Paris Olympics 2024 : ಸೆಮಿಫೈನಲ್​​​​ನಲ್ಲಿ ಭಾರತ ಹಾಕಿ ತಂಡಕ್ಕೆ ಆಘಾತಕಾರಿ ಸೋಲು, ಇನ್ನೂ ಇದೆ ಪದಕ ಗೆಲ್ಲುವ ಅವಕಾಶ - Vistara News

ಕ್ರೀಡೆ

Paris Olympics 2024 : ಸೆಮಿಫೈನಲ್​​​​ನಲ್ಲಿ ಭಾರತ ಹಾಕಿ ತಂಡಕ್ಕೆ ಆಘಾತಕಾರಿ ಸೋಲು, ಇನ್ನೂ ಇದೆ ಪದಕ ಗೆಲ್ಲುವ ಅವಕಾಶ

Paris Olympics: 44 ವರ್ಷಗಳ ಬಳಿಕ ಫೈನಲ್​ ಪ್ರವೇಶಿಸುವ ಅವಕಾಶ ಕಳೆದುಕೊಂಡಿತು. ಇನ್ನು ಸ್ಪೇನ್​ ಜತೆ ಕಂಚಿನ ಪದಕಕ್ಕೆ ಸೆಣಸಾಟ ನಡೆಸಲಿದೆ. ಭಾರತ ತಂಡ ಕೊನೇ ಹಂತದಲ್ಲಿ ಹೋರಾಟ ನಡೆಸಿದ ಹೊರತಾಗಿಯೂ ಫೈನಲ್​ಗೆ ಪ್ರವೇಶ ಪಡೆಯಲು ವಿಫಲಗೊಂಡಿತು. ಇದುವರೆಗೆ ಜರ್ಮನಿ ವಿರುದ್ಧ ಉತ್ತಮ ಅಭಿಯಾನ ಹೊಂದಿದ್ದ ಭಾರತ ತಂಡ ಗೆಲ್ಲಲೇಬೇಕಾದ ಅಗತ್ಯ ಪಂದ್ಯದಲ್ಲಿ ಸೋಲುವ ಮೂಲಕ ನಿರಾಸೆ ಎದುರಿಸಿತು.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪ್ಯಾರಿಸ್​: ಪ್ಯಾರಿಸ್​ ಪಲಿಂಪಿಕ್ಸ್​ನಲ್ಲಿ ಚಿನ್ನದ ಪದಕ ಗೆಲ್ಲುವ ಭಾರತದ ಪುರುಷರ ಹಾಕಿ ತಂಡದ ಕನಸು ನುಚ್ಚುನೂರಾಗಿದೆ. ಜರ್ಮನಿ ವಿರುದ್ಧ 3-2 ಅಂತರದಿಂದ ಸೋಲುವ ಮೂಲಕ 44 ವರ್ಷಗಳ ಬಳಿಕ ಫೈನಲ್​ ಪ್ರವೇಶಿಸುವ ಅವಕಾಶ ಕಳೆದುಕೊಂಡಿತು. ಇನ್ನು ಸ್ಪೇನ್​ ಜತೆ ಕಂಚಿನ ಪದಕಕ್ಕೆ ಸೆಣಸಾಟ ನಡೆಸಲಿದೆ. ಸೆಮಿ ಪೈನಲ್​ನಲ್ಲಿ ಭಾರತ ತಂಡ ಕೊನೇ ಹಂತದಲ್ಲಿ ಹೋರಾಟ ನಡೆಸಿದ ಹೊರತಾಗಿಯೂ ಫೈನಲ್​ಗೆ ಪ್ರವೇಶ ಪಡೆಯಲು ವಿಫಲಗೊಂಡಿತು. ಇದುವರೆಗೆ ಜರ್ಮನಿ ವಿರುದ್ಧ ಉತ್ತಮ ಅಭಿಯಾನ ಹೊಂದಿದ್ದ ಭಾರತ ತಂಡ ಗೆಲ್ಲಲೇಬೇಕಾದ ಅಗತ್ಯ ಪಂದ್ಯದಲ್ಲಿ ಸೋಲುವ ಮೂಲಕ ನಿರಾಸೆ ಎದುರಿಸಿತು.

ಸೇಡು ತೀರಿಸಿಕೊಂಡ ಜರ್ಮನಿ


ಕಳೆದ ಟೋಕಿಯೊ ಒಲಿಂಪಿಕ್ಸ್​ನಲ್ಲಿ ಭಾರತ ತಂಡ ಜರ್ಮನಿ ತಂಡವನ್ನೇ ಮಣಿಸುವ ಮೂಲಕ ಕಂಚಿನ ಪದಕ ಗೆದ್ದು 41 ವರ್ಷಗಳ ಬಳಿಕ ಪದಕದ ಬರ ನೀಗಿಸಿತ್ತು. ಇದೀಗ ಅಂದಿನ ಸೋಲಿಗೆ ಜರ್ಮನಿ ಪ್ಯಾರಿಸ್​ನಲ್ಲಿ ಸೇಡು ತೀರಿಸಿಕೊಂಡಿದೆ. ಭಾರತದ ಫೈನಲ್​ ಕನಸಿಗೆ ತಣ್ಣೀರೆರಚಿದೆ. ಫೈನಲ್​ನಲ್ಲಿ ಜರ್ಮನಿ ತಂಡ ನೆದರ್ಲೆಂರ್ಡ್ಸ್​ ವಿರುದ್ಧ ಕಾದಾಟ ನಡೆಸಲಿದೆ.

ಮೊದಲ ಕ್ವಾರ್ಟರ್​​ ಆರಂಭಿಕ ಹಂತದಲ್ಲೇ ಭಾರತಕ್ಕೆ ಫೆನಾಲ್ಟಿ ಕಾರ್ನರ್​ ಅವಕಾಶ ಲಭಿಸಿತು. ಆದರೆ ಹರ್ಮಾನ್‌ಪ್ರೀತ್ ಸಿಂಗ್ ಇದನ್ನು ಗೋಲಾಗಿ ಪರಿವರ್ತಿಸುವಲ್ಲಿ ಎಡವಿದರು. ಈ ಅವಕಾಶ ಕೈ ತಪ್ಪಿದ ಕೆಲವೇ ಕ್ಷಣದಲ್ಲಿ ಮತ್ತೊಂದು ಫೆನಾಲ್ಟಿ ಕಾರ್ನರ್ ಲಭಿಸಿತು. ಇಲ್ಲಿ ಯಾವುದೇ ತಪ್ಪು ಮಾಡದೆ ಹರ್ಮಾನ್‌ಪ್ರೀತ್ ಗೋಲು ಬಾರಿಸಿ ಭಾರತಕ್ಕೆ ಆರಂಭಿಕ ಯಶಸ್ಸು ತಂದುಕೊಟ್ಟರು. ಮೊದಲ ಕ್ವಾರ್ಟರ್​ 1-0 ಅಂತರದಲ್ಲಿ ಕೊನೆಗೊಂಡಿತು.

