ಮುಂಬಯಿ: ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಶುಕ್ರವಾರ ಬಿಸಿಸಿಊ ಭಾರತ ತಂಡವನ್ನು ಪ್ರಕಟಿಸಿತ್ತು. ಆದರೆ, ಈ ತಂಡದಲ್ಲಿ ಇಶಾನ್ ಕಿಶನ್(ishan Kishan) ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಅಶಿಸ್ತಿನ ಕಾರಣದಿಂದಲೇ ಅವರನ್ನು ತಂಡದಿಂದ ಕೈಬಿಡಲಾಗಿದ ಎಂಬ ಮಾತುಗಳು ಮತ್ತೆ ಕೇಳಿ ಬಂದಿದೆ.
ಮಾನಸಿಕ ಒತ್ತಡದಿಂದ ಹೊರಬರಲು ವಿಶ್ರಾಂತಿ ಬೇಕೆಂದು ಕಾರಣ ಹೇಳಿ ದಕ್ಷಿಣ ಆಫ್ರಿಕಾ ಪ್ರವಾಸದಿಂದ ದೂರ ಉಳಿದಿದ್ದ ಇಶಾನ್ ಕಿಶನ್, ಬಳಿಕ ದುಬೈನಲ್ಲಿ ಮಾಜಿ ಆಟಗಾರ ಧೋನಿ ಜತೆ ಪಾರ್ಟಿಯಲ್ಲಿ ಕಾಣಿಸಿಕೊಂಡಿದ್ದರು. ಅಷ್ಟೇ ಅಲ್ಲ, ಟಿವಿ ಶೋಗಳಲ್ಲೂ ಕೂಡಾ ಭಾಗಿಯಾಗಿದ್ದರು. ಇಶಾನ್ ಎಂಜಾಯ್ ಮಾಡುತ್ತಿರುವ ಪೋಟೊಗಳು ವೈರಲ್ ಕೂಡ ಆಗಿತ್ತು.
‘ಕಿಶನ್ ನಂಬಿಕೆಗೆ ಅರ್ಹರಲ್ಲ. ಕ್ರಿಕೆಟ್‌ನಿಂದ ದೂರ ಉಳಿಯಲು ಕೊಟ್ಟ ಕಾರಣವೇ ಬೇರೆ, ಮಾಡಿದ್ದೇ ಬೇರೆ’ ಎಂದು ಬಿಸಿಸಿಐ ಶಿಸ್ತು ಕ್ರಮ ಕೈಗೊಂಡಂತೆ ಅವರನ್ನು ಅಫಘಾನಿಸ್ತಾನ ಟಿ20 ಸರಣಿಯಿಂದ ಕೈಬಿಟ್ಟಿತ್ತು. ಆದರೆ, ಕೋಚ್ ದ್ರಾವಿಡ್ ಅವರು ಕಿಶನ್ ವಿರುದ್ಧ ಅಶಿಸ್ತಿನ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದರು. ಅಲ್ಲದೆ ಅವರಿಗೆ ರಣಜಿ ಆಡಲು ಸೂಚನೆ ನೀಡಿದ್ದರು. ಇದಕ್ಕೂ ಇಶಾನ್ ಒಪ್ಪಲಿಲ್ಲ. ಇದೇ ಕಾರಣಕ್ಕೆ ಅವರನ್ನು ಇಂಗ್ಲೆಂಡ್ ಸರಣಿಗೆ ಆಯ್ಕೆ ಮಾಡಿಲ್ಲ ಎನ್ನುವ ಮಾತುಗಳು ಕೇಳಿ ಬಂದಿವೆ. ಇಶಾನ್ ಸ್ಥಾನಕ್ಕೆ ಧ್ರುವ್ ಜುರೆಲ್ ಅವರನ್ನು ಹೆಚ್ಚುವರಿ ಕೀಪರ್ ಆಗಿ ಆಯ್ಕೆ ಮಾಡಲಾಗಿದೆ. ಇಶಾನ್ ಅವರ ಕೆಟ್ಟ ನಡೆ, ಮುಂಬರುವ ಟಿ20 ವಿಶ್ವಕಪ್ ತಂಡದಲ್ಲೂ ಅವರಿಗೆ ಜಾಗ ಸಿಗದಂತೆ ಮಾಡಬಹುದು ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ Yashasvi Jaiswal : 2023ರಲ್ಲಿ ಮತ್ತೊಂದು ಸಾಧನೆ ಮಾಡಿದ ಯಶಸ್ವಿ ಜೈಸ್ವಾಲ್
2 ಟೆಸ್ಟ್ ಪಂದ್ಯಕ್ಕೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ ), ಶುಭ್‌ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿ.ಕೀ), ಕೆಎಸ್ ಭರತ್ (ವಿ.ಕೀ), ಧ್ರುವ್ ಜುರೆಲ್ (ವಿ.ಕೀ), ಆರ್ ಅಶ್ವಿನ್, ಆರ್ ಜಡೇಜಾ, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್. ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್.
ಭಾರತ ಪ್ರವಾಸದಲ್ಲಿ ಇಂಗ್ಲೆಂಡ್ ಒಟ್ಟು 5 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ. ಸರಣಿಯ ಮೊದಲ ಪಂದ್ಯ ಜನವರಿ 25ರಿಂದ ಹೈದರಾಬಾದ್ನಲ್ಲಿ ನಡೆಯಲಿದೆ. ಬಳಿಕದ 4 ಟೆಸ್ಟ್ಗಳನ್ನು ಕ್ರಮವಾಗಿ ವಿಶಾಖಪಟ್ಟಣ (ಫೆ.2-6), ರಾಜ್ಕೋಟ್ (ಫೆ.15-19), ರಾಂಚಿ (ಫೆ. 23-27) ಮತ್ತು ಧರ್ಮಶಾಲಾದಲ್ಲಿ (ಮಾ.7-11) ಆಡಲಿದೆ.
ವೇಳಾಪಟ್ಟಿ
ಜನವರಿ 25 ರಿಂದ 29- ಮೊದಲ ಟೆಸ್ಟ್ ಪಂದ್ಯ (ಹೈದರಾಬಾದ್)
ಫೆಬ್ರವರಿ 2 ರಿಂದ 6- ಎರಡನೇ ಟೆಸ್ಟ್ ಪಂದ್ಯ (ವಿಶಾಖಪಟ್ಟಣಂ)
ಫೆಬ್ರವರಿ 15 ರಿಂದ 19- ಮೂರನೇ ಟೆಸ್ಟ್ ಪಂದ್ಯ (ರಾಜ್ಕೋಟ್)
ಫೆಬ್ರವರಿ 23 ರಿಂದ 27- ನಾಲ್ಕನೇ ಟೆಸ್ಟ್ ಪಂದ್ಯ (ರಾಂಚಿ)
ಮಾರ್ಚ್ 7 ರಿಂದ 11- ಐದನೇ ಟೆಸ್ಟ್ ಪಂದ್ಯ (ಧರ್ಮಶಾಲಾ)