Paris Olympics: ಇಂದು ಪ್ಯಾರಿಸ್​ ಒಲಿಂಪಿಕ್ಸ್​ಗೆ ಅಧಿಕೃತ ಚಾಲನೆ: ಉದ್ಘಾಟನಾ ಸಮಾರಂಭ ಎಷ್ಟು ಗಂಟೆಗೆ ಆರಂಭ? - Vistara News

ಕ್ರೀಡೆ

Paris Olympics: ಇಂದು ಪ್ಯಾರಿಸ್​ ಒಲಿಂಪಿಕ್ಸ್​ಗೆ ಅಧಿಕೃತ ಚಾಲನೆ: ಉದ್ಘಾಟನಾ ಸಮಾರಂಭ ಎಷ್ಟು ಗಂಟೆಗೆ ಆರಂಭ?

Paris Olympics: ಒಟ್ಟು 12 ವಿಭಾಗಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ವಿಭಾಗಿಸಲಾಗಿದೆ. ಫ್ರೆಂಚ್‌ ಸಂಗೀತ ಸೇರಿದಂತೆ ಭಾರತದ ಶಾಸ್ತ್ರೀಯ ಸಂಗೀತ ಸೇರಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

VISTARANEWS.COM


on

Paris Olympics
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪ್ಯಾರಿಸ್​: ಪ್ರತಿಷ್ಠಿತ ಪ್ಯಾರಿಸ್​ ಒಲಿಂಪಿಕ್ಸ್​(Paris Olympics) ಕ್ರೀಡಾಕೂಟದ ಉದ್ಘಾಟನ ಸಮಾರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಫ್ರಾನ್ಸ್​ನ ಮಹಾನದಿ ಸೀನ್ ಮೇಲೆ ಉದ್ಘಾಟನ ಸಮಾರಂಭ ನಡೆಯಲಿದೆ. ಭಾರತದ ಧ್ವಜಧಾರಿಯಾಗಿ ಅವಳಿ ಒಲಿಂಪಿಕ್ಸ್​ ಪದಕ ವಿಜೇತೆ ಪಿ.ವಿ ಸಿಂಧು ಅವರು ಟೇಬಲ್ ಟೆನಿಸ್ ಪಟು ಶರತ್ ಕಮಾಲ್ ಜತೆ ಭಾರತದ ಧ್ವಜ ಹಿಡಿದು ಪಥಸಂಚಲನದಲ್ಲಿ ಸಾಗಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾರತ ತಂಡ 84ನೇ ರಾಷ್ಟ್ರವಾಗಿ ಈ ಬಾರಿ ಕಾಣಿಸಿಕೊಳ್ಳಲಿದೆ.

ನದಿಯ ಮೇಲೆಯೇ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಸುಮಾರು 3,000 ಮಂದಿ ಕಲಾವಿದರು ಕಾರ್ಯಕ್ರಮಗಳನ್ನು ನೀಡಲಿದ್ದಾರೆ. ಒಟ್ಟು 12 ವಿಭಾಗಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ವಿಭಾಗಿಸಲಾಗಿದೆ. ಫ್ರೆಂಚ್‌ ಸಂಗೀತ ಸೇರಿದಂತೆ ಭಾರತದ ಶಾಸ್ತ್ರೀಯ ಸಂಗೀತ ಸೇರಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಉದ್ಘಾಟನ ಕಾರ್ಯಕ್ರಮವನ್ನು ವೀಕ್ಷಣೆ ಮಾಡಲು ಸುಮಾರು 5 ಲಕ್ಷ ಮಂದಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

ಫ್ರಾನ್ಸ್‌ ಕಾಲಮಾನದಂತೆ ಸಾಯಂಕಾಲ 5.30ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. ಭಾರತದಲ್ಲಿ ರಾತ್ರಿ 11 ಗಂಟೆಗೆ ನೇರಪ್ರಸಾರವಾಗಲಿದೆ. ಪ್ಯಾರಿಸ್‌ ಒಲಿಂಪಿಕ್ಸ್‌ನ ಅಧಿಕೃತ ಪ್ರಸಾರ ಮತ್ತು ಡಿಜಿಟಲ್‌ ಪಾಲುದಾರರಾಗಿರುವ ವಯಾಕಾಮ್ 18 ಜಿಯೋ ಸಿನಿಮಾ ಮೂಲಕ ಒಲಿಂಪಿಕ್ಸ್‌ ಸ್ಪರ್ಧೆಯನ್ನು ನೇರಪ್ರಸಾರ ಮಾಡುತ್ತಿದೆ. ಸ್ಪೋಟ್ಸ್‌-18 ಚಾನಲ್‌ನಲ್ಲೂ ಇದು ನೇರಪ್ರಸಾರವಾಗಲಿದೆ.

ಇದನ್ನೂ ಓದಿ Paris Olympics 2024: ಕ್ವಾರ್ಟರ್​ ಫೈನಲ್​ಗೆ ಲಗ್ಗೆಯಿಟ್ಟ ಭಾರತ ಪುರುಷರ ಆರ್ಚರಿ ತಂಡ; 4ನೇ ಸ್ಥಾನ ಪಡೆದ ಧೀರಜ್​ ಬೊಮ್ಮದೇವರ