ದ್ವಿತೀಯ ಕ್ವಾರ್ಟರ್​ನಲ್ಲಿ ಜರ್ಮನಿಯ ಗೊಂಜಾಲೊ ಪೀಲಾಟ್ ಮಿಂಚಿನ ವೇಗದಲ್ಲಿ ನುಗ್ಗಿ ಗೋಲು ಬಾರಿಸಿ ಪಂದ್ಯವನ್ನು 1-1 ಸಮಬಲಕ್ಕೆ ತಂದರು. ಇದಾದ ಕೆಲವೇ ನಿಮಿಷದಲ್ಲಿ ಜರ್ಮನಿ ತಂಡ ಮತ್ತೊಂದು ಗೋಲು ಬಾರಿಸುವ ಮೂಲಕ 2-1 ಮುನ್ನಡೆ ಸಾಧಿಸಿತು. ಮೂರನೇ ಕ್ವಾರ್ಟರ್​ನಲ್ಲಿ ಭಾರತ ಮತ್ತೆ ಗೋಲು ಬಾರಿಸಿ ಪಂದ್ಯವನ್ನು ಹಿಡಿತಕ್ಕೆ ತಂದಿತು. ಅಂತಿಮ ಕ್ವಾರ್ಟರ್​ನಲ್ಲಿ ಇನ್ನೇನು ಪಂದ್ಯ ಮುಕ್ತಾಯಕ್ಕೆ ಸುಮಾರು 7 ನಿಮಿಷ ಬಾಕಿ ಇರುವಾಗ ಜರ್ಮನಿ ಮತ್ತೊಂದು ಗೋಲು ಬಾರಿಸಿ ಮುನ್ನಡೆ ಸಾಧಿಸಿ ಗೆಲುವು ಸಾಧಿಸಿತು.

ಕಳೆದ ಕ್ವಾರ್ಟರ್‌ ಫೈನಲ್‌ನಲ್ಲಿ ಪಂದ್ಯದಲ್ಲಿ ಭಾರತ ಕೇವಲ 10 ಮಂದಿಯ ನೆರವಿನಿಂದ ಗ್ರೇಟ್​ ಬ್ರಿಟನ್ ವಿರುದ್ಧ ಜಿದ್ದಾಜಿದ್ದಿನ ಪ್ರದರ್ಶನ ನೀಡಿ ಶೂಟೌಟ್‌ನಲ್ಲಿ ಗೆದ್ದು ಬೀಗಿ ಸೆಮಿಫೈನಲ್​ ಪ್ರವೇಶಿಸಿತ್ತು. ಈ ಪಂದ್ಯದಲ್ಲಿ ಹಿಮಾಲಯ ಪರ್ವತದಂತೆ ತೆಡೆಗೋಡೆಯಾಗಿ ನಿಂತು ಹಲವು ಗೋಲುಗಳನ್ನು ತಡೆದಿದ್ದ ಗೋಲ್​ ಕೀಪರ್​ ಪಿ.ಆರ್​. ಶ್ರೀಜೇಶ್​ ಗೆಲುವಿನ ಹೀರೊ ಎನಿಸಿಕೊಂಡಿದ್ದರು. ಆದರೆ ಸೆಮಿ ಫೈನಲ್​ನಲ್ಲಿ ಇದೇ ಪ್ರದರ್ಶನ ತೋರುವಲ್ಲಿ ವಿಫಲರಾದರು.

ಐತಿಹಾಸಿಕ ಪದಕ ಖಾತ್ರಿಪಡಿಸಿದ ಕುಸ್ತಿಪಟು ವಿನೇಶ್ ಫೋಗಟ್

ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್(Vinesh Phogat) ​ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ(Paris Olympics) ಫೈನಲ್​ ಪ್ರವೇಶಿಸುವ ಮೂಲಕ ದೇಶಕ್ಕೆ ಐತಿಹಾಸಿಕ ಪದಕವೊಂದನ್ನು ಖಾತ್ರಿಪಡಿಸಿದ್ದಾರೆ. ಮಂಗಳವಾರ ರಾತ್ರಿ ನಡೆದ ಮಹಿಳೆಯರ 50 ಕೆಜಿ ಕುಸ್ತಿ ಸೆಮಿಫೈನಲ್​ ಪಂದ್ಯದಲ್ಲಿ ಯುಸ್ನಿಲಿಸ್ ಗುಜ್ಮಾನ್(Yusneylys Guzman) ಅವರನ್ನು 5-0 ಅಂತರದಿಂದ ಮಣಿಸಿ ಈ ಸಾಧನೆ ಮಾಡಿದರು. ಈ ಮೂಲಕ ವಿನೇಶ್ ಫೋಗಟ್ ಒಲಿಂಪಿಕ್ ಇತಿಹಾಸದಲ್ಲಿ ಫೈನಲ್‌ ಪ್ರವೇಶಿಸಿ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಫೈನಲ್​ನಲ್ಲಿ ಚಿನ್ನ ಅಥವಾ ಬೆಳ್ಳಿ ಗೆದ್ದರೂ ಐತಿಹಾಸಿಕ ಪದಕ ಗೆದ್ದ ಸಾಧನೆ ಮಾಡಲಿದ್ದಾರೆ. 50 ಕೆಜಿ ವಿಭಾಗದಲ್ಲಿ ವಿನೇಶ್ ಒಲಿಂಪಿಕ್ಸ್​ ಆಡುತ್ತಿರುವುದು ಇದೇ ಮೊದಲ ಬಾರಿ. ಇದಕ್ಕೂ ಮುನ್ನ ರಿಯೋ ಒಲಿಂಪಿಕ್ಸ್​ನಲ್ಲಿ 48 ಕೆಜಿ, ಟೋಕಿಯೊದಲ್ಲಿ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದರು. ಇದು ವಿನೇಶ್​ ಅವರ ಮೂರನೇ ಒಲಿಂಪಿಕ್ಸ್​ ಟೂರ್ನಿಯಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Paris Olympics: ಫೈನಲ್​ ಪ್ರವೇಶಿಸಿ ಐತಿಹಾಸಿಕ ಪದಕ ಖಾತ್ರಿಪಡಿಸಿದ ಕುಸ್ತಿಪಟು ವಿನೇಶ್ ಫೋಗಟ್

Paris Olympics: ವಿನೇಶ್ ಫೋಗಟ್ ಒಲಿಂಪಿಕ್ ಇತಿಹಾಸದಲ್ಲಿ ಫೈನಲ್‌ ಪ್ರವೇಶಿಸಿ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಫೈನಲ್​ನಲ್ಲಿ ಚಿನ್ನ ಅಥವಾ ಬೆಳ್ಳಿ ಗೆದ್ದರೂ ಐತಿಹಾಸಿಕ ಪದಕ ಗೆದ್ದ ಸಾಧನೆ ಮಾಡಲಿದ್ದಾರೆ.

