ಕ್ರಿಕೆಟ್
Asian Games 2023 : ಏಷ್ಯನ್ ಗೇಮ್ಸ್ ತಂಡದಲ್ಲಿ ವಿರಾಟ್, ರೋಹಿತ್ ಇಬ್ಬರೂ ಇಲ್ಲ!
ಅಕ್ಟೋಬರ್ 5ರಿಂದ ಪ್ರಾರಂಭವಾಗುವ 50 ಓವರ್‌ಗಳ ಕ್ರಿಕೆಟ್ ವಿಶ್ವ ಕಪ್‌ನಲ್ಲಿ ಭಾರತ ತಂಡ ಆಡಬೇಕಾಗಿರುವ ಕಾರಣ ಏಷ್ಯನ್ ಗೇಮ್ಸ್‌ಗೆ (Asian Games 2023) ಭಾರತ ಬಿ ತಂಡವನ್ನು ಕಳುಹಿಸಲು ಬಿಸಿಸಿಐ ಚಿಂತನೆ ನಡೆಸಿದೆ. ಹೀಗಾಗಿ ಅದರಲ್ಲಿ ಕೊಹ್ಲಿ ಮತ್ತು ರೋಹಿತ್ ಇರುವುದಿಲ್ಲ.
ಮುಂಬಯಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಏಷ್ಯನ್ ಗೇಮ್ಸ್‌ಗೆ (Asian Games 2023) ಭಾರತ ಬಿ ತಂಡವನ್ನು ಕಳುಹಿಸಲು ಯೋಜನೆ ಹಾಕಿಕೊಂಡಿದೆ ಎಂಬುದಾಗಿ ವರದಿಯಾಗಿದೆ. ಆರಂಭದಲ್ಲಿ ತಂಡವನ್ನು ಕಳುಹಿಸುವುದಿಲ್ಲ ಎಂದು ಹೇಳುತ್ತಿದ್ದ ಬಿಸಿಸಿಐ ಕೊನೆ ಹಂತದಲ್ಲಿ ಯೂಟರ್ನ್ ಹೊಡೆದು ತಂಡವನ್ನು ಕಳುಹಿಸಲು ಒಪ್ಪಿಕೊಂಡಿತ್ತು. ಆದರೆ, ಈ ಟೂರ್ನಿಗೆ ಪ್ರಮುಖ ತಂಡವನ್ನು ಕಳುಹಿಸುವುದು ಬಿಸಿಸಿಐ ಯೋಜನೆಯಲ್ಲ ಎಂಬುದು ಗೊತ್ತಾಗಿದೆ. ಹೀಗಾಗಿ ಈ ತಂಡದಲ್ಲಿ ರೋಹಿತ್ ಶರ್ಮಾ (Rohit Sharma) ಮತ್ತು ವಿರಾಟ್ ಕೊಹ್ಲಿ (Virat Kohli) ಇರುವುದಿಲ್ಲ ಎಂದು ಹೇಳಲಾಗುತ್ತಿದೆ. ಅಕ್ಟೋಬರ್ 5ರಿಂದ ಭಾರತದಲ್ಲಿ ಪ್ರಾರಂಭವಾಗಲಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್‌ನಲ್ಲಿ (World Cup 2023) ಪ್ರಮುಖ ತಂಡ ಆಡಲಿದೆ ಎಂದು ಹೇಳಲಾಗುತ್ತಿದೆ.
ಜೂನ್ 30ರೊಳಗೆ ಆಟಗಾರರ ಪಟ್ಟಿಯನ್ನು ಭಾರತೀಯ ಒಲಿಂಪಿಕ್ ಸಂಸ್ಥೆಗೆ ಕಳುಹಿಸಲು ಬಿಸಿಸಿಐ ಸಜ್ಜಾಗಿದೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಶಮಿ, ಬುಮ್ರಾ ಮತ್ತು ಕೆಎಲ್ ರಾಹುಲ್ ಅವರಂತಹ ಹಿರಿಯ ಆಟಗಾರರು 50 ಓವರ್‌ಗಳ ವಿಶ್ವಕಪ್‌ನಲ್ಲಿ ಆಡಬೇಕಾಗಿರುವ ಕಾರಣ ಬಿಸಿಸಿಐ ಸಂಜು ಸ್ಯಾಮ್ಸನ್, ಋತುರಾಜ್ ಗಾಯಕ್ವಾಡ್ ಮತ್ತು ಉಮ್ರಾನ್ ಮಲಿಕ್ ಅವರಂತಹ ಆಟಗಾರರನ್ನು ಒಳಗೊಂಡಿರುವ ಬಿ ತಂಡವನ್ನು ಕಳುಹಿಸಲು ಮುಂದಾಗಿದೆ. ಈ ತಂಡಕ್ಕೆ ಶಿಖರ್ ಧವನ್ ನಾಯಕರಾಗಬಹುದು ಎಂದು ಅಂದಾಜಿಸಲಾಗಿದೆ.
2010 ಮತ್ತು 2014ರ ಏಷ್ಯನ್ ಗೇಮ್ಸ್‌ನಲ್ಲಿ ಕ್ರಿಕೆಟ್ ಸ್ಪರ್ಧೆಯ ಪಟ್ಟಿಯಲ್ಲಿತ್ತು. ಆದರೆ, ಬಿಸಿಸಿಐ ಭಾರತ ಮಹಿಳಾ ಮತ್ತು ಪುರುಷರ ತಂಡಗಳನ್ನು ಕಳುಹಿಸಿರಲಿಲ್ಲ. ಜಕಾರ್ತಾದಲ್ಲಿ ನಡೆದ 2018ರ ಆವೃತ್ತಿಯಲ್ಲಿ ಕ್ರಿಕೆಟ್ ಇರಲಿಲ್ಲ. ಇದೀಗ 2023ರಲ್ಲಿ ಚೀನಾದ ಹ್ಯಾಂಗ್ಜೌನಲ್ಲಿ ನಡೆಯಲಿರುವ ಕ್ರೀಡಾಕೂಟಕ್ಕೆ ಮರಳಿದೆ. ಈ ಕ್ರೀಡಾಕೂಟ 2022ರಲ್ಲಿ ನಡೆಯಬೇಕಿತ್ತು. ಆದರೆ ಕೋವಿಡ್ ಕಾರಣದಿಂದಾಗಿ 2023ಕ್ಕೆ ಮುಂದೂಡಿಕೆಯಾಗಿದೆ.