ಪ್ಯಾರಿಸ್‌ ಆತಿಥ್ಯದಲ್ಲಿ ನಡೆಯಲಿರುವ 3ನೇ ಒಲಿಂಪಿಕ್ಸ್‌ ಕೀಡಾಕೂಟ ಇದಾಗಿದೆ. ಮೊದಲ ಒಲಿಂಪಿಕ್ಸ್‌ ನಡೆದದ್ದು 1900ರಲ್ಲಿ. ಇದಾದ ಬಳಿಕ 1924ರಲ್ಲಿ ಆತಿಥ್ಯ ವಹಿಸಿತ್ತು. ಇದೀಗ ಬರೋಬ್ಬರಿ 100 ವರ್ಷಗಳ ಬಳಿಕ ಇಲ್ಲಿ ಪ್ಯಾರಿಸ್​ನಲ್ಲಿ ಒಲಿಂಪಿಕ್ಸ್​ ನಡೆಯುತ್ತಿದೆ. ಈ ಬಾರಿಯ ಒಲಿಂಪಿಕ್ಸ್​ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಒಲಿಂಪಿಕ್ಸ್​ ಇತಿಹಾಸದಲ್ಲೇ ವಿಶೇಷ ಮಹತ್ವ ಪಡೆದಿದೆ. ಇದೇ ಮೊದಲ ಬಾರಿಗೆ ಕ್ರೀಡಾಂಗಣದ ಹೊರಗಡೆ ನಡೆಯುವ ಉದ್ಘಾಟನಾ ಸಮಾರಂಭ ಇದಾಗಿದೆ. 10,500ಕ್ಕೂ ಹೆಚ್ಚು ಅಥ್ಲೀಟ್‌ಗಳು ಪ್ಯಾರಿಸ್‌ನಿಂದ ಸುಮಾರು 6 ಕಿಲೋಮೀಟರ್‌ ವರೆಗೆ ಬೋಟ್‌ಗಳಲ್ಲೇ ಪರೇಡ್‌ ನಡೆಸಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಒಲಿಂಪಿಕ್ಸ್‌ ವೇಳೆ ನಡೆಯುವ ಪರೇಡ್‌ನ‌ಲ್ಲಿ ಗ್ರೀಸ್‌ ದೇಶಕ್ಕೆ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ. ಆಧುನಿಕ ಒಲಿಂಪಿಕ್ಸ್‌ ಕ್ರೀಡೆಗಳು ಮೊದಲು ಗ್ರೀಸ್‌ನಲ್ಲಿ ಆರಂಭವಾದ ಕಾರಣ ಗೌರವಾರ್ಥವಾಗಿ ಗ್ರೀಸ್‌ಗೆ ಆದ್ಯತೆ ನೀಡಲಾಗುತ್ತದೆ. ಉಳಿದಂತೆ ಆಯಾ ದೇಶಗಳ ಭಾಷೆಯ ಅಲ್ಪಾಬೆಟಿಕ್‌ ಅಕ್ಷರಮಾಲೆಯನ್ನು ಅನುಸರಿಸಿ ತಂಡಗಳು ಪಥಸಂಚಲನದಲ್ಲಿ ಪಾಲ್ಗೊಳ್ಳುತ್ತವೆ. ಆತಿಥೇಯ ತಂಡ ಯಾವಾಗಲೂ ಕೊನೆಯ ಸ್ಥಾನದಲ್ಲಿರುತ್ತದೆ.

ಭಾರೀ ಭದ್ರತೆ


ಒಲಿಂಪಿಕ್ಸ್‌ ವೇಳೆಯಲ್ಲಿ ಸಂಭಾವ್ಯ ದಾಳಿಗಳು ನಡೆಯುವ ಸಾಧ್ಯತೆ ಇರುವುದರಿಂದ ಪ್ಯಾರಿಸ್​ನಲ್ಲಿ ಹಿಂದೆಂದೂ ಕಾಣದ ಭಾರೀ ಭದ್ರತೆ ಕೈಗೊಳ್ಳಲಾಗಿದೆ. ಹೆಚ್ಚುವರಿ ಭದ್ರತೆಗಾಗಿ ಫ್ರಾನ್ಸ್​ನೊಂದಿಗೆ ಭಾರತದ ಯೋಧರು ಕೂಡ ಕೈಜೋಡಿಸಿದ್ದಾರೆ. ಹಮಾಸ್(Hamas) ಭಯೋತ್ಪಾದಕರಿಂದ(hamas terrorist) ಭೀಕರ ದಾಳಿಯ ಬೆದರಿಕೆ ಕೂಡ ಬಂದಿದೆ. ಕೆಲ ದಿನಗಳ ಹಿಂದಷ್ಟೇ ಮುಸುಕುಧಾರಿ ವ್ಯಕ್ತಿಯೊಬ್ಬ ಅರೇಬಿಕ್ ಭಾಷೆಯಲ್ಲಿ ಬೆದರಿಕೆ ಹಾಕಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಈ ವಿಡಿಯೊದಲ್ಲಿ ಒಲಿಂಪಿಕ್ಸ್​ ವೇಳೆ ಫ್ರಾನ್ಸ್​ ಅಧ್ಯಕ್ಷರನ್ನು ಹತ್ಯೆ ಮಾಡುವುದಾಗಿ ಮತ್ತು ಫ್ರಾನ್ಸ್​ನಲ್ಲಿ ರಕ್ತದೋಕುಳಿ ಹರಿಸುವುದಾಗಿ ಎಚ್ಚರಿಕೆ ನೀಡಲಾಗಿತ್ತು. ಉದ್ಘಾಟನಾ ಕಾರ್ಯಕ್ರಮವೊಂದಕ್ಕೇ 35000 ಮಂದಿ ಗುಪ್ತಚರರನ್ನು ನೇಮಕ ಮಾಡಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

PKL 2024: ಪ್ರೊ ಕಬಡ್ಡಿ ಲೀಗ್ ಆಟಗಾರರ ಹರಾಜು ಪ್ರಕ್ರಿಯೆಗೆ ದಿನಾಂಕ ನಿಗದಿ

PKL 2024: ಕಳೆದ 10ನೇ ಆವೃತ್ತಿ ಪ್ರೊ ಕಬಡ್ಡಿಯ ಫೈನಲ್(Pro Kabaddi Final)​ ಪಂದ್ಯದಲ್ಲಿ ಪುಣೇರಿ ಪಲ್ಟಾನ್‌(Puneri Paltan) 28-25 ಅಂಕಗಳ ಅಂತರದಿಂದ ಹರಿಯಾಣ ಸ್ಟೀಲರ್ಸ್‌(Haryana Steelers) ತಂಡವನ್ನು ಮಣಿಸಿ ಚೊಚ್ಚಲ ಪ್ರಶಸ್ತಿ ಗೆದ್ದು ಬೀಗಿತ್ತು.

VISTARANEWS.COM


on

Koo

ಮುಂಬಯಿ: 11ನೇ ಆವೃತ್ತಿಯ(Pro Kabaddi Season 11) ಪ್ರೊ ಕಬಡ್ಡಿ ಲೀಗ್ (ಪಿಕೆಎಲ್)ನ(pro kabaddi league) ಆಟಗಾರರ ಹರಾಜು(PKL 2024) ಪ್ರಕ್ರಿಯೆ ಆಗಸ್ಟ್ 15 ಮತ್ತು 16 ರಂದು ಮುಂಬೈನಲ್ಲಿ ನಡೆಯಲಿದೆ ಎಂದು ಆಯೋಜಕ ಮಶಾಲ್ ಸ್ಪೋರ್ಟ್ಸ್ ಸಂಸ್ಥೆ ತಿಳಿಸಿದೆ. 11ನೇ ಆವೃತ್ತಿಗೂ ಮುನ್ನ ಟೂರ್ನಿಯ ನೂತನ ಲಾಂಛನ ಅನಾವರಣದ ಮಾಡಲಾಗುತ್ತದೆ. ನೂತನ ಲಾಂಛನದಲ್ಲಿ ತ್ರಿವರ್ಣ ಧ್ವಜ ಹೋಲುವ ಕೇಸರಿ ಮತ್ತು ಹಸಿರು ಬಣ್ಣಗಳನ್ನು ಪ್ರದರ್ಶಿಸಲಾಗಿದೆ. ಕಬಡ್ಡಿ ದೇಶದ ಹೆಮ್ಮೆಯ ಕ್ರೀಡೆ ಎಂಬುದನ್ನು ಇದು ಸಾರುತ್ತದೆ.