VISTARANEWS.COM


on

Paris Olympics
Koo

ಪ್ಯಾರಿಸ್​: ಭಾರತದ ಕುಸ್ತಿ ಫೆಡರೇಷನ್​ನ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು​ ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಿ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಕುಸ್ತಿಪಟುಗಳೊಂದಿಗೆ ಪ್ರತಿಭಟನೆ ನಡೆಸಿ ನಡು ರಸ್ತೆಯಲ್ಲೇ ಪೊಲೀಸರಿಂದ ಲಾಠಿ ಏಟು ತಿಂದು ಬಂಧನಕ್ಕೆ ಒಳಗಾಗಿದ್ದ, ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್(Vinesh Phogat) ​ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ(Paris Olympics) ಫೈನಲ್​ ಪ್ರವೇಶಿಸುವ ಮೂಲಕ ದೇಶಕ್ಕೆ ಐತಿಹಾಸಿಕ ಪದಕವೊಂದನ್ನು ಖಾತ್ರಿಪಡಿಸಿದ್ದಾರೆ.

ಮಂಗಳವಾರ ರಾತ್ರಿ ನಡೆದ ಮಹಿಳೆಯರ 50 ಕೆಜಿ ಕುಸ್ತಿ ಸೆಮಿಫೈನಲ್​ ಪಂದ್ಯದಲ್ಲಿ ಯುಸ್ನಿಲಿಸ್ ಗುಜ್ಮಾನ್(Yusneylys Guzman) ಅವರನ್ನು 5-0 ಅಂತರದಿಂದ ಮಣಿಸಿ ಈ ಸಾಧನೆ ಮಾಡಿದರು. ಈ ಮೂಲಕ ವಿನೇಶ್ ಫೋಗಟ್ ಒಲಿಂಪಿಕ್ ಇತಿಹಾಸದಲ್ಲಿ ಫೈನಲ್‌ ಪ್ರವೇಶಿಸಿ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಫೈನಲ್​ನಲ್ಲಿ ಚಿನ್ನ ಅಥವಾ ಬೆಳ್ಳಿ ಗೆದ್ದರೂ ಐತಿಹಾಸಿಕ ಪದಕ ಗೆದ್ದ ಸಾಧನೆ ಮಾಡಲಿದ್ದಾರೆ. 50 ಕೆಜಿ ವಿಭಾಗದಲ್ಲಿ ವಿನೇಶ್ ಒಲಿಂಪಿಕ್ಸ್​ ಆಡುತ್ತಿರುವುದು ಇದೇ ಮೊದಲ ಬಾರಿ. ಇದಕ್ಕೂ ಮುನ್ನ ರಿಯೋ ಒಲಿಂಪಿಕ್ಸ್​ನಲ್ಲಿ 48 ಕೆಜಿ, ಟೋಕಿಯೊದಲ್ಲಿ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದರು. ಇದು ವಿನೇಶ್​ ಅವರ ಮೂರನೇ ಒಲಿಂಪಿಕ್ಸ್​ ಟೂರ್ನಿಯಾಗಿದೆ.

ಸುಸಾಕಿಗೆ ಸೋಲುಣಿಸಿದ ಮೊದಲ ಕುಸ್ತಿಪಟು


ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ವಿನೇಶ್​ ಅವರು ಮೂರು ಬಾರಿಯ ಕಾಮನ್​ವೆಲ್ತ್​ ಚಿನ್ನದ ಪದಕ ವಿಜೇತೆ ಉಕ್ರೇನ್​ನ ಒಕ್ಸಾನಾ ಲಿವಾಚ್ ವಿರುದ್ಧ 7-5 ಅಂತರದ ರೋಚಕ ಗೆಲುವು ಸಾಧಿಸಿ ಸೆಮಿ ಫೈನಲ್​ ಪ್ರವೇಶಿಸಿದರು. ಇದಕ್ಕೂ ಮುನ್ನ ನಡೆದಿದ್ದ ಅತ್ಯಂತ ರೋಚಕ ಪ್ರೀ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ವಿನೇಶ್ ಟೋಕಿಯೊ ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತ, ನಾಲ್ಕು ಬಾರಿಯ ವಿಶ್ವ ಚಾಂಪಿಯನ್​, ಸೋಲನ್ನೇ ಕಾಣದ ಜಪಾನ್‌ನ ಯುಯಿ ಸುಸಾಕಿ ಅವರನ್ನು 3-2 ಅಂತರದಿಂದ ಮಣಿಸಿ ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ್ದರು. ಈ ಮೂಲಕ ಸುಸಾಕಿ ಅವರಿಗೆ ಮೊದಲ ಸೋಲಿನ ರುಚಿ ತೋರಿಸಿದರು.

ಇದನ್ನೂ ಓದಿ Paris Olympics 2024 : ಕಂಚು ಕಳೆದುಕೊಂಡ ಲಕ್ಷ್ಯ ಸೇನ್​​; 2008ರ ಬಳಿಕ ಮೊದಲ ಬಾರಿಗೆ ಭಾರತಕ್ಕೆ ಬ್ಯಾಡ್ಮಿಂಟನ್​ನಲ್ಲಿ ಪದಕವಿಲ್ಲ

ಸಸಾಕಿ ತಮ್ಮ ಅಂತಾರಾಷ್ಟ್ರೀಯ ವೃತ್ತಿಜೀವನದಲ್ಲಿ ಕಂಡ ಮೊದಲ ಆಘಾತಕಾರಿ ಸೋಲು ಇದಾಗಿದೆ. ಈ ಪಂದ್ಯಕ್ಕೂ ಮುನ್ನ 82 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದ ಸುಸಾಕಿ ಎಲ್ಲ ಪಂದ್ಯವನ್ನು ಗೆದ್ದು ಬೀಗಿದ್ದರು. ಇದೀಗ ಇವರ ಗೆಲುವಿನ ನಾಗಾಲೋಟಕ್ಕೆ ಬ್ರೇಕ್​ ಹಾಕುವಲ್ಲಿ ಭಾರತೀಯ ಕುಸ್ತಿಪಟು ಯಶಸ್ಸು ಕಂಡಿದ್ದಾರೆ. ಈ ಗೆಲುವು ಸಾಧಿಸಿದಾಗಲೇ ವಿನೇಶ್​ ಈ ಬಾರಿ ಪದಕ ಗೆಲ್ಲುವುದು ಖಚಿತ ಎಂದು ನಿರೀಕ್ಷೆ ಮಾಡಲಾಗಿತ್ತು. ನಿರೀಕ್ಷೆಯಂತೆ ಅವರು ಫೈನಲ್​ ಪ್ರವೇಶಿಸಿ ಪದಕವೊಂದನ್ನು ಖಾತ್ರಿಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ Paris Olympics: ನಾಳೆ ಒಲಿಂಪಿಕ್ಸ್​ನಲ್ಲಿ ಭಾರತದ ಸ್ಪರ್ಧೆಗಳ ವಿವರ ಹೀಗಿದೆ

