Site icon Vistara News

Paris Olympics 2024: ಒಲಿಂಪಿಕ್ಸ್‌ ಹಾಕಿ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಕಿವೀಸ್​ ಮೊದಲ ಎದುರಾಳಿ

hockey india new zealand

ನವದೆಹಲಿ: ಅತಿ ದೊಡ್ಡ ಮತ್ತು ಮಹತ್ವದ ಕ್ರೀಡಾಕೂಟವಾದ, ಈ ಬಾರಿ ಪ್ಯಾರಿಸ್​ನಲ್ಲಿ ನಡೆಯುವ ಒಲಿಂಪಿಕ್ಸ್‌ ಟೂರ್ನಿಯ(Paris Olympics 2024) ಹಾಕಿ ಪಂದ್ಯಾವಳಿಯ ವೇಳಾಪಟ್ಟಿ(Paris 2024 Olympics Hockey schedule) ಪ್ರಕಟಗೊಂಡಿದೆ. ಭಾರತೀಯ ಪುರುಷರ ತಂಡ(Indian Men’s Hockey Team) ತನ್ನ ಮೊದಲ ಪಂದ್ಯವನ್ನು ಜುಲೈ 27ರಂದು ನ್ಯೂಜಿಲ್ಯಾಂಡ್​ ವಿರುದ್ಧ ಆಡಲಿದೆ.

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದ ಭಾರತ ಈ ಸಲ ‘ಬಿ’ ಗುಂಪಿನಲ್ಲಿದೆ ಕಾಣಿಸಿಕೊಂಡಿದೆ. ಒಲಿಂಪಿಕ್ಸ್‌ ಇತಿಹಾಸವನ್ನೊಮ್ಮೆ ಕೆದಕಿದರೆ ಪುರುಷರ ಹಾಕಿಯಲ್ಲಿ 8 ಬಾರಿ ಸ್ವರ್ಣ ಗೆದ್ದ ಏಕೈಕ ತಂಡವೆಂಬ ಹೆಗ್ಗಳಿಕೆ ಭಾರತ ಉಳಿಸಿಕೊಂಡಿದೆ.

ಭಾರತ ತಂಡ ಜುಲೈ 29ರಂದು ಅರ್ಜೆಂಟೀನಾ, 30ರಂದು ಐರ್ಲೆಂಡ್‌, ಆಗಸ್ಟ್ 1ರಂದು ಬೆಲ್ಜಿಯಂ, ಆಗಸ್ಟ್​ 2ರಂದು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ. ಕಳೆದ ಬಾರಿ ಕಂಚು ಗೆದ್ದ ಭಾರತ ಈ ಬಾರಿ ಚಿನ್ನದ ಪದಕ್ಕೆ ಕೊರಳೊಡ್ಡಲಿ ಎನ್ನುವುದು ಭಾರತೀಯರ ಆಶಯ. ‘ಎ’ ಗುಂಪಿನಲ್ಲಿ ನೆದರ್ಲೆಂಡ್ಸ್‌, ಸ್ಪೇನ್‌, ಜರ್ಮನಿ, ಫ್ರಾನ್ಸ್, ಬ್ರಿಟನ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳಿವೆ. ಕ್ವಾರ್ಟರ್‌ಫೈನಲ್ ಪಂದ್ಯಗಳು ಆಗಸ್ಟ್​ 4ರಂದು ಮತ್ತು ಸೆಮಿಫೈನಲ್ ಪಂದ್ಯಗಳು ಆಗಸ್ಟ್​ 6 ರಂದು ನಡೆಯಲಿವೆ. ಕಂಚಿನ ಪದಕದ ಮತ್ತು ಫೈನಲ್ ಪಂದ್ಯ ಆಗಸ್ಟ್​ 8ರಂದು ನಡೆಯಲಿವೆ.

ಒಲಿಂಪಿಕ್ಸ್ ಆರಂಭ ಯಾವಾಗ?

