ಲಂಡನ್: ಭಾರತ ಹಾಗೂ ಇಂಗ್ಲೆಂಡ್ (INDvsENG ODI) ನಡುವಿನ ಏಕದಿನ ಸರಣಿಯ ಮೊದಲ ಪಂದ್ಯ ಇಲ್ಲಿನ ಕೆನಿಂಗ್ಟನ್ ಓವಲ್ ಮೈದಾನದಲ್ಲಿ ಆರಂಭಗೊಂಡಿದೆ. ಟಾಸ್ ಗೆದ್ದಿರುವ ಭಾರತ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ನಿರೀಕ್ಷೆಯಂತೆ ಮಾಜಿ ನಾಯಕ ವಿರಾಟ್ ಕೊಹ್ಲಿ ಆಡುವ ಬಳಗಕ್ಕೆ ಸೇರಿಕೊಂಡಿಲ್ಲ. ಅವರು ಗಾಯಗೊಂಡಿದ್ದು, ಆಡುವುದಿಲ್ಲ ಎಂದು ನಾಯಕ ರೋಹಿತ್ ಶರ್ಮ ಹೇಳಿದ್ದಾರೆ. ಅವರ ಸ್ಥಾನಕ್ಕೆ ಶ್ರೇಯಸ್ ಅಯ್ಯರ್ ಆಯ್ಕೆಯಾಗಿದ್ದಾರೆ. ಅಂತೆಯೇ ಬೌಲರ್ಗಳ ವಿಭಾಗದಲ್ಲಿ ಕನ್ನಡಿಗ ಪ್ರಸಿದ್ಧ್ ಕೃಷ್ಣ ಸ್ಥಾನ ಪಡೆದುಕೊಂಡಿದ್ದಾರೆ.
ಈ ಪಿಚ್ನಲ್ಲಿ ಟಾಸ್ ಗೆಲ್ಲುವ ತಂಡದ ನಾಯಕ ಬೌಲಿಂಗ್ ಆಯ್ಕೆ ಮಾಡಿಕೊಳ್ಳುತ್ತಾರೆ. ಶೇಕಡಾ ೭೨ ಸಂದರ್ಭದಲ್ಲಿ ಟಾಸ್ ಗೆದ್ದ ನಾಯಕ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಆಡುವ ೧೧ರ ಬಳಗ
ಭಾರತ: ರೋಹಿತ್ ಶರ್ಮ ನಾಯಕ), ಶಿಖರ್ ಧವನ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರಿತ್ ಬುಮ್ರಾ, ಯಜ್ವೇಂದ್ರ ಚಹಲ್, ಪ್ರಸಿದ್ಧ್ ಕೃಷ್ಣ.
ಇಂಗ್ಲೆಂಡ್: ಜೇಸನ್ ರಾಯ್, ಜಾನಿ ಬೈರ್ಸ್ಟೋವ್, ಜೋ ರೂಟ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್ (ನಾಯಕ), ಲಿಯಾಮ್ ಲಿವಿಂಗ್ಸ್ಟನ್, ಮೊಯೀನ್ ಅಲಿ, ಕ್ರೇಗ್ ಓವರ್ಟನ್, ಡೇವಿಡ್ ವಿಲ್ಲಿ, ಬ್ರಿಡೋನ್ ಕರ್ಸೆ, ರೀಸ್ ಟೋಪ್ಲಿ.
ಇದನ್ನೂ ಓದಿ: IND vs ENG ODI ; ವಿರಾಟ್ ಕೊಹ್ಲಿ ಅಲಭ್ಯತೆಗೆ ಕಾರಣವೇನು?