ಪ್ರಶಸ್ತಿ ಹಿಂದಿರುಗಿಸಿದ್ದ ವಿನೇಶ್​

ಆರು ಬಾರಿ ಬಿಜೆಪಿ ಸಂಸದರಾಗಿದ್ದ ಬ್ರಿಜ್ ಭೂಷಣ್ ಅವರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಾಕ್ಷಿ ಮಲಿಕ್ ಸೇರಿದಂತೆ ದೇಶದ ಉನ್ನತ ಕುಸ್ತಿಪಟುಗಳು ಆರೋಪಿಸಿದ ನಂತರ ಅವರು ರಾಜೀನಾಮೆ ನೀಡಬೇಕಾಯಿತು. ಒಲಿಂಪಿಕ್ ಕಂಚಿನ ಪದಕ ವಿಜೇತ ಬಜರಂಗ್ ಪೂನಿಯಾ ಮತ್ತು ಕಾಮನ್ವೆಲ್ತ್ ಕ್ರೀಡಾಕೂಟದ ಚಿನ್ನದ ಪದಕ ವಿಜೇತೆ ವಿನೇಶ್ ಫೋಗಟ್ ಸೇರಿದಂತೆ ಅಗ್ರ ಕುಸ್ತಿಪಟುಗಳು ಕಳೆದ ವರ್ಷ ಜನವರಿಯಲ್ಲಿ ಬಿಜೆಪಿ ಸಂಸದರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬೀದಿಗಿಳಿದಿದ್ದರು. ಈ ಪ್ರತಿಭಟನೆಯ ಪ್ರಮುಖ ರುವಾರಿ ಕೂಡ ವಿನೇಶ್​ ಅವರೇ ಆಗಿದ್ದರು.

ಪ್ರತಿಭಟನೆಗೆ ಕೇಂದ್ರ ಸರ್ಕಾರ ಯಾವುದೇ ರೀತಿಯಲ್ಲಿ ಸಹಕರಿಸದೇ ಇದ್ದಾಗ ಪ್ರಧಾನಿ ಮೋದಿಗೆ ಪತ್ರ ಬರೆದು ತಮಗೆ ಲಭಿಸಿದ್ದ ದೇಶದ ಪರಮೋಚ್ಚ ಕ್ರೀಡಾ ಪ್ರಶಸ್ತಿಯಾದ ಮೇಜರ್‌ ಧ್ಯಾನ್‌ಚಂದ್‌ ಖೇಲ್‌ ರತ್ನ ಮತ್ತು ಅರ್ಜುನ ಪ್ರಶಸ್ತಿಯನ್ನು ರಾಷ್ಟ್ರ ರಾಜಧಾನಿಯ ಕರ್ತವ್ಯ ಪಥದ(Kartavya Path) ಪಾದಚಾರಿ ಮಾರ್ಗದಲ್ಲಿಟ್ಟು ತೊರೆದಿದ್ದರು. 

Continue Reading

ಕ್ರೀಡೆ

Bajrang Punia: ‘ದೇಶದಲ್ಲಿ’ ಸೋತು ಒಲಿಂಪಿಕ್ಸ್​ನಲ್ಲಿ ಗೆಲುವಿನ ಹೆಜ್ಜೆಯಿಟ್ಟ​ ವಿನೇಶ್​​; ಬಜರಂಗ್‌ ಪೂನಿಯ ಟಾಂಗ್​

Bajrang Punia: ಅನ್ಯಾಯದ ವಿರುದ್ಧ ಧ್ವನಿ ಎತ್ತಿದಾಗ ಈ ಹುಡುಗಿಯನ್ನು ಯಾರು ಬೆಂಬಲಿಸಿಲ್ಲ. ಇಂದು ಇದೇ ಹುಡುಗಿ ದೇಶದ ಧ್ವಜವನ್ನು ಮತ್ತು ಹೆಸರನ್ನು ವಿಶ್ವ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ್ದಾಳೆ ಎಂದು ಟ್ವೀಟ್​ ಮಾಡುವ ಮೂಲಕ ಸಾಕ್ಷಿ ಮಲಿಕ್‌ ಕೇಂದ್ರ ಸರ್ಕಾರಕ್ಕೆ ತಿರುಗೇಟು ಕೊಟ್ಟಿದ್ದಾರೆ.

VISTARANEWS.COM


on

Bajrang Punia
Koo

ನವದೆಹಲಿ​: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ(paris olympics 2024) ವಿನೇಶ್​ ಫೋಗಟ್(Vinesh Phogat)​ ಸೆಮಿಫೈನಲ್​ ಪ್ರವೇಶ ಪಡೆಯುತ್ತಿದ್ದಂತೆ, ಒಲಿಂಪಿಕ್‌ ಪದಕ ವಿಜೇತ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್‌(Sakshi Malik) ಮತ್ತು ಬಜರಂಗ್‌ ಪೂನಿಯ(Bajrang Punia) ಟ್ವಿಟರ್​ ಎಕ್ಸ್​ನಲ್ಲಿ ಪೋಸ್ಟ್ ಮಾಡುವ ಮೂಲಕ ವಿನೇಶ್ ಸಾಧನೆಯನ್ನು ಕೊಂಡಾಡಿದ್ದಾರೆ. ಜತೆಗೆ ಕೇಂದ್ರ ಸರ್ಕಾರಕ್ಕೆ ಪರೋಕ್ಷವಾಗಿ ಟಾಂಗ್​ ಕೊಟ್ಟಿದ್ದಾರೆ.

ಎಕ್ಸ್​ನಲ್ಲಿ ಪೋಸ್ಟ್​ ಮಾಡಿರುವ ಬಜರಂಗ್‌, “ಜಗತನ್ನೇ ಗೆಲ್ಲಲು ಹೊರಟಿರುವ ವಿನೇಶಾ ಫೋಗಟ್ ಹಿಂದೊಮ್ಮೆ ತನ್ನದೇ ದೇಶದಲ್ಲಿ ಸೋಲು ಎದುರಿಸಿದ್ದಳು. ಲೈಗಿಂಕ ಕಿರುಕುಳದ ವಿರುದ್ಧ ನ್ಯಾಯಕ್ಕಾಗಿ ಹೋರಾಡಿದ್ದ ಈಕೆಯ ಮೇಲೆ ತನ್ನದೇ ದೇಶದಲ್ಲಿ ಲಾಠಿಯಿಂದ ಹೊಡೆದು ದಮನಿಸಲಾಗಿತ್ತು. ಬೀದಿಯಲ್ಲಿ ಎಳೆದಾಡಿ ತುಳಿದು ಅವಾಮಾನಿಸಲಾಗಿತ್ತು. ಇಂದು ಈ ಹುಡುಗಿಯ ಸಾಧನೆಯ ಮುಂದೆ ದೇಶದ ವ್ಯವಸ್ಥೆ ಸೋಲು ಕಂಡಿದೆ” ಎಂದು ಬರೆದುಕೊಂಡಿದ್ದಾರೆ.

