Paris Olympics 2024: ಈ ಬಾರಿ ಒಲಿಂಪಿಕ್ಸ್​ನಲ್ಲಿ ಕಣಕ್ಕಿಳಿಯಲಿದ್ದಾರೆ ಭಾರತದ 117 ಕ್ರೀಡಾಳುಗಳು; ಅಥ್ಲೆಟಿಕ್ಸ್​ ದೊಡ್ಡ ತಂಡ - Vistara News

ಕ್ರೀಡೆ

Paris Olympics 2024: ಈ ಬಾರಿ ಒಲಿಂಪಿಕ್ಸ್​ನಲ್ಲಿ ಕಣಕ್ಕಿಳಿಯಲಿದ್ದಾರೆ ಭಾರತದ 117 ಕ್ರೀಡಾಳುಗಳು; ಅಥ್ಲೆಟಿಕ್ಸ್​ ದೊಡ್ಡ ತಂಡ

Paris Olympics 2024: ಅತ್ಯಧಿಕ 18 ಮಂದಿ ಸಹಾಯಕ ಸಿಬಂದಿಯನ್ನು ಶೂಟಿಂಗ್‌ ತಂಡಕ್ಕೆ ಒದಗಿಸಲಾಗಿದೆ. ಕುಸ್ತಿಗೆ 12, ಬಾಕ್ಸಿಂಗ್‌ಗೆ 11, ಹಾಕಿಗೆ 10, ಟಿಟಿ ಮತ್ತು ಬ್ಯಾಡ್ಮಿಂಟನ್‌ಗೆ 9, ಗಾಲ್ಫ್​ಗೆ 5, ಆರ್ಚರಿ, ಹಾಯಿದೋಣಿ ಮತ್ತು ವೇಟ್‌ಲಿಫ್ಟಿಂಗ್‌ಗೆ
4, ಟೆನಿಸ್‌ಗೆ 3, ಈಜಿಗೆ 2 ಹಾಗೂ ಜೂಡೋಗೆ ಒಬ್ಬರು ಸಹಾಯಕ ಸಿಬ್ಬಂದಿ ನೀಡಲಾಗಿದೆ.

VISTARANEWS.COM


on

Paris Olympics 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಪ್ರತಿಷ್ಠಿತ ಪ್ಯಾರಿಸ್‌ ಒಲಿಂಪಿಕ್ಸ್‌(Paris Olympics 2024) ಕ್ರೀಡಾಕೂಟದಲ್ಲಿ ಸ್ಪರ್ಧಿಸಲಿರುವ ಭಾರತದ ಕ್ರೀಡಾಳುಗಳ ಪಟ್ಟಿಯನ್ನು ಭಾರತೀಯ ಒಲಿಂಪಿಕ್‌ ಸಂಸ್ಥೆ (ಐಒಎ) ಈಗಾಗಲೇ ಬಿಡುಗಡೆ ಮಾಡಿದೆ. ಈ ಬಾರಿ 117 ಕ್ರೀಡಾಪಟುಗಳು ಪದಕ ನಿರೀಕ್ಷೆಯೊಂದಿಗೆ ಸ್ಪರ್ಧಿಸಲಿದ್ದಾರೆ. ಕಳೆದ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತದ 119 ಮಂದಿ ಕ್ರೀಡಾಪಟುಗಳು ಪ್ರತಿನಿಧಿಸಿದ್ದರು.

ಅಥ್ಲೆಟಿಕ್ಸ್​ನಲ್ಲಿ 29 ಸ್ಪರ್ಧಿಗಳು ಭಾರತವನ್ನು ಪ್ರತಿನಿಧಿಸಲಿದ್ದಾರೆ. 18 ಪುರುಷರು ಹಾಗೂ 11 ಮಹಿಳೆಯರು ಸೇರಿದ್ದಾರೆ. ಆರಂಭದಲ್ಲಿ ಅಥ್ಲೀಟ್​ಗಳ ಸಂಖ್ಯೆ​ 30 ಇತ್ತು. ಆದರೆ ವನಿತಾ ಶಾಟ್‌ಪುಟರ್‌ ಅಭಾ ಖತುವಾ ಗೈರಿನಿಂದ 29ಕ್ಕೆ ಇಳಿಯಿತು. ಆದರೆ ಅವರನ್ನು ಕೈಬಿಟ್ಟ ಬಗ್ಗೆ ಯಾವುದೇ ಕಾರಣ ಅಥವಾ ವಿವರಣೆ ನೀಡಲಾಗಿಲ್ಲ.  29 ಸದಸ್ಯರನ್ನು ಒಳಗೊಂಡ ಟ್ರ್ಯಾಕ್ ಆ್ಯಂಡ್ ಫೀಲ್ಡ್ ತಂಡಕ್ಕೆ ಟೋಕಿಯೊ ಒಲಿಂಪಿಕ್​ ಚಿನ್ನದ ಪದಕ ವಿಜೇತ, ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ನಾಯಕನಾಗಿದ್ದಾರೆ.

ಶೂಟಿಂಗ್​ನಲ್ಲಿ ಒಟ್ಟು 21 ಮಂದಿ ಸ್ಥಾನ ಪಡೆದಿದ್ದಾರೆ. 10 ಮಂದಿ ಪುರುಷರು ಹಾಗೂ 11 ಮಂದಿ ಮಹಿಳಾ ಸ್ಪರ್ಧಿಗಳು ಕಾಣಿಸಿಕೊಂಡಿದ್ದಾರೆ. ಹಾಕಿ ತಂಡದಲ್ಲಿ 19 ಆಟಗಾರರಿದ್ದಾರೆ. ಟೇಬಲ್‌ ಟೆನಿಸ್​ನಲ್ಲಿ 8 ಮಂದಿ ಆಟಗಾರರು, ಬ್ಯಾಡ್ಮಿಂಟನ್​ನಲ್ಲಿ 7 ಮಂದಿ ಕಣಕ್ಕಿಳಿಯಲಿದ್ದಾರೆ. ಅವಳಿ ಒಲಿಂಪಿಕ್‌ ಪದಕ ಗೆದ್ದ ಪಿ.ವಿ. ಸಿಂಧು ಮೇಲೆ ಹ್ಯಾಟ್ರಿಕ್​ ಪದಕವೊಂದನ್ನು ನಿರೀಕ್ಷೆ ಮಾಡಲಾಗಿದೆ. ಉಳಿದಂತೆ ಕುಸ್ತಿ, ಆರ್ಚರಿ ಮತ್ತು ಬಾಕ್ಸಿಂಗ್‌ನಲ್ಲಿ ತಲಾ 6 ಮಂದಿ ಸ್ಪರ್ಧಿಸಲಿದ್ದಾರೆ.

