ಕೊಲಂಬೊ: ಬದ್ಧ ವೈರಿ ಪಾಕಿಸ್ತಾನ(IND vs PAK) ವಿರುದ್ಧ ಟಾಸ್ ಸೋತ ಭಾರತ ಬ್ಯಾಟಿಂಗ್ ಆಹ್ವಾನ ಪಡೆದಿದೆ. ಐಪಿಎಲ್ ಸಂದರ್ಭದಲ್ಲಿ ತೊಡೆಯ ಗಾಯದಿಂದ ಬಳಲಿದ್ದ ರಾಹುಲ್ ಶಸ್ತ್ರಚಿಕಿತ್ಸೆ ಪಡೆದ ಬಳಿಕ ಆಡುತ್ತಿರುವ ಮೊದಲ ಪಂದ್ಯ ಇದಾಗಿದೆ. ತಂಡಕ್ಕೆ ಆಯ್ಕೆಯಾಗಿದ್ದರೂ ಮೊದಲೆರಡು ಪಂದ್ಯಗಳಿಗೆ ವಿಶ್ರಾಂತಿ ನೀಡಲಾಗಿತ್ತು. ರಾಹುಲ್ ಆಗಮನದಿಂದ ಶ್ರೇಯಸ್ ಅಯ್ಯರ್ ಹೊರಗುಳಿಯಬೇಕಾಯಿತು.
ಸದ್ಯಕ್ಕೆ ಭಾರತ ತಂಡದಲ್ಲಿ ಯಾವುದೇ ಕ್ರಮಾಂಕದಲ್ಲಿ ಆಡಬಲ್ಲ ಸಾಮರ್ಥ್ಯ ಇರುವುದು ಕೂಡ ರಾಹುಲ್ ಅವರಲ್ಲಿ ಮಾತ್ರ
ಕಳೆದ ಸುಮಾರು ಸರಣಿಯಲ್ಲಿ ಬ್ಯಾಟಿಂಗ್ ವೈಫಲ್ಯ ಕಂಡ ಕಾಹುಲ್ ಅವರು ಈ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ನಡೆಸಲಿ ಎನ್ನುವುದು ಅವರ ಅಭಿಮಾನಿಗಳ ಆಶಯವಾಗಿದೆ
ಸಂಪೂರ್ಣ ಫಿಟ್ ಆಗದ ಕಾರಣ ಏಷ್ಯಾಕಪ್ನ ಮೊದಲೆರಡು ಪಂದ್ಯಗಳಿಗೆ ಅಲಭ್ಯರಾಗಿದ್ದ ಕನ್ನಡಿಗ, ಸ್ಟಾರ್ ಆಟಗಾರ ಕೆ.ಎಲ್ ರಾಹುಲ್ ಅವರು ಭಾನುವಾರ ಪಾಕಿಸ್ತಾನ ವಿರುದ್ಧದ ಸೂಪರ್-4 ಪಂದ್ಯದಲ್ಲಿ ಕಣಕ್ಕಿಳಿದರು
ಈ ಟೂರ್ನಿಯಲ್ಲಿ ಇನ್ನು ವಿರಾಟ್ ಅವರು 98 ರನ್ ಬಾರಿಸಿದರೆ ಏಕದಿನ ಮಾದರಿಯಲ್ಲಿ 13 ಸಾವಿರ ರನ್ ಪೂರ್ತಿಗೊಳಿಸಲಿದ್ದಾರೆ. ಇದೇ ವೇಳೆ ಸಚಿನ್ ಅವರ ಹೆಸರಿನಲ್ಲಿದ ದಾಖಲೆ ಮುರಿಯಲಿದ್ದಾರೆ. ಅತಿ ಕಡಿಮೆ ಏಕದಿನ ಪಂದ್ಯಗಳಲ್ಲಿ ವೇಗವಾಗಿ 13 ಸಾವಿರ ರನ್ ಗಳಿಸಿದ ವಿಶ್ವದ ಮೊದಲ ಆಟಗಾರ ಎಂಬ ಹಿರಿಮೆಗೆ ಪಾತ್ರರಾಗಲಿದ್ದಾರೆ
ಮೊದಲ ಮುಖಾಮುಖಿಯಲ್ಲಿ ಕೊಹ್ಲಿ 4 ರನ್ಗೆ ಶಾಹೀನ್ ಅಫ್ರಿದಿಗೆ ವಿಕೆಟ್ ಒಪ್ಪಿಸಿದ್ದರು. ಕೊಹ್ಲಿ ಪಾಕ್ ವಿರುದ್ಧ ಕೇವಲ 31 ರನ್ ಬಾರಿಸಿದರೆ ಏಷ್ಯಾಕಪ್ನಲ್ಲಿ ಅತ್ಯಧಿಕ ರನ್ ಗಳಿಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಲಿದ್ದಾರೆ. ಆಗ ಧೋನಿ ಅವರ ದಾಖಲೆ ಪತನಗೊಳ್ಳಲಿದೆ.