Site icon Vistara News

Paris Olympic: ಐತಿಹಾಸಿಕ ಪದಕ ಗೆದ್ದ ಸ್ವಪ್ನಿಲ್‌ ಕುಸಾಲೆಗೆ ರಾಷ್ಟ್ರಪತಿ, ಪ್ರಧಾನಿ ಅಭಿನಂದನೆ

Paris Olympic

Paris Olympic: PM Modi, President Murmu congratulate bronze-medalist shooter Swapnil Kusale

ಪ್ಯಾರಿಸ್​: ಪ್ಯಾರಿಸ್​ ಒಲಿಂಪಿಕ್ಸ್(Paris Olympic)​ 50 ಮೀಟರ್‌ ರೈಫಲ್ 3 ಪೊಸಿಷನ್‌ನಲ್ಲಿ ಕಂಚಿನ ಪದಕ ಗೆದ್ದು ಈ ವಿಭಾಗದಲ್ಲಿ ಪದಕ ಗೆದ್ದ ಮೊದಲ ಭಾರತೀಯ ಎನ್ನುವ ಇತಿಹಾಸ ನಿರ್ಮಿಸಿದ ಶೂಟರ್​ ಸ್ವಪ್ನಿಲ್‌ ಕುಸಾಲೆ(Swapnil Kusale) ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು(President Droupadi Murmu), ಪ್ರಧಾನಿ ನರೇಂದ್ರ ಮೋದಿ(Narendra Modi) ಸೇರಿ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.

ಗುರುವಾರ ನಡೆದ 50 ಮೀ. ರೈಫ‌ಲ್‌ 3 ಪೊಸಿಶನ್‌ ಫೈನಲ್​ ಪಂದ್ಯದಲ್ಲಿ ಸ್ವಪ್ನಿಲ್ ಅವರು 451.4 ಅಂಕ ಗಳಿಸಿ ಕಂಚಿನ ಪದಕ ತಮ್ಮದಾಗಿಸಿಕೊಂಡರು. ಸ್ವಪ್ನಿಲ್‌ ಫೈನಲ್​ ಪಂದ್ಯದ ಪ್ರೋನ್‌ನಲ್ಲಿ 156.8, ನೀಲಿಂಗ್‌ನಲ್ಲಿ 153.3 ಮತ್ತು ಸ್ಟ್ಯಾಂಡಿಂಗ್‌ನಲ್ಲಿ 195 ಅಂಕಗಳಿಸಿ ಮೂರನೇ ಸ್ಥಾನ ಪಡೆದು ಕಂಚಿನ ಪದಕ್ಕಕೆ ಕೊರಳೊಡ್ಡಿದರು. 463.6 ಅಂಕ ಗಳಿಸಿದ ಚೀನಾದ ಲಿಯು ಯುಕುನ್ ಚಿನ್ನ ಮತ್ತು ಉಕ್ರೇನ್​ನ ಕುಲಿಶ್ ಸೆರ್ಹಿ(461.3) ಬೆಳ್ಳಿ ಪದಕ ಗೆದ್ದರು.

“ಸ್ವಪ್ನಿಲ್ ಕುಸಾಲೆಯವರ ಅಸಾಧಾರಣ ಪ್ರದರ್ಶನ!. ಪುರುಷರ 50 ಮೀಟರ್ ರೈಫಲ್ 3 ಪೊಸಿಷನ್‌ನಲ್ಲಿ ಕಂಚಿನ ಪದಕ ಗೆದ್ದ ಅವರಿಗೆ ಅಭಿನಂದನೆಗಳು. ಅವರು ಈ ವಿಭಾಗದಲ್ಲಿ ಪದಕ ಗೆದ್ದ ಮೊದಲ ಭಾರತೀಯ ಅಥ್ಲೀಟ್ ಕೂಡ. ನಿಮ್ಮ ಈ ಸಾಧನೆ ಪ್ರತಿಯೊಬ್ಬ ಭಾರತೀಯನು ಸಂತೋಷಪಡುವಂತೆ ಮಾಡಿದೆ” ಎಂದು ಮೋದಿ ಟ್ವೀಟ್​ ಮೂಲಕ ಅಭಿನಂದಿಸಿದ್ದಾರೆ.

