Site icon Vistara News

Olympics On Television: ಒಲಿಂಪಿಕ್ಸ್​ ಕ್ರೀಡಾಕೂಟ ಮೊದಲ ಬಾರಿಗೆ ಟಿವಿಯಲ್ಲಿ ಪ್ರಸಾರ ಕಂಡಿದ್ದು ಯಾವಾಗ?

Olympics on television

Olympics on television: In which year were the Olympics games shown on television for the first time?

ಬೆಂಗಳೂರು: ಬಹುನಿರೀಕ್ಷಿತ ಪ್ಯಾರಿಸ್ ಒಲಿಂಪಿಕ್ಸ್ 2024ರ ಕ್ರೀಡಾಕೂಟ ಆರಂಭಕ್ಕೆ ಇನ್ನು ಕೇವಲ 10 ದಿನಗಳು ಮಾತ್ರ ಬಾಕಿ ಉಳಿದಿವೆ. ಹಿಂದೆಂದಿಗಿಂತಲೂ ಈ ಬಾರಿ ಒಲಿಂಪಿಕ್ಸ್​ ಟೂರ್ನಿಯ ಪ್ರಸಾರ ದೊಡ್ಡ ಮಟ್ಟದಲ್ಲಿ ಇರಲಿದೆ. ಜಿಯೋ ಸಿನಿಮಾದಲ್ಲಿ ಉಚಿತವಾಗಿ ಪ್ರಸಾರಗೊಳ್ಳಲಿದೆ. ಆದರೆ ಮೊದಲ ಬಾರಿಗೆ ಒಲಿಂಪಿಕ್ಸ್​ ಟಿವಿಯಲ್ಲಿ(Olympics On Television) ಪ್ರಸಾರ ಕಂಡಿದ್ದು ಯಾವಾಗ? ಯಾರ ಆತಿಥ್ಯದಲ್ಲಿ ನಡೆದ ಒಲಿಂಪಿಕ್ಸ್​ ಇದಾಗಿತ್ತು ಎನ್ನುವ ಮಾಹಿತಿ ಇಂತಿದೆ.

ಮೊದಲ ಬಾರಿಗೆ ಒಲಿಂಪಿಕ್ಸ್​ ಕ್ರೀಡಾಕೂಟ ಟಿವಿಯಲ್ಲಿ ಪ್ರಸಾರಗೊಂಡದ್ದು 1936ರಲ್ಲಿ. ಬರ್ಲಿನ್​ನಲ್ಲಿ ನಡೆದಿದ್ದ ಟೂರ್ನಿ ಇದಾಗಿತ್ತು. ಆದರೆ, ಆತಿಥೇಯ ಜರ್ಮನಿಯ ಟಿವಿ ಹಾಲ್‌ಗ‌ಳಲ್ಲಿ ಮಾತ್ರ ಇದು ಪ್ರಸಾರ ಕಂಡಿತ್ತು. ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಟಿವಿಯಲ್ಲಿ ಪ್ರಸಾರಗೊಂಡ ಒಲಿಂಪಿಕ್ಸ್​ ಕ್ರೀಡಾಕೂಟ ಟೋಕಿಯೊ ಒಲಿಂಪಿಕ್ಸ್‌. 1964ರಲ್ಲಿ ನಡೆದಿದ್ದ ಟೂರ್ನಿ ಇದಾಗಿತ್ತು. ಇದಾದ ಬಳಿಕ 1956ರಲ್ಲಿ ಮೆಲ್ಬರ್ನ್ ಒಲಿಂಪಿಕ್ಸ್‌ನಲ್ಲಿ ಮೊದಲ ಬಾರಿಗೆ ಟಿವಿ ಪ್ರಸಾರ ಹಕ್ಕು ಮಾರಾಟ ಮಾಡಲಾಗಿತ್ತು. ಈ ಬಾರಿ ಟಿವಿ ಮಾತ್ರವಲ್ಲದೆ ಮೊಬೈಲ್​ ಆ್ಯಪ್​ನಲ್ಲಿಯೂ ಒಲಿಂಪಿಕ್ಸ್​ ಪ್ರಸಾರಗೊಳ್ಳುವ ಕಾರಣ ಪ್ರಸಾರಕರಿಗೆ ದೊಡ್ಡ ಮೊತ್ತದ ಹಣ ಸಿಗಲಿದೆ.

