Site icon Vistara News

ಮಿನಿ ಹರಾಜಿಗೆ ಕೇವಲ ಮೂರು ದಿನ ಬಾಕಿ; ಯಾವ ತಂಡಕ್ಕೆ ಎಷ್ಟು ಆಟಗಾರರು ಬೇಕು?

IPL 2024 Auction

ಮುಂಬಯಿ: 17ನೇ ಆವೃತ್ತಿಯ ಐಪಿಎಲ್(IPL 2024)​ ಆಟಗಾರರ ಮಿನಿ ಹಾರಾಜಿಗೆ(IPL Auction 2024) ಇನ್ನು ಕೇವಲ ಮೂರು ದಿನಗಳು ಮಾತ್ರ ಬಾಕಿ ಉಳಿದಿದೆ. ಆಟಗಾರರ ಹರಾಜು ಪ್ರಕ್ರಿಯೆ ಡಿ.19ರಂದು ದುಬೈನಲ್ಲಿ ನಡೆಯಲಿದೆ. ವಿದೇಶದಲ್ಲಿ ಆಟಗಾರರ ಹರಾಜು ನಡೆಯುತ್ತಿರುವುದು ಇದೇ ಮೊದಲ ಬಾರಿ. ಹಲವು ಆಟಗಾರರು ಕೋಟಿ ಮೊತ್ತ ಜೇಬಿಗಿಳಿಸುವ ನಿರೀಕ್ಷೆ ಇದೆ. ಯಾವ ತಂಡಕ್ಕೆ ಎಷ್ಟು ಆಟಗಾರರು ಬೇಕು ಎನ್ನುವ ಸಂಪೂರ್ಣ ಸಂಪೂರ್ಣ ಮಾಹಿತಿ ಇಂತಿದೆ.

ಎಲ್ಲ ಪ್ರಾಂಚೈಸಿಗಳು ಬಿಡ್ಡಿಂಗ್​ನಲ್ಲಿ ಆಟಗಾರರನ್ನು ಖರೀದಿಸಲು ಸಕಲ ಸಿದ್ಧತೆ ನಡೆಸಿವೆ. ಇದೀಗ ಐಪಿಎಲ್ ಮಂಡಳಿಯು ಹರಾಜಿಗೆ ಒಳಗಾಗಲಿರುವ ಆಟಗಾರರ ಪಟ್ಟಿಯನ್ನು ಅಂತಿಮಗೊಳಿಸಿದೆ. ಒಟ್ಟು 333 ಮಂದಿ ಆಟಗಾರರು ಹರಾಜಿನ ಭಾಗವಾಗಲಿದ್ದಾರೆ. ಇದರಲ್ಲಿ 214 ಭಾರತೀಯರು ಮತ್ತು 119 ಮಂದಿ ವಿದೇಶಿ ಆಟಗಾರರು ಸೇರಿದ್ದಾರೆ. ಅಸೋಸಿಯೇಟ್ ದೇಶಗಳ ಇಬ್ಬರು ಆಟಗಾರರು ಅವಕಾಶ ಪಡೆದಿದ್ದಾರೆ.

ಮುಂಬೈ ಇಂಡಿಯನ್ಸ್

ಐಪಿಲ್​ನ ಅತ್ಯಂತ ಯಶಸ್ವಿ ತಂಡವೆನಿಸಿದ ಮುಂಬೈ ಇಂಡಿಯನ್ಸ್​ ತಂಡವು ಈ ಬಾರಿಯ ಹರಾಜಿನಲ್ಲಿ 8 ಆಟಗಾರರನ್ನು ಖರೀದಿ ಮಾಡುವ ಅವಕಾಶ ಹೊಂದಿದೆ. ನಾಲ್ವರು ವಿದೇಶಿ ಹಾಗೂ ನಾಲ್ವರು ಭಾರತೀಯ ಆಟಗಾರರನ್ನು ಖರೀದಿಸಬಹುದಾಗಿದೆ. ಟ್ರೆಡಿಂಗ್​ ನಿಯಮದ ಮೂಲಕ ಗುಜರಾತ್​ ತಂಡದಿಂದ ಹಾರ್ದಿಕ್​ ಪಾಂಡ್ಯ ಅವರನ್ನು ಈಗಾಗಲೇ ಖರೀದಿ ಮಾಡಿ ಬಲಿಷ್ಠ ತಂಡ ರೂಪಿಸಿಕೊಂಡಿದೆ. ಸದ್ಯ ಫ್ರಾಂಚೈಸಿ ಬಳಿ 15.25 ಕೋಟಿ ರೂ. ಹಣವಿದೆ.