ಇದನ್ನೂ ಓದಿ : Team India : ಇಂಜೆಕ್ಷನ್ ತೆಗೆದುಕೊಂಡು ಆಡುತ್ತಿದ್ದೆ! ಮಾಜಿ ವೇಗದ ಬೌಲರ್ ಸ್ಫೋಟಕ ಹೇಳಿಕೆ
ಕ್ರಿಕೆಟ್ ಒಂದನ್ನು ಹೊರತುಪಡಿಸಿ ಉಳಿದ ಎಲ್ಲಾ ಕ್ರೀಡೆಗಳಲ್ಲಿ ನಾವು ಭಾಗವಹಿಸುವಿಕೆಯನ್ನು ಖಾತರಿಪಡಿಸಿದ್ದೇವೆ. ಬಿಸಿಸಿಐ ತಂಡದ ಹೆಸರು ಕೊಡದ ಕಾರಣ ಸಾಧ್ಯವಾಗಿಲ್ಲ ಎಂದು ಏಷ್ಯನ್ ಗೇಮ್ಸ್‌ಗೆ ಭಾರತದ ಚೆಫ್ ಡಿ ಮಿಷನ್ ಭೂಪೇಂದರ್ ಬಜ್ವಾ ಈ ಹಿಂದೆ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದರು. ಇದು ಸಣ್ಣ ಮಟ್ಟಿಗೆ ವಿವಾದಕ್ಕೆ ಕಾರಣವಾಗಿತ್ತು. ಅಂತಾರಾಷ್ಟ್ರೀಯ ಟೂರ್ನಿಗೆ ಭಾರತ ತಂಡವನ್ನು ಕಳುಹಿಸದ ಬಿಸಿಸಿಐ ನಿರ್ಧಾರಕ್ಕೆ ಟೀಕೆಗಳು ವ್ಯಕ್ತಗೊಂಡಿದ್ದವು. ನಾವು ಬಿಸಿಸಿಐಘೇ 3ರಿಂದ 4 ಇ ಮೇಲ್‌ಗಳನ್ನು ಕಳುಹಿಸಿದ್ದೇವೆ ಎಂದು ಬಜ್ವಾ ಹೇಳಿದ್ದರು. ಆದರೆ, ಬಿಸಿಸಿಐ ಈ ಹೇಳಿಕೆಯಿಂದ ನುಣುಚಿಕೊಳ್ಳಲು ಯತ್ನಿಸಿತ್ತು. ನಮಗೆ ತಡವಾಗಿ ಮೇಲ್ ಕಳುಹಿಸಿದ್ದರು ಎಂದ ಆರೋಪಿಸಿತ್ತು.
ಭಾರತವು ಏಕಕಾಲದಲ್ಲಿ ಎರಡು ರಾಷ್ಟ್ರೀಯ ತಂಡಗಳನ್ನು ಏಕಕಾಲಕ್ಕೆ ಕಣಕ್ಕಿಳಿಸುತ್ತಿರುವುದು ಇದು ಮೊದಲೇನಲ್ಲ . 1998ರಲ್ಲಿ ಕೌಲಾಲಂಪುರದಲ್ಲಿ ನಡೆದ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಒಂದು ಕ್ರಿಕೆಟ್ ತಂಡವು ಭಾಗವಹಿಸಿತ್ತು. ಮತ್ತೊಂದು ತಂಡವು ಸಹಾರಾ ಕಪ್‌ನಲ್ಲಿ ಪಾಕಿಸ್ತಾನವನ್ನು ಎದುರಿಸಿತ್ತು. 2021ರಲ್ಲಿ, ಶಿಖರ್ ಧವನ್ ನೇತೃತ್ವದ ಎರಡನೇ ತಂಡವು ಶ್ರೀಲಂಕಾ ವಿರುದ್ಧ ಆಡುವಾಗ ಭಾರತವು ಎರಡೆರಡು ತಂಡಗಳನ್ನು ಕಣಕ್ಕಿಳಿಸಿತ್ತು. ವಿರಾಟ್ ಕೊಹ್ಲಿ ನೇತೃತ್ವದ ಮತ್ತೊಂದು ತಂಡವು ಲಂಡನ್‌ನಲ್ಲಿ ಟೆಸ್ಟ್ ಸರಣಿಯನ್ನು ಆಡಿತ್ತು.
Live News
ind vs Aus : ಮೂರನೇ ಏಕ ದಿನ ಪಂದ್ಯ; ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದಿಂದ ಬ್ಯಾಟಿಂಗ್ ಆಯ್ಕೆ
ಭಾರತ ತಂಡ ಮೊದಲೆರಡು ಪಂದ್ಯಗಳನ್ನು ಗೆದ್ದಿದ್ದು ಸರಣಿಯನ್ನು ಕೈವಶ ಮಾಡಿಕೊಂಡಿದೆ. ಹೀಗಾಗಿ ಈ ಪಂದ್ಯದಲ್ಲಿ ಭಾರತಕ್ಕೆ ಕ್ಲೀನ್ ಸ್ವೀಪ್ ಸಾಧನೆ ಮಾಡುವ ಅವಕಾಶವಿದೆ.