ಗಾಲ್ಫ್​ನಲ್ಲಿ 4, ಟೆನಿಸ್‌ನಲ್ಲಿ 3, ಈಜು ಮತ್ತು ಹಾಯಿದೋಣಿಯಲ್ಲಿ ತಲಾ ಇಬ್ಬರು ಕಣಕ್ಕಿಳಿಯಲಿದ್ದಾರೆ. ಈಕ್ವೇಸ್ಟ್ರಿಯನ್‌(ಕುದುರೆ ಸವಾರಿ), ಜೂಡೋ, ರೋಯಿಂಗ್‌ ಮತ್ತು ವೇಟ್‌ಲಿಫ್ಟಿಂಗ್‌ನಲ್ಲಿ ಒಬ್ಬರಷ್ಟೇ ಸ್ಪರ್ಧಿಸಲಿದ್ದಾರೆ. ಪಿ.ವಿ.ಸಿಂಧು(PV Sindhu) ಮತ್ತು ಹಿರಿಯ ಟೇಬಲ್ ಟೆನಿಸ್ ಆಟಗಾರ ಶರತ್ ಕಮಲ್(Sharath Kamal) ಉದ್ಘಾಟನಾ ಸಮಾರಂಭದಲ್ಲಿ ಭಾರತದ ಧ್ವಜಧಾರಿಯಾಗಲಿದ್ದಾರೆ.

ಇದನ್ನೂ ಓದಿ Paris Olympics: ಪ್ಯಾರಿಸ್‌ ಒಲಿಂಪಿಕ್ಸ್​ ಭದ್ರತಾ ಕಾರ್ಯದಲ್ಲಿ ಭಾರತದ ಶ್ವಾನದಳ; ಬೆಂಗಳೂರಿನಲ್ಲಿ ತರಬೇತಿ

ಅತ್ಯಧಿಕ 18 ಮಂದಿ ಸಹಾಯಕ ಸಿಬಂದಿಯನ್ನು ಶೂಟಿಂಗ್‌ ತಂಡಕ್ಕೆ ಒದಗಿಸಲಾಗಿದೆ. ಕುಸ್ತಿಗೆ 12, ಬಾಕ್ಸಿಂಗ್‌ಗೆ 11, ಹಾಕಿಗೆ 10, ಟಿಟಿ ಮತ್ತು ಬ್ಯಾಡ್ಮಿಂಟನ್‌ಗೆ 9, ಗಾಲ್ಫ್​ಗೆ 5, ಆರ್ಚರಿ, ಹಾಯಿದೋಣಿ ಮತ್ತು ವೇಟ್‌ಲಿಫ್ಟಿಂಗ್‌ಗೆ
4, ಟೆನಿಸ್‌ಗೆ 3, ಈಜಿಗೆ 2 ಹಾಗೂ ಜೂಡೋಗೆ ಒಬ್ಬರು ಸಹಾಯಕ ಸಿಬ್ಬಂದಿ ನೀಡಲಾಗಿದೆ. ಒಟ್ಟು 140 ಮಂದಿ ಅಧಿಕಾರಿಗಳು ಹಾಗೂ ಸಹಾಯಕ ಸಿಬ್ಬಂದಿಗಳು ಪಾಲ್ಗೊಳ್ಳಲಿದ್ದಾರೆ.

ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಪದಕ ಗೆಲ್ಲುವುದು ಭಾರತದ ಪ್ರಮುಖ ಗುರಿಯಾಗಿದೆ. ಟೋಕಿಯೊದಲ್ಲಿ ಭಾರತ ಒಟ್ಟು 7 ಪದಕ ಜಯಿಸಿತ್ತು. ಇದರಲ್ಲಿ ಒಂದು ಚಿನ್ನ, 2 ಬೆಳ್ಳಿ ಮತ್ತು 4 ಕಂಚಿನ ಪದಕ ಒಳಗೊಂಡಿತ್ತು. ಒಟ್ಟಾರೆಯಾಗಿ ಭಾರತ ಪದಕ ಪಟ್ಟಿಯಲ್ಲಿ 48ನೇ ಸ್ಥಾನ ಪಡೆದಿತ್ತು. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ. 2

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Olympic Medals: ಒಲಿಂಪಿಕ್ಸ್​ ವಿಜೇತರಿಗೆ ನೀಡುವ ಚಿನ್ನದ ಪದಕ ಚಿನ್ನದ್ದಲ್ಲ!

Olympic Medals: ಒಲಿಂಪಿಕ್ ಚಾಂಪಿಯನ್‌ಗಳು ತಮ್ಮ ಬಾಯಿಯಲ್ಲಿ ಚಿನ್ನದ ಪದಕವನ್ನು ಕಚ್ಚುವುದು ಈಗ ಶುದ್ಧತೆಯನ್ನು ಪರಿಶೀಲಿಸುವುದಕ್ಕಾಗಿ ಅಲ್ಲ. ಯಾಕೆಂದರೆ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) 1912 ರಲ್ಲಿ ಶುದ್ಧ ಚಿನ್ನದ ಪದಕಗಳನ್ನು ನೀಡುವುದನ್ನು ನಿಲ್ಲಿಸಿತ್ತು. ಆದರೆ ಅದರ ಅಭ್ಯಾಸ ಕ್ರಮ ಇನ್ನೂ ಮುಂದುವರಿದಿದೆ.

VISTARANEWS.COM


on

Olympic Medals
Koo

ಬೆಂಗಳೂರು: ಇದುವರೆಗಿನ ಒಲಿಂಪಿಕ್ಸ್(Olympic)​ ಇತಿಹಾಸದಲ್ಲೇ(olympic history) ಅಮೆರಿಕದ ಖ್ಯಾತ ಈಜು ದಂತಕಥೆ ಮೈಕೆಲ್ ಫೆಲ್ಪ್ಸ್ ಅತ್ಯಧಿಕ ಪದಕ ಗೆದ್ದ ಸಾಧಕ. ‘ಚಿನ್ನದ ಮೀನು’ ಎಂದೇ ಖ್ಯಾತಿಗಳಿಸಿರುವ ಇವರು ಸರ್ವಾಧಿಕ 23 ಚಿನ್ನದ ಪದಕ ಗೆದ್ದಿದ್ದಾರೆ. ಅಚ್ಚರಿ ಎಂದರೆ ಇವರು ಗೆದ್ದಿರುವ ಪದಕಗಳು ಚಿನ್ನದ್ದಲ್ಲ. ಹಾಗಿದ್ದರೆ ಚಿನ್ನ ಗೆದ್ದ(Olympic Medals) ಸಾಧಕರಿಗೆ ಯಾವ ಪದಕ ನೀಡಲಾಗುತ್ತದೆ ಎನ್ನುವ ಕುತೂಹಲಕ್ಕೆ ಉತ್ತರ ಇಲ್ಲಿದೆ.