ಸಾಕ್ಷಿ ಮಲಿಕ್‌ ಕೂಡ ಟ್ವೀಟ್​ ಮಾಡಿ, “ಅನ್ಯಾಯದ ವಿರುದ್ಧ ಧ್ವನಿ ಎತ್ತಿದಾಗ ಈ ಹುಡುಗಿಯನ್ನು ಯಾರು ಬೆಂಬಲಿಸಿಲ್ಲ. ಇಂದು ಇದೇ ಹುಡುಗಿ ದೇಶದ ಧ್ವಜವನ್ನು ಮತ್ತು ಹೆಸರನ್ನು ವಿಶ್ವ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ್ದಾಳೆ” ಎಂದು ಬರೆದುಕೊಳ್ಳುವ ಮೂಲಕ ಕೇಂದ್ರ ಸರ್ಕಾರಕ್ಕೆ ತಿರುಗೇಟು ಕೊಟ್ಟಿದ್ದಾರೆ.

ವಿನೇಶ್ ಫೋಗಟ್ ಅವರು ಕುಸ್ತಿಯಲ್ಲಿ ಒಲಿಂಪಿಕ್ ಸೆಮಿ ಫೈನಲ್‌ ಪ್ರವೇಶಿಸಿದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಫೈನಲ್​ನಲ್ಲಿ ಚಿನ್ನ ಅಥವಾ ಬೆಳ್ಳಿ ಗೆದ್ದರೆ ಐತಿಹಾಸಿಕ ಪದಕ ಗೆದ್ದ ಸಾಧನೆ ಮಾಡಲಿದ್ದಾರೆ. ಇಂದು ರಾತ್ರಿ 10.15ಕ್ಕೆ ನಡೆಯುವ ಫೈನಲ್​ ಪಂದ್ಯದಲ್ಲಿ ವಿನೇಶ್​ ಅವರು ಯುಸ್ನಿಲಿಸ್ ಗುಜ್ಮಾನ್ ವಿರುದ್ಧ ಕಣಕ್ಕಿಳಿಯಲಿದ್ದಾರೆ.

ಮಂಗಳವಾರ ನಡೆದ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಮೂರು ಬಾರಿಯ ಕಾಮನ್​ವೆಲ್ತ್​ ಚಿನ್ನದ ಪದಕ ವಿಜೇತೆ ಉಕ್ರೇನ್​ನ ಒಕ್ಸಾನಾ ಲಿವಾಚ್ ವಿರುದ್ಧ 7-5 ಅಂತರದ ರೋಚಕ ಗೆಲುವು ಸಾಧಿಸಿ ಸೆಮಿ ಫೈನಲ್​ ಪ್ರವೇಶಿಸಿದರು. ಇದಕ್ಕೂ ಮುನ್ನ ನಡೆದಿದ್ದ ಪ್ರೀ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ವಿನೇಶ್ ಟೋಕಿಯೊ ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತ ಜಪಾನ್‌ನ ಯುಯಿ ಸುಸಾಕಿ ಅವರನ್ನು 3-2 ಅಂತರದಿಂದ ಮಣಿಸಿ ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ್ದರು.

ಬ್ರಿಜ್​ ಭೂಷಣ್​ ಆಪ್ತ ಸಂಜಯ್ ಸಿಂಗ್ ಭಾರತ ಕುಸ್ತಿ ಫೆಡರೇಷನ್‌ನ ಅಧ್ಯಕ್ಷರಾದ ಹಿನ್ನೆಲೆ ಇದನ್ನು ಖಂಡಿಸಿ ಒಲಿಂಪಿಕ್​ ಪದಕ ವಿಜೇತೆ ಸಾಕ್ಷಿ ಮಲಿಕ್ ಕುಸ್ತಿಗೆ ವಿದಾಯ ಹೇಳಿದ್ದರು. ಆರು ಬಾರಿ ಬಿಜೆಪಿ ಸಂಸದರಾಗಿದ್ದ ಬ್ರಿಜ್ ಭೂಷಣ್ ಅವರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಾಕ್ಷಿ ಮಲಿಕ್ ಸೇರಿದಂತೆ ದೇಶದ ಉನ್ನತ ಕುಸ್ತಿಪಟುಗಳು ಆರೋಪಿಸಿದ ನಂತರ ಅವರು ರಾಜೀನಾಮೆ ನೀಡಬೇಕಾಯಿತು. ಒಲಿಂಪಿಕ್ ಕಂಚಿನ ಪದಕ ವಿಜೇತ ಬಜರಂಗ್ ಪೂನಿಯಾ ಮತ್ತು ಕಾಮನ್ವೆಲ್ತ್ ಕ್ರೀಡಾಕೂಟದ ಚಿನ್ನದ ಪದಕ ವಿಜೇತೆ ವಿನೇಶ್ ಫೋಗಟ್ ಸೇರಿದಂತೆ ಅಗ್ರ ಕುಸ್ತಿಪಟುಗಳು ಕಳೆದ ವರ್ಷ ಜನವರಿಯಲ್ಲಿ ಬಿಜೆಪಿ ಸಂಸದರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬೀದಿಗಿಳಿದಿದ್ದರು. ಈ ಪ್ರತಿಭಟನೆಯ ಪ್ರಮುಖ ರುವಾರಿ ಕೂಡ ವಿನೇಶ್​ ಅವರೇ ಆಗಿದ್ದರು.

Continue Reading

ಕ್ರೀಡೆ

Paris Olympics: ನಾಳೆ ಒಲಿಂಪಿಕ್ಸ್​ನಲ್ಲಿ ಭಾರತದ ಸ್ಪರ್ಧೆಗಳ ವಿವರ ಹೀಗಿದೆ

Paris Olympics: ಕುಸ್ತಿಪಟು ವಿನೇಶ್ ಫೋಗಟ್(Vinesh Phogat), ಪ್ಯಾರಿಸ್​ ಒಲಿಂಪಿಕ್ಸ್(Paris Olympics)​ 50 ಕೆಜಿ ಮಹಿಳಾ ಸಿಂಗಲ್ಸ್​ ವಿಭಾಗದಲ್ಲಿ ಸೆಮಿಫೈನಲ್​ ಪ್ರವೇಶಿಸಿಸಿದ್ದಾರೆ. ಈ ಮೂಲಕ ಪದಕ ಭರವಸೆಯೊಂದನ್ನು ಮೂಡಿಸಿದ್ದಾರೆ. ಇಂದು ರಾತ್ರಿ 10.15ಕ್ಕೆ ನಡೆಯುವ ಸೆಮಿಫೈನಲ್ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ.