ಕಳೆದ 10ನೇ ಆವೃತ್ತಿ ಪ್ರೊ ಕಬಡ್ಡಿಯ ಫೈನಲ್(Pro Kabaddi Final)​ ಪಂದ್ಯದಲ್ಲಿ ಪುಣೇರಿ ಪಲ್ಟಾನ್‌(Puneri Paltan) 28-25 ಅಂಕಗಳ ಅಂತರದಿಂದ ಹರಿಯಾಣ ಸ್ಟೀಲರ್ಸ್‌(Haryana Steelers) ತಂಡವನ್ನು ಮಣಿಸಿ ಚೊಚ್ಚಲ ಪ್ರಶಸ್ತಿ ಗೆದ್ದು ಬೀಗಿತ್ತು.

ಹೈದರಾಬಾದ್‌ನ ಗಚ್ಚಿಬೌಲಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದಿದ್ದ ಉಭಯ ತಂಡಗಳ ಈ ಫೈನಲ್​ ಫೈಟ್​ ಆರಂಭದಿಂದ ಹಿಡಿದು ಕೊನೆಯ ತನಕವೂ ರೋಚಕತೆ ಮತ್ತು ಕುತೂಹಲಕ್ಕೆ ಸಾಕ್ಷಿಯಾಗಿತ್ತು. ಇತ್ತಂಡಗಳ ಆಟಗಾರರು ಕೂಡ ಅಂಕ ಗಳಿಕೆಗಾಗಿ ತೀವ್ರ ಪೈಪೋಟಿ ನಡೆಸಿದ್ದರು. ಇವರ ಜತೆಗೆ ಕೋಚ್​ಗಳು ಕೂಡ ಅಗ್ರೆಸಿವ್​ ಆಗಿ ಕಂಡುಬಂದಿದ್ದರು. ಅಂತಿಮವಾಗಿ ಪುಣೇರಿ ಪಲ್ಟಾನ್‌ ತಂಡ 28-25 ಅಂಕಗಳ ಅಂತರದಿಂದ ಗೆದ್ದು ಚಾಂಪಿಯನ್​ ಪಟ್ಟ ಅಲಂಕರಿಸಿತ್ತು.

ಇದನ್ನೂ ಓದಿ Paris Olympics 2024: ನೀರಿನಾಳದಲ್ಲಿ ಅಭ್ಯಾಸ ನಡೆಸಿದ ನೀರಜ್ ಚೋಪ್ರಾ; ವಿಡಿಯೊ ವೈರಲ್​

ಕನ್ನಡಿಗ ಕೋಚ್‌ ಬಿ.ಸಿ. ರಮೇಶ್‌ ಮಾರ್ಗದರ್ಶನ


ಕನ್ನಡಿಗ ಕೋಚ್‌ ಬಿ.ಸಿ. ರಮೇಶ್‌ ಮಾರ್ಗದರ್ಶನದಲ್ಲಿ ಪುಣೇರಿ ತಂಡ ಈ ಆವೃತ್ತಿಯ ಆರಂಭದಿಂದಲೂ ಉತ್ತಮ ಪ್ರದರ್ಶನ ನೀಡಿ ಆಡಿದ 22 ಪಂದ್ಯಗಳಲ್ಲಿ 17 ಗೆಲುವುಗಳೊಂದಿಗೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಕಾಣಿಸಿಕೊಂಡಿತ್ತು. ತನ್ನ ಖ್ಯಾತಿಗೆ ತಕ್ಕಂತೆ ಫೈನಲ್​ನಲ್ಲಿಯೂ ಇದೇ ಪ್ರದರ್ಶನ ತೋರುವ ಮೂಲಕ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಕಳೆದ ಬಾರಿಯೂ ಪುಣೇರಿ ತಂಡ ಫೈನಲ್​ ಆಡಿತ್ತು. ಆದರೆ ಅಲ್ಲಿ ಜೈಪುರ ವಿರುದ್ಧ ಸೋತು ರನ್ನರ್​ ಅಪ್​ ಸ್ಥಾನ ಪಡೆದಿತ್ತು. ಆದರೆ ಈ ಬಾರಿ ಪ್ರಶಸ್ತಿಗೆಲ್ಲುವಲ್ಲಿ ಯಶಸ್ಸು ಕಂಡಿತ್ತು. ಇದಕ್ಕೆ ಪ್ರಮುಖ ಕಾರಣ ಕೋಚ್‌ ಬಿ.ಸಿ. ರಮೇಶ್‌ ಮಾರ್ಗದರ್ಶನ.

ಮೊದಲಾರ್ಧದ 20 ನಿಮಿಷದ ಆಟದಲ್ಲಿ ಕೊನೆಯ 1.28 ನಿಮಿಷದವರೆಗೂ ಪುಣೆ ತಂಡ ಹಿನ್ನಡೆಯಲ್ಲಿತ್ತು. ಆದರೆ, ಈ ವೇಳೆ ಡು ಆರ್​ ಡೈ ರೇಟ್​ನಲ್ಲಿ ಪಂಕಜ್​ ಮೋಹಿತೆ ಅವರು ಪಾದರಸದಂತಹ ರೇಡಿಂಗ್​ ದಾಳಿ ನಡೆಸಿ ಒಂದೇ ಬಾರಿಗೆ 5 ಅಂಕ ಕಲೆಹಾಕಿ ಪಂದ್ಯದ ಗತಿಯನ್ನೇ ಬದಲಿಸಿದರು. ಇದು ಪಂದ್ಯ ಟರ್ನಿಂಗ್​ ಪಾಯಿಂಟ್​ ಕೂಡ ಆಯಿತು. ಅವರ ಈ ರೇಡಿಂಗ್​ ಸಾಹಸದಿಂದ ಪುಣೆ ಭರ್ಜರಿ ಲೀಡ್​ ಪಡೆಯಿತು. ಮೊದಲಾರ್ಧ ಮುಕ್ತಾಯಕ್ಕೆ 13-10 ಅಂಕದ ಮುನ್ನಡೆ ಸಾಧಿಸಿತು. ಇದೇ ಮುನ್ನಡೆಯನ್ನು ಪಂದ್ಯದಕ್ಕೂ ಕಾಯ್ದುಕೊಂಡು ಪ್ರಶಸ್ತಿ ಎತ್ತಿಹಿಡಿದಿತ್ತು.