ಹೌದು, ಒಲಿಂಪಿಕ್ಸ್​ನಲ್ಲಿ ಚಿನ್ನ ಗೆದ್ದ ಸಾಧಕರಿಗೆ ನಿಜವಾದ ಚಿನ್ನದ ಪದಕ ನೀಡಲಾಗುವುದಿಲ್ಲ. ಲೇಪನ ಮಾಡಿದ ಪದಕವನ್ನಷ್ಟೇ ನೀಡಲಾಗುತ್ತದೆ. ಪೂರ್ತಿ ಚಿನ್ನದಿಂದಲೇ ತಯಾರಿಸಿದ ಪದಕಗಳನ್ನು 1912ರ ಸ್ವೀಡನ್‌ನ ಸ್ಟಾಕ್‌ಹೊಮ್ಲಿಯಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಕೊನೆಯ ಬಾರಿಗೆ ನೀಡಲಾಗಿತ್ತು. ಆ ಬಳಿಕ ಬಂಗಾರದ ಪದಕಗಳು ಚಿನ್ನದ ಲೇಪನವನ್ನಷ್ಟೆ (ಕನಿಷ್ಠ 6 ಗ್ರಾಂ) ಹೊಂದಿರುತ್ತವೆ ಮತ್ತು ಶೇಕಡ 93 ಬೆಳ್ಳಿಯೇ ತುಂಬಿರುತ್ತದೆ. ಹೀಗಾಗಿ ಒಲಿಂಪಿಕ್ಸ್‌ನ ಚಿನ್ನ ಮತ್ತು ಬೆಳ್ಳಿ ಪದಕಗಳ ನಡುವೆ ಹೆಚ್ಚಿನ ವ್ಯತ್ಯಾಸವಿಲ್ಲ.

ಇದನ್ನೂ ಓದಿ Paris Olympics: ಪ್ಯಾರಿಸ್‌ ಒಲಿಂಪಿಕ್ಸ್​ ಭದ್ರತಾ ಕಾರ್ಯದಲ್ಲಿ ಭಾರತದ ಶ್ವಾನದಳ; ಬೆಂಗಳೂರಿನಲ್ಲಿ ತರಬೇತಿ

ಬೆಳ್ಳಿ ಪದಕ ನೀಡಲಾಗಿತ್ತು


1896ರ ಮೊದಲ ಒಲಿಂಪಿಕ್ಸ್​ನಲ್ಲಿ ಪ್ರಥಮ ಸ್ಥಾನ ಪಡೆದವರಿಗೆ ಬೆಳ್ಳಿ ಪದಕವನ್ನೇ ನೀಡಲಾಗಿತ್ತು. 2ನೇ ಸ್ಥಾನ ಪಡೆದವರು ಕಂಚಿನ ಪದಕ ಗಳಿಸಿದ್ದರು. 1900ರ ಒಲಿಂಪಿಕ್ಸ್‌ ವಿಜೇತರಿಗೆ ಪದಕಗಳ ಬದಲಾಗಿ ಟ್ರೋಫಿಗಳನ್ನು ನೀಡಲಾಗಿತ್ತು. 1904ರ ಒಲಿಂಪಿಕ್ಸ್‌ನಿಂದ ಚಿನ್ನ, ಬೆಳ್ಳಿ, ಕಂಚಿನ ಪದಕ ನೀಡುವ ಸಂಪ್ರದಾಯ ಹುಟ್ಟಿಕೊಂಡಿತು. ಪ್ರತಿ ಪದಕ ಕನಿಷ್ಠ 7.7 ಎಂ.ಎಂ. ದಪ್ಪ ಮತ್ತು 85 ಎಂ.ಎಂ. ಸುತ್ತಳತೆ ಹೊಂದಿರಬೇಕೆಂದು ಐಒಸಿ ನಿಯಮ.


ಕ್ರೀಡಾಪಟುಗಳು ಪದಕ ಕಚ್ಚುವುದು ಏಕೆ?


ಒಲಂಪಿಕ್ಸ್‌ನಲ್ಲಿ (Olympic) ಪದಕ ವಿಜೇತ ( winners ) ಕ್ರೀಡಾಪಟುಗಳು ಪದಕವನ್ನು ಕಚ್ಚಿ (Medal Biting) ಫೋಟೋಗೆ ಪೋಸ್ ಕೊಡುವುದನ್ನು ನೋಡಿರುತ್ತೇವೆ. ಇವರು ಯಾಕೆ ಹೀಗೆ ಮಾಡುತ್ತಾರೆ ಎನ್ನುವ ಪ್ರಶ್ನೆಯಂತೂ ಒಂದಲ್ಲಾ ಒಂದು ಬಾರಿ ನಮ್ಮ ಮನದಲ್ಲಿ ಮೂಡಿರುತ್ತದೆ. ಒಲಿಂಪಿಕ್ ಪದಕ ವಿಜೇತರು ಪದಕ ಕಚ್ಚಲು ಕಾರಣವಿದೆ ಮಾತ್ರವಲ್ಲ ಇದಕ್ಕೆ ದೊಡ್ಡ ಇತಿಹಾಸವೇ ಇದೆ.

ಇದನ್ನೂ ಓದಿ The Olympic Games: 72ರ ಇಳಿ ವಯಸ್ಸಿನಲ್ಲೂ ಒಲಿಂಪಿಕ್ಸ್​ ಪದಕ ಗೆದ್ದಿದ್ದ ಶೂಟರ್‌; ಯಾರಿವರು?


ಒಲಿಂಪಿಕ್ಸ್ ನ ಆರಂಭಿಕ ದಿನಗಳು. ಬೆಲೆಬಾಳುವ ಚಿನ್ನವನ್ನು ಕರೆನ್ಸಿಯ ರೂಪದಲ್ಲಿ ಬಳಸಲು ಪ್ರಾರಂಭಿಸಲಾಯಿತು. ಚಿನ್ನದ ಪರಿಶುದ್ಧತೆಯನ್ನು ಪರಿಶೀಲಿಸಲು ವ್ಯಾಪಾರಿಗಳು ಚಿನ್ನದ ನಾಣ್ಯಗಳನ್ನು ಕಚ್ಚಿ ನೋಡುತ್ತಿದ್ದರು ಎಂದು ಇತಿಹಾಸ ಹೇಳುತ್ತದೆ. ಚಿನ್ನವು ಮೃದುವಾದ ಲೋಹವಾಗಿದೆ. ಇದರ ಮೇಲೆ ಸ್ವಲ್ಪ ಒತ್ತಡ ಬಿದ್ದರೂ ಗುರುತು ಬೀಳುತ್ತದೆ. ಹೀಗಾಗಿ ಒಲಿಂಪಿಕ್ಸ್‌ನಲ್ಲಿ ಪದಕ ವಿಜೇತ ಕ್ರೀಡಾಪಟುಗಳು ತಮಗೆ ಸಿಗುವ ಚಿನ್ನದ ಪದಕವನ್ನು ಪರಿಶೀಲಿಸಲು ಹೀಗೆ ಮಾಡುತ್ತಿದ್ದರು. ಕ್ರಮೇಣ ಇದೊಂದು ಅಭ್ಯಾಸದ ಭಾಗವಾಯಿತು.

ಇದನ್ನೂ ಓದಿ Olympic Games History: ಒಲಿಂಪಿಕ್ಸ್​ನಲ್ಲಿ ಗ್ರೀಸ್​ ದೇಶಕ್ಕೆ ವಿಶೇಷ ಮಾನ್ಯತೆ ನೀಡುವುದೇಕೆ?

