Paris Olympics Boxing: ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ ಬಾಕ್ಸರ್‌ ನಿಶಾಂತ್‌ ದೇವ್‌; ಟಿಟಿಯಲ್ಲಿ ಶ್ರೀಜಾ ಅಕುಲಾ ಪರಾಭವ - Vistara News

ಕ್ರೀಡೆ

Paris Olympics Boxing: ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ ಬಾಕ್ಸರ್‌ ನಿಶಾಂತ್‌ ದೇವ್‌; ಟಿಟಿಯಲ್ಲಿ ಶ್ರೀಜಾ ಅಕುಲಾ ಪರಾಭವ

Paris Olympics Boxing: ಈ ಬಾರಿಯ ಪ್ಯಾರಿಸ್​ ಒಲಿಂಪಿಕ್ಸ್​ನ ಟೇಬಲ್‌ ಟೆನಿಸ್​ನಲ್ಲಿ ಭಾರೀ ಸಂಚಲನ ಮೂಡಿಸಿದ್ದ ಭಾರತದ ಅಗ್ರ ಶ್ರೇಯಾಂಕದ ಟೇಬಲ್‌ ಟೆನಿಸ್‌ ಆಟಗಾರ್ತಿ ಶ್ರೀಜಾ ಅಕುಲಾ(Sreeja Akula) ಪ್ರೀ-ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಸೋಲು ಕಾಣುವ ಮೂಲಕ ಅವರ ಒಲಿಂಪಿಕ್ಸ್‌ ಅಭಿಯಾನವನ್ನು ಕೊನೆಗೊಳಿಸಿದ್ದಾರೆ.

VISTARANEWS.COM


on

Paris Olympics Boxing
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪ್ಯಾರಿಸ್​: ಭಾರತದ ಬಾಕ್ಸರ್‌ ನಿಶಾಂತ್‌ ದೇವ್‌(Nishant Dev) ಅವರು ಪ್ಯಾರಿಸ್‌ ಒಲಿಂಪಿಕ್ಸ್​ನಲ್ಲಿ(Paris Olympics Boxing) ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ್ದಾರೆ. ಇನ್ನೊಂದು ಗೆಲುವು ಸಾಧಿಸಿದರೆ ಪದಕವೊಂದು ಖಾತ್ರಿಯಾಗಲಿದೆ. ಬುಧವಾರ ತಡರಾತ್ರಿ ನಡೆದ ಪ್ರೀ-ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಜೋಸ್ ಗೇಬ್ರಿಯಲ್ ರೊಡ್ರಿಗಸ್ ಟೆನೊರಿಯೊ ಅವರನ್ನು 3-2 ಅಂತರದಿಂದ ಮಣಿಸಿ ಕ್ವಾರ್ಟರ್​ ಫೈನಲ್​ಗೆ ಲಗ್ಗೆಯಿಟ್ಟರು. ಮುಂದಿನ ಪಂದ್ಯದಲ್ಲಿ ನಿಶಾಂತ್‌, ಮೊಜಾಂಬಿಕ್‌ನ ಟಿ ಮುಕ್ಸಾಂಗಾ ಮತ್ತು ಮೆಕ್ಸಿಕೊದ ಎಂಎ ವರ್ಡೆ ಅಲ್ವಾರೆಜ್ ನಡುವಣ ವಿಜೇತರನ್ನು ಎದುರಿಸಲಿದೆ.

ತೀವ್ರ ಪೈಪೋಟಿಯಿಂದ ಸಾಗಿದ ಈ ಪಂದ್ಯದಲ್ಲು ಉಭಯ ಬಾಕ್ಸರ್​ಗಳು ಬಲಿಷ್ಠ ಪಂಚ್​ಗಳ ಮೂಲಕ ಗೆಲುವಿಗಾಗಿ ಹೋರಾಟ ನಡೆಸಿದರು. ಕೊನೆಗೂ ನಿಶಾಂತ್​ ದೇವ್​ 7ನೇ ಶ್ರೇಯಾಂಕದ ಆಟಗಾರರನ್ನು ಕೇವಲ 1(3-2) ಅಂಕದ ಅಂತರದಿಂದ ಮಣಿಸಿ ಕ್ವಾರ್ಟರ್​ ಫೈನಲ್​ ಪ್ರವೇಶಿಸಿದರು. ಸದ್ಯ ಬಾಕ್ಸಿಂಗ್​ನಲ್ಲಿ ಭಾರತ 2 ಪದಕ ನಿರೀಕ್ಷೆ ಮಾಡಿದೆ. ಇದಕ್ಕೂ ಮುನ್ನ ನಡೆದಿದ್ದ 75 ಕೆ.ಜಿ ಮಹಿಳಾ ವಿಭಾಗದ 16ರ ಸುತ್ತಿನ ಬಾಕ್ಸಿಂಗ್​ ಹೋರಾಟದಲ್ಲಿ ಟೋಕಿಯೋ ಒಲಿಂಪಿಕ್ಸ್‌ ಕಂಚಿನ ಪದಕ ವಿಜೇತೆ ಬಾಕ್ಸರ್​ ಲವ್ಲಿನಾ ಬೊರ್ಗೊಹೇನ್‌(Lovlina Borgohain) ಅವರು ನಾರ್ವೆಯ ಸನ್ನಿವಾ ಹೊಫ್‌ಸ್ತಾಡ್‌ ಅವರನ್ನು 5-0 ಅಂತರದಿಂದ ಮಣಿಸಿ ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ್ದರು. ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಲವ್ಲೀನಾ ಅವರು ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತ ಚೀನಾದ ಲಿ ಕಿಯಾನ್ ಅವರನ್ನು ಎದುರಿಸಲಿದ್ದಾರೆ.

ಶ್ರೀಜಾ ಅಕುಲಾ ಒಲಿಂಪಿಕ್ಸ್​ ಅಭಿಯಾನ ಅಂತ್ಯ


ಈ ಬಾರಿಯ ಪ್ಯಾರಿಸ್​ ಒಲಿಂಪಿಕ್ಸ್​ನ ಟೇಬಲ್‌ ಟೆನಿಸ್​ನಲ್ಲಿ ಭಾರೀ ಸಂಚಲನ ಮೂಡಿಸಿದ್ದ ಭಾರತದ ಅಗ್ರ ಶ್ರೇಯಾಂಕದ ಟೇಬಲ್‌ ಟೆನಿಸ್‌ ಆಟಗಾರ್ತಿ ಶ್ರೀಜಾ ಅಕುಲಾ(Sreeja Akula) ಪ್ರೀ-ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಸೋಲು ಕಾಣುವ ಮೂಲಕ ಅವರ ಒಲಿಂಪಿಕ್ಸ್‌ ಅಭಿಯಾನವನ್ನು ಕೊನೆಗೊಳಿಸಿದ್ದಾರೆ.

ಇದನ್ನೂ ಓದಿ Paris Olympics 2024 Day 6: ಇಂದಿನಿಂದ ಅಥ್ಲೆಟಿಕ್ಸ್ ಆರಂಭ; ಭಾರತದ ಕ್ರೀಡಾ ಸ್ಪರ್ಧೆಗಳ ವಿವರ ಹೀಗಿದೆ

ಒಲಿಂಪಿಕ್ಸ್‌ನ ಟೇಬಲ್ ಟೆನಿಸ್ ಸ್ಪರ್ಧೆಯಲ್ಲಿ ಪ್ರಿ-ಕ್ವಾರ್ಟರ್‌ಗೆ ತಲುಪಿದ ಎರಡನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ 26 ವರ್ಷದ ಅಕುಲಾ ಬುಧವಾರ ತಡರಾತ್ರಿ ನಡೆದ ಪ್ರೀ-ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ವಿಶ್ವ ನಂ. 1 ಮತ್ತು ಅಗ್ರ ಶ್ರೇಯಾಂಕದ ಚೀನಾದ ಪ್ಯಾಡ್ಲರ್ ಸನ್ ಯಿಂಗ್ಶಾ(Sun Yingsha) ವಿರುದ್ದ 4-0(9-11, 12-10, 11-4, 11-5, 10-12, 12-10) ಅಂತರದಿಂದ ಸೋತು ನಿರಾಸೆ ಮೂಡಿಸಿದರು. ಆರಂಭಿಕ 2 ಗೇಮ್​ಗಳಲ್ಲಿ ಭಾರೀ ಮುನ್ನಡೆ ಸಾಧಿಸಿದರೂ ಗೆಲುವು ಮಾತ್ರ ಒಲಿಯಲಿಲ್ಲ. ಆ ಬಳಿಕದ 2 ಗೇಮ್​ನಲ್ಲಿ ಸಂಪೂರ್ಣ ಶರಣಾದರು. ಇವರ ಸೋಲಿನೊಂದಿಗೆ ಟೆಬಲ್​ ಟೆನಿಸ್​ ಸ್ಪರ್ಧೆಯಲ್ಲಿ ಭಾರತದ ಅಭಿಯಾನ ಅಂತ್ಯ ಕಂಡಿದೆ. ಇದಕ್ಕೂ ಮುನ್ನ ನಡೆದಿದ್ದ ಮತ್ತೊಂದು ಪ್ರೀ-ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಮಣಿಕಾ ಬಾತ್ರ ಕೂಡ ಸೋಲು ಕಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IND vs SL 1st ODI: ವಿಶ್ವಕಪ್​ ಫೈನಲ್​ ಸೋಲಿನ ಬಳಿಕ ಮೊದಲ ಏಕದಿನ ಆಡಲು ಸಜ್ಜಾದ ಕೊಹ್ಲಿ, ರೋಹಿತ್​, ಬುಮ್ರಾ

IND vs SL 1st ODI:ಕಳೆದ ವರ್ಷ(2023) ನವೆಂಬರ್​ 19ರಂದು ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದಿದ್ದ ಏಕದಿನ ಫೈನಲ್​ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್​ ಅಂತರದ ಸೋಲು ಕಂಡು ನಿರಾಸೆ ಅನುಭವಿಸಿತ್ತು. ಇದಾದ ಬಳಿಕ ವಿರಾಟ್​ ಕೊಹ್ಲಿ, ರೋಹಿತ್​ ಶರ್ಮ, ಜಸ್​ಪ್ರೀತ್​ ಬುಮ್ರಾ(jasprit bumrah) ಯಾವುದೇ ಏಕದಿನ ಪಂದ್ಯವನ್ನಾಡಿರಲಿಲ್ಲ.

VISTARANEWS.COM


on

IND vs SL 1st ODI
Koo

ಕೊಲಂಬೊ: ಭಾರತ ಮತ್ತು ಶ್ರೀಲಂಕಾ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ(IND vs SL 1st ODI) ನಾಳೆ ನಡೆಯಲಿದೆ. ಟೀಮ್​ ಇಂಡಿಯಾದ ನಾಯಕ ರೋಹಿತ್​ ಶರ್ಮ(Rohit sharma), ವಿರಾಟ್​ ಕೊಹ್ಲಿ(virat kohli) ಸೇರಿ ಕೆಲ ಆಟಗಾರರು ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಫೈನಲ್​ ಸೋಲಿನ ಬಳಿಕ ಆಡುತ್ತಿರುವ ಮೊದಲ ಪಂದ್ಯ ಇದಾಗಿದೆ.

ಕಳೆದ ವರ್ಷ(2023) ನವೆಂಬರ್​ 19ರಂದು ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದಿದ್ದ ಏಕದಿನ ಫೈನಲ್​ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್​ ಅಂತರದ ಸೋಲು ಕಂಡು ನಿರಾಸೆ ಅನುಭವಿಸಿತ್ತು. ಇದಾದ ಬಳಿಕ ವಿರಾಟ್​ ಕೊಹ್ಲಿ, ರೋಹಿತ್​ ಶರ್ಮ, ಜಸ್​ಪ್ರೀತ್​ ಬುಮ್ರಾ(jasprit bumrah) ಯಾವುದೇ ಏಕದಿನ ಪಂದ್ಯವನ್ನಾಡಿರಲಿಲ್ಲ. ಇದೀಗ ಬರೋಬ್ಬರಿ 9 ತಿಂಗಳ ಬಳಿಕ ಏಕದಿನ ಸರಣಿಯನ್