VISTARANEWS.COM


on

Paris Olympics
Koo

ಪ್ಯಾರಿಸ್​: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ(Paris Olympics) ಮೂರು ಪದಕ ಗೆದ್ದಿರುವ ಭಾರತ ಮಂಗಳವಾರ ನಡೆದ ಹಲವು ಸ್ಪರ್ಧೆಗಳಲ್ಲಿ ಶ್ರೇಷ್ಠ ಪ್ರದರ್ಶನ ತೋರುವ ಮೂಲಕ ಪದಕ ಭರವಸೆಯನ್ನು ಮೂಡಿಸಿದೆ. ಇದೀಗ ಬುಧವಾರ ನಡೆಯುವ ಕ್ರೀಡಾ ಸ್ಪರ್ಧೆಗಳಲ್ಲಿಯೂ ಪದಕದ ನಿರೀಕ್ಷೆಯೊಂದಿಗೆ ಭಾರತದ ಕ್ರೀಡಾಪಟುಗಳು ಕಣಕ್ಕಿಳಿಯಲಿದ್ದಾರೆ. ಸ್ಪರ್ಧೆಗಳ ವಿವರ ಹೀಗಿದೆ.

ಅಥ್ಲೆಟಿಕ್ಸ್​( ಪದಕ ಸ್ಪರ್ಧೆ)

ಮ್ಯಾರಥಾನ್ ರೇಸ್ ವಾಕ್ ರಿಲೇ ಮಿಶ್ರ ತಂಡ: ಪನ್ವರ್ ಸೂರಜ್ / ಪ್ರಿಯಾಂಕಾ. (ಆರಂಭ: ಬೆಳಗ್ಗೆ 11 ಗಂಟೆ)

ಗಾಲ್ಫ್​


ಮಹಿಳೆಯರ ವೈಯಕ್ತಿಕ ಸ್ಟ್ರೋಕ್ ಪ್ಲೇ ರೌಂಡ್ 1

ಅದಿತಿ ಅಶೋಕ್

ದಿಶಾ ದಾಗರ್ (ಆರಂಭ: ಮಧ್ಯಾಹ್ನ 12.30)

ಟೇಬಲ್​ ಟೆನಿಸ್​


ಮಹಿಳಾ ತಂಡ ಕ್ವಾರ್ಟರ್‌ಫೈನಲ್: ಭಾರತ-ಜರ್ಮನಿ. (ಆರಂಭ: ಮಧ್ಯಾಹ್ನ 1.30)

ಅಥ್ಲೆಟಿಕ್ಸ್


ಪುರುಷರ ಹೈ ಜಂಪ್ ಅರ್ಹತಾ ಸುತ್ತು: ಸರ್ವೇಶ್ ಅನಿಲ್ ಕುಶಾರೆ. (ಆರಂಭ: ಮಧ್ಯಾಹ್ನ 1.35)

ಅಥ್ಲೆಟಿಕ್ಸ್

ಮಹಿಳೆಯರ 100 ಮೀ ಹರ್ಡಲ್ಸ್ ಸುತ್ತು 1: ಜ್ಯೋತಿ ಯರಾಜಿ. (ಆರಂಭ: ಮಧ್ಯಾಹ್ನ 1.45)

ಕುಸ್ತಿ

ಮಹಿಳೆಯರ ಫ್ರೀಸ್ಟೈಲ್ 53kg (ಆರಂಭ: ಮಧ್ಯಾಹ್ನ 2.30)

ಅಥ್ಲೆಟಿಕ್ಸ್


ಪುರುಷರ ಟ್ರಿಪಲ್ ಜಂಪ್ ಅರ್ಹತೆ
: ಅಬ್ದುಲ್ಲ ನರಂಗೋಳಿಂತೇವಿ, ಪ್ರವೀಣ್ ಚಿತ್ರವೇಲ್ (ಆರಂಭ: ರಾತ್ರಿ 10.45)

ವೇಟ್‌ ಲಿಫ್ಟಿಂಗ್‌:

ಮಹಿಳೆಯರ 49 ಕೆಜಿ ವಿಭಾಗ: ಮೀರಾಬಾಯಿ ಚಾನು (ಆರಂಭ: ರಾತ್ರಿ 11)

ಇದನ್ನೂ ಓದಿ Paris Olympics: ಸೆಮಿ ಫೈನಲ್​ ಪ್ರವೇಶಿಸಿದ ವಿನೇಶ್ ಫೋಗಟ್

ಇಂದು ಮಹಿಳಾ ಕುಸ್ತಿ ಸೆಮಿಫೈನಲ್​

ಕುಸ್ತಿಪಟು ವಿನೇಶ್ ಫೋಗಟ್(Vinesh Phogat), ಪ್ಯಾರಿಸ್​ ಒಲಿಂಪಿಕ್ಸ್(Paris Olympics)​ 50 ಕೆಜಿ ಮಹಿಳಾ ಸಿಂಗಲ್ಸ್​ ವಿಭಾಗದಲ್ಲಿ ಸೆಮಿಫೈನಲ್​ ಪ್ರವೇಶಿಸಿಸಿದ್ದಾರೆ. ಈ ಮೂಲಕ ಪದಕ ಭರವಸೆಯೊಂದನ್ನು ಮೂಡಿಸಿದ್ದಾರೆ. ಇಂದು ರಾತ್ರಿ 10.15ಕ್ಕೆ ನಡೆಯುವ ಸೆಮಿಫೈನಲ್ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ.

