ಲಿ ನಿಷೇಧ ಶಿಕ್ಷೆ
ಅಷ್ಟಕ್ಕೂ ಅನುರಾಗ್ ಠಾಕೂರ್ ಅವರು ಈಗ ಏಕೆ ಈ ಮಾತನ್ನು ಹೇಳಿದ್ದಾರೆ ಎಂಬುದು ತಿಳಿದುಬಂದಿಲ್ಲ. ಒಂದು ಮೂಲಗಳ ಪ್ರಕಾರ ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್ ಪಂದ್ಯ ವೀಕ್ಷಿಸಲು ಪಾಕಿಸ್ತಾನದಿಂದ ಅನೇಕರು ಭಾರತಕ್ಕೆ ಬರದು ಸಿದ್ಧತೆ ನಡೆಸಿದ್ದಾರೆ, ಇದೇ ಕಾರಣಕ್ಕೆ ಅನುರಾಗ್ ಠಾಕೂರ್ ಅವರು ಈ ಹೇಳಿಕೆ ಮೂಲಕ ಪಾಕ್ ಅಭಿಮಾನಿಗಳಿಗೆ ಭಾರತಕ್ಕೆ ಪ್ರವೇಶವಿಲ್ಲ ಎನ್ನುವ ಪರೋಕ್ಷ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
2008ರ ಮುಂಬೈ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ದ್ವಿಪಕ್ಷೀಯ ಕ್ರಿಕೆಟ್ ಪಂದ್ಯಾಟಗಳು ನಡೆದಿಲ್ಲ. ಕೇವಲ ಐಸಿಸಿ ಟೂರ್ನಿಗಳಲ್ಲಿ ಮಾತ್ರವೇ ಉಭಯ ತಂಡಗಳು ಮುಖಾಮುಖಿ ಆಗುತ್ತಿದೆ. ಭಾರತ ತಂಡ 2008ರಲ್ಲಿ ಕೊನೆಯ ಬಾರಿ ಏಷ್ಯಾ ಕಪ್ ಟೂರ್ನಿ ಆಡಲು ಪಾಕಿಸ್ತಾನಕ್ಕೆ ಪ್ರವಾಸ ಕೈಗೊಂಡಿತ್ತು ಹಾಗೂ 2006ರಲ್ಲಿ ಪಾಕಿಸ್ತಾನಲ್ಲಿ ಉಭಯ ತಂಡಗಳು ಕೊನೆಯ ದ್ವಿಪಕ್ಷೀಯ ಸರಣಿಯಲ್ಲಿ ಕಾದಾಟ ನಡೆಸಿದ್ದವು. 2016ರ ಟಿ20 ವಿಶ್ವ ಕಪ್ ಟೂರ್ನಿ ಆಡಲು ಪಾಕಿಸ್ತಾನ ಕೊನೆಯ ಬಾರಿ ಭಾರತಕ್ಕೆ ಆಗಮಿಸಿತ್ತು.