Continue Reading

ಕ್ರೀಡೆ

Paris Olympics 2024: ನೀರಿನಾಳದಲ್ಲಿ ಅಭ್ಯಾಸ ನಡೆಸಿದ ನೀರಜ್ ಚೋಪ್ರಾ; ವಿಡಿಯೊ ವೈರಲ್​

Paris Olympics 2024: ನೀರಿನಾಳದಲ್ಲಿ ಸ್ಕೂಬಾ ಡೈವ್ ಉಡುಪು ತೊಟ್ಟು ಜಾವೆಲಿನ್​ ಎಸೆಯುವಂತೆ ಅಭ್ಯಾಸ ನಡೆಸುತ್ತಿರುವ ವಿಡಿಯೊವನ್ನು ಸ್ವತಃ ನೀರಜ್​ ತಮ್ಮ ಅಧಿಕೃತ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. “ಆಕಾಶದಲ್ಲೇ ಆಗಲಿ, ನೆಲದ ಮೇಲಾಗಲಿ, ಅಥವಾ ನೀರಿನಾಳದಲ್ಲೇ ಆಗಲಿ! ನಾನು ಯಾವಾಗಲೂ ಜಾವೆಲಿನ್ ಬಗ್ಗೆಯೇ ಯೋಚಿಸುತ್ತಿರುವೆ. ತರಬೇತಿ ಶುರುವಾಗಿದೆ ಎಂದು” ಎಂದು ಬರೆದುಕೊಂಡಿದ್ದಾರೆ.

VISTARANEWS.COM


on

Paris Olympics 2024
Koo

ಪ್ಯಾರಿಸ್​: ಮಹತ್ವದ ಕ್ರೀಡಾಕೂಟವಾದ ಪ್ಯಾರಿಸ್ ಒಲಿಂಪಿಕ್ಸ್(​Paris Olympics 2024) ಕ್ರೀಡಾಕೂಟಕ್ಕೆ ಇಂದು ಅದ್ಧೂರಿ ಉದ್ಘಾಟನಾ ಸಮಾರಂಭದ ಮೂಲಕ ಅಧಿಕೃತ ಚಾಲನೆ ಸಿಗಲಿದೆ. ಕಳೆದ ಟೋಕಿಯೋ ಒಲಿಂಪಿಕ್ಸ್​ನಲ್ಲಿ ಚಿನ್ನ ಗೆದ್ದ ಭಾರತದ ಜಾವೆಲಿನ್​ ಎಸೆತಗಾರ ನೀರಜ್​ ಚೋಪ್ರಾ(neeraj chopra) ಅವರು ಈ ಬಾರಿಯೂ ದೇಶಕ್ಕೆ ಚಿನ್ನ ಗೆಲ್ಲುವ ಪಣತೊಟ್ಟಿದ್ದಾರೆ. ಇದಕ್ಕಾಗಿ ಅವರು ಸಮುದ್ರದ ಆಳದಲ್ಲಿ ಕಠಿಣ ಅಭ್ಯಾಸ ನಡೆಸಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ನೀರಿನಾಳದಲ್ಲಿ ಸ್ಕೂಬಾ ಡೈವ್ ಉಡುಪು ತೊಟ್ಟು ಜಾವೆಲಿನ್​ ಎಸೆಯುವಂತೆ ಅಭ್ಯಾಸ ನಡೆಸುತ್ತಿರುವ ವಿಡಿಯೊವನ್ನು ಸ್ವತಃ ನೀರಜ್​ ತಮ್ಮ ಅಧಿಕೃತ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. “ಆಕಾಶದಲ್ಲೇ ಆಗಲಿ, ನೆಲದ ಮೇಲಾಗಲಿ, ಅಥವಾ ನೀರಿನಾಳದಲ್ಲೇ ಆಗಲಿ! ನಾನು ಯಾವಾಗಲೂ ಜಾವೆಲಿನ್ ಬಗ್ಗೆಯೇ ಯೋಚಿಸುತ್ತಿರುವೆ. ತರಬೇತಿ ಶುರುವಾಗಿದೆ ಎಂದು” ಎಂದು ಬರೆದುಕೊಂಡಿದ್ದಾರೆ.

23 ವರ್ಷದ ನೀರಜ್ ಚೋಪ್ರಾ ಇದುವರೆಗಿನ ಶ್ರೇಷ್ಠ ನಿರ್ವಹಣೆ 89.94 ಮೀ. ದೂರ ಎಸೆದಿರುವುದು. ಈ ಎಸೆತವನ್ನು 2022ರ ಸ್ಟಾಕ್​ಹೋಮ್​ ಡೈಮಂಡ್​ ಲೀಗ್​ನಲ್ಲಿ ಎಸೆದಿದ್ದರು. ಈ ಬಾರಿಯ ಒಲಿಂಪಿಕ್ಸ್​ನಲ್ಲಿ 90 ಮೀ. ದೂರ ಎಸೆಯುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ Paris Olympics: ಇಂದು ಪ್ಯಾರಿಸ್​ ಒಲಿಂಪಿಕ್ಸ್​ಗೆ ಅಧಿಕೃತ ಚಾಲನೆ: ಉದ್ಘಾಟನಾ ಸಮಾರಂಭ ಎಷ್ಟು ಗಂಟೆಗೆ ಆರಂಭ?

