ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್(Olympics 2024) ಕೂಟದಲ್ಲಿ ಭಾರತಕ್ಕೆ ಶುಭ ಸುದ್ದಿಯೊಂದು ಲಭಿಸಿದೆ. ಇಂದು (ಜುಲೈ 25, ಗುರುವಾರ) ನಡೆದ ಮಹಿಳಾ ಆರ್ಚರಿ ಶ್ರೇಯಾಂಕ ಸುತ್ತಿನ ಸ್ಪರ್ಧೆಯಲ್ಲಿ ಭಾರತದ ಅಂಕಿತಾ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಒಳಗೊಂಡ ತಂಡ 4ನೇ ಸ್ಥಾನಗಳಿಸಿ ಕ್ವಾರ್ಟರ್ ಫೈನಲ್ ಹಂತಕ್ಕೆ ಪ್ರವೇಶಿಸಿದೆ. ಕ್ವಾರ್ಟರ್ ಫೈನಲ್‌ನಲ್ಲಿ ಫ್ರಾನ್ಸ್ ಮತ್ತು ನೆದರ್‌ಲ್ಯಾಂಡ್ಸ್ ಪಂದ್ಯದ ವಿಜೇತರನ್ನು ಎದುರಿಸಲಿದೆ.
ವೈಯಕ್ತಿಕ ವಿಭಾಗದಲ್ಲಿ ಅಂಕಿತಾ 11ನೇ ಸ್ಥಾನ, ಭಜನ್ ಮತ್ತು ದೀಪಿಕಾ ಕ್ರಮವಾಗಿ 22 ಮತ್ತು 23ನೇ ಸ್ಥಾನ ಪಡೆದರು. ಕೊರಿಯಾ 2046 ಅಂಕಗಳೊಂದಿಗೆ ಅಗ್ರಸ್ಥಾನ ಪಡೆದುಕೊಂಡರೆ, ಚೀನಾ(1996) ಮತ್ತು ಮೆಕ್ಸಿಕೊ(1986) ಅಂಕದೊಂದಿಗೆ ಕ್ರಮವಾಗಿ 2 ಮತ್ತು 3 ನೇ ಸ್ಥಾನ ಗಳಿಸಿತು. ಭಾರತ (1983) ಅಂಕದೊಂದಿಗೆ 4ನೇ ಸ್ಥಾನ ಪಡೆದಿದೆ. ಭಾರತ ಪರ ಅಂಕಿತಾ ಎಲ್ಲ ಸುತ್ತುಗಳಲ್ಲಿಯೂ ಶ್ರೇಷ್ಠ ಪ್ರದರ್ಶನ ತೋರುವ ಮೂಲಕ ಗಮನಸೆಳೆದರು. ಆದರೆ, ಅನುಭವಿ ಹಾಗೂ ಹಿರಿಯ ಬಿಲ್ಗಾರ್ತಿ ದೀಪಿಕಾ ಕುಮಾರಿ ಆರಂಭಿಕ ಕೆಲವು ಸುತ್ತುಗಳಲ್ಲಿ ದೊಡ್ಡ ಅಂಕಗಳಿಸಲು ವಿಫಲರಾದರು. ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಅವರು ಉತ್ತಮ ಪ್ರದರ್ಶನ ತೋರುವ ಅಗತ್ಯವಿದೆ. ಉತ್ತರ ಕೊರಿಯಾದ ಲಿಮ್ ಸಿಹ್ಯೆನ್ (694) ಅಂಕಗಳೊಂದಿಗೆ ಮೊದಲ ಸ್ಥಾನ ಪಡೆದು ವಿಶ್ವ ದಾಖಲೆ ನಿರ್ಮಿಸಿದರು.
ಅರ್ಹತಾ ಸುತ್ತಿನಲ್ಲಿ 53 ದೇಶಗಳ 128 ಆರ್ಚರ್ ಸ್ಪರ್ಧಿಸಿ ಒಬ್ಬೊಬ್ಬರಿಗೆ ತಲಾ 72 ಬಾಣಗಳ ಗುರಿ ಲಭಿಸಲಿದೆ. ಇಲ್ಲಿ ಟಾಪ್-10 ಸ್ಥಾನ ಸಂಪಾದಿಸಿದರೆ ನಾಕೌಟ್ ಹಂತಕ್ಕೆ ಪ್ರವೇಶ ಸಿಗುತ್ತದೆ. ಇದೀಗ ಭಾರತ ಮಹಿಳಾ ತಂಡ ನಾಲ್ಕನೇ ಸ್ಥಾನ ಪಡೆದು ನೇರವಾಗಿ ಕ್ವಾರ್ಟರ್ ಫೈನಲ್ಗೆ ಲಗ್ಗೆಯಿಟ್ಟಿದೆ. ಇಲ್ಲಿಯೂ ಶ್ರೇಷ್ಠ ಪ್ರದರ್ಶನ ತೋರುವ ಮೂಲಕ ಪದಕ ಗೆಲ್ಲುವಂತಾಗಲಿ ಎನ್ನುವುದು ಶತಕ ಕೋಟಿ ಭಾರತೀಯರ ಆಶಯ ಹಾಗೂ ಹಾರೈಕೆಯಾಗಿದೆ.
ಪುರುಷರ ವೈಯಕ್ತಿಕ ಶ್ರೇಯಾಂಕ ಸುತ್ತಿನಲ್ಲಿ ಬಿ. ಧೀರಾಜ್(B. Dhiraj), ತರುಣದೀಪ್ ರೈ(Tarundeep Rai), ಪ್ರವೀಣ್ ಜಾಧವ್(Pravin Jadhav) ಸ್ಪರ್ಧಿಸಲಿದ್ದಾರೆ. ಈ ಪಂದ್ಯ ಸಂಜೆ 5: 45ಕ್ಕೆ ನಡೆಯಲಿದೆ.