ರಾಜ್ಕೋಟ್: ಇಲ್ಲಿನ ಎಸ್ಸಿ ಕ್ರೀಡಾಂಗಣದಲ್ಲಿ ಆರಂಭಗೊಂಡಿರುವ ಭಾರತ ವಿರುದ್ಧದ 3 ನೇ ಏಕದಿನ ಪಂದ್ಯದಲ್ಲಿ (ind vs Aus) ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಕಮಿನ್ಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಎರಡೂ ತಂಡಗಳು ತಲಾ ಐದು ಬದಲಾವಣೆಗಳನ್ನು ಮಾಡಿವೆ.
A look at our Playing XI for the final ODI 👌👌
— BCCI (@BCCI) September 27, 2023
Follow the Match ▶️ https://t.co/H0AW9UXI5Y#INDvAUS | @IDFCFIRSTBank pic.twitter.com/KpYibJpfSo
ಆಸ್ಟ್ರೇಲಿಯಾ ಪರ ಮಿಚೆಲ್ ಸ್ಟಾರ್ಕ್ ಮತ್ತು ಗ್ಲೆನ್ ಮ್ಯಾಕ್ಸ್ವೆಲ್ ಪುನರಾಗಮನ ಮಾಡಿದರೆ, ತನ್ವೀರ್ ಸಂಗಾ ಏಕದಿನ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದಾರೆ. ರೋಹಿತ್ ಶರ್ಮಾ ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಉಲ್ಲೇಖಿಸಿದಂತೆ ಭಾರತದಲ್ಲೂ ಬದಲಾವಣೆಗಳು ಸಾಕಷ್ಟಾಗಿವೆ. ನಾಯಕ ಮತ್ತು ವಿರಾಟ್ ಕೊಹ್ಲಿ ಮರಳಿದ್ದಾರೆ ಆದರೆ ಶುಭ್ಮನ್ ಗಿಲ್, ಮೊಹಮ್ಮದ್ ಶಮಿ, ಶಾರ್ದೂಲ್ ಠಾಕೂರ್ ಮತ್ತು ಹಾರ್ದಿಕ್ ಪಾಂಡ್ಯ ಅವರ ಅನುಪಸ್ಥಿತಿಯಲ್ಲಿ ಆಡಲಿದೆ. ಭಾರತವು ವಾಷಿಂಗ್ಟನ್ ಸುಂದರ್ ಅವರಿಗಾಗಿ ರವಿಚಂದ್ರನ್ ಅಶ್ವಿನ್ ಅವರನ್ನು ಕೈಬಿಟ್ಟಿದೆ. ರಾಜ್ಯದ ನಾಲ್ವರು ಸ್ಥಳೀಯ ಆಟಗಾರರಾದ ಧರ್ಮೇಂದ್ರ ಜಡೇಜಾ, ಪ್ರೇರಕ್ ಮಂಕಡ್, ವಿಶ್ವರಾಜ್ ಜಡೇಜಾ ಮತ್ತು ಹರ್ವಿಕ್ ದೇಸಾಯಿ ಪಂದ್ಯದುದ್ದಕ್ಕೂ ಡ್ರಿಂಕ್ಸ್ ಮತ್ತು ಫೀಲ್ಡಿಂಗ್ಗಾಗಿ ತಂಡದ ಜತೆಗೆ ಇರಲಿದ್ದಾರೆ.
ಕ್ರಿಕೆಟ್
World Cup 2023 : ಭಾರತ ವಿರುದ್ಧ ಗೆದ್ದವರು ವಿಶ್ವ ಕಪ್ ಗೆಲ್ತಾರೆ; ಪಾಕ್ ತಂಡ ಮಾಜಿ ಆಟಗಾರನ ಭವಿಷ್ಯ
ಹಾಲಿ ವಿಶ್ವ ಕಪ್‌ನಲ್ಲಿ (World Cup 2023) ಆಡುವ ತಂಡಗಳಲ್ಲಿ ಭಾರತ ತಂಡ ಅತ್ಯಂತ ಬಲಿಷ್ಠವಾಗಿದೆ ಎಂಬುದಾಗಿ ಪಾಕಿಸ್ತಾನದ ಮಾಜಿ ಆರಂಭಿಕ ಬ್ಯಾಟರ್ ಅಭಿಪ್ರಾಯಪಟ್ಟಿದ್ದಾರೆ.
ನವ ದೆಹಲಿ: ಏಕದಿನ ವಿಶ್ವ ಕಪ್ 2023 ರ (World Cup 2023) ಆವೃತ್ತಿಯು ಎರಡು ವಾರಗಳಿಗಿಂತ ಕಡಿಮೆ ದೂರದಲ್ಲಿದೆ. ಕ್ರಿಕೆಟ್ ಅಭಿಮಾನಿಗಳ ಉತ್ಸಾಹದ ಮಟ್ಟವು ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿದೆ. ತಜ್ಞರು ಅವಿಸ್ಮರಣಿಯ ಈವೆಂಟ್ನ ಫಲಿತಾಂಶವನ್ನು ಊಹಿಸುವಲ್ಲಿ ನಿರತರಾಗಿದ್ದರೆ, ಕೆಲವರು ತಮ್ಮ ನೆಚ್ಚಿನ ತಂಡಗಳನ್ನು ಹೆಸರಿಸುವಲ್ಲಿ ಬ್ಯುಸಿಯಾಗಿದ್ದಾರೆ. ಇನ್ನೂ ಕೆಲವು ಕ್ರಿಕೆಟ್ ಪಂಡಿತರ ಎಲ್ಲ ತಂಡಗಳ ಬಲ ಮತ್ತು ದುರ್ಬಲ ಅಂಶಗಳನ್ನು ವಿಶ್ಲೇಷಿಸುವಲ್ಲಿ ನಿರತರಾಗಿದ್ದಾರೆ.
