Site icon Vistara News

​’ಇದು ಸುಳ್ಳು’ , ಕೊಹ್ಲಿಯ ಗೈರಿಗೆ 2ನೇ ಮಗುವಿನ ನಿರೀಕ್ಷೆ ಕಾರಣವಲ್ಲ; ಉಲ್ಟಾ ಹೊಡೆದ ಎಬಿಡಿ

Virat Kohli, Anushka

ಜೊಹಾನ್ಸ್​ಬರ್ಗ್​: ವಿರಾಟ್​ ಕೊಹ್ಲಿ(virat kohli) ಅವರು ಇಂಗ್ಲೆಂಡ್(IND vs ENG)​ ವಿರುದ್ಧದ ಮೊದಲ ಎರಡು ಪಂದ್ಯಗಳಿಗೆ ಅಲಭ್ಯರಾಗಲು 2ನೇ ಮಗುವಿನ ನಿರೀಕ್ಷೆಯೇ ಪ್ರಮುಖ ಕಾರಣ ಎಂದು ಹೇಳಿದ್ದ ಕೊಹ್ಲಿಯ ಗೆಳೆಯ, ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಎಬಿ ಡಿ ವಿಲಿಯರ್ಸ್(AB De Villiers)​ ಇದೀಗ ಉಲ್ಟಾ ಹೊಡೆದಿದ್ದಾರೆ. ತಾನು ತಪ್ಪು ಮಾಡಿದ್ದೇನೆ ಎಂದು ಹೇಳಿಕೊಂಡಿದ್ದು, ವಿರಾಟ್ ಮತ್ತು ಅನುಷ್ಕಾ(anushka sharma) ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ(Virat Kohli and Anushka Sharma Expecting 2nd Child) ಎಂಬ ಸುದ್ದಿ ನಿಜವಲ್ಲ ಎಂದು ಹೇಳಿದ್ದಾರೆ.

ಕಳೆದ ಶನಿವಾರ ಆನ್​ಲೈನ್ ಸಂದರ್ಶವೊಂದರಲ್ಲಿ ಮಾತನಾಡಿದ್ದ ​ಡಿ ವಿಲಿಯರ್ಸ್​, ‘ನನಗೆ ತಿಳಿದಿರುವಂತೆ ವಿರಾಟ್ ಕೊಹ್ಲಿ ಕುಟುಂಬದ ಜತೆ ಸಮಯ ಕಳೆಯಲು ಬಯಸಿದ್ದಾರೆ. ವಿರುಷ್ಕಾ ದಂಪತಿ 2ನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದಕ್ಕಿಂತ ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಕುಟುಂಬಕ್ಕೆ ಸಮಯ ನೀಡುವುದು ಕೊಹ್ಲಿಗೆ ಬಿಟ್ಟ ವಿಚಾರ. ಈ ಬಗ್ಗೆ ಟೀಕೆ ಮಾಡುವುದು ಸರಿಯಲ್ಲ. ಅವರ ಬದ್ಧತೆ, ಕ್ರಿಕೆಟ್ ಕುರಿತು ಪ್ರಶ್ನಿಸುವುದು ಸರಿಯಲ್ಲ. ಕೊಹ್ಲಿ ಸರಿಯಾದ ನಿರ್ಧಾರ ತೆಗೆದುಕೊಂಡಿದ್ದಾರೆ” ಎಂದು ವಿಲಿಯರ್ಸ್ ಹೇಳಿದ್ದರು. ಇದೀಗ ವಿರಾಟ್ ಮತ್ತು ಅನುಷ್ಕಾ ಎರಡನೇ ಮಗುವಿನ ನಿರೀಕ್ಷೆಯಲ್ಲಿ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ Virat kohli : ಒಂದೇ ಬಾರಿಗೆ 110 ಕೋಟಿ ರೂಪಾಯಿ ಕಳೆದುಕೊಳ್ಳಲಿದ್ದಾರೆ ವಿರಾಟ್​ ಕೊಹ್ಲಿ