ಒಲಿಂಪಿಕ್ ಚಾಂಪಿಯನ್‌ಗಳು ತಮ್ಮ ಬಾಯಿಯಲ್ಲಿ ಚಿನ್ನದ ಪದಕವನ್ನು ಕಚ್ಚುವುದು ಈಗ ಶುದ್ಧತೆಯನ್ನು ಪರಿಶೀಲಿಸುವುದಕ್ಕಾಗಿ ಅಲ್ಲ. ಯಾಕೆಂದರೆ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) 1912 ರಲ್ಲಿ ಶುದ್ಧ ಚಿನ್ನದ ಪದಕಗಳನ್ನು ನೀಡುವುದನ್ನು ನಿಲ್ಲಿಸಿತ್ತು. ಆದರೆ ಅದರ ಅಭ್ಯಾಸ ಕ್ರಮ ಇನ್ನೂ ಮುಂದುವರಿದಿದೆ.

Continue Reading

ಕ್ರೀಡೆ

Hardik Pandya: ಫಿಟ್ನೆಸ್‌ ಬಗ್ಗೆ ಪ್ರಶ್ನೆ ಮಾಡಿದವರಿಗೆ ಸಿಕ್ಸ್​ ಪ್ಯಾಕ್​ ಮೂಲಕ ತಿರುಗೇಟು ಕೊಟ್ಟ ಹಾರ್ದಿಕ್​ ಪಾಂಡ್ಯ

Hardik Pandya: ರೋಹಿತ್​ ಬಳಿಕ ಹಾರ್ದಿಕ್‌ ಪಾಂಡ್ಯರನ್ನೇ(Hardik Pandya) ಭವಿಷ್ಯದ ನಾಯಕ ಎಂದು ಬಿಂಬಿಸಲಾಗಿತ್ತು. ಆದರೆ, ಇದೀಗ ಬಿಸಿಸಿಐ(BCCI) ಪಾಂಡ್ಯಗೆ ನಾಯಕತ್ವ ನೀಡಲು ಹಿಂದೇಟು ಹಾಕಿದ್ದು, ಸೂರ್ಯಕುಮಾರ್​ ಯಾದವ್​ಗೆ(Suryakumar Yadav) ನಾಯಕತ್ವ ನೀಡಲು ಮುಂದಾಗಿದೆ ಎಂದು ವರದಿಯಾಗಿದೆ.

VISTARANEWS.COM


on

Hardik Pandya
Koo

ಮುಂಬಯಿ: ಫಿಟ್ನೆಸ್‌ ಸಮಸ್ಯೆ ಎದುರಿಸುತ್ತಿರು ಕಾರಣ ಹಾರ್ದಿಕ್​ ಪಾಂಡ್ಯಗೆ(Hardik Pandya) ಟಿ20 ತಂಡದ ನಾಯಕತ್ವ ನೀಡಲು ಬಿಸಿಸಿಐ ಹಿಂದೇಟು ಹಾಕಿದೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಹಾರ್ದಿಕ್​ ಪಾಂಡ್ಯ(Hardik Pandya Fitness) ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ತಮ್ಮ 2 ಫೋಟೊಗಳನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ತಮ್ಮ ಫಿಟ್​ನೆಸ್​ ಬಗ್ಗೆ ಪ್ರಶ್ನೆ ಮಾಡುವವರಿಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.

ಹಾರ್ದಿಕ್​ ಪಾಂಡ್ಯ ಪೋಸ್ಟ್ ಮಾಡಿರುವ ಫೋಟೊಗಳ ಪೈಕಿ ಮೊದಲನೆಯದ್ದು 2023ರ ಏಕದಿನ ವಿಶ್ವಕಪ್ ನಂತರ ಗಾಯಗೊಂಡಾಗ ಹಾಗು ಎರಡನೇ ಫೋಟೋ ಪ್ರಸ್ತುತ ಸಮಯದ್ದಾಗಿದೆ. ಮೊದಲ ಫೋಟೊದಲ್ಲಿ ದಪ್ಪವಾಗಿ ಕಾಣುವ ಪಾಂಡ್ಯ 2ನೇ ಫೋಟೊದಲ್ಲಿ ಸಿಕ್ಸ್​ ಪ್ಯಾಕ್​ ಮೂಲಕ ಕಾಣಿಸಿಕೊಂಡಿದ್ದಾರೆ. ಈ ಫೋಟೊಗೆ ಪಾಂಡ್ಯ, “ಕಠಿಣ ಪರಿಶ್ರಮ ವ್ಯರ್ಥವಾಗುವುದಿಲ್ಲ. ನಾವೆಲ್ಲರೂ ನಮ್ಮ ಕೈಲಾದಷ್ಟು ಪ್ರಯತ್ನಿಸೋಣ ಮತ್ತು ನಮ್ಮ ಫಿಟ್‌ನೆಸ್‌ನಲ್ಲಿ ಕೆಲಸ ಮಾಡೋಣ’ ಎಂದು ಬರೆದುಕೊಂಡಿದ್ದಾರೆ.

ರೋಹಿತ್​ ಬಳಿಕ ಹಾರ್ದಿಕ್‌ ಪಾಂಡ್ಯರನ್ನೇ(Hardik Pandya) ಭವಿಷ್ಯದ ನಾಯಕ ಎಂದು ಬಿಂಬಿಸಲಾಗಿತ್ತು. ಆದರೆ, ಇದೀಗ ಬಿಸಿಸಿಐ(BCCI) ಪಾಂಡ್ಯಗೆ ನಾಯಕತ್ವ ನೀಡಲು ಹಿಂದೇಟು ಹಾಕಿದ್ದು, ಸೂರ್ಯಕುಮಾರ್​ ಯಾದವ್​ಗೆ(Suryakumar Yadav) ನಾಯಕತ್ವ ನೀಡಲು ಮುಂದಾಗಿದೆ ಎಂದು ವರದಿಯಾಗಿದೆ.

ಪಾಂಡ್ಯ ತಮ್ಮ 8 ವರ್ಷಗಳ ಕ್ರಿಕೆಟ್​ ವೃತ್ತಿಬದುಕಿನಲ್ಲಿ ಹಲವು ಬಾರಿ ಗಾಯದ ಸಮಸ್ಯೆಗೆ ತುತ್ತಾಗಿ ತಂಡದಿಂದ ಹೊರಗುಳಿದಿದ್ದರು. ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್ ಟೂರ್ನಿಯಲ್ಲಿಯೂ ಗಾಯಗೊಂಡು ಟೂರ್ನಿಯಿಂದ ಹೊರಬಿದ್ದಿದ್ದರು. ಪದೇಪದೆ ಗಾಯಕ್ಕೆ ತುತ್ತಾಗುವ ಕಾರಣ ಪಾಂಡ್ಯ ನೇಮಕಕ್ಕೆ ಬಿಸಿಸಿಐನ ಕೆಲ ಪ್ರಮುಖ ಅಧಿಕಾರಿಗಳು ಹಾಗೂ ಆಯ್ಕೆ ಸಮಿತಿಯ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ Natasa Stankovic : ಹಾರ್ದಿಕ್​ ಪಾಂಡ್ಯಗೆ ಕೈಕೊಟ್ಟು ಸರ್ಬಿಯಾದಲ್ಲಿ ಜಾಲಿ ಟ್ರಿಪ್ ಹೊರಟ ನತಾಶಾ

ಸೂರ್ಯಕುಮಾರ್‌ ಯಾದವ್‌ ಹೆಗಲಿಗೆ ನಾಯಕತ್ವ ನೀಡಲು ಬಿಸಿಸಿಐ ಅಧಿಕಾರಿಗಳು ಒಮ್ಮತದ ಒಪ್ಪಿಗೆ ನೀಡಿದ್ದು, ನೂತನ ಕೋಚ್​ ಗೌತಮ್​ ಗಂಭೀರ್​ ಕೂಡ ಸಮ್ಮತಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹಾರ್ದಿಕ್‌ರನ್ನು ನಾಯಕನನ್ನಾಗಿ ನೇಮಿಸಲು ಗಂಭೀರ್‌ಗೂ ಮನಸಿಲ್ಲ ಎಂದು ಹೇಳಲಾಗುತ್ತಿದೆ.