ಇಂಗ್ಲೆಂಡ್ ಮಾಜಿ ನಾಯಕ ಮೈಕಲ್ ವಾನ್ ಇತ್ತೀಚೆಗೆ ಟ್ವೀಟ್ನಲ್ಲಿ ಆತಿಥೇಯ ಭಾರತವು ಪಂದ್ಯಾವಳಿಯಲ್ಲಿ ಗೆಲ್ಲುವ ತಂಡ ಎಂದು ಹೇಳಿದ್ದರು. ಅದನ್ನು ಹೊರತುಪಡಿಸಿದರೆ ‘ಮೆನ್ ಇನ್ ಬ್ಲೂ’ ಅನ್ನು ಸೋಲಿಸುವ ತಂಡವು ಪ್ರಶಸ್ತಿಯನ್ನು ಗೆಲ್ಲಬಹುದು ಎಂದು ಹೇಳಿದ್ದರು. ಈಗ, ಪಾಕಿಸ್ತಾನದ ಮಾಜಿ ನಾಯಕ ಸಲ್ಮಾನ್ ಬಟ್ ವಾನ್ ಅವರ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ. ಭಾರತವು ತಪ್ಪುಗಳನ್ನು ಮಾಡದಿದ್ದರೆ ಇತರ ತಂಡಗಳಿಗೆ ಅವರನ್ನು ಸೋಲಿಸುವುದು ತುಂಬಾ ಕಷ್ಟ ಎಂದು ಹೇಳಿದ್ದಾರೆ.
ವಿಶ್ವ ಕ್ರಿಕೆಟ್ನಲ್ಲಿ ಎಲ್ಲ ರೀತಿಯಲ್ಲಿ ಸಮತೋಲನ ಹೊಂದಿರುವ ಏಕೈಕ ತಂಡ ಭಾರತ. ಮುಂಬರುವ ವಿಶ್ವಕಪ್‌ನಲ್ಲಿ ಗಮನಿಸಬೇಕಾದ ನಾಲ್ಕು ತಂಡಗಳ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ. ಆದಾಗ್ಯೂ, ಭಾರತವನ್ನು ಸೋಲಿಸುವ ತಂಡವು ವಿಶ್ವಕಪ್ ಗೆಲ್ಲುತ್ತದೆ ಎಂದು ನಾನು ನಂಬುತ್ತೇನೆ. ಭಾರತ ಅತ್ಯುತ್ತಮ ತಂಡ. ಅವರ ಬ್ಯಾಟಿಂಗ್ ಪರಿಪೂರ್ಣವಾಗಿದೆ ಅವರ ಬೌಲಿಂಗ್ ಅಲ್ಲಿನ ಪರಿಸ್ಥಿತಿಗಳಿಗೆ ಹೆಚ್ಚು ಸೂಕ್ತವಾಗಿದೆ. ಅವರು ಸ್ವಯಂ ತಪ್ಪುಗಳನ್ನು ಮಾಡದ ಹೊರತು, ಯಾವುದೇ ತಂಡವು ಅವರ ಹತ್ತಿರವೂ ಹೋಗುವುದು ಅಸಂಭವ ಎಂದು ಬಟ್ ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ಹೇಳಿದ್ದಾರೆ.
ಉನ್ನತ ದರ್ಜೆಯ ಕ್ರಿಕೆಟ್
ಕಳೆದ ಕೆಲವು ವರ್ಷಗಳಲ್ಲಿ ಭಾರತದಲ್ಲಿ ಕ್ರಿಕೆಟ್ ವಾತಾವರಣವು ಗಣನೀಯವಾಗಿ ಸುಧಾರಿಸಿದೆ. ಆಟಗಾರರು ಫಿಟ್ನೆಸ್ಗೆ ಹೆಚ್ಚಿನ ಒತ್ತು ನೀಡುತ್ತಾರೆ. ಫೀಲ್ಡಿಂಗ್ ಗುಣಮಟ್ಟವನ್ನು ಹೆಚ್ಚಿಸುತ್ತಾರೆ ಎಂದು ಬಟ್ ಹೇಳಿದ್ದಾರೆ. ಭಾರತದ ಮೂಲಸೌಕರ್ಯ ಮತ್ತಿತರ ವ್ಯವಸ್ಥೆಗಳನ್ನು ಬಟ್ ಶ್ಲಾಘಿಸಿದರು.
ಇದನ್ನೂ ಓದಿ : Asian Games 2023 : ಶೂಟಿಂಗ್ ಸ್ಕೀಟ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಭಾರತ ಪುರುಷರ ತಂಡ
“ಕಳೆದ ಕೆಲವು ವರ್ಷಗಳಲ್ಲಿ ಭಾರತವು ಗಮನಾರ್ಹವಾಗಿ ಸುಧಾರಿಸಿದೆ. ಈ ಆಟಗಾರರ ಫಿಟ್ನೆಸ್ ಮಟ್ಟವು ನಾವು 15 ವರ್ಷಗಳ ಹಿಂದೆ ಹೇಳಿದ್ದಕ್ಕಿಂತ ಉತ್ತಮವಾಗಿದೆ. ಅಂತೆಯೇ, ಫೀಲ್ಡಿಂಗ್ ಗುಣಮಟ್ಟವೂ ಸುಧಾರಿಸಿದೆ. ಮೂಲಸೌಕರ್ಯದಿಂದ ಹಿಡಿದು ವೀಕ್ಷಕವಿವರಣೆಗಾರರು, ತಜ್ಞರು ಸೇರಿದಂತೆ ಭಾರತದಲ್ಲಿ ಕ್ರಿಕೆಟ್ಗೆ ಸಂಬಂಧಿಸಿದ ಎಲ್ಲವೂ ಉನ್ನತ ದರ್ಜೆಯದ್ದಾಗಿದೆ, “ಎಂದು ಪಾಕಿಸ್ತಾನದ ಮಾಜಿ ನಾಯಕ ಹೇಳಿದರು.