ಕಾಶಿನಾಥ್ ನಾಯ್ಕ್ ಅವರು ನೀರಜ್ ಪ್ಯಾರಿಸ್​ನಲ್ಲಿ ನಡೆಯುವ ಒಲಿಂಪಿಕ್ಸ್​ನಲ್ಲಿಯೂ(neeraj chopra paris olympics) ಚಿನ್ನದ ಪದಕ ಗೆಲ್ಲಲಿದ್ದಾರೆ ಎಂದು ಆತ್ಮವಿಶ್ವಾಸದಿಂದ ಈ ಮಾತನ್ನು ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಕಾಶಿನಾಥ್, “ನಾನು 2015 ರಿಂದ ನೀರಜ್​ ಜತೆ ಕೆಲಸ ಮಾಡುತ್ತಿದ್ದೇನೆ. ಅವರ ಛಲವನ್ನು ಮೆಚ್ಚಲೇ ಬೇಕು.​ ಸಾಧಿಸುವ ಛಲವೇ ಅವರನ್ನು ಈ ಮಟ್ಟಕ್ಕೆ ತಂದು ನಿಲ್ಲಿಸಿದೆ. ಅತ್ಯಂತ ಶಿಸ್ತಿನ ಕ್ರೀಡಾಪಟು ಕೂಡ ಆಗಿದ್ದಾರೆ. 90 ಮೀ. ದೂರ ಜಾವೆಲಿನ್​ ಎಸೆಯುವದು ಪ್ರಮುಖ ಗುರಿ ಎಂದು ನೀರಜ್​ ಈಗಾಗಲೇ ಹೇಳಿದ್ದಾರೆ. ಹೇಳಿದಂತೆ ಅವರು ಈ ದೂರವನ್ನು ಕ್ರಮಿಸುವ ವಿಶ್ವಾಸ ನನ್ನಲ್ಲಿದೆ” ಎಂದು ಹೇಳಿದ್ದಾರೆ.

ಕಾಶಿನಾಥ್ ಮನೆ ಭೇಟಿ ನೀಡಿದ್ದ ನೀರಜ್​

ನೀರಜ್ ಪೋಲೆಂಡ್‌ನಲ್ಲಿ ನಡೆದಿದ್ದ ಜೂನಿಯರ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದ ಬಳಿಕ 2018ರ ಕಾಮನ್‌ವೆಲ್ತ್ ಗೇಮ್ಸ್, 2018 ಇಂಡೋನೇಷ್ಯಾ ಏಷ್ಯನ್ ಗೇಮ್ಸ್, ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಮತ್ತು ಡೈಮಂಡ್ ಲೀಗ್‌ನಲ್ಲಿ ಚಿನ್ನ ಗೆದ್ದಿದ್ದರು. ವಿಶ್ವ ಚಾಂಪಿಯನ್​ಶಿಪ್​ನಲ್ಲಿ ಚೊಚ್ಚಲ ಪ್ರಯತ್ನದಲ್ಲಿ ಬೆಳ್ಳಿ ಗೆದ್ದರೂ ಈ ಬಾರಿ ಚಿನ್ನ ಗೆದ್ದು ಎಲ್ಲ ವಿಶ್ವಮಟ್ಟದ ಟೂರ್ನಿಯಲ್ಲಿಯೂ ಚಿನ್ನ ಗೆದ್ದು ತಮ್ಮ ಆಸೆಯನ್ನು ಈಡೇರಿಸಿದರು. ಜತೆಗೆ ದೇಶದ ಕೀರ್ತಿ ಪತಾಕೆಯನ್ನು ಬಹು ಎತ್ತರಕ್ಕೆ ಹಾರಿಸಿದರು. ಅವರ ಈ ಸಾಧನೆ ಹೀಗೆಯೇ ಮುಂದುವರಿಯಲಿ ಎಂದು ಕಾಶಿನಾಥ್ ಹಾರೈಸಿದರು. ಟೊಕಿಯೊದಲ್ಲಿ ಚಿನ್ನದ ಪದಕ ಗೆದ್ದವು ಭಾರತಕ್ಕೆ ಮರಳಿದ ನೀರಜ್​ ಚೋಪ್ರಾ ಅವರು ತನ್ನ ಗುರು ಕಾಶಿನಾಥ್ ಅವರ ಮನೆಗೆ ಭೇಟಿ ನೀಡಿ ತಾವು ಗೆದ್ದ ಪದಕವನ್ನು ಅವರಿಗೆ ತೋರಿಸಿದ್ದರು. ಅಲ್ಲದೆ ಅವರ ಮನೆಯಲ್ಲಿ ಭೋಜನ ಮಾಡಿ ಮುಂದಿನ ಟೂರ್ನಿಗೆ ಆಶಿರ್ವಾದ ಪಡೆದು ಹಿಂದಿರುಗಿದ್ದರು.

Continue Reading

ಕ್ರೀಡೆ

Women’s Asia Cup: ಇಂದು ಸೆಮಿಫೈನಲ್‌ ಕಾದಾಟ: ಬಾಂಗ್ಲಾ ಸವಾಲಿಗೆ ಭಾರತ ಸಜ್ಜು

Women’s Asia Cup: ಭಾರತ ತಂಡ ಪ್ರಶಸ್ತಿ ಗೆಲ್ಲುವ ಹಾಟ್‌ ಫೇವರಿಟ್‌ ಆಗಿದ್ದರೂ ಕೂಡ ಯಾವುದೇ ಕಾರಣಕ್ಕೂ ಎದುರಾಳಿಯನ್ನು ಹಗುರವಾಗಿ ಕಾಣುವಂತಿಲ್ಲ. ಅದರಲ್ಲೂ ಅಪಾಯಕಾರಿ ಬಾಂಗ್ಲಾ ವಿರುದ್ಧ ಎಚ್ಚರಿಕೆ ಅತ್ಯಗತ್ಯ.

VISTARANEWS.COM


on

Women's Asia Cup
Koo

ದಂಬುಲಾ(ಶ್ರೀಲಂಕಾ): ಒಂದೆಡೆ ಪ್ಯಾರಿಸ್​ ಒಲಿಂಪಿಕ್ಸ್ ಉದ್ಘಾಟನಾ ಸಮಾರಂಭ ನಡೆದರೆ, ಮತ್ತೊಂದೆಡೆ ಮಹಿಳಾ ಏಷ್ಯಾಕಪ್(Women’s Asia Cup)​ ಸೆಮಿಫೈನಲ್​ ಪಂದ್ಯಗಳ ಕಾದಾಟ ನಡೆಯಲಿದೆ. ಒಟ್ಟಾರೆಯಾಗಿ ಇಂದು ಕ್ರೀಡಾಭಿಮಾನಿಗಳಿಗೆ ಭರ್ಜರಿ ರಸದೌತಣ ಸಿಗಲಿದೆ. ಇಂದು ನಡೆಯುವ ಮಹಿಳಾ ಏಷ್ಯಾಕಪ್​ ಸೆಮಿಫೈನಲ್​ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಹಾಗೂ ಈ ಬಾರಿಯ ಕೂಟದ ಅಜೇಯ ತಂಡವಾದ ಭಾರತವು ಬಾಂಗ್ಲಾದೇಶದ(India Women vs Bangladesh Women) ಸವಾಲನ್ನು ಎದುರಿಸಲಿದೆ. ಎರಡನೇ ಸೆಮಿಫೈನಲ್ಸ್‌ ಪಾಕಿಸ್ತಾನ ಮತ್ತು ಶ್ರೀಲಂಕಾ(Sri Lanka Women vs Pakistan Women) ಮುಖಾಮುಖಿಯಾಗಲಿವೆ.