ಸೂರ್ಯಕುಮಾರ್‌ ಯಾದವ್​ ಕಳೆದ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ನಾಯಕನಾಗಿ ತಂಡವನ್ನು ಮುನ್ನಡೆಸಿ ಸರಣಿ ಗೆದ್ದಿದ್ದರು. ಸೂರ್ಯಕುಮಾರ್ ಯಾದವ್ ಕಾರ್ಯವೈಖರಿ ಬಗ್ಗೆಯೂ ಬಿಸಿಸಿಐ ಹಾಗೂ ಆಯ್ಕೆ ಸಮಿತಿಗೆ ಸಮಾಧಾನವಿದ್ದು, ಅವರನ್ನೇ ನಾಯಕನನ್ನಾಗಿ ಆಯ್ಕೆ ಮಾಡುವ ಸಾಧ್ಯತೆ ಹೆಚ್ಚು ಎನ್ನಲಾಗಿದೆ. ಶ್ರೀಲಂಕಾ ವಿರುದ್ಧದ ಸರಣಿಗೂ ಮುನ್ನ ಮುಂದಿನ ಟಿ20 ತಂಡದ ನಾಯಕ ಯಾರೆಂಬುದು ಖಚಿತಗೊಳ್ಳಲಿದೆ.

ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ರೋಹಿತ್‌ ಶರ್ಮ ಅಲಭ್ಯರಾಗಲಿರುವ ಕಾರಣ, ಕೆ.ಎಲ್​ ರಾಹುಲ್ ಅವರನ್ನು ಹಂಗಾಮಿ ನಾಯಕರನ್ನಾಗಿ ನೇಮಿಸಲು ಬಿಸಿಸಿಐ ನಿರ್ಧರಿಸಿದೆ. 027ರ ಏಕದಿನ ವಿಶ್ವಕಪ್‌ ಗಮನದಲ್ಲಿಟ್ಟುಕೊಂಡು ಹೊಸ ನಾಯಕನನ್ನು ಬೆಳೆಸಲು ಪ್ರಧಾನ ಕೋಚ್‌ ಗೌತಮ್‌ ಗಂಭೀರ್‌ ಉದ್ದೇಶಿಸಿದ್ದು, ಈ ನಿಟ್ಟಿನಲ್ಲಿ ರಾಹುಲ್​ಗೆ ಅವಕಾಶ ಸಿಗಬಹುದು ಎಂದು ಹೇಳಲಾಗುತ್ತಿದೆ. ಗಂಭೀರ್ ಅವರು ಮೆಂಟರ್ ಆಗಿದ್ದ ಲಕ್ನೋ ತಂಡದಲ್ಲಿ ರಾಹುಲ್​ ಅವರು ನಾಯಕರಾಗಿದ್ದರು ಎನ್ನುವುದು ಗಮನಾರ್ಹ.

Continue Reading

ಕ್ರಿಕೆಟ್

BCCI: ಕೋಚಿಂಗ್​ ಹುದ್ದೆಗೆ ಗಂಭೀರ್ ಸೂಚಿಸಿದ್ದ ಐವರ ಹೆಸರನ್ನು ತಿರಸ್ಕರಿಸಿದ ಬಿಸಿಸಿಐ

BCCI: ಮೂಲಗಳ ಪ್ರಕಾರ ಬಿಸಿಸಿಐ ಬೌಲಿಂಗ್ ಕೋಚ್ ಆಗಿ ಜಹೀರ್​ ಖಾನ್​(Zaheer Khan) ಅವರನ್ನು ನೇಮಕ ಮಾಡಲಿದೆ ಎನ್ನಲಾಗಿದೆ. ಭಾರತ ಕ್ರಿಕೆಟ್ ತಂಡವು ಕಂಡ ಅತ್ಯಂತ ಯಶಸ್ವಿ ಎಡಗೈ ವೇಗದ ಬೌಲರ್ ಎನಿಸಿಕೊಂಡಿರುವ ಜಹೀರ್ ಖಾನ್, ಭಾರತ ಪರ 309 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿ 610 ವಿಕೆಟ್ ಕಬಳಿಸಿದ್ದಾರೆ.

VISTARANEWS.COM


on

Koo

ಮುಂಬಯಿ: ಟೀಮ್​ ಇಂಡಿಯಾದ ಪ್ರಧಾನ ಕೋಚ್​ ಆಗಿ ಮಾಜಿ ಆಟಗಾರ ಗೌತಮ್ ಗಂಭೀರ್​(Gautam Gambhir) ಈಗಾಗಲೇ ನೇಮಕಗೊಂಡಿದ್ದಾರೆ. ಇನ್ನುಳಿದ ಬ್ಯಾಟಿಂಗ್​, ಫೀಲ್ಡಿಂಗ್, ಬೌಲಿಂಗ್​​ ಮತ್ತು ಸಹಾಯಕ ಕೋಚ್​ಗಳ ಆಯ್ಕೆಯಾಗಬೇಕಿದೆ. ಈ ಹುದ್ದೆಗಾಗಿ ಸ್ವತಃ ಗಂಭೀರ್ ಸೂಚಿಸಿರುವ ಐವರ ಹೆಸರನ್ನು ಬಿಸಿಸಿಐ(BCCI) ತಿರಸ್ಕರಿಸಿದೆ ಎಂದು ತಿಳಿದುಬಂದಿದೆ. ಕೇವಲ ಒಂದು ಹೆಸರನ್ನು ಮಾತ್ರ ಅನುಮೋದಿಸಿದೆ ಎನ್ನಲಾಗಿದೆ.