ರೋಹಿತ್ ಶರ್ಮಾ ಮತ್ತು ತಂಡವು ಏಕದಿನ ವಿಶ್ವಕಪ್ನ ಎಲ್ಲಾ ಮೂರು ಸ್ವರೂಪಗಳಲ್ಲಿ ನಂ.1 ತಂಡವಾಗಿ ಪ್ರವೇಶಿಸಲಿದೆ. ಅಕ್ಟೋಬರ್ 8 ರಂದು ಚೆನ್ನೈನಲ್ಲಿ ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದೊಂದಿಗೆ 10 ತಂಡಗಳ ಟೂರ್ನಿಯಲ್ಲಿ ಅವರ ಅಭಿಯಾನ ಪ್ರಾರಂಭವಾಗುತ್ತದೆ.
ಕ್ರಿಕೆಟ್
Cricket Record : T20ಯಲ್ಲಿ 314 ರನ್, 9 ಬಾಲ್‌ನಲ್ಲಿ ಫಿಫ್ಟಿ, 34 ಬಾಲ್‌ಗಳಲ್ಲಿ ಸೆಂಚುರಿ! ಯಾರ ದಾಖಲೆ ಇದು?
ಮಂಗೋಲಿಯಾ ವಿರುದ್ಧದ ಏಷ್ಯನ್ ಗೇಮ್ಸ್ ನ ತನ್ನ ಆರಂಭಿಕ ಪಂದ್ಯದಲ್ಲಿ ನೇಪಾಳವು ಅದ್ಭುತ ಪವರ್ ಹಿಟ್ಟಿಂಗ್ ಪ್ರದರ್ಶನದೊಂದಿಗೆ ಅನೇಕ ಕ್ರಿಕೆಟ್ ದಾಖಲೆಗಳನ್ನು (Cricket Record) ಮುರಿದಿದೆ.
ಹ್ಯಾಂಗ್ಝೌ: ಏಷ್ಯನ್ ಗೇಮ್ಸ್ (Asian Games 2023) ಕ್ರಿಕೆಟ್ ಸ್ಪರ್ಧೆಯ ಗ್ರೂಪ್ ಪಂದ್ಯದಲ್ಲಿ ಮಂಗೋಲಿಯಾ ವಿರುದ್ಧ ನೇಪಾಳ ಪುರುಷರ ತಂಡ ಇತಿಹಾಸ ಸೃಷ್ಟಿಸಿದೆ. ಪುರುಷರ ಟೂರ್ನಮೆಂಟ್ ಆರಂಭವಾಗುತ್ತಿದ್ದಂತೆ ಸರಣಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ದಾಖಲೆಗಳ (Cricket Record) ಮೇಲೆ ದಾಖಲೆಗಳು ಸೃಷ್ಟಿಯಾಗಿವೆ. ನೇಪಾಳ ತಂಡವು ಮಂಗೋಲಿಯಾ ವಿರುದ್ಧ 20 ಓವರ್ಗಳಲ್ಲಿ 314/3 ರ ನಂಬಲಸಾಧ್ಯವಾದ ಸ್ಕೋರ್ ದಾಖಲಿಸಿತು. ಕೇವಲ 120 ಎಸೆತಗಳಲ್ಲಿ 300 ರನ್ ದಾಖಲಿಸಿ ಅಚ್ಚರಿ ಮೂಡಿಸಿತು. ಕ್ರಿಕೆಟ್ ಆಟದ ಕಿರು ಸ್ವರೂಪದಲ್ಲಿ 300 ರನ್ಗಳ ಗಡಿಯನ್ನು ದಾಟಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು ನೇಪಾಳ. ಏಷ್ಯನ್ ಗೇಮ್ಸ್ ನಲ್ಲಿ ನಡೆಯುವ ಪಂದ್ಯಗಳಿಗೆ ಟ್ವೆಂಟಿ-20 ಸ್ಥಾನಮಾನ ನೀಡಲಾಗುವುದು ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಈ ಹಿಂದೆ ದೃಢಪಡಿಸಿತ್ತು. ಹೀಗಾಗಿ ನೇಪಾಳ ಮಾಡಿದ್ದೆಲ್ಲವೂ ಕ್ರಿಕೆಟ್ ಇತಿಹಾಸದ ದಾಖಲೆ ಪುಸ್ತಕ ಸೇರಿಕೊಂಡವು.
2007ರ ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ವಿರುದ್ಧ 12 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಯುವರಾಜ್ ಸಿಂಗ್ ಅವರ ದೀರ್ಘಕಾಲದ ದಾಖಲೆಯನ್ನು ನೇಪಾಳ ಬ್ಯಾಟರ್ ದೀಪೇಂದ್ರ ಸಿಂಗ್ ಐರಿ ಮುರಿದರು. ಅವರು 9 ಎಸೆತಗಳಲ್ಲಿ ಅರ್ಧ ಶತಕ ಬಾರಿಸಿ 10 ಎಸೆತಗಳಲ್ಲಿ ಅಜೇಯ 52 ರನ್ ಗಳಿಸಿದರು, ಅದರಲ್ಲಿ 48 ರನ್ಗಳು ಸಿಕ್ಸರ್ಗಳ ಮೂಲಕೇ ಬಂದಿದ್ದವು.
Records created by Nepal today in Asian Games in T20I history:
— Johns. (@CricCrazyJohns) September 27, 2023
– First team ever to score 300 runs.
– Kushal Malla scored the fastest ever T20I hundred: 34 balls.