ಭಾರತ ತಂಡ ಪ್ರಶಸ್ತಿ ಗೆಲ್ಲುವ ಹಾಟ್‌ ಫೇವರಿಟ್‌ ಆಗಿದ್ದರೂ ಕೂಡ ಯಾವುದೇ ಕಾರಣಕ್ಕೂ ಎದುರಾಳಿಯನ್ನು ಹಗುರವಾಗಿ ಕಾಣುವಂತಿಲ್ಲ. ಅದರಲ್ಲೂ ಅಪಾಯಕಾರಿ ಬಾಂಗ್ಲಾ ವಿರುದ್ಧ ಎಚ್ಚರಿಕೆ ಅತ್ಯಗತ್ಯ. ಏಕೆಂದರೆ 2018ರಲ್ಲಿ ಮಲೇಷ್ಯಾದಲ್ಲಿ ನಡೆದಿದ್ದ 7ನೇ ಆವೃತ್ತಿಯ ಫೈನಲ್​ನಲ್ಲಿ ಭಾರತಕ್ಕೆ ಬಾಂಗ್ಲಾದೇಶದ 3 ವಿಕೆಟ್​ ಅಂತರದ ಆಘಾತಕಾರಿ ಸೋಲುಣಿಸಿ ಏಷ್ಯಾ ಕಪ್​ ಗೆದ್ದು ಸಂಭ್ರಮಿಸಿತ್ತು. ಹೀಗಾಗಿ ಭಾರತ ಅತಿಯಾದ ಆತ್ಮವಿಶ್ವಾಸವನ್ನು ಬದಿಗಿಟ್ಟು ಆಡಲಿಳಿಯಬೇಕಿದೆ.

ಈ ಬಾರಿಯ ಟೂರ್ನಿಯಲ್ಲಿ ಭಾರತ ಆಡಿದ ಎಲ್ಲ ಪಂದ್ಯಗಳಲ್ಲಿಯೂ ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ಶ್ರೇಷ್ಠ ಪ್ರದರ್ಶನ ಕಂಡುಬಂದಿದೆ. ಇದೇ ಪ್ರದರ್ಶನ ಸೆಮಿಫೈನಲ್​ ಪಂದ್ಯದಲ್ಲಿಯೂ ಮೂಡಿ ಬರಬೇಕಿದೆ. ಆರಂಭಿಕ ಆಟಗಾರ್ತಿಯರಾದ ಶಫಾಲಿ ವರ್ಮ ಮತ್ತು ಸ್ಮೃತಿ ಮಂಧನಾ ಅವರ ಪ್ರಚಂಡ ಬ್ಯಾಟಿಂಗ್​ ಫಾರ್ಮ್, ಮಧ್ಯಮ ಕ್ರಮಾಂಕದಲ್ಲಿ ಜೆಮಿಮಾ ರೋಡ್ರಿಗಸ್​ ತಂಡಕ್ಕೆ ಆಸರೆಯಾಗುತ್ತಿದ್ದಾರೆ. ಚಿಂತೆ ಇರುವುದೆಂದರೆ, ನಾಯಕಿ ಹರ್ಮನ್​ಪ್ರೀತ್​ ಕೌರ್​ ಅವರ ಬ್ಯಾಟಿಂಗ್​ ವೈಫಲ್ಯ. ಕಳೆದೊಂದು ವರ್ಷದಿಂದ ಅವರು ನಿರೀಕ್ಷಿತ ಮಟ್ಟದ ಪ್ರದರ್ಶನ ತೋರುವಲ್ಲಿ ವಿಫಲರಾಗುತ್ತಲೇ ಬಂದಿದ್ದಾರೆ. ಈ ಪಂದ್ಯದಲ್ಲಿ ಸಿಡಿಯಬೇಕಾದ ಅನಿವಾರ್ಯತೆ ಇದೆ. ಭಾರತ ಮತ್ತು ಬಾಂಗ್ಲಾ ನಡುವಣ ಸೆಮಿಫೈನಲ್​ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ.

ಇದನ್ನೂ ಓದಿ Women’s Asia Cup 2024 : ದಾಖಲೆ ಬರೆದ ರಿಚಾ ಘೋಷ್​, ಇತಿಹಾಸ ಸೃಷ್ಟಿಸಿದ ಭಾರತ ತಂಡ

ಬಾಂಗ್ಲಾದೇಶ: ನಿಗರ್ ಸುಲ್ತಾನಾ(ನಾಯಕಿ), ದಿಲಾರಾ ಅಖ್ತರ್​, ಮುರ್ಷಿದಾ ಖಾತುನ್, ರುಮಾನಾ ಅಹ್ಮದ್, ಇಶ್ಮಾ ತಂಜಿಮ್, ರಿತು ಮೋನಿ, ರಬೇಯಾ ಖಾನ್, ಶೋರ್ನಾ ಅಕ್ಟರ್, ಜಹಾನಾರಾ ಆಲಂ, ನಹಿದಾ ಅಕ್ಟರ್, ಸಬಿಕುನ್ ನಹರ್, ರುಬ್ಯಾ ಹೈದರ್, ಮಾರುಫಾ ಅಕ್ಟರ್, ಶೋರಿಫಾ ಖಾತುನ್, ಸುಲ್ತಾನಾ ಖತುನ್.

ಭಾರತ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ರಿಚಾ ಘೋಷ್ (ವಿಕೆಟ್ ಕೀಪರ್), ಉಮಾ ಚೆಟ್ರಿ (ವಿಕೆಟ್ ಕೀಪರ್), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ಜೆಮಿಮಾ ರೊಡ್ರಿಗಸ್, ರೇಣುಕಾ ಠಾಕೂರ್, ದಯಾಲನ್ ಹೇಮಲತಾ, ಆಶಾ ಶೋಭಾನಾ, ರಾಧಾ ಯಾದವ್, ತನುಜಾ ಕನ್ವರ್, ಸಜನಾ ಸಜೀವನ್.