ಗುಜರಾತ್ ಟೈಟಾನ್ಸ್

ಒಂದು ಬಾರಿ ಚಾಂಪಿಯನ್​ ಮತ್ತು ಕಳೆದ ಬಾರಿ ರನ್ನರ್​ ಅಪ್​ ಗುಜರಾತ್​ ಟೈಟಾನ್ಸ್​ ತಂಡಕ್ಕೆ ಮಿನಿ ಹರಾಜಿನಲ್ಲಿ ಒಟ್ಟು 8 ಆಟಗಾರರನ್ನು ಖರೀದಿಸಬಹುದು. ಇದರಲ್ಲಿ 6 ಭಾರತೀಯ ಹಾಗೂ ಎಡರು ವಿದೇಶಿ ಆಟಗಾರ ಆಯ್ಕೆ ಮಾತ್ರ ಸಾಧ್ಯವಾಗಲಿದೆ. 38.15 ಕೋಟಿ ರೂ. ಉಳಿಕೆ ಹಣವಿದೆ.

ಚೆನ್ನೈ ಸೂಪರ್ ಕಿಂಗ್ಸ್

ಮಹೇಂದ್ರ ಸಿಂಗ್​ ಧೋನಿ ಸಾರಥ್ಯದ ಚನ್ನೈ ಸೂಪರ್​ ಕಿಂಗ್ಸ್​ ತಂಡಕ್ಕೆ ಈ ಬಾರಿ 6 ಆಟಗಾರರನ್ನು ಖರೀದಿಸಬಹುದು. ಇವರಲ್ಲಿ 3 ವಿದೇಶಿ ಆಟಗಾರರನ್ನು ಹಾಗೂ ಮೂವರು ಭಾರತೀಯ ಆಟಗಾರರನ್ನು ಖರೀದಿಸಬಹುದಾಗಿದೆ. ಸದ್ಯ ತಂಡದ ಬಳಿ 31.40 ಕೋಟಿ. ರೂ ಹಣವಿದೆ.

ಸನ್‌ರೈಸರ್ಸ್ ಹೈದರಾಬಾದ್

ಒಂದು ಬಾರಿಯ ಚಾಂಪಿಯನ್​ ಸನ್​ರೈಸರ್ಸ್​ ಹೈದರಾಬಾದ್​ ತಂಡಕ್ಕೆ 6 ಆಟಗಾರರನ್ನು ಖರೀದಿ ಮಾಡಬಹುದಾಗಿದೆ. ತಲಾ ಮೂರು ಭಾರತೀಯ ಮತ್ತು ವಿದೇಶಿ ಆಟಗಾರರನ್ನು ಬಿಡ್​ ಮಾಡಬಹುದು. ತಂಡದ ಬಳಿ 34 ಕೋಟಿ ರೂ. ಹಣವಿದೆ.

ಇದನ್ನೂ ಓದಿ IPL 2024 : ಭಾರತದಲ್ಲಿ ಶುರುವಾಗಲಿದೆ ಟಿ10 ಲೀಗ್​, ಮುಂದಿನ ವರ್ಷವೇ ಆರಂಭ?

ಪಂಜಾಬ್ ಕಿಂಗ್ಸ್

ಹೆಸರು ಬದಲಿಸಿದರು ಅದೃಷ್ಟ ಬದಲಾಗದ ಪಂಜಾಬ್ ಕಿಂಗ್ಸ್​ ತಂಡಕ್ಕೆ 8 ಆಟಗಾರರನ್ನು ಖರೀದಿ ಮಾಡುವ ಅವಕಾಶವಿದೆ. ಇಬ್ಬರು ವಿದೇಶಿ ಆಟಗಾರರು ಹಾಗೂ 6 ಭಾರತೀಯ ಆಟಗಾರರನ್ನು ಖರೀದಿಸಬಹುದಾಗಿದೆ. ಫ್ರಾಂಚೈಸಿ ಬಳಿ 29.10 ಕೋಟಿ. ರೂ.ಹಣವಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು

ಸ್ಟಾರ್​ ಆಟಗಾರರ ಪಡೆಯನ್ನ ಹೊಂದಿದ್ದರು ಇದುವರೆಗೂ ಕಪ್​ ಗೆಲ್ಲದ ಐಪಿಎಲ್​ನ ನತದೃಷ್ಟ ತಂಡಗಳಲ್ಲಿ ಒಂದಾಗಿರುವ ಆರ್​ಸಿಬಿ ತಂಡಕ್ಕೆ ಈ ಬಾರಿ ಒಟ್ಟು 6 ಆಟಗಾರರನ್ನು ಖರೀದಿಸಬಹುದು. ತಲಾ ಮೂರು ಭಾರತೀಯ ಮತ್ತು ವಿದೇಶಿ ಆಟಗಾರರನ್ನು ಖರೀದಿಸಬಹುದು. ಆರ್​ಸಿಬಿ ಬಳಿ ಕೇವಲ 14.50 ಕೋಟಿ ರೂ. ಮಾತ್ರ ಉಳಿಕೆ ಹಣವಿದೆ. ಈ ಮೊತ್ತದಲ್ಲಿ ಸ್ಟಾರ್​ ಆಟಗಾರರನ್ನು ಖರೀದಿಸುವುದು ಕಷ್ಟ ಸಾಧ್ಯ. 