ಮಂಗಳವಾರ ನಡೆದ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಮೂರು ಬಾರಿಯ ಕಾಮನ್​ವೆಲ್ತ್​ ಚಿನ್ನದ ಪದಕ ವಿಜೇತೆ ಉಕ್ರೇನ್​ನ ಒಕ್ಸಾನಾ ಲಿವಾಚ್ ವಿರುದ್ಧ 7-5 ಅಂತರದ ರೋಚಕ ಗೆಲುವು ಸಾಧಿಸಿ ಸೆಮಿ ಫೈನಲ್​ ಪ್ರವೇಶಿಸಿದರು. ಇದಕ್ಕೂ ಮುನ್ನ ನಡೆದಿದ್ದ ಪ್ರೀ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ವಿನೇಶ್ ಟೋಕಿಯೊ ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತ ಜಪಾನ್‌ನ ಯುಯಿ ಸುಸಾಕಿ ಅವರನ್ನು 3-2 ಅಂತರದಿಂದ ಮಣಿಸಿ ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ್ದರು. ಈ ಗೆಲುವು ಕಂಡಾಗಲೇ ವಿನೇಶ್​ ಈ ಬಾರಿ ಪದಕ ಗೆಲ್ಲುವುದು ಖಚಿತ ಎಂದು ನಿರ್ಧರಿಸಲಾಗಿತ್ತು. ಇದೀಗ ಸೆಮಿ ಹಂತಕ್ಕೇರಿರುವ ಅವರು ಪದಕವೊಂದನ್ನು ಖಾತ್ರಿ ಪಡಿಸಿದ್ದಾರೆ. ಸುಸಾಕಿ ಅವರ ಅಂತಾರಾಷ್ಟ್ರೀಯ ವೃತ್ತಿಜೀವನದಲ್ಲಿ ಕಂಡ ಮೊದಲ ಸೋಲು ಇದಾಗಿದೆ. 82 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದ ಸುಸಾಕಿ ಎಲ್ಲ ಪಂದ್ಯವನ್ನು ಗೆದ್ದು ಬೀಗಿದ್ದರು. ಇದೀಗ ಇವರ ಗೆಲುವಿನ ನಾಗಾಲೋಟಕ್ಕೆ ಭಾರತೀಯ ಕುಸ್ತಿಪಟು ಬ್ರೇಕ್​ ಹಾಕುವಲ್ಲಿ ಯಶಸ್ಸು ಕಂಡಿದ್ದಾರೆ.


Continue Reading

ಕ್ರೀಡೆ

Rohit Sharma: ಯುಪಿಎಸ್ಸಿ ಕೋಚಿಂಗ್​ನಲ್ಲಿಯೂ ರೋಹಿತ್​ ಶರ್ಮ ಹವಾ; ವೈರಲ್​ ವಿಡಿಯೊ ಇಲ್ಲಿದೆ

Rohit Sharma: ಅತಿ ಹೆಚ್ಚು ಸಿಕ್ಸರ್​ ಬಾರಿಸಿದ ವಿಶ್ವ ದಾಖಲೆ ಪಾಕಿಸ್ತಾನದ ಮಾಜಿ ನಾಯಕ ಹಾಗೂ ಆಟಗಾರ ಶಾಹೀದ್ ಅಫ್ರಿದಿ ಹೆಸರಿನಲ್ಲಿದೆ. ಅಫ್ರಿದಿ 398 ಏಕದಿನ ಪಂದ್ಯಗಳನ್ನಾಡಿ 351 ಸಿಕ್ಸರ್​ ಬಾರಿಸಿದ್ದಾರೆ.

VISTARANEWS.COM


on

Rohit Sharma
Koo

ಮುಂಬಯಿ: ಭಾರತ ಕ್ರಿಕೆಟ್​ ತಂಡದ ನಾಯಕ ರೋಹಿತ್ ಶರ್ಮ(Rohit Sharma) ಅವರ ಸಾಧನೆ ಇದೀಗ ಯುಪಿಎಸ್ಸಿ ವಿದ್ಯಾರ್ಥಿಗಳಿಗೂ ಸ್ಫೂರ್ತಿಯಾಗಿದೆ. ಹೌದು, ಯುಪಿಎಸ್ಸಿ(UPSC ) ಕೋಚಿಂಗ್​ ಸೆಂಟರ್​ ಒಂದರಲ್ಲಿ ಶಿಕ್ಷಕರೊಬ್ಬರು(UPSC teacher) ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ವೇಳೆ ರೋಹಿತ್​ ಅವರ ಬ್ಯಾಟಿಂಗ್​ ಬಗ್ಗೆ ಗುಣಗಾನ ಮಾಡಿದ್ದಾರೆ. ಈ ವಿಡಿಯೊ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್(viral video) ಆಗಿದೆ.

ಪಾಠ ಮಾಡುತ್ತಿದ್ದ ಶಿಕ್ಷಕ, ರೋಹಿತ್ ಶರ್ಮ ಅವರ ಬ್ಯಾಟಿಂಗ್ ನೋಡುವಾಹ ರನ್​ ಗಳಿಸಲೆಂದೇ ಈ ಪಿಚ್​ ಮಾಡಿರುವಂತೆ ತೋರುತ್ತದೆ. ಆದರೆ, ಇತರ ಬ್ಯಾಟರ್‌ಗಳು ಕ್ರೀಸ್​ಗೆ ಬಂದಾಗ ಅದು ಕಠಿಣ ಎಂದು ಅನಿಸುತ್ತದೆ. ಅದು ಏಕೆ ಎಂಬುದು ನಿಜಕ್ಕೂ ಗೊಂದಲಮಯವಾಗಿದೆ ಎಂದು ಹೇಳುವ ಮೂಲಕ ಪರೀಕ್ಷೆ ಬರೆಯಲು ಸಜ್ಜಾಗಿ ನಿಂತಿರುವ ವಿದ್ಯಾರ್ಥಿಗಳು ರೋಹಿತ್​ ರನ್​ ಗಳಿಸಿದಂತೆ ಅಂಕ ಗಳಿಸಬೇಕು ಎನ್ನುವ ಉದಾಹರಣೆಯನ್ನು ನೀಡಿದ್ದಾರೆ. ಈ ವಿಡಿಯೊ ಕಂಡ ನೆಟ್ಟಿಗರು ಮಿಶ್ರ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಕೆಲವರು ರೋಹಿತ್​ ಶೂನ್ಯಕ್ಕೆ ಔಟ್​ ಆದ ಹಲವು ನಿದರ್ಶನ ಇದೆ ಎಂದು ಹಾಸ್ಯ ಮಾಡಿದರೆ, ಇನ್ನು ಕೆಲವರು ರೋಹಿತ್​ ಏಕದಿನದಲ್ಲಿ ಮೂರು ಬಾರಿ ದ್ವಿಶತಕ ಬಾರಿಸಿದ್ದಾರೆ ಎಂದು ಕಮೆಂಟ್​ ಮಾಡಿದ್ದಾರೆ.