Continue Reading

ಕ್ರೀಡೆ

Sri lanka Team: ಟಿ20 ಸರಣಿ ಆರಂಭಕ್ಕೂ ಮುನ್ನವೇ ಲಂಕಾಗೆ ಗಾಯದ ಬರೆ; ಇಬ್ಬರು ವೇಗಿಗಳು ಔಟ್​

Sri lanka Team: ನುವಾನ್ ತುಷಾರ ಕಳೆದ ತಿಂಗಳು ಮುಕ್ತಾಯ ಕಂಡಿದ್ದ ಟಿ20 ವಿಶ್ವಕಪ್‌ನಲ್ಲಿ ಶ್ರೀಲಂಕಾ ತಂಡದ ಪರ ಅತಿ ಹೆಚ್ಚು ವಿಕೆಟ್ ಕಿತ್ತ ಬೌಲರ್‌ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

VISTARANEWS.COM


on

Sri lanka Team
Koo

ಕೊಲಂಬೊ: ಭಾರತ ವಿರುದ್ಧದ ತವರಿನ ಟಿ20 ಸರಣಿ ಆರಂಭಕ್ಕೂ ಮುನ್ನವೇ ಆತಿಥೇಯ ಶ್ರೀಲಂಕಾ ತಂಡಕ್ಕೆ(Sri lanka Team) ಗಾಯದ ಬರೆ ಬಿದ್ದಿದೆ. ಒಂದೇ ದಿನದ ಅಂತರದಲ್ಲಿ ಇಬ್ಬರು ಆಟಗಾರರು ಗಾಯಗೊಂಡು ಸರಣಿಯಿಂದ ಹೊರಬಿದ್ದಿದ್ದಾರೆ. ವೇಗಿಗಳಾದ ದುಷ್ಮಂತ ಚಮೀರಾ(dushmantha chameera) ಮತ್ತು ನುವಾನ್ ತುಷಾರ(Nuwan Thushara) ಗಾಯಗೊಂಡ ಆಟಗಾರರು.

ಉಭಯ ಆಟಗಾರರು ಕೂಡ ಅಭ್ಯಾಸ ನಡೆಸುವ ವೇಳೆ ಗಾಯಕ್ಕೆ ತುತ್ತಾದರು. ಫೀಲ್ಡಿಂಗ್​ ಅಭ್ಯಾಸ ವೇಳೆ ನುವಾನ್ ತುಷಾರ ಬೆರಳು ಮುರಿತವಾಗಿದೆ. ತಂಡದ ಪ್ರಮುಖ ವೇಗಿಗಳು ಟೂರ್ನಿಯಿಂದ ಹೊರಬಿದ್ದಿರುವುದು ಲಂಕಾಗೆ ಭಾರೀ ಹಿನ್ನಡೆ ಉಂಟುಮಾಡಿದೆ. ನುವಾನ್ ತುಷಾರ ಕಳೆದ ತಿಂಗಳು ಮುಕ್ತಾಯ ಕಂಡಿದ್ದ ಟಿ20 ವಿಶ್ವಕಪ್‌ನಲ್ಲಿ ಶ್ರೀಲಂಕಾ ತಂಡದ ಪರ ಅತಿ ಹೆಚ್ಚು ವಿಕೆಟ್ ಕಿತ್ತ ಬೌಲರ್‌ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ನುವಾನ್ ತುಷಾರ ಅಲಭ್ಯತೆಯಲ್ಲಿ ಬದಲಿ ಆಟಗಾರನಾಗಿ ವೇಗಿ ದಿಲ್ಶನ್ ಮಧುಶಂಕ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ದುಷ್ಮಂತ ಚಮೀರಾ ಬದಲಿಯಾಗಿ ಅಸಿತ ಫರ್ನಾಂಡೋ ಅವರನ್ನು ಹೆಸರಿಸಲಾಗಿದೆ.

ಇದನ್ನೂ ಓದಿ Team India: ಲಂಕಾ ಸರಣಿಗೂ ಮುನ್ನವೇ ಟೀಮ್​ ಇಂಡಿಯಾ ಜೆರ್ಸಿಯಲ್ಲಿ ಮಹತ್ವದ ಬದಲಾವಣೆ

2021ರ ಬಳಿಕ ಭಾರತ ಮೊದಲ ಬಾರಿಗೆ ಶ್ರೀಲಂಕಾದಲ್ಲಿ ದ್ವಿಪಕ್ಷೀಯ ಸರಣಿ ಆಡಲಿದೆ. ಲಂಕಾ ತಂಡಕ್ಕೆ ಮಾಜಿ ಆಟಗಾರ ಸನತ್​ ಜಯಸೂರ್ಯ ಮಾರ್ಗದರ್ಶನ ನೀಡಲಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಲಂಕಾ ಪ್ರೀಮಿಯರ್ ಲೀಗ್​ನಲ್ಲಿ ಚರಿತ್ ಅಸಲಂಕಾ ನಾಯಕತ್ವದಲ್ಲಿ ಜಾಫ್ನಾ ಕಿಂಗ್ಸ್ ತಂಡ ಚಾಂಪಿಯನ್​ ಪಟ್ಟ ಅಲಂಕರಿಸಿತ್ತು. ಹೀಗಾಗಿ ಲಂಕಾ ಕ್ರಿಕೆಟ್​ ಮಂಡಳಿ ಇವರಿಗೆ ನಾಯಕತ್ವ ಪಟ್ಟ ಕಟ್ಟಿದೆ. ಭಾರತ ಕೂಡ ನೂತನ ನಾಯಕ ಸೂರ್ಯಕುಮಾರ್​ ಯಾದವ್ ಸಾರಥ್ಯದಲ್ಲಿ ಆಡಲಿದೆ.

ಶ್ರೀಲಂಕಾ ಪರಿಕೃತ ತಂಡ


ಚರಿತ್ ಅಸಲಂಕಾ (ನಾಯಕ), ಪಾತುಮ್ ನಿಸ್ಸಾಂಕ, ಕುಸಲ್ ಜನಿತ್ ಪೆರೇರಾ, ಅವಿಷ್ಕ ಫೆರ್ನಾಂಡೋ, ಕುಸಲ್ ಮೆಂಡಿಸ್, ದಿನೇಶ್ ಚಾಂಡಿಮಲ್, ಕಮಿಂದು ಮೆಂಡಿಸ್, ದಸುನ್ ಶನಕ, ವನಿಂದು ಹಸರಂಗ, ದುನಿತ್ ವೆಲ್ಲಲಾಗೆ, ಮಹೇಶ್ ತೀಕ್ಷಣ, ಚಾಮಿಂದು ವಿಕ್ರಮಸಿಂಗ, ಮಥೀಶ ಪತಿರಾನ, ದಿಲ್ಶನ್ ಮಧುಶಂಕ, ಅಸಿತ ಫೆರ್ನಾಂಡೋ, ಬಿನೂರ ಫೆರ್ನಾಂಡೋ.

