ದುಬೈ: ನೂತನ ಐಸಿಸಿ ಏಕದಿನ ಬ್ಯಾಟಿಂಗ್ ಶ್ರೇಯಾಂಕದಲ್ಲಿ(ICC Ranking) ಟೀಮ್ ಇಂಡಿಯಾದ ನ್ಯೂ ಬ್ಯಾಟಿಂಗ್ ಸೆನ್ಸೇಷನಲ್ ಶುಭಮನ್ ಗಿಲ್(shubman gill) ಜೀವಮಾನ ಶ್ರೇಷ್ಠ ಪ್ರಗತಿ ಕಂಡಿದ್ದಾರೆ. ಆದರೆ ವಿರಾಟ್ ಕೊಹ್ಲಿ ಕುಸಿತ ಕಂಡಿದ್ದಾರೆ.
ಬುಧವಾರ ಪ್ರಕಟಗೊಂಡ ಏಕದಿನ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಶುಭಮನ್ ಗಿಲ್ ಬರೋಬ್ಬರಿ 20 ಸ್ಥಾನಗಳ ಏರಿಕೆ ಕಂಡು 6ನೇ ಸ್ಥಾನ ತಲುಪಿದ್ದಾರೆ. ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ದ್ವಿಶತಕ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಶತಕ ಬಾರಿಸಿ ಮಿಂಚಿದ್ದ ಗಿಲ್ ಒಟ್ಟಾರೆ ಈ ಸರಣಿಯಲ್ಲಿ 360 ರನ್ ಗಳಿಸಿದ್ದರು. ಇದೀಗ ಈ ಸಾಧನೆಯಿಂದ ಅವರು ಬ್ಯಾಟಿಂಗ್ ಶ್ರೇಯಾಂಕದಲ್ಲಿ ಉತ್ತಮ ಜಿಗಿತ ಕಂಡಿದ್ದಾರೆ.
ವಿರಾಟ್ ಕೊಹ್ಲಿ 7ನೇ ಸ್ಥಾನಕ್ಕೆ ಕುಸಿದಿದ್ದಾರೆ. ನ್ಯೂಜಿಲ್ಯಾಂಡ್ ವಿರುದ್ಧದ ಸರಣಿಯಲ್ಲಿ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ವಿಫಲವಾದ ಕಾರಣ ಕೊಹ್ಲಿ ಶ್ರೇಯಾಂಕದಲ್ಲಿ ಕುಸಿತ ಕಂಡರು. ಆದರೆ ಅಂತಿಮ ಪಂದ್ಯದಲ್ಲಿ ಶತಕ ಬಾರಿಸಿ ಮಿಂಚಿದ ರೋಹಿತ್ ಶರ್ಮಾ ಎರಡು ಸ್ಥಾನಗಳನ್ನು ಜಿಗಿದು ಎಂಟನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಒಟ್ಟಾರೆ ಟಾಪ್ 10ನಲ್ಲಿ ಮೂವರು ಭಾರತೀಯ ಆಟಗಾರರು ಸ್ಥಾನ ಪಡೆದಿದ್ದಾರೆ.
ಇದನ್ನೂ ಓದಿ | Mohammed Siraj: ಏಕದಿನ ಬೌಲಿಂಗ್ ಶ್ರೇಯಾಂಕ; ನಂ.1 ಸ್ಥಾನಕ್ಕೇರಿದ ಟೀಮ್ ಇಂಡಿಯಾ ವೇಗಿ