ಗಂಭೀರ್ ಅವರು ಬೌಲಿಂಗ್​ ಕೋಚ್​ ಹುದ್ದೆಗೆ ಕನ್ನಡಿಗ ಆರ್​. ವಿನಯ್​ ಕುಮಾರ್​, ​ಲಕ್ಷ್ಮೀಪತಿ ಬಾಲಾಜಿ(Lakshmipathy Balaji) ಮೋರ್ನೆ ಮೊರ್ಕಲ್ ಹೆಸರು ಸೂಚಿಸಿದ್ದರು. ಬ್ಯಾಟಿಂಗ್​ ಕೋಚ್​ ಆಗಿ ಅಭಿಷೇಕ್ ನಾಯರ್, ಫೀಲ್ಡಿಂಗ್​ ಕೋಚ್​ ಆಗಿ ಜಾಂಟಿ ರೋಡ್ಸ್ ಹೆಸರನ್ನು ಸೂಚಿಸಿದ್ದರು. ಆದರೆ ಮಂಡಳಿಯು ಈ ಎಲ್ಲ ಆಟಗಾರರ ಪೈಕಿ ಒಬ್ಬರ ಆಯ್ಕೆಗೆ ಮಾತ್ರ ಒಪ್ಪಿಕೊಂಡಿದೆ ಎಂದು ವರದಿಯಾಗಿದೆ. ಐಪಿಎಲ್​ನಲ್ಲಿ ಕೆಕೆಆರ್​ ಪರ ಗೌತಮ್ ಗಂಭೀರ್ ಜತೆ ಸಹಾಯಕ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದ ಅಭಿಷೇಕ್ ನಾಯರ್ ಅವರನ್ನು ಟೀಮ್​ ಇಂಡಿಯಾ ಬ್ಯಾಟಿಂಗ್ ಕೋಚ್ ಆಗಿ ನೇಮಿಸಿಕೊಳ್ಳಲು ಬಿಸಿಸಿಐ ಸಹಮತ ವ್ಯಕ್ತಪಡಿಸಿದೆ ಎಂದು ವರದಿಯಾಗಿದೆ.

ಟೀಮ್ ಇಂಡಿಯಾದ ಬೌಲಿಂಗ್ ಹಾಗೂ ಫೀಲ್ಡಿಂಗ್ ಕೋಚ್​ ಆಗಿ ಈ ಹಿಂದೆ ಇದ್ದ ಟಿ.ದಿಲಿಪ್ ಅವರನ್ನೇ ಮತ್ತೆ ಮುಂದುವರಿಸಲು ಬಿಸಿಸಿಐ ನಿರ್ಧರಿಸಿದೆ ಎನ್ನಲಾಗಿದೆ. ಈ ಹಿಂದೆ ರವಿಶಾಸ್ತ್ರಿ ಹಾಗೂ ರಾಹುಲ್ ದ್ರಾವಿಡ್​ಗೆ ತಮ್ಮ ಕೋಚಿಂಚ್ ಸಿಬ್ಬಂದಿ ಆಯ್ಕೆ ಮಾಡಲು ಮುಕ್ತ ಅವಕಾಶ ನೀಡಲಾಗಿತ್ತು. ಆದರೆ ಗಂಭೀರ್​ಗೆ ಈ ಸ್ವತಂತ್ರ ನೀಡಲಾಗಿಲ್ಲ ಎನ್ನಲಾಗಿದೆ. ಇದಕ್ಕೆ ನಿರ್ದಿಷ್ಟ ಕಾರಣ ಏನೆಂಬಹುವುದು ತಿಳಿದಿಲ್ಲ.

ಇದನ್ನೂ ಓದಿ SL vs IND: ಇಂದು ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡ ಪ್ರಕಟ; ಯಾರಿಗೆ ಒಲಿಯಲಿದೆ ನಾಯಕತ್ವ?

ಮೂಲಗಳ ಪ್ರಕಾರ ಬಿಸಿಸಿಐ ಬೌಲಿಂಗ್ ಕೋಚ್ ಆಗಿ ಜಹೀರ್​ ಖಾನ್​(Zaheer Khan) ಅವರನ್ನು ನೇಮಕ ಮಾಡಲಿದೆ ಎನ್ನಲಾಗಿದೆ. ಭಾರತ ಕ್ರಿಕೆಟ್ ತಂಡವು ಕಂಡ ಅತ್ಯಂತ ಯಶಸ್ವಿ ಎಡಗೈ ವೇಗದ ಬೌಲರ್ ಎನಿಸಿಕೊಂಡಿರುವ ಜಹೀರ್ ಖಾನ್, ಭಾರತ ಪರ 309 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿ 610 ವಿಕೆಟ್ ಕಬಳಿಸಿದ್ದಾರೆ.

ಕೋಚ್​ ಹುದ್ದೆಗೆ ಗಂಭೀರ್​ ಅವರನ್ನು ಆಯ್ಕೆ ಮಾಡುವ ಮುನ್ನ ತಂಡದ ಸ್ಟಾರ್​ ಆಟಗಾರ ವಿರಾಟ್​ ಕೊಹ್ಲಿ(virat kohli) ಜತೆ ಬಿಸಿಸಿಐ ಅಭಿಪ್ರಾಯ ಕೇಳಿಲ್ಲ ಎಂಬ ಮಾತುಗಳು ಕೇಳಿಬಂದಿವೆ.​

ಹೌದು ವಿರಾಟ್​ ಕೊಹ್ಲಿ ಮತ್ತು ಗಂಭೀರ್​ ಐಪಿಎಲ್​ ವೇಳೆ ಹಾವು ಮುಂಗುಸಿಯಂತೆ ಕಿತ್ತಾಡಿಕೊಳ್ಳುತ್ತಿದ್ದರು. ಕಳೆದ ವರ್ಷದ ಐಪಿಎಲ್​ ವೇಳೆ ಕೈ ಕೈ ಮಿಲಾಯಿಸುವ ಹಂತಕ್ಕೂ ಇಬರಿಬ್ಬರ ಜಗಳ ಮುಂದುವರಿದಿತ್ತು. ಕೊಹ್ಲಿಯ ವಿರುದ್ಧ ಹಲವು ಬಾರಿ ಬಹಿರಂಗವಾಗಿ ಮುನಿಸನ್ನು ಪ್ರದರ್ಶಿಸಿದ್ದರು. ಹೀಗಿರುವಾಗ ಬಿಸಿಸಿಐ ಗಂಭೀರ್​ ಅವರನ್ನು ಕೋಚ್​ ಆಗಿ ನೇಮಕ ಮಾಡುವಾಗ ಕೊಹ್ಲಿಯನ್ನು ಒಂದು ಮಾತು ಕೂಡ ಕೇಳದೇ ಇರುವುದು ಕೊಹ್ಲಿ ಮತ್ತು ಟೀಮ್​ ಇಂಡಿಯಾ ಅಭಿಮಾನಿಗಳಿಗೆ ಅಸಮಾಧಾನ ಉಂಟುಮಾಡಿದೆ. ಇವರಿಬ್ಬರ ಜಗಳ ಮತ್ತೆ ಮುಂದುವರಿದರೆ ತಂಡದ ಒಗ್ಗಟ್ಟು ಇಲ್ಲದಂತಾಗಬಹುದೆಂದು ಅನೇಕರು ಅಭಿಪ್ರಾಯ ಹಂಚಿಕೊಂಡಿದ್ದಾರೆ.

Continue Reading

ಕ್ರಿಕೆಟ್

SL vs IND: ಇಂದು ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡ ಪ್ರಕಟ; ಯಾರಿಗೆ ಒಲಿಯಲಿದೆ ನಾಯಕತ್ವ?