27ರಂದು ಹಲವು ಸ್ಪರ್ಧೆ
ಶನಿವಾರದಂದು(ಜುಲೈ 27) ಭಾರತದ ಹಲವು ಕ್ರೀಡಾಪಟುಗಳು ವಿವಿಧ ಸ್ಪರ್ಧೆಗಳಲ್ಲಿ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ. ಭಾರತೀಯ ಕ್ರೀಡಾಪಟುಗಳ ಸ್ಪರ್ಧೆಯ ವೇಳಾಪಟ್ಟಿ ಇಂತಿದೆ.
ಬ್ಯಾಡ್ಮಿಂಟನ್
ಪುರುಷರ ಸಿಂಗಲ್ಸ್ ಗುಂಪು ಹಂತ: ಎಚ್ ಎಸ್ ಪ್ರಣಯ್, ಲಕ್ಷ್ಯ ಸೇನ್.
ಮಹಿಳೆಯರ ಸಿಂಗಲ್ಸ್ ಗುಂಪು ಹಂತ: ಪಿ.ವಿ ಸಿಂಧು.
ಪುರುಷರ ಡಬಲ್ಸ್ ಗುಂಪು ಹಂತ: ಸಾತ್ವಿಕ್ ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ.
ಮಹಿಳೆಯರ ಡಬಲ್ಸ್ ಗುಂಪು ಹಂತ: ತನೀಶಾ ಕ್ರಾಸ್ಟೊ ಮತ್ತು ಅಶ್ವಿನಿ ಪೊನ್ನಪ್ಪ. (ಮಧ್ಯಾಹ್ನ 12 ಗಂಟೆಯಿಂದ)
ರೋಯಿಂಗ್
ಪುರುಷರ ಸಿಂಗಲ್ ಸ್ಕಲ್ಸ್ ಹೀಟ್ಸ್: ಬಾಲರಾಜ್ ಪನ್ವಾರ್. ಆರಂಭ ಮಧ್ಯಾಹ್ನ 12:30 ರಿಂದ
ಶೂಟಿಂಗ್
10 ಮೀ ಏರ್ ರೈಫಲ್ ಮಿಶ್ರ ತಂಡ ಅರ್ಹತೆ: ಸಂದೀಪ್ ಸಿಂಗ್, ಅರ್ಜುನ್ ಬಾಬುತಾ, ಎಲವೆನಿಲ್ ವಲರಿವನ್, ರಮಿತಾ ಜಿಂದಾಲ್. ಮಧ್ಯಾಹ್ನ 12:30
10ಮೀ ಏರ್ ಪಿಸ್ತೂಲ್ ಪುರುಷರ ಅರ್ಹತೆ: ಸರಬ್ಜೋತ್ ಸಿಂಗ್, ಅರ್ಜುನ್ ಚೀಮಾ. (ಮಧ್ಯಾಹ್ನ 2 ಗಂಟೆ)
10ಮೀ ಏರ್ ರೈಫಲ್ ಮಿಶ್ರ ತಂಡ ಪದಕ ಸುತ್ತುಗಳು: (ಅರ್ಹತೆ ಪಡೆದರೆ) ಮಧ್ಯಾಹ್ನ 2 ಗಂಟೆ
10 ಮೀ ಏರ್ ಪಿಸ್ತೂಲ್ ಮಹಿಳೆಯರ ಅರ್ಹತೆ ಸುತ್ತು: ರಿದಮ್ ಸಾಂಗ್ವಾನ್, ಮನು ಭಾಕರ್. (ಸಂಜೆ 4 ಗಂಟೆಯಿಂದ)
ಟೆನಿಸ್; ಮೊದಲ ಸುತ್ತಿನ ಪಂದ್ಯಗಳು
ಪುರುಷರ ಸಿಂಗಲ್ಸ್: ಸುಮಿತ್ ನಗಾಲ್.
ಪುರುಷರ ಡಬಲ್ಸ್: ರೋಹನ್ ಬೋಪಣ್ಣ ಮತ್ತು ಎನ್. ಶ್ರೀರಾಮ್ ಬಾಲಾಜಿ. (ಮಧ್ಯಾಹ್ನ 3:30 ರಿಂದ)
ಟೇಬಲ್ ಟೆನ್ನಿಸ್
ಪುರುಷರ ಸಿಂಗಲ್ಸ್: ಶರತ್ ಕಮಲ್, ಹರ್ಮೀತ್ ದೇಸಾಯಿ
ಮಹಿಳೆಯರ ಸಿಂಗಲ್ಸ್: ಮಾಣಿಕಾ ಬಾತ್ರಾ, ಶ್ರೀಜಾ ಅಕುಲಾ. (ಸಂಜೆ 6:30 ರಿಂದ)
ಬಾಕ್ಸಿಂಗ್
ಮಹಿಳೆಯರ 54 ಕೆಜಿ ವಿಭಾಗ: ಪ್ರೀತಿ ಪವಾರ್, 32ರ ಸುತ್ತು. (ಸಂಜೆ 7 ರಿಂದ)
ಹಾಕಿ
ಪುರುಷರ ಗುಂಪು ‘ಬಿ’: ಭಾರತ ಮತ್ತು ನ್ಯೂಜಿಲ್ಯಾಂಡ್. (ರಾತ್ರಿ 9 ಗಂಟೆಗೆ)