ಇದನ್ನೂ ಓದಿ Paris Olympics: ಒಲಿಂಪಿಕ್ಸ್​ ಅಭಿಯಾನ ಮುಗಿಸಿದ ಬಾಕ್ಸರ್​ ನಿಖತ್ ಜರೀನ್; ಪ್ರೀ ಕ್ವಾರ್ಟರ್​ನಲ್ಲಿ ಸೋಲು

“ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಕ್ಕಾಗಿ ಸ್ವಪ್ನಿಲ್ ಕುಸಾಲೆ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು!. ಒಲಿಂಪಿಕ್ಸ್‌ನಲ್ಲಿ ಶೂಟಿಂಗ್‌ನಲ್ಲಿ ಭಾರತ ಮೂರು ಪದಕ ಗೆದ್ದಿರುವುದು ಇದೇ ಮೊದಲು. ಇಡೀ ಶೂಟಿಂಗ್ ತಂಡ ಭಾರತಕ್ಕೆ ಹೆಮ್ಮೆ ತಂದಿದೆ. ಮುಂಬರುವ ಈವೆಂಟ್‌ಗಳಿಗಾಗಿ ನಾನು ನಮ್ಮ ಎಲ್ಲಾ ಆಟಗಾರರಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ. ಸ್ವಪ್ನಿಲ್ ಕುಸಾಲೆ ಅವರು ಭವಿಷ್ಯದಲ್ಲಿ ಇನ್ನಷ್ಟು ಪ್ರಶಸ್ತಿಗಳನ್ನು ಗೆಲ್ಲಲಿ ಎಂದು ಹಾರೈಸುತ್ತೇನೆ” ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವೀಟ್​ ಮಾಡಿದ್ದಾರೆ.

ರೈಲ್ವೆ ಟಿಕೆಟ್ ಕಲೆಕ್ಟರ್


ಮಹಾರಾಷ್ಟ್ರದ ಕೊಲ್ಹಾಪುರದ ಕಂಬಳವಾಡಿ ಗ್ರಾಮದ 28 ವರ್ಷದ ಸ್ವಪ್ನಿಲ್ ಕುಶಲೆ ಭಾರತ ಕ್ರಿಕೆಟ್​ ತಂಡದ ಮಾಜಿ ನಾಯಕ ಹಾಗೂ ಆಟಗಾರ ಮಹೇಂದ್ರ ಸಿಂಗ್​ ಅವರ ಅಪಟ್ಟ ಅಭಿಮಾನಿ. ಜತೆಗೆ ಧೋನಿಯಂತೆಯೇ ಇವರು ಕೂಡ ರೇಲ್ವೆ ಟಿಕೆಟ್ ನಿರೀಕ್ಷಕರಾಗಿ ಕಾರ್ಯನಿರ್ವಹಿಸಿದ್ದರು. ಧೋನಿಯವರ ಬಯೋಪಿಕ್ ಸಿನೆಮಾವನ್ನು ಪದೇ ಪದೇ ವೀಕ್ಷಿಸಿದ ಬಳಿಕ ಸ್ವಪ್ನಿಲ್ ಕೂಡ ಪೂರ್ಣಪ್ರಮಾಣದಲ್ಲಿ ಶೂಟಿಂಗ್‌ನಲ್ಲಿ ತೊಡಗಿಕೊಂಡರು. ಧೋನಿಯವರಂತೆ ಶಾಂತ ಸ್ವಾಭಾವದ ಈ ಶೂಟರ್​ ಇದೀಗ ಒಲಿಂಪಿಕ್ಸ್‌ ಪದಕವೊಂದನ್ನು ಗೆದ್ದು ಇತಿಹಾಸದ ಪುಟ ಸೇರಿದ್ದಾರೆ. 2015ರ ಕುವೈತ್​ ಏಷ್ಯನ್‌ ಶೂಟಿಂಗ್‌ ಚಾಂಪಿಯನ್‌ಶಿಪ್‌ ಜೂನಿಯರ್‌ ವಿಭಾಗದಲ್ಲಿ ಚಿನ್ನ, 59ನೇ ಹಾಗೂ 61ನೇ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲೂ ಚಿನ್ನ ಗೆದ್ದ ಸಾಧನೆ ಮಾಡಿದ್ದಾರೆ. 

Exit mobile version