SL vs IND: 2021ರ ಬಳಿಕ ಭಾರತ ಮೊದಲ ಬಾರಿಗೆ ಶ್ರೀಲಂಕಾದಲ್ಲಿ ದ್ವಿಪಕ್ಷೀಯ ಸರಣಿ ಆಡಲಿದೆ. ಉಭಯ ತಂಡಗಳು ಹೊಸ ಕೋಚ್​ ಮಾರ್ಗದರ್ಶನದಲ್ಲಿ ಕಣಕ್ಕಿಳಿಯಲಿದೆ. ಗಂಭೀರ್‌ಗೆ ಶ್ರೀಲಂಕಾ ವಿರುದ್ಧದ ಸರಣಿ ಮೊದಲ ಅಗ್ನಿ ಪರೀಕ್ಷೆಯಾಗಿದೆ. ಲಂಕಾ, ಸನತ್ ಜಯಸೂರ್ಯ ಅವರ ಮಾರ್ಗದರ್ಶನದಲ್ಲಿ ಆಡಲಿದೆ.

VISTARANEWS.COM


on

SL vs IND
Koo

ಮುಂಬಯಿ: ಶ್ರೀಲಂಕಾ ಪ್ರವಾಸಕ್ಕೆ (Sri Lanka series) ಇಂದು ಭಾರತ ತಂಡ ಪ್ರಕಟಗೊಳ್ಳುವ ಸಾಧ್ಯತೆ ಇದೆ. (Team India) ಲಂಕಾ ವಿರುದ್ಧ ಟೀಮ್​ ಇಂಡಿಯಾ ಟಿ20 ಮತ್ತು ಏಕದಿನ(SL vs IND) ಸರಣಿ ಆಡಲಿದೆ. ಈ ತಿಂಗಳ ಅಂತ್ಯಕ್ಕೆ ಸರಣಿ ಆರಂಭಗೊಳ್ಳಲಿದೆ. ಹಿರಿಯ ಆಟಗಾರರಾದ ವಿರಾಟ್​ ಕೊಹ್ಲಿ, ಜಸ್​ಪ್ರೀತ್​ ಬುಮ್ರಾ, ರೋಹಿತ್​ ಶರ್ಮ ಸರಣಿಯಿಂದ ವಿಶ್ರಾಂತಿ ಪಡೆಯಲಿದ್ದಾರೆ. ಹೀಗಾಗಿ ಕನ್ನಡಿಗ ರಾಹುಲ್​ ಏಕದಿನಕ್ಕೆ, ಟಿ20ಗೆ ಸೂರ್ಯಕುಮಾರ್​ ನಾಯಕನಾಗಿ ಆಯ್ಕೆಯಾಗಬಹುದು.

ಕೋಚ್ ಗೌತಮ್ ಗಂಭೀರ್ ಅವರ ಉಸ್ತುವಾರಿಯಲ್ಲಿ ಭಾರತ ತಂಡ ಆಡುವ ಮೊದಲ ಸರಣಿ ಇದಾಗಲಿದೆ. ಹೀಗಾಗಿ ನಿರೀಕ್ಷೆ ಹೆಚ್ಚಾಗಿಯೇ ಇರಲಿದೆ. ಪ್ರಮುಖ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ ಅವರು ಟಿ20 ಮಾದರಿಗೆ ವಿದಾಯ ಹೇಳಿದ್ದಾರೆ. ಹೀಗಾಗಿ ಚುಟುಕು ಮಾದರಿಯಲ್ಲಿ ಯುವ ಆಟಗಾರರು ಅವಕಾಶ ಪಡೆಯಲಿದ್ದಾರೆ.

ಇದನ್ನೂ ಓದಿ IND vs SL: ಶ್ರೀಲಂಕಾ ವಿರುದ್ಧದ ಸರಣಿಗೆ ಮೊಹಮ್ಮದ್ ಶಮಿ ಆಯ್ಕೆ ಸಾಧ್ಯತೆ

ವರದಿಯ ಪ್ರಕಾರ ಹಾರ್ದಿಕ್​ ಪಾಂಡ್ಯ ಈ ಸರಣಿಯಿಂದ ವಿಶ್ರಾಂತಿ ಬಯಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಟಿ20 ತಂಡಕ್ಕೆ ಸೂರ್ಯಕುಮಾರ್ ಯಾದವ್ ಅವರನ್ನು ಹಂಗಾಮಿ ನಾಯಕನನ್ನಾಗಿ ಮಾಡಲಿದ್ದಾರೆ ಎನ್ನಲಾಗಿದೆ. ಉಪನಾಯಕರನ್ನಾಗಿ ಪಂತ್​ ಆಯ್ಕೆ ಮಾಡುವ ಸಾಧ್ಯತೆಯಿದೆ. ಭಾರತದ ಟಿ20 ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿದ್ದ ಅಕ್ಷರ್ ಪಟೇಲ್, ಕುಲದೀಪ್ ಯಾದವ್ ಮತ್ತು ಅರ್ಶದೀಪ್ ಸಿಂಗ್ ಕೂಡ ಲಂಕಾ ಸರಣಿಗೆ ಆಯ್ಕೆ ಮಾಡುವ ಸಾಧ್ಯತೆಯಿದೆ. ಜಿಂಬಾಬ್ವೆ ಪ್ರವಾಸಕ್ಕೆ ತೆರಳಿದ್ದ ತಂಡದಲ್ಲಿ ಸ್ಥಾನ ಪಡೆದಿದ್ದ ರಿಯಾನ್ ಪರಾಗ್, ಸಾಯಿ ಸುದರ್ಶನ್ ಮತ್ತು ಜಿತೇಶ್ ಶರ್ಮಾಗೂ ಅವಕಾಶ ಸಿಗುವುದು ಕಷ್ಟ ಸಾಧ್ಯ.

ಶ್ರೇಯಸ್​ಗೆ ಏಕದಿನ ತಂಡದಲ್ಲಿ ಅವಕಾಶ?

ಕೆಎಲ್ ರಾಹುಲ್ ಟಿ 20 ವಿಶ್ವಕಪ್​​ ಗೆ ಹೋಗಿದ್ದ ಭಾರತದ ತಂಡದಿಂದ ಹೊರಗುಳಿದಿದ್ದರು. ಆದರೆ ಈಗ ಶ್ರೀಲಂಕಾ ಪ್ರವಾಸದ ಏಕದಿನ ಹಂತದಲ್ಲಿ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ನಾಯಕತ್ವದ ಪಾತ್ರವನ್ನು ಸಹ ತೆಗೆದುಕೊಳ್ಳಲಿದ್ದಾರೆ ಎನ್ನಲಾಗಿದೆ.  ರಣಜಿ ಆಡಲು ನಿರಾಕರಿಸಿ ಅಶಿಸ್ತು ತೋರಿದ ಕಾರಣದಿಂದ ಬಿಸಿಸಿಐ(BCCI) ವಾರ್ಷಿಕ ಗುತ್ತಿಗೆಯಿಂದ ಹೊರಬಿದ್ದಿರುವ ಶ್ರೇಯಸ್ ಅಯ್ಯರ್(Shreyas Iyer) ಅವರು ಶ್ರೀಲಂಕಾ(IND vs SL) ವಿರುದ್ದದ ಏಕದಿನ ಸರಣಿಗೆ ಆಯ್ಕೆಯಾಗಲಿದ್ದಾರೆ ಎಂದು ವರದಿಯಾಗಿದೆ.