ಎಬಿ ಡಿ ವಿಲಿಯರ್ಸ್ ಅವರು ಇದೀಗ ಈ ಮಾಹಿತಿ ನೀಡಿದ ಬೆನ್ನಲ್ಲೇ ಕೊಹ್ಲಿ ಅವರ ಅಭಿಮಾನಿಗಳಿಗೆ ಆತಂಕಗೊಳ್ಳುವಂತೆ ಮಾಡಿದೆ. ತಮ್ಮ ನೆಚ್ಚಿನ ಆಟಗಾರನಿಗೆ ಏನಾಗಿದೆ? ಅವರು ಎಲ್ಲಿದ್ದಾರೆ? ಹಾಗಾದರೆ ಯಾವ ಕಾರಣಕ್ಕೆ ಕೊಹ್ಲಿ ಹಿಂದೆ ಸರಿದದ್ದು? ಹೀಗೆ ಹಲವು ಪ್ರಶ್ನೆಗಳು ಅಭಿಮಾನಿಗಳನ್ನು ಕಾಡಲಾರಂಭಿಸಿದೆ.

ಕೆಲ ದಿನಗಳ ಹಿಂದೆ ಪಾಕಿಸ್ತಾನದ ಕೆಲ ಮಾಧ್ಯಮಗಳು ವಿರಾಟ್​ ಕೊಹ್ಲಿ ತಾಯಿ ಅಸೌಖ್ಯದಿಂದ ಬಳಲುತ್ತಿದ್ದಾರೆ ಎಂದು ವರದಿ ಮಾಡಿತ್ತು. ಆದರೆ ಕೊಹ್ಲಿಯ ಸಹೋದರ ಈ ವದಂತಿಯನ್ನು ತಳ್ಳಿ ಹಾಕಿದ್ದರು. ತಾಯಿ ಆರೋಗ್ಯವಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡುವ ಮೂಲಕ ಸ್ಪಷ್ಟನೆ ನೀಡಿದ್ದರು.

ವೈಯಕ್ತಿಕ ಕಾರಣಗಳಿಂದ ಇಂಗ್ಲೆಂಡ್ ವಿರುದ್ಧದ(IND vs ENG) ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಅಲಭ್ಯರಾದ ವಿರಾಟ್​ ಕೊಹ್ಲಿ(Virat Kohli) ಅವರು ಮುಂದಿನ ಟೆಸ್ಟ್​ ಪಂದ್ಯಗಳಿಗೆ ತಂಡ ಸೇರಲಿದ್ದಾರಾ ಎನ್ನುವ ಬಗ್ಗೆ ಬಿಸಿಸಿಐ(BCCI) ಇದುವರೆಗೆ ಯಾವುದೇ ಮಾಹಿತಿ ನೀಡಿಲ್ಲ. ಮೂಲಗಳ ಪ್ರಕಾರ ಅವರು ಈ ಸರಣಿಯಿಂದ ಸಂಪೂರ್ಣವಾಗಿ ಹೊರಗುಳಿಯಲಿದ್ದಾರೆ ಎನ್ನಲಾಗಿದೆ. ಇನ್ನೊಂದು ವರದಿಯ ಪ್ರಕಾರ ವಿರಾಟ್ ಕೊಹ್ಲಿ ಅವರು ಮಾರ್ಚ್ 6ಕ್ಕೆ ಧರ್ಮಶಾಲಾದಲ್ಲಿ ಆರಂಭಗೊಳ್ಳಲಿರುವ ಕೊನೆಯ ಟೆಸ್ಟ್‌ನಲ್ಲಿ ಆಡಲಿದ್ದಾರೆ ಎನ್ನಲಾಗಿದೆ. ಒಟ್ಟಾರೆಯಾಗಿ ಕೊಹ್ಲಿ ಯಾವಾಗ ತಂಡದ ಆಯ್ಕೆಗೆ ಲಭ್ಯವಿರುತ್ತಾರೆ ಎಂಬುದು ಇಂದು ಸ್ಪಷ್ಟಗೊಳ್ಳಲಿದೆ.

Exit mobile version