– Dipendra Singh scored the fastest ever T20I fifty: 9 balls. pic.twitter.com/oV0rQYRh6R
ಈ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರ ದಾಖಲೆಯೂ ಮುರಿಯಿತು. ಭಾರತದ ನಾಯಕ ರೋಹಿತ್ ಶರ್ಮಾ ಮತ್ತು ದಕ್ಷಿಣ ಆಫ್ರಿಕಾದ ಸ್ಟಾರ್ ಬ್ಯಾಟರ್ ಡೇವಿಡ್ ಮಿಲ್ಲರ್ ಅವರನ್ನು ಹಿಂದಿಕ್ಕಿದ ನೇಪಾಳ ಬ್ಯಾಟರ್ ಕುಶಾಲ್ ಮಲ್ಲಾ ಕೇವಲ 34 ಎಸೆತಗಳಲ್ಲಿ ಟಿ 20 ಐನಲ್ಲಿ ವೇಗವಾಗಿ ಶತಕ ಗಳಿಸಿದರು. ಇಬ್ಬರೂ ಬ್ಯಾಟರ್ಗಳಲ್ಲಿ 35 ಎಸೆತಗಳಲ್ಲಿ ಮೂರಂಕಿ ಮೊತ್ತ ದಾಟಿದ್ದರು. ಮಲ್ಲಾ 8 ಬೌಂಡರಿ ಮತ್ತು 12 ಸಿಕ್ಸರ್ಗಳನ್ನು ಬಾರಿಸಿ ಕೇವಲ 50 ಎಸೆತಗಳಲ್ಲಿ 137 ರನ್ ಗಳಿಸಿ ಅಜೇಯರಾಗಿ ಉಳಿದರು.
ಇತಿಹಾಸದಲ್ಲಿ ಅತಿ ಹೆಚ್ಚು ಟಿ 20 ಸ್ಕೋರ್ ಗಳ ಪಟ್ಟಿ ಇಲ್ಲಿದೆ
- ನೇಪಾಳ – ಮಂಗೋಲಿಯಾ ವಿರುದ್ಧ 314/4 (2023)
- ಅಫ್ಘಾನಿಸ್ತಾನ – ಐರ್ಲೆಂಡ್ ವಿರುದ್ಧ 278/3 (2019)
- ಜೆಕ್ ಗಣರಾಜ್ಯ – ಟರ್ಕಿ ವಿರುದ್ಧ 278/4 (2019)
- ಆಸ್ಟ್ರೇಲಿಯಾ – ಶ್ರೀಲಂಕಾ ವಿರುದ್ಧ 263/3 (2016)
- ಕೀನ್ಯಾ ವಿರುದ್ಧ ಶ್ರೀಲಂಕಾ 260/6 (2007)
ಕುತೂಹಲಕಾರಿ ಸಂಗತಿಯೆಂದರೆ, ಹ್ಯಾಂಗ್ಝೌನ ಝೆಜಿಯಾಂಗ್ ಯುನಿವರ್ಸಿಟಿ ಆಫ್ ಟೆಕ್ನಾಲಜಿ ಕ್ರಿಕೆಟ್ ಫೀಲ್ಡ್ನಲ್ಲಿ ನೇಪಾಳವು ತಮ್ಮ ಇನ್ನಿಂಗಗ್ಸ್ಗೆ ನಿಧಾನಗತಿಯ ಆರಂಭವನ್ನು ನೀಡಿತು, ಇಬ್ಬರೂ ಆರಂಭಿಕರು 100ಕ್ಕಿಂತ ಕಡಿಮೆ ಸ್ಟ್ರೈಕ್ ರೇಟ್ನಲ್ಲಿ ಆಡಿದ್ದರು. ಆದರೆ, ಬಳಿಕ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು ನೇಪಾಳ ಬ್ಯಾಟರ್ಗಳು.
ಒಂದೇ ಪಂದ್ಯದಲ್ಲಿ 26 ಸಿಕ್ಸರ್ಗಳು
ನೇಪಾಳದ ಬ್ಯಾಟರ್ಗಳು ಒಂದೇ ಇನ್ನಿಂಗ್ಸ್ನಲ್ಲಿ 26 ಸಿಕ್ಸರ್ಗಳನ್ನು ಬಾರಿಸುವ ಮೂಲಕ ತಮ್ಮ ಹಿಟ್ಟಿಂಗ್ ಸಾಮರ್ಥ್ಯವನ್ನು ಪ್ರದರ್ಶಿಸಿದರು. ಈ ಗಮನಾರ್ಹ ಸಾಧನೆಯು ಈಗ ಟಿ 20 ಐ ಇತಿಹಾಸದಲ್ಲಿ ಒಂದೇ ಇನ್ನಿಂಗ್ಸ್ನಲ್ಲಿ ಯಾವುದೇ ತಂಡವು ಅತಿ ಹೆಚ್ಚು ಸಿಕ್ಸರ್ಗಳ ದಾಖಲೆಯಾಗಿದೆ. ಇದು 2019 ರಲ್ಲಿ ಅಫ್ಘಾನಿಸ್ತಾನವು 278/3 ಸ್ಕೋರ್ ಮಾಡಿದಾಗ 22 ಸಿಕ್ಸರ್ಗಳ ದಾಖಲೆಯನ್ನೂ ಮುರಿದಿದೆ.
ಇದನ್ನೂ ಓದಿ :Asian Games 2023 : ಶೂಟಿಂಗ್ನಲ್ಲಿ ಭಾರತಕ್ಕೆ ಚಿನ್ನ, 25 ಮೀಟರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಮಹಿಳೆಯರ ಸಾಧನೆ
ಭಾರತ ನೇರ ಕ್ವಾರ್ಟರ್ಫೈನಲ್ಸ್ಗೆ
ಏಷ್ಯನ್ ಗೇಮ್ಸ್ ನ ಪುರುಷರ ಕ್ರಿಕೆಟ್ ಸ್ಪರ್ಧೆಯ ಮೊದಲ ಸುತ್ತಿನಲ್ಲಿ ತಲಾ ಮೂರು ತಂಡಗಳನ್ನು ಹೊಂದಿರುವ ಮೂರು ಗುಂಪುಗಳಿವೆ. ಪ್ರತಿ ಗುಂಪಿನಲ್ಲಿ ಅಗ್ರ ಸ್ಥಾನ ಪಡೆಯುವ ತಂಡಗಳು ಕ್ವಾರ್ಟರ್ ಫೈನಲ್ಗೆ ಅರ್ಹತೆ ಪಡೆಯುತ್ತವೆ. ಅಲ್ಲಿ ಭಾರತ, ಶ್ರೀಲಂಕಾ, ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಂತಹ ತಂಡಗಳು ಸೇರಿಕೊಳ್ಳುತ್ತವೆ.
ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಭಾಗವಾಗಿದ್ದ ಋತುರಾಜ್ ಗಾಯಕ್ವಾಡ್ ಭಾರತವನ್ನು ಮುನ್ನಡೆಸಲಿದ್ದಾರೆ.
ಕ್ರಿಕೆಟ್
Shubman Gill : ಅಂತಿಮ ಪಂದ್ಯದಲ್ಲಿ ಗಿಲ್ಗೆ ವಿಶ್ರಾಂತಿ? ಪಾಕ್ ನಾಯಕ ಬಾಬರ್ ಅಜಮ್ಗೆ ನೆಮ್ಮದಿ
ಶುಭ್ಮನ್ ಗಿಲ್ಗೆ ಆಸ್ಟ್ರೇಲಿಯಾ ವಿರುದ್ಧದ 3ನೇ ಪಂದ್ಯದಲ್ಲಿ ವಿಶ್ರಾಂತಿ ನೀಡುತ್ತಿರುವ ಕಾರಣ ಅವರಿಗೆ ಬಾಬರ್ ಅಜಮ್ ನಂಬರ್ 1 ಸ್ಥಾನವನ್ನ ಅಕ್ರಮಿಸಿಕೊಳ್ಳುವುದಕ್ಕೆ ಸಾಧ್ಯವಾಗುತ್ತಿಲ್ಲ.
ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಏಕ ದಿನ ಕ್ರಿಕೆಟ್ ಸರಣಿಯ ಮೂರನೇ ಮತ್ತು ಅಂತಿಮ ಪಂದ್ಯಕ್ಕೆ ಭಾರತದ ಆರಂಭಿಕ ಆಟಗಾರ ಶುಭ್ಮನ್ ಗಿಲ್ಗೆ (Shubman Gill) ವಿಶ್ರಾಂತಿ ನೀಡಲಾಗಿದೆ. ಇದರಿಂದಾಗಿ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ ಏಕದಿನ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿ ಉಳಿಯಲಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೊದಲ ಎರಡು ಏಕದಿನ ಪಂದ್ಯಗಳಲ್ಲಿ ಶುಬ್ಮನ್ ಗಿಲ್ 74 ಮತ್ತು 104 ರನ್ ಗಳಿಸಿದ್ದಾರೆ. ಮೂರು ಏಕದಿನ ಪಂದ್ಯಗಳಿಗೆ ಮೊದಲು, ಬಲಗೈ ಬ್ಯಾಟರ್ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಬಾಬರ್ ಅಜಮ್ ಅವರನ್ನು ಹಿಂದಿಕ್ಕಲು ಸುವರ್ಣಾವಕಾಶವಿತ್ತು. ರಾಜ್ಕೋಟ್ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಕಳೆದ ಎರಡು ಹಣಾಹಣಿಗಳಲ್ಲಿ ಶತಕ ಹಾಗೂ ಅರ್ಧಶತಕಗಳನ್ನು ಗಳಿಸಿರುವ ಗಿಲ್ಗೆ ಖಂಡಿತವಾಗಿಯೂ ಮತ್ತೊಂದು ದೊಡ್ಡ ಸ್ಕೋರ್ ಗಳಿಸುವ ಅವಕಾಶವಿತ್ತು. ಆದಾಗ್ಯೂ, ಮೂರನೇ ಏಕದಿನ ಪಂದ್ಯಕ್ಕೆ ಯುವ ಆಟಗಾರನಿಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಅಜಮ್ ದಾಖಲೆ ಮುರಿಯುವ ಅವಕಾಶ ತಪ್ಪಿದೆ.
ಅದ್ಭುತ ಫಾರ್ಮ್ನಲ್ಲಿರುವ ಗಿಲ್
ಕಳೆದ ಬುಧವಾರ ಐಸಿಸಿ ಶ್ರೇಯಾಂಕ ಅಪ್ಡೇಟ್ ಆದ ನಂತರ ಭಾರತದ ಆರಂಭಿಕ ಆಟಗಾರ ಪ್ರಸ್ತುತ ಏಕದಿನ ಬ್ಯಾಟರ್ಗಳ ಐಸಿಸಿ ಶ್ರೇಯಾಂಕದಲ್ಲಿ 814 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಪಾಕ್ ನಾಯಕ ಬಾಬರ್ ಅಜಮ್ ಅವರಿಗಿಂತ ಕೇವಲ 43 ರೇಟಿಂಗ್ ಪಾಯಿಂಟ್ಗಳಿಂದ (857 ರೇಟಿಂಗ್ ಪಾಯಿಂಟ್ಗಳು) ಹಿಂದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಗಿಲ್ 63 ಎಸೆತಗಳಲ್ಲಿ 74 ರನ್ ಗಳಿಸಿದ್ದರು ಮತ್ತು ಭಾನುವಾರ ನಡೆದ ಎರಡನೇ ಏಕದಿನ ಪಂದ್ಯದಲ್ಲಿ 97 ಎಸೆತಗಳಲ್ಲಿ 104 ರನ್ ಗಳಿಸಿದ್ದಾರೆ.
ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಉತ್ತಮ ಪ್ರದರ್ಶನ ನೀಡಲು ಹೆಣಗಾಡಿದ್ದ ಗಿಲ್ ಏಷ್ಯಾ ಕಪ್ 2023 ರ ಸಮಯದಲ್ಲಿ ಸಂಪೂರ್ಣವಾಗಿ ಫಾರ್ಮ್ಗೆ ಮರಳಿದ್ದರು. ಅಲ್ಲಿ ಅವರು ಪ್ರಮುಖ ಗರಿಷ್ಠ ಸ್ಕೋರರ್ ಆಗಿ ಆಟ ಮುಗಿಸಿದ್ದರು. ಅವರು ಆಸೀಸ್ ವಿರುದ್ಧವೂ ತಮ್ಮ ಫಾರ್ಮ್ ಉಳಿಸಿಕೊಂಡರು. ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಮುಂದಿನ ದೊಡ್ಡ ಸ್ಟಾರ್ ಎಂಬ ಹೆಗ್ಗಳಿಕೆಗೆ ತಕ್ಕ ಹಾಗೆ ಬ್ಯಾಟ್ ಬೀಸಿದರು. ಇದೇ ವೇಳೆ ಏಕದಿನ ಮಾದರಿಯಲ್ಲಿ ನಂ.1 ಬ್ಯಾಟರ್ ಎಂಬ ಟ್ಯಾಗ್ ಪಡೆಯುವ ಅವಕಾಶವೂ ಗಿಲ್ಗೆ ಸಿಕ್ಕಿತ್ತು. ಆದಾಗ್ಯೂ, ಅವರು ಸ್ಥಾನವನ್ನು ಪಡೆಯಲು ವಿಶ್ವಕಪ್ ವರೆಗೆ ಕಾಯಬೇಕಾಗಿದೆ ಎಂದು ತೋರುತ್ತದೆ.
ಇದನ್ನೂ ಓದಿ : Shubman Gill: ಗಿಲ್ ಶತಕಕ್ಕೆ ಸಚಿನ್ ಸೇರಿ ಹಲವು ದಿಗ್ಗಜರ ದಾಖಲೆ ಪತನ
ಬಾಬರ್ ಅಜಮ್ ಕೊನೆಯ ಬಾರಿಗೆ ಶ್ರೀಲಂಕಾ ವಿರುದ್ಧದ ಏಷ್ಯಾ ಕಪ್ ಸೂಪರ್ 4 ಪಂದ್ಯದ ವೇಳೆ ಕಾಣಿಸಿಕೊಂಡಿದ್ದರು. ಸ್ಪರ್ಧೆಯಲ್ಲಿ ಬಾಬರ್ ಉತ್ತಮ ಪ್ರದರ್ಶನ ನೀಡಿರಲಿಲ್ಲ. ಪಾಕಿಸ್ತಾನದ ನಾಯಕ ಮುಂಬರುವ ವಿಶ್ವಕಪ್ ನಲ್ಲಿ ಮತ್ತೆಕಾಣಿಸಿಕೊಳ್ಳಲಿದ್ದಾರೆ. ತಮ್ಮ ಅದ್ಭುತ ರನ್ ಗಳಿಸುವ ಸಾಮರ್ಥ್ಯ ಪ್ರದರ್ಶನ ಮಾಡಲಿದ್ದಾರೆ. ಮೆನ್ ಇನ್ ಗ್ರೀನ್ ತಂಡವು ತನ್ನ ಆರಂಭಿಕ ಪಂದ್ಯದಲ್ಲಿ ನೆದರ್ಲೆಂಡ್ಸ್ ತಂಡವನ್ನು ಎದುರಿಸಲಿದೆ. ಪಾಕಿಸ್ತಾನ ಪ್ರಶಸ್ತಿ ಗೆಲ್ಲುವ ಅವಕಾಶದಲ್ಲಿ ಬಾಬರ್ ನಿರ್ಣಾಯಕ ಪಾತ್ರ ವಹಿಸಬೇಕಾಗಿದೆ. ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿ ಉಳಿಸಿಕೊಳ್ಳುವ ಭರವಸೆ ಕೂಡ ಹೊಂದಿದ್ದಾರೆ.
-
ದೇಶ14 hours ago
UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!
-
ವಿದೇಶ22 hours ago
Great auction: ಅಮೆರಿಕದ ಅಪರೂಪದ ನೋಟು 3.9 ಕೋಟಿ ರೂ.ಗೆ ಮಾರಾಟ!
-
ಸುವಚನ9 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ದೇಶ14 hours ago
Manipur Horror: ಅಪಹರಿಸಿ ಕೊಂದ್ರಲ್ಲಾ… ನಮ್ಮ ಮಕ್ಕಳು ಮಾಡಿದ ತಪ್ಪಾದ್ರೂ ಏನು? ಹತ್ಯೆಗೀಡಾದ ವಿದ್ಯಾರ್ಥಿಗಳ ಪೋಷಕರ ಪ್ರಶ್ನೆ
-
ದೇಶ15 hours ago
GST Evasion: ಜಿಎಸ್ಟಿ ವಂಚಿಸಿದ ಬಿಜೆಪಿ ನಾಯಕಿಯ ಸಕ್ಕರೆ ಕಾರ್ಖಾನೆಯ 19 ಕೋಟಿ ರೂ. ಮೌಲ್ಯದ ಸೊತ್ತು ಜಪ್ತಿ!
-
ಆಟೋಮೊಬೈಲ್21 hours ago
Viral News : ಅಮ್ಮನ ಕಾರಿನಲ್ಲಿಯೇ ಮನೆ ಬಿಟ್ಟು ಹೋದ ಪುಟಾಣಿ ಮಕ್ಕಳು, 300 ಕಿ. ಮೀ ದೂರ ಹೋಗಿ ಸಿಕ್ಕಿಬಿದ್ದರು
-
ಕರ್ನಾಟಕ21 hours ago
Assault Case : ರಸ್ತೆ ವಿಚಾರಕ್ಕೆ ವಕೀಲನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು!
-
ಕ್ರಿಕೆಟ್18 hours ago
Ruturaj Gaikwad : ಚೀನಾಗೆ ಹೊರಡುವ ಮೊದಲು ಪುಣೆಯ ಗಣೇಶ ಮಂದಿರಕ್ಕೆ ಭೇಟಿ ನೀಡಿದ ಋತುರಾಜ್