Site icon Vistara News

Asia Cup | ಪಾಕಿಸ್ತಾನದಲ್ಲಿ ಏಷ್ಯಾ ಕಪ್​ ಆಡಲ್ಲ, ಜಯ್ ಶಾ ಹೇಳಿಕೆಗೆ ಅಫ್ರಿದಿ ಕೆಂಡಾಮಂಡಲ

jai sha

ಲಾಹೋರ್​: ಮುಂದಿನ ಏಷ್ಯಾ ಕಪ್‌ (Asia Cup) ಟೂರ್ನಿಯನ್ನು ಪಾಕಿಸ್ತಾನದಲ್ಲಿ ಆಯೋಜಿಸಿದರೆ ಭಾರತ ತಂಡ ಅಲ್ಲಿಗೆ ಪ್ರವಾಸ ಕೈಗೊಳ್ಳಲು ಸಾಧ್ಯವಾಗುವುದಿಲ್ಲ. ಹಾಗಾಗಿ ತಟಸ್ಥ ಸ್ಥಳದಲ್ಲಿ ಟೂರ್ನಿಯನ್ನು ಆಯೋಜಿಸಿ ಎಂಬ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಹೇಳಿಕೆಗೆ ಪಾಕ್​ ಮಾಜಿ ಕ್ರಿಕೆಟಿಗ ಶಾಹಿದ್​ ಅಫ್ರಿದಿ ಬೇಸರ ವ್ಯಕ್ತಪಡಿಸಿದ್ದಾರೆ.

“ಕಳೆದ ಒಂದು ವರ್ಷದಲ್ಲಿ ಎರಡು ತಂಡಗಳ ನಡುವೆ ಉತ್ತಮ ಒಡನಾಟ ಕಂಡುಬಂದಿದೆ. ಇದರಿಂದ ಉಭಯ ದೇಶಗಳ ನಡುವೆ ಉತ್ತಮ ಭಾವನೆ ಉಂಟಾಗಿದೆ. ಹೀಗಿರುವಾಗ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಇಂತಹ ಹೇಳಿಕೆ ಏಕೆ ನೀಡಿದ್ದಾರೆ ಎಂದು ಅರ್ಥವಾಗುತ್ತಿಲ್ಲ. ಇದು ಭಾರತದ ಕ್ರಿಕೆಟ್ ಆಡಳಿತ ಅನುಭವದ ಕೊರತೆಯನ್ನು ತೋರಿಸುತ್ತದೆ” ಎಂದು ಅಫ್ರಿದಿ ವಾಗ್ದಾಳಿ ನಡೆಸಿದ್ದಾರೆ.

2023ರ ಏಷ್ಯಾ ಕಪ್‌ಗೆ ಪಾಕಿಸ್ತಾನ ಆತಿಥ್ಯ ವಹಿಸಲಿದೆ. ಆದರೆ ಪಾಕಿಸ್ತಾನದಲ್ಲಿ ಭಾರತ ಆಡುವುದಿಲ್ಲ ಎಂದು ಏಷ್ಯಾ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅಧ್ಯಕ್ಷರೂ ಆಗಿರುವ ಜಯ್ ಶಾ, ಮಂಗಳವಾರ ಹೇಳಿಕೆ ನೀಡಿದ್ದರು. ಇದರಿಂದ ಉಭಯ ದೇಶಗಳ ಮಂಡಳಿಗಳ ನಡುವೆ ಸಂಘರ್ಷ ಏರ್ಪಟ್ಟಿದೆ. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ, ಭಾರತದಲ್ಲಿ ಮುಂದಿನ ವರ್ಷ ನಡೆಯಲಿರುವ ಏಕ ದಿನ ವಿಶ್ವ ಕಪ್‌ನಿಂದ ಹಿಂದೆ ಸರಿಯುವ ಬೆದರಿಕೆ ಒಡ್ಡಿದೆ.

ಇದನ್ನೂ ಓದಿ | T20 World Cup | ಮಳೆ ಕಾಟ, ಭಾರತ-ನ್ಯೂಜಿಲೆಂಡ್​ ಅಭ್ಯಾಸ ಪಂದ್ಯ ರದ್ದು

Exit mobile version