ಭಾರತ ತಂಡ

ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ್, ರಿಷಭ್ ಪಂತ್ (ವಿ.ಕೀ ), ಸಂಜು ಸ್ಯಾಮ್ಸನ್ (ವಿ.ಕೀ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ , ಅರ್ಶದೀಪ್​ ಸಿಂಗ್, ಖಲೀಲ್ ಅಹ್ಮದ್, ಮೊಹಮ್ಮದ್​ ಸಿರಾಜ್.

ಟೀಮ್​ ಇಂಡಿಯಾ ಜೆರ್ಸಿಯಲ್ಲಿ ಮಹತ್ವದ ಬದಲಾವಣೆ

ಶ್ರೀಲಂಕಾ(Sri Lanka series) ವಿರುದ್ಧದ ಟಿ20 ಸರಣಿಗೆ ಭಾರತ ತಂಡ(Team India) ಫೋಟೋಶೂಟ್​ ಮಾಡಿದೆ. ಜೆರ್ಸಿಯಲ್ಲಿ ಮಹತ್ವದ ಬದಲಾವಣೆಯೊಂದನ್ನು ಮಾಡಲಾಗಿದೆ. ಜೆರ್ಸಿಯಲ್ಲಿ(Team India unveil new T20I jersey) 2 ಸ್ಟಾರ್​ಗಳನ್ನು ಅಳವಡಿಸಲಾಗಿದೆ. ಈ ಹಿಂದೆ ಟಿ20 ವಿಶ್ವಕಪ್​ ವೇಳೆ ಒಂದು ಸ್ಟಾರ್ ಮಾತ್ರ ಇತ್ತು. ಇದೀಗ ಭಾರತ ತಂಡದ ಎರಡು ಟಿ20 ವಿಶ್ವಕಪ್​ ಗೆಲುವಿನ ಸಂಕೇತವಾಗಿ ಈ ಎರಡು ಸ್ಟಾರ್‌ಗಳನ್ನು ಹಾಕಲಾಗಿದೆ.

Continue Reading
Advertisement
Ranbir Kapoor casanova opens up about being labelled a cheater
ಬಾಲಿವುಡ್8 mins ago

Ranbir Kapoor: ʻಸ್ತ್ರೀಲೋಲʼ, ʻಚೀಟರ್ʼ ಎನ್ನುವ ಹಣೆಪಟ್ಟಿಯೊಂದಿಗೆ ಬದುಕುತ್ತಿದ್ದೇನೆ ಎಂದ ರಣಬೀರ್ ಕಪೂರ್!

CM Siddaramaiah
ಪ್ರಮುಖ ಸುದ್ದಿ11 mins ago

CM Siddaramaiah: ಇಂದು ಸಿಎಂ ಸಿದ್ದರಾಮಯ್ಯ ಸಂಪುಟ ಸಭೆ, ಇಲ್ಲಿದೆ ಅಜೆಂಡಾ

ಕ್ರೀಡೆ13 mins ago

PKL 2024: ಪ್ರೊ ಕಬಡ್ಡಿ ಲೀಗ್ ಆಟಗಾರರ ಹರಾಜು ಪ್ರಕ್ರಿಯೆಗೆ ದಿನಾಂಕ ನಿಗದಿ

Paris Olympics 2024
ಕ್ರೀಡೆ1 hour ago

Paris Olympics 2024: ನೀರಿನಾಳದಲ್ಲಿ ಅಭ್ಯಾಸ ನಡೆಸಿದ ನೀರಜ್ ಚೋಪ್ರಾ; ವಿಡಿಯೊ ವೈರಲ್​

PM Narendra Modi Live
ದೇಶ1 hour ago

PM Narendra Modi Live: ಕಾರ್ಗಿಲ್‌ ಯುದ್ಧ ಸ್ಮಾರಕಕ್ಕೆ ಪ್ರಧಾನಿ ಮೋದಿ ಭೇಟಿ, ವೀರ ಯೋಧರಿಗೆ ಗೌರವ ನಮನ-ಲೈವ್‌ ಇಲ್ಲಿ ವೀಕ್ಷಿಸಿ

police firing hubli
ಕ್ರೈಂ1 hour ago

Police Firing: ದರೋಡೆ, ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಸೆರೆ

Actor Yash Case Against Toxic Movie Producers For Building A Set On Forest Land
ಸ್ಯಾಂಡಲ್ ವುಡ್2 hours ago

Actor Yash: ಯಶ್‌ ನಟನೆಯ ʻಟಾಕ್ಸಿಕ್‌ʼ ಸಿನಿಮಾ ವಿರುದ್ಧ ದೂರು ದಾಖಲು

Women's Asia Cup
ಕ್ರೀಡೆ2 hours ago

Women’s Asia Cup: ಇಂದು ಸೆಮಿಫೈನಲ್‌ ಕಾದಾಟ: ಬಾಂಗ್ಲಾ ಸವಾಲಿಗೆ ಭಾರತ ಸಜ್ಜು

murder in PG koramangala
ಕ್ರೈಂ2 hours ago

Murder In PG: ಕೃತಿ ಕುಮಾರಿಗೆ ಮನಬಂದಂತೆ ಇರಿದ ಪಾತಕಿ, ನೋಡ್ತಾ ಇದ್ರೂ ಸಹಾಯಕ್ಕೆ ಬಾರದ ಯುವತಿಯರು

Actor Darshan wife Vijayalakshmi Darshan Visit Kollur Temple
ಸ್ಯಾಂಡಲ್ ವುಡ್2 hours ago

Actor Darshan: ದರ್ಶನ್‌ಗಾಗಿ ಕೊಲ್ಲೂರು ಮೂಕಾಂಬಿಕೆ ಮೊರೆ ಹೋದ ವಿಜಯಲಕ್ಷ್ಮಿ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ18 hours ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್21 hours ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ22 hours ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ23 hours ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ2 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ3 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ3 days ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ3 days ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ6 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

ಟ್ರೆಂಡಿಂಗ್‌