2024ರಲ್ಲಿ ನಡೆಯುವ ಪ್ಯಾರಿಸ್ ಒಲಿಂಪಿಕ್ಸ್ ಅತಿ ದೊಡ್ಡ ಮತ್ತು ಮಹತ್ವದ ಕ್ರೀಡಾಕೂಟವಾಗಿದೆ. ಸುಮಾರು 200 ದೇಶಗಳ 10,000 ಕ್ರೀಡಾಪಟುಗಳು ಒಲಿಂಪಿಕ್ ವೈಭವಕ್ಕಾಗಿ ಸ್ಪರ್ಧಿಸಲಿದ್ದಾರೆ. ಪ್ಯಾರಿಸ್ ತನ್ನ ಮೂರನೇ ಬಾರಿಗೆ ಆತಿಥೇಯ ನಗರವಾಗಿ (1900 ಮತ್ತು 1924 ರ ನಂತರ) ಟೂರ್ನಿಯ ಆತಿಥ್ಯ ವಹಿಸಿಕೊಳ್ಳಲಿದೆ. ಜುಲೈ 26 ರಿಂದ ಆಗಸ್ಟ್ 11ರ ತನಕ ಟೂರ್ನಿ ನಡೆಯಲಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

ಇದನ್ನೂ ಓದಿ Paris Olympics 2024: ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಈಕ್ವೆಸ್ಟ್ರಿಯನ್‌ ಅನುಷ್‌  

ಮಹಿಳೆಯರ ಹಾಕಿ ತಂಡಕ್ಕೆ ಪ್ಯಾರಿಸ್​ ಒಲಿಂಪಿಕ್ಸ್​ ಪ್ರವೇಶವೇ ಇಲ್ಲ!

ಟೋಕಿಯೊ ಒಲಿಂಪಿಕ್ಸ್​ನಲ್ಲಿ ನಾಲ್ಕನೇ ಸ್ಥಾನ ಪಡೆದ ಭಾರತೀಯ ಮಹಿಳಾ ಹಾಕಿ ತಂಡವು ಮುಂದಿನ ಪ್ಯಾರಿಸ್ ಒಲಿಂಪಿಕ್ಸ್​​ಗೆ ಅರ್ಹತೆಯನ್ನೇ ಪಡೆಯದಿರುವುದು ವಿಪರ್ಯಾಸ. 2012ರ ಬಳಿಕ ಇದೇ ಮೊದಲ ಬಾರಿಗೆ ಭಾರತ ಮಹಿಳಾ ಹಾಕಿ ತಂಡ ಒಲಿಂಪಿಕ್ಸ್​ನಲ್ಲಿ ಅವಕಾಶ ಪಡೆಯಲು ವಿಫಲಗೊಂಡಿದೆ.

1980ರ ಮಾಸ್ಕೋದಲ್ಲಿ ಮಹಿಳಾ ಹಾಕಿ ಸೇರ್ಪಡೆಯಾದ ಬಳಿಕ ಭಾರತ ಮಹಿಳಾ ತಂಡ ಒಲಿಂಪಿಕ್ಸ್​ನಲ್ಲಿ ಕೇವಲ ಮೂರು ಬಾರಿ ಆಡಿದೆ. ಮೊದಲ ನಾಲ್ಕು ಆವೃತ್ತಿಯಲ್ಲಿ ಅರ್ಹತೆ ಪಡೆಯದ ಭಾರತ ರಿಯೋ 2016ರಲ್ಲಿ ಅವಕಾಶ ಗಿಟ್ಟಿಸಿತು. ಆ ಸಮಯದಲ್ಲಿ 12ನೇ ಸ್ಥಾನ ಪಡೆದುಕೊಂಡಿತ್ತು. ನಂತರ ಟೋಕಿಯೊ ಕ್ರೀಡಾಕೂಟಕ್ಕೆ ಅರ್ಹತೆ ಪಡೆಯಿತು.

Exit mobile version