ಆಂಧ್ರಪ್ರದೇಶ: ಕೆಲ ದಿನಗಳ ಹಿಂದಷ್ಟೇ ಆಂಧ್ರಪ್ರದೇಶದ ವೈಎಸ್‌ಆರ್ ಕಾಂಗ್ರೆಸ್(YSRCP Party) ಪಕ್ಷ ಸೇರಿದ್ದ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಅಂಬಾಟಿ ರಾಯುಡು(Ambati Rayudu) ದಿಢೀರ್ ರಾಜಕೀಯದಿಂದ ಹಿಂದೆ ಸರಿದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ನಾನು ವೈಎಸ್‌ಆರ್‌ಸಿಪಿ ಪಕ್ಷವನ್ನು ತೊರೆಯುತ್ತಿದ್ದು ಸ್ವಲ್ಪ ಸಮಯದವರೆಗೆ ರಾಜಕೀಯದಿಂದ ದೂರವಿರಲು ನಿರ್ಧರಿಸಿದ್ದೇನೆ’ ಎಂದು ಹೇಳಿದ್ದಾರೆ. ಮುಂದಿನ ನಡೆ ಕುರಿತು ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದಾರೆ.
This is to inform everyone that I have decided to quit the YSRCP Party and stay out of politics for a little while. Further action will be conveyed in due course of time.
— ATR (@RayuduAmbati) January 6, 2024
Thank You.
ರಾಯುಡು ದಿಢೀರ್ ರಾಜಕೀಯದಿಂದ ಹಿಂದೆ ಸರಿದಿರುವುದನ್ನು ನೋಡುವಾಗ ಅವರು ಬೇರೆ ಪಕ್ಷಕ್ಕೆ ಸೇರುವ ಸಾಧ್ಯತೆಯೊಂದು ದಟ್ಟವಾಗಿದೆ. ಡಿಸೆಂಬರ್ 29ರಂದು ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ ರೆಡ್ಡಿ(YS Jagan Mohan Reddy) ಸಮ್ಮುಖದಲ್ಲಿ ರಾಯುಡು ವೈಎಸ್‌ಆರ್ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದರು. ಇದೀಗ ಪಕ್ಷ ತೊರದಿದ್ದಾರೆ.
సీఎం క్యాంప్ కార్యాలయంలో ముఖ్యమంత్రి శ్రీ వైఎస్ జగన్ సమక్షంలో వైఎస్సార్ కాంగ్రెస్ పార్టీలో చేరిన ప్రముఖ భారత క్రికెటర్ అంబటి తిరుపతి రాయుడు.
— YSR Congress Party (@YSRCParty) December 28, 2023
ఈ కార్యక్రమంలో పాల్గొన్న డిప్యూటీ సీఎం నారాయణ స్వామి, ఎంపీ పెద్దిరెడ్డి మిథున్ రెడ్డి.#CMYSJagan#AndhraPradesh @RayuduAmbati pic.twitter.com/QJJk07geHL
ಅಂಬಾಟಿ ರಾಯುಡು ಅವರು ರಾಜಕಾರಣ ಸೇರುವುದಾಗಿ ಕಳೆದ ಜೂನ್ ತಿಂಗಳಲ್ಲಿ ಘೋಷಣೆ ಮಾಡಿದ್ದರು. ತಮ್ಮ ತವರು ಜಿಲ್ಲೆ ಗುಂಟೂರಿಗೆ ಮೇ ತಿಂಗಳಲ್ಲಿ ಪ್ರವಾಸ ಕೈಗೊಂಡಿದ್ದ ರಾಯುಡು ಅವರು, ಸ್ಥಳೀಯ ಸಮಸ್ಯೆಗಳನ್ನು ಆಲಿಸಿದ್ದರು. ನಾನಾ ಸ್ತರದ ಜನರೊಂದಿಗೆ ಭೇಟಿ ಮಾಡಿ ಮಾತುಕತೆ ನಡೆಸಿದ್ದರು.
ಇದನ್ನೂ ಓದಿ Ambati Rayudu: ಕೆರಿಬಿಯನ್ ಪ್ರೀಮಿಯರ್ ಲೀಗ್ ಆಡಲು ಸಜ್ಜಾದ ಅಂಬಾಟಿ ರಾಯುಡು
ಜನಸೇವೆಗಾಗಿ ನಾನು ಶೀಘ್ರದಲ್ಲೇ ಆಂಧ್ರಪ್ರದೇಶದಲ್ಲಿ ರಾಜಕೀಯಕ್ಕೆ ಬರುತ್ತೇನೆ. ಅದಕ್ಕೂ ಮುನ್ನ ಜಿಲ್ಲೆಯ ವಿವಿಧ ಭಾಗಗಳಿಗೆ ಭೇಟಿ ನೀಡಿ ಜನರ ನಾಡಿಮಿಡಿತ ಅರಿಯಲು ಮತ್ತು ಅವರ ಸಮಸ್ಯೆಗಳನ್ನು ಅರಿಯಲು ನಿರ್ಧರಿಸಿದ್ದೇನೆ ಎಂದು ರಾಯುಡು ಅ ವರು ಆಗ ಸುದ್ದಿಗಾರರಿಗೆ ತಿಳಿಸಿದ್ದರು. ರಾಜಕಾರಣಕ್ಕೆ ಹೇಗೆ ಪ್ರವೇಶ ಪಡೆಯುವುದು ಮತ್ತು ಯಾವ ಪಕ್ಷವನ್ನು ನಾನು ಆಯ್ಕೆ ಮಾಡಿಕೊಳ್ಳಬೇಕು ಎಂಬ ಕುರಿತು ಶೀಘ್ರವೇ ಕ್ರಿಯಾ ಯೋಜನೆಯೊಂದಿಗೆ ಬರಲಿದ್ದೇನೆ ಎಂದು ಅವರು ಹೇಳಿದ್ದಾರೆ. ಹಾಗೆಯೇ, ಇದೇ ವರ್ಷದ ಏಪ್ರಿಲ್ ತಿಂಗಳಲ್ಲಿ ರಾಯುಡು ಅವರು ಹಾಲಿ ಸಿಎಂ ವೈಎಸ್ ಜಗನ್ ಅವರನ್ನು ಹೊಗಳಿದ್ದರು.
ಭಾರತೀಯ ರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಂದ್ಯಗಳನ್ನು ಆಡಲು ಅಂಬಾಟಿ ರಾಯುಡು ಅವರಿಗೆ ಅವಕಾಶ ಸಿಗಲಿಲ್ಲ. ತಮಗೆ ಸಿಕ್ಕ ಸಿಮೀತ ಅವಧಿಯಲ್ಲೇ ಅವರು ಗಮನ ಸೆಳೆದಿದ್ದರು. 55 ಏಕದಿನ ಪಂದ್ಯಗಳನ್ನು ಆಡಿರುವ ರಾಯುಡು ಅವರು, 47.06ರ ಸರಾಸರಿಯಲ್ಲಿ 1694 ರನ್‌ಗಳನ್ನು ಕಲೆ ಹಾಕಿದ್ದಾರೆ.