ಒಲಿಂಪಿಕ್ಸ್‌ನಲ್ಲಿ ಡೋಪಿಂಗ್‌


ಎಲ್ಲ ಕ್ರೀಡೆಗಳಲ್ಲಿರುವಂತೆ ಇದೀಗ ಒಲಿಂಪಿಕ್ಸ್‌ಗಳಲ್ಲಿಯೂ ಉದ್ದೀಪನ ಪರೀಕ್ಷೆ ಕಟ್ಟುನಿಟ್ಟಾಗಿ ನಡೆಯುತ್ತದೆ. ಒಲಿಂಪಿಕ್ಸ್‌ ಇತಿಹಾಸದಲ್ಲಿ ಮೊದಲ ಬಾರಿಗೆ ಮಾದಕ ದ್ರವ್ಯ ಸೇವನೆ ಪ್ರಕರಣ ಬೆಳಕಿಗೆ ಬಂದದ್ದು 1968ರ ಮೆಕ್ಸಿಕೊ ಗೇಮ್ಸ್‌ನಲ್ಲಿ. ಬಿಯರ್‌ ಕುಡಿದಿದ್ದಕ್ಕಾಗಿ ಸ್ವೀಡನ್‌ ಆ್ಯತ್ಲೀಟ್‌ ಹನ್ಸ್‌-ಗುನ್ನಾರ್‌ ಲಿಲಿಜೆನ್‌ವಾಲ್‌ ನಿಷೇಧ ಶಿಕ್ಷೆ ಅನುಭವಿಸಬೇಕಾಯಿತು! ಇದಕ್ಕಾಗಿ ಅವರು ಗೆದ್ದಿದ್ದ ಕಂಚಿನ ಪದಕವನ್ನೂ ವಾಪಸ್‌ ಪಡೆಯಲಾಗಿತ್ತು.

ಇದನ್ನೂ ಓದಿ India at the Olympics: ಒಲಿಂಪಿಕ್ಸ್​ನಲ್ಲಿ ಭಾರತದ ಪದಕ ಸಾಧನೆಯ ಇಣುಕು ನೋಟ

ಸೀನ್ ನದಿಯಲ್ಲಿ ಉದ್ಘಾಟನಾ ಸಮಾರಂಭ


ಈ ಬಾರಿಯ ಒಲಿಂಪಿಕ್ಸ್​ ಉದ್ಘಾಟನಾ ಸಮಾರಂಭ(paris olympics 2024 opening ceremony) ಜುಲೈ 26ರಂದು ಸೀನ್ ನದಿಯಲ್ಲಿ ಸಂಜೆ 7.30ಕ್ಕೆ ಅದ್ಧೂರಿ ಕಾರ್ಯಕ್ರಮದೊಂದಿಗೆ ನೆರವೇರಲಿದೆ. ಕ್ರೀಡಾಕೂಟ ಜುಲೈ 26ರಿಂದ ಆರಂಭವಾಗಿ, ಆಗಸ್ಟ್‌ 11ರವರೆಗೆ ನಡೆಯಲಿದೆ. ಪ್ಯಾರಾಲಿಂಪಿಕ್ಸ್‌ ಆಗಸ್ಟ್‌ 28 ರಿಂದ ಸೆಪ್ಟೆಂಬರ್‌ 8ರವರೆಗೆ ನಿಗದಿಯಾಗಿದೆ. ಇದಕ್ಕೆ ಬೇಕಾದ ಎಲ್ಲ ಸಿದ್ಧತೆಯನ್ನು ಈಗಾಗಲೇ ಕ್ರೀಡಾಕೂಟದ ಆಯೋಜಕರು ಮಾಡಿದ್ದಾರೆ. ಗೇಮ್ಸ್‌ಗಾಗಿಯೇ ಇಲ್ಲಿನ ಸೀನ್‌ ನದಿಯನ್ನು ಸಾರ್ವಜನಿಕ ನಿಧಿಯಿಂದ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಿ ಈ ನದಿಯನ್ನು ಸ್ನಾನಮಾಡಲು ಯೋಗ್ಯವೆನಿಸುವ ರೀತಿಯಲ್ಲಿ ಸ್ವಚ್ಛ ಮಾಡಲಾಗಿದೆ.

ಇದನ್ನೂ ಓದಿ Paris Olympics 2024 : ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಕಡಿಮೆ ಪದಕಗಳು ಸಿಗುವುದು ಯಾಕೆ? ಈ ಪ್ರಶ್ನೆಗೆ ಇಲ್ಲಿದೆ ಉತ್ತರ

ಬೋಟ್‌ಗಳಲ್ಲೇ ಪರೇಡ್‌


ಒಲಿಂಪಿಕ್ಸ್​ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕ್ರೀಡಾಂಗಣದ ಹೊರಗಡೆ ನಡೆಯುವ ಉದ್ಘಾಟನಾ ಸಮಾರಂಭ ಇದಾಗಿದೆ. 10,500ಕ್ಕೂ ಹೆಚ್ಚು ಅಥ್ಲೀಟ್‌ಗಳು ಪ್ಯಾರಿಸ್‌ನಿಂದ ಸುಮಾರು 6 ಕಿಲೋಮೀಟರ್‌ ವರೆಗೆ ಬೋಟ್‌ಗಳಲ್ಲೇ ಪರೇಡ್‌ ನಡೆಸಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

Exit mobile version