ರಾಜಸ್ಥಾನ್ ರಾಯಲ್ಸ್

ಚೊಚ್ಚಲ ಆವೃತ್ತಿಯ ಚಾಂಪಿಯನ್​ ರಾಜಸ್ಥಾನ್​ ರಾಯಲ್ಸ್​ ತಂಡಕ್ಕೆ ಈ ಬಾರಿ​ 8 ಸ್ಲಾಟ್​ಗಳಲ್ಲಿ ಮೂವರು ವಿದೇಶಿ ಹಾಗೂ 5 ಭಾರತೀಯ ಆಟಗಾರರನ್ನು ಖರೀದಿಸಬಹುದಾಗಿದೆ. ಈಗಾಗಲ ಟ್ರೆಡಿಂಗ್​ ಮೂಲಕ ಲಕ್ನೋ ತಂಡ ಅವೇಶ್​ ಖಾನ್​ ಅವರನ್ನು ಖರೀದಿಸಿ ದೇವದತ್ತ ಪಡಿಕ್ಕಲ್​ ಲಕ್ನೋಗೆ ಬಿಟ್ಟುಕೊಟ್ಟಿದೆ. ಸದ್ಯ ಫ್ರಾಂಚೈಸಿ ಬಳಿ 14.50 ಕೋಟಿ ರೂ. ಮೊತ್ತ ಬಾಕಿ ಇದೆ.

ಲಕ್ನೋ ಸೂಪರ್ ಜೈಂಟ್ಸ್

ಕನ್ನಡಿಗ ಕೆ.ಎಲ್ ರಾಹುಲ್​ ಸಾರಥ್ಯದ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಈ ಬಾರಿಯ ಹರಾಜಿನಲ್ಲಿ ಒಟ್ಟು 6 ಆಟಗಾರರನ್ನು ಖರೀದಿ ಮಾಡಬಹುದು. ಆದರೆ ನಾಲ್ವರು ಭಾರತೀಯ ಆಟಗಾರರನ್ನು ಹಾಗೂ ಇಬ್ಬರು ವಿದೇಶಿ ಆಟಗಾರರನ್ನು ಖರೀದಿಸಬೇಕು. ತಂಡದ ಬಳಿ ಕೇವಲ 13.15 ಕೋಟಿ. ರೂ ಮಾತ್ರ ಬಾಕಿ ಉಳಿದಿದ್ದು ಸ್ಟಾರ್​ ಆಟಗಾರರನ್ನು ಖರೀದಿ ಮಾಡಲು ಕಷ್ಟವಾಗಬಹುದು.

ಕೋಲ್ಕತ್ತಾ ನೈಟ್ ರೈಡರ್ಸ್

2 ಬಾರಿಯ ಚಾಂಪಿಯನ್​ ಕೊಲ್ಕತ್ತಾ ನೈಟ್ ರೈಡರ್ಸ್​ ತಂಡಕ್ಕೆ ಗರಿಷ್ಠ 12 ಆಟಗಾರರನ್ನು ಖರೀದಿಸಬಹುದು. ಇದರಲ್ಲಿ 8 ಭಾರತೀಯ ಹಾಗೂ 4 ವಿದೇಶಿ ಆಟಗಾರರಿಗೆ ಅವಕಾಶ ನೀಡಬಹುದು. ಸದ್ಯ ಫ್ರಾಂಚೈಸಿ ಬಳಿ 32.70 ಕೋಟಿ ರೂ. ಉಳಿಕೆ ಹಣವಿದೆ. ಹೀಗಾಗಿ ಸ್ಟಾರ್​ ಆಟಗಾರರನ್ನು ತನ್ನ ತಂಡಕ್ಕೆ ಸೆಳೆಯಬಹುದು.

ಡೆಲ್ಲಿ ಕ್ಯಾಪಿಟಲ್ಸ್

ಯುವ ಆಟಗಾರರನ್ನೇ ನೆಚ್ಚಿಕೊಂಡಿರುವ ಡೆಲ್ಲಿ ಕ್ಯಾಪಿಟಲ್ಸ್​ ತಂಡ ಈ ಬಾರಿ 9 ಆಟಗಾರರನ್ನು ಖರೀದಿ ಮಾಡಬಹುದು. ಇದರಲ್ಲಿ 4 ವಿದೇಶಿ ಆಟಗಾರರಿಗೆ, ಐವರು ಭಾರತೀಯ ಅವಕಾಶ ನೀಡಬಹುದು. ಕಳೆದ ವರ್ಷ ಡಿಸೆಂಬರ್​ನಲ್ಲಿ ಕಾರು ಅಪಘಾತಕ್ಕೀಡಾಗಿ ಗಾಯಗೊಂಡಿದ್ದ ರಿಷಭ್​ ಪಂತ್​ 16ನೇ ಆವೃತ್ತಿಯ ಐಪಿಎಲ್​ನಿಂದ ದೂರ ಉಳಿದಿದ್ದರು. ಈ ಬಾರಿ ಅವರು ಕಣಕ್ಕಿಳಿಯುವ ಸಾಧ್ಯತೆ ಇದೆ.

Exit mobile version