ಲಂಕಾ ವಿರುದ್ಧ ನಾಳೆ ನಡೆಯುವ ಅಂತಿಮ ಏಕದಿನ ಪಂದ್ಯದಲ್ಲಿ ರೋಹಿತ್​ ಶರ್ಮ 2 ಸಿಕ್ಸರ್​ ಬಾರಿಸಿದರೆ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್​ನಲ್ಲಿ(Most sixes in career in ODIs) ಅತ್ಯಧಿಕ ಸಿಕ್ಸರ್​ ಬಾರಿಸಿದ ಆಟಗಾರರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಲಿದ್ದಾರೆ. ಈ ಮೂಲಕ ಕ್ರಿಸ್​ ಗೇಲ್​ (331 ಸಿಕ್ಸರ್​) ದಾಖಲೆಯನ್ನು ಮುರಿಯಲಿದ್ದಾರೆ. ಸದ್ಯ ರೋಹಿತ್​ 330 ಸಿಕ್ಸರ್​ ಬಾರಿಸಿ ಮೂರನೇ ಸ್ಥಾನಿಯಾಗಿದ್ದಾರೆ. ಅತಿ ಹೆಚ್ಚು ಸಿಕ್ಸರ್​ ಬಾರಿಸಿದ ವಿಶ್ವ ದಾಖಲೆ ಪಾಕಿಸ್ತಾನದ ಮಾಜಿ ನಾಯಕ ಹಾಗೂ ಆಟಗಾರ ಶಾಹೀದ್ ಅಫ್ರಿದಿ ಹೆಸರಿನಲ್ಲಿದೆ. ಅಫ್ರಿದಿ 398 ಏಕದಿನ ಪಂದ್ಯಗಳನ್ನಾಡಿ 351 ಸಿಕ್ಸರ್​ ಬಾರಿಸಿದ್ದಾರೆ. ರೋಹಿತ್​ ಕನಿಷ್ಠ 2 ವರ್ಷಗಳ ಕಾಲ ಏಕದಿನ ಆಡಿದರೆ ಈ ದಾಖಲೆಯನ್ನು ಮುರಿಯುವುದರಲ್ಲಿ ಯಾವುದೇ ಅನುಮಾನವಿಲ್ಲ.

ಇದನ್ನೂ ಓದಿ Rohit Sharma: ಕ್ರಿಸ್​ ಗೇಲ್​ ಸಿಕ್ಸರ್​ ದಾಖಲೆ ಮೇಲೆ ಕಣ್ಣಿಟ್ಟ ಹಿಟ್​ಮ್ಯಾನ್​ ರೋಹಿತ್​

ಟಿ20 ವಿಶ್ವಕಪ್​ ಗೆದ್ದ ರೋಹಿತ್​ ಗೆಲುವಿನ ಬಳಿಕ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ. ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ. ನಾನು ಮೊದಲು ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದೇ ಟಿ20 ಆಡುವ ಮೂಲಕ. ನಾಕಯನಾಗಿ ನಾನು ಕಪ್ ಗೆಲ್ಲಬೇಕೆಂದು ಬಯಸಿದ್ದೆ. ಇದು ಸಾಕಾರಗೊಂಡಿದೆ” ಎಂದು ಹೇಳುವ ಮೂಲಕ ವಿದಾಯ ಹೇಳಿದರು. ಟಿ20ಯಲ್ಲಿ 159 ಪಂದ್ಯಗಳನ್ನು ಆಡಿರುವ ರೋಹಿತ್‌, 4231 ರನ್‌ ಗಳಿಸಿದ್ದು, 5 ಶತಕ ಹಾಗೂ 37 ಅರ್ಧಶತಕಗಳನ್ನು ಬಾರಿಸಿದ್ದಾರೆ.

Continue Reading
Advertisement
ಕ್ರೀಡೆ3 hours ago

Paris Olympics 2024 : ಸೆಮಿಫೈನಲ್​​​​ನಲ್ಲಿ ಭಾರತ ಹಾಕಿ ತಂಡಕ್ಕೆ ಆಘಾತಕಾರಿ ಸೋಲು, ಇನ್ನೂ ಇದೆ ಪದಕ ಗೆಲ್ಲುವ ಅವಕಾಶ

Shira News
ತುಮಕೂರು3 hours ago

Shira News: ವರ್ಗಾವಣೆಗೊಂಡ ಶಿರಾ ತಾ.ಪಂ ಇಓ ಅನಂತ್‌ರಾಜ್‌ಗೆ ಬೀಳ್ಕೊಡುಗೆ

Rekha Sharma
ದೇಶ3 hours ago

Rekha Sharma: ರಾಷ್ಟ್ರೀಯ ಮಹಿಳಾ ಆಯೋಗ ಅಧ್ಯಕ್ಷೆ ರೇಖಾ ಶರ್ಮಾ ಅಧಿಕಾರಾವಧಿ ಪೂರ್ಣ

Bangladesh unrest
ದೇಶ4 hours ago

Bangladesh Unrest: ಶೇಖ್ ಹಸೀನಾ ಬೆಂಬಲಿಗನ ಫೈವ್‌ ಸ್ಟಾರ್‌ ಹೊಟೇಲ್‌ಗೆ ಬೆಂಕಿ; 24 ಜನ ಸಜೀವ ದಹನ

Paris Olympics
ಕ್ರೀಡೆ4 hours ago

Paris Olympics: ಫೈನಲ್​ ಪ್ರವೇಶಿಸಿ ಐತಿಹಾಸಿಕ ಪದಕ ಖಾತ್ರಿಪಡಿಸಿದ ಕುಸ್ತಿಪಟು ವಿನೇಶ್ ಫೋಗಟ್

Bangladesh unrest
ದೇಶ5 hours ago

Bangladesh Unrest: ಶೇಖ್‌ ಹಸೀನಾಗೆ 8 ತಿಂಗಳ ಹಿಂದೆಯೇ ಎಚ್ಚರಿಕೆ ನೀಡಿದ್ದ ಭಾರತದ ಜ್ಯೋತಿಷಿ; ಆತನ ಭವಿಷ್ಯವಾಣಿ ಏನು?

Pralhad Joshi
ದೇಶ5 hours ago

Pralhad Joshi: 2030ರಲ್ಲೂ ನಾವಿಲ್ಲೇ ಇರುತ್ತೇವೆ, ನೀವಲ್ಲೇ ಇರುತ್ತೀರಿ; ಸಂಸತ್‌ನಲ್ಲಿ ಪ್ರತಿಪಕ್ಷಗಳಿಗೆ ಜೋಶಿ ಟಾಂಗ್

Bangladesh Protest
ವಿದೇಶ5 hours ago

Bangladesh Chronology: 1971ರ ದೇಶ ಉದಯದಿಂದ ಹಿಡಿದು 2024ರ ದಂಗೆಯವರೆಗೆ; ಇಲ್ಲಿದೆ ಬಾಂಗ್ಲಾದೇಶದ ಸಂಪೂರ್ಣ ರಕ್ತ ಚರಿತ್ರೆ!

Reliance Foundation
ಕರ್ನಾಟಕ5 hours ago

Reliance Foundation: ವಯನಾಡಿನ ಭೂಕುಸಿತ ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ನೆರವು

B.Ed Exam Scam
ಕರ್ನಾಟಕ5 hours ago

B.Ed Exam Scam: ಬಿ.ಇಡಿ ಪರೀಕ್ಷೆ ಅಕ್ರಮ; ಗುಲ್ಬರ್ಗಾ ವಿವಿ ಕುಲಸಚಿವೆ ಸೇರಿ ಐವರ ವಿರುದ್ಧ ಎಫ್‌ಐಆರ್‌

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು9 hours ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ10 hours ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ6 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ6 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ6 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