2021ರ ಬಳಿಕ ಭಾರತ ಮೊದಲ ಬಾರಿಗೆ ಶ್ರೀಲಂಕಾದಲ್ಲಿ ದ್ವಿಪಕ್ಷೀಯ ಸರಣಿ ಆಡಲಿದೆ. ಉಭಯ ತಂಡಗಳು ಹೊಸ ಕೋಚ್​ ಮಾರ್ಗದರ್ಶನದಲ್ಲಿ ಕಣಕ್ಕಿಳಿಯಲಿದೆ. ಗಂಭೀರ್‌ಗೆ ಶ್ರೀಲಂಕಾ ವಿರುದ್ಧದ ಸರಣಿ ಮೊದಲ ಅಗ್ನಿ ಪರೀಕ್ಷೆಯಾಗಿದೆ. ಲಂಕಾ, ಸನತ್ ಜಯಸೂರ್ಯ ಅವರ ಮಾರ್ಗದರ್ಶನದಲ್ಲಿ ಆಡಲಿದೆ.

ಪ್ರವಾಸದ ಮೊದಲ 3 ಟಿ20 ಪಂದ್ಯಗಳು ಜುಲೈ 27, 28 ಮತ್ತು 30ರಂದು ಪಲ್ಲೆಕಿಲೆಯಲ್ಲಿ ನಡೆಯಲಿವೆ. ಮೊದಲು ಪ್ರಕಟಗೊಂಡಿದ್ದ ವೇಳಾಪಟ್ಟಿಯಲ್ಲಿ 26ರಿಂದ ಟಿ20 ಪಂದ್ಯ ಆರಂಭವಾಗಬೇಕಿತ್ತು. ಏಕದಿನ ಸರಣಿ ಕೂಡ ಒಂದು ದಿನ ತಡವಾಗಿ ಶುರುವಾಗಬೇಕಿತ್ತು. ಏಕದಿನ ಆಗಸ್ಟ್​ 1ರದ ಬದಲಾಗಿ ಆಗಸ್ಟ್​ 2ರಿಂದ ಆರಂಭಗೊಳ್ಳಲಿದೆ. ಉಳಿದ ಪಂದ್ಯಗಳ ದಿನಾಂಕ ಬದಲಾಗಲಿಲ್ಲ. ಈ ಹಿಂದಿನಂತೆ ಆಗಸ್ಟ್​ 4 ಮತ್ತು 7ರಂದೇ ನಡೆಯಲಿದೆ.

Continue Reading
Advertisement
Gold Rate Today
ಚಿನ್ನದ ದರ5 mins ago

Gold Rate Today: ಚಿನ್ನದ ಬೆಲೆಯಲ್ಲಿ ತುಸು ಇಳಿಕೆ; ಇಂದಿನ ದರ ಚೆಕ್‌ ಮಾಡಿ

Kannada New Movie prakarana tanikha hantadalli ide
ಸ್ಯಾಂಡಲ್ ವುಡ್20 mins ago

Kannada New Movie: ‘ಪ್ರಕರಣ ತನಿಖಾ ಹಂತದಲ್ಲಿದೆ’ ಮೋಷನ್ ಪೋಸ್ಟರ್ ಬಿಡುಗಡೆ

gt world mall karnataka assembly live
ಪ್ರಮುಖ ಸುದ್ದಿ30 mins ago

Karnataka Assembly Live: ಅನ್ನದಾತನಿಗೆ ಅವಮಾನ ಮಾಡಿದ ಜಿಟಿ ಮಾಲ್‌ 7 ದಿನ ಬಂದ್: ವಿಧಾನಸಭೆಯಲ್ಲಿ ಘೋಷಣೆ, ವಿಸ್ತಾರ್‌ ನ್ಯೂಸ್‌ ಬಿಗ್‌ ಇಂಪ್ಯಾಕ್ಟ್

Olympic Medals
ಕ್ರೀಡೆ35 mins ago

Olympic Medals: ಒಲಿಂಪಿಕ್ಸ್​ ವಿಜೇತರಿಗೆ ನೀಡುವ ಚಿನ್ನದ ಪದಕ ಚಿನ್ನದ್ದಲ್ಲ!

Jaahnavi Kandula
ವಿದೇಶ36 mins ago

Jaahnavi Kandula: ಅಮೆರಿಕದಲ್ಲಿ ಭಾರತದ ವಿದ್ಯಾರ್ಥಿನಿಗೆ ಕಾರು ಗುದ್ದಿಸಿ ನಕ್ಕ ಪೊಲೀಸ್ ವಜಾ

Illicit relationship
ತುಮಕೂರು37 mins ago

Illicit relationship : ಪರ ಪುರುಷನೊಂದಿಗೆ ಓಡಿ ಹೋದ ಪತ್ನಿ; ಮರ್ಯಾದೆಗೆ ಅಂಜಿ ಪತಿ ಆತ್ಮಹತ್ಯೆ

Bigg Boss Kannada 11 Starting Date And Contestants List
ಬಿಗ್ ಬಾಸ್46 mins ago

Bigg Boss Kannada: ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ಯಾವಾಗಿನಿಂದ ಶುರು? ಸ್ಪರ್ಧಿಗಳು ಇವರೇನಾ?

Pralhad Joshi
ದೇಶ1 hour ago

Pralhad Joshi: ಉಚಿತ ಅಕ್ಕಿ ವಿತರಣೆಯ ಪಿಎಂ ಗರೀಬ್ ಕಲ್ಯಾಣ್‌ ಅನ್ನ ಯೋಜನೆ 2029ರ ವರೆಗೆ ವಿಸ್ತರಣೆ: ಪ್ರಲ್ಹಾದ ಜೋಶಿ

Kannada New Movie life of mradula song out
ಸ್ಯಾಂಡಲ್ ವುಡ್1 hour ago

Kannada New Movie: ಹೊಸಬರ ತಂಡ ಸಿದ್ದಪಡಿಸಿರುವ ಹೊಸತನದ ಸಿನಿಮಾ; ಲೈಫ್ ಆಫ್ ಮೃದುಲ ಹಾಡು ಬಿಡುಗಡೆ!

road Accident
ರಾಯಚೂರು1 hour ago

Road Accident : ಪಾದಚಾರಿ ಬಲಿ ಪಡೆದು ಎಸ್ಕೇಪ್‌ ಆದ ಬಸ್‌ ಚಾಲಕ; ಬಾಲಕಿಗೆ ಗುದ್ದಿ ಪ್ರಾಣ ಕಸಿದ ಲಾರಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ3 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ3 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ3 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ4 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ4 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ4 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ5 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