Site icon Vistara News

Paris Olympics 2024: ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸುವ ಆ್ಯತ್ಲೀಟ್‌ಗಳಿಗೆ ಶುಭ ಕೋರಿದ ರಾಷ್ಟ್ರಪತಿ ಮುರ್ಮು

Paris Olympics 2024

Paris Olympics 2024: President Droupadi Murmu offers best wishes to Paris-bound athletes

ನವದೆಹಲಿ: ಜುಲೈ 26ರಿಂದ ಆರಂಭಗೊಳ್ಳಲಿರುವ ಪ್ಯಾರಿಸ್​ ಒಲಿಂಪಿಕ್ಸ್(Paris Olympics)​ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಎಲ್ಲ ಭಾರತೀಯ ಆ್ಯತ್ಲೀಟ್‌ಗಳಿಗೆ(athletes) ರಾಷ್ಟ್ರಪತಿ ದ್ರೌಪದಿ ಮುರ್ಮು(President Droupadi Murmu) ಅವರು ಶುಭಾಶಯ ಕೋರಿದ್ದಾರೆ. ಪದಕ ಗೆದ್ದು ದೇಶದ ಕೀರ್ತಿ ಹೆಚ್ಚಿಸುವಂತಾಗಲಿ ಎಂದು ಹಾರೈಸಿದ್ದಾರೆ. 21 ಶೂಟರ್‌ಗಳು ಸೇರಿದಂತೆ 100ಕ್ಕೂ ಹೆಚ್ಚು ಕ್ರೀಡಾಪಟುಗಳು ಪ್ಯಾರಿಸ್ ಕ್ರೀಡಾಕೂಟಕ್ಕೆ ಅರ್ಹತೆ ಪಡೆದಿದ್ದಾರೆ.

ಗುರುವಾರ ನಡೆದ ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ವೇಳೆ ಅವರು ಎಲ್ಲ ಕ್ರೀಡಾಪಟುಗಳಿಗೆ ಶುಭ ಹಾರೈಸುವ ಜತೆಗೆ 2036ರ ಒಲಿಂಪಿಕ್ ಕೂಟದ ಆತಿಥ್ಯ ವಹಿಸುವ ದೇಶದ ಧೈರ್ಯಶಾಲಿ ಪ್ರಯತ್ನವನ್ನು ಬೆಂಬಲಿಸಿದರು.

‘ಒಲಿಂಪಿಕ್ಸ್‌ನಲ್ಲಿ ದೇಶವನ್ನು ಪ್ರತಿನಿಧಿಸುವ ಪ್ರತಿಯೊಬ್ಬ ಕ್ರೀಡಾಪಟುವಿಗೆ ನನ್ನ ಶುಭ ಹಾರೈಕೆಗಳು. ಈ ಸಾಧನೆಗಳನ್ನು ಮತ್ತಷ್ಟು ಮುಂದುವರಿಸಲು, ಭಾರತ ಒಲಿಂಪಿಕ್ ಅಸೋಸಿಯೇಷನ್ (ಐಒಎ) 2036ರ ಒಲಿಂಪಿಕ್ ಕೂಟದ ಆತಿಥ್ಯ ವಹಿಸಲು ಸಿದ್ಧತೆ ನಡೆಸುತ್ತಿದೆ’ ಎಂದು ಹೇಳಿದರು.

ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಪದಕ ಗೆಲ್ಲುವುದು ಭಾರತದ ಪ್ರಮುಖ ಗುರಿಯಾಗಿದೆ. ಟೋಕಿಯೊದಲ್ಲಿ ಭಾರತ ಒಟ್ಟು 7 ಪದಕ ಜಯಿಸಿತ್ತು. ಇದರಲ್ಲಿ ಒಂದು ಚಿನ್ನ, 2 ಬೆಳ್ಳಿ ಮತ್ತು 4 ಕಂಚಿನ ಪದಕ ಒಳಗೊಂಡಿತ್ತು. ಒಟ್ಟಾರೆಯಾಗಿ ಭಾರತ ಪದಕ ಪಟ್ಟಿಯಲ್ಲಿ 48ನೇ ಸ್ಥಾನ ಪಡೆದಿತ್ತು. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

ಇದನ್ನೂ ಓದಿ Paris Olympics 2024 : ರಿಲಯನ್ಸ್ ಫೌಂಡೇಷನ್ ಸಹಯೋಗದಲ್ಲಿ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ “ಇಂಡಿಯಾ ಹೌಸ್”

ಐಒಸಿ ಮುಖ್ಯಸ್ಥ ಥಾಮಸ್ ಬಾಚ್ ಅವರ ಪ್ರೋತ್ಸಾಹದಿಂದ ಭಾರತವು 2036ರ ಕ್ರೀಡಾಕೂಟದ ಆತಿಥ್ಯಕ್ಕೆ ಬಿಡ್ ಸಲ್ಲಿಸಲಿದೆ. ಆದರೆ, ಸೌದಿ ಅರೇಬಿಯಾ, ಇಂಡೊನೇಷ್ಯಾ ಮತ್ತು ಕತಾರ್ ನಂತಹ ಪ್ರಬಲ ದೇಶಗಳಿಂದ ತೀವ್ರ ಪೈಪೋಟಿ ಎದುರಾಗುವ ಸಾಧ್ಯತೆ ಇದೆ.

ಈ ಬಾರಿಯ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ(Paris Olympics) ಭಾಗಿಯಾಗುವ ಭಾರತದ ಆ್ಯತ್ಲೀಟ್‌ಗಳಿಗೆ ಮನೆಯ ತಾವರಣವನ್ನು ಕಲ್ಪಿಸಲು ಇದರ ಉದ್ದೇಶದಿಂದ ರಿಲಯನ್ಸ್‌ ಸಂಸ್ಥೆ “ಇಂಡಿಯಾ ಹೌಸ್​”(India House)​ ಎಂಬ ವಿಶೇಷ ವ್ಯವಸ್ಥೆಯೊಂದನ್ನು ಮಾಡಿದೆ. ಭಾರತೀಯ ಕ್ರೀಡಾಪಟುಗಳು ಇದರಲ್ಲೇ ಉಳಿದುಕೊಳ್ಳಲಿದ್ದಾರೆ.

ಇಂಡಿಯಾ ಹೌಸ್​ಗೆ ಎಲ್ಲ ದೇಶಗಳ ಪತ್ರಕರ್ತರಿಗೆ ಮುಕ್ತ ಪ್ರವೇಶವಿದೆ ಎಂದು ನೀತಾ ಅಂಬಾನಿ(Nita Ambani) ಹೇಳಿದ್ದಾರೆ. ನೀತಾ ಅಂಬಾನಿ ಅವರು ಅಂತಾರಾಷ್ಟ್ರೀಯ ಒಲಿಂಪಿಕ್ ಸಂಸ್ಥೆ (ಐಒಸಿ.) ಸದಸ್ಯೆಯಾಗಿದ್ದಾರೆ. ಅಮೆರಿಕಾದ ಲಾಸ್ ಏಂಜಲಿಸ್​ನಲ್ಲಿ 2028ರಲ್ಲಿ ನಡೆಯುವ ಒಲಿಂಪಿಕ್ಸ್​ನಲ್ಲಿ ಕ್ರಿಕೆಟ್​ ಸೇರ್ಪಡೆಗೊಳ್ಳುವಲ್ಲಿ ನೀತಾ ಅಂಬಾನಿ ಅವರ ಪಾತ್ರವೂ ಪ್ರಮುಖವಾಗಿತ್ತು. ಕಳೆದ ವರ್ಷ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಅಧಿವೇಶನ(International Olympic Committee Session) ಮುಂಬೈಯಲ್ಲಿ ನಡೆದ ವೇಳೆಯೂ ನೀತಾ ಅಂಬಾನಿ ಈ ಸಭೆಯ ವಕಾಲತ್ತು ವಹಿಸಿದ್ದರು.

Exit mobile version