ಮೆಲ್ಬೋರ್ನ್: ಭಾರತ ವಿರುದ್ಧದ ಪಂದ್ಯಕ್ಕೆ ಇನ್ನು ಎರಡು ದಿನ ಬಾಕಿ ಇರುವಾಗಲೇ ಪಾಕಿಸ್ತಾನ ತಂಡಕ್ಕೆ ಭಾರಿ ಹಿನ್ನಡೆಯಾಗಿದೆ. ನೆಟ್ಸ್‌ನಲ್ಲಿ ಅಭ್ಯಾಸ ನಡೆಸುತ್ತಿದ್ದ ವೇಳೆ ಪಾಕಿಸ್ತಾನ ತಂಡದ ಬ್ಯಾಟರ್ ಶಾನ್ ಮಸೂದ್(Shan Masood) ತಲೆಗೆ ಚೆಂಡು ಬಡಿದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪಾಕಿಸ್ತಾನ ತಂಡದ ಆಲ್‌ರೌಂಡರ್ ಮೊಹಮ್ಮದ್ ನವಾಜ್ ನೆಟ್ಸ್‌ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿದ್ದರು. ಈ ವೇಳೆ ನೆಟ್ಸ್ ಹೊರಗಡೆ ನಿಂತಿದ್ದ ಶಾನ್ ಮಸೂದ್ ತಲೆಗೆ ಚೆಂಡು ಬಡಿದಿದೆ. ನವಾಜ್ ಅವರ ತಲೆಗೆ ಚೆಂಡು ಬಡಿದ ತಕ್ಷಣ ಅವರು ಮೈದಾನದಲ್ಲೇ ಕುಸಿದು ಬಿದ್ದರು. ಬಳಿಕ ಪಾಕ್ ತಂಡದ ಆಟಗಾರರು ಅವರನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನವಾಜ್ ಅವರ ಸ್ಕ್ಯಾನ್ ವರದಿ ಬಂದ ಬಳಿಕ ಮುಂದಿನ ನಿರ್ಧಾರ ಕೈ ಗೊಳ್ಳಲಾಗುವುದು. ಒಂದು ವೇಳೆ ಶಾನ್ ಮಸೂದ್ ಅವರ ಗಾಯ ಗಂಭೀರ ಸ್ವರೂಪವಾಗಿದ್ದರೆ, ಟಿ20 ವಿಶ್ವಕಪ್ ಟೂರ್ನಿಯಿಂದ ಅವರನ್ನು ಕೈ ಬಿಡಲಾಗುವುದು ಎಂದು ಪಾಕ್ ತಂಡದ ಕೋಚ್ ಸಕ್ಲೆನ್ ಮುಷ್ತಾಕ್ ತಿಳಿಸಿದ್ದಾರೆ.
ಇದನ್ನೂ ಓದಿ | T20 World Cup | ಟಿ20 ವಿಶ್ವ ಕಪ್ನಲ್ಲಿ ಟೀಮ್ ಇಂಡಿಯಾದ ಸಾಧನೆ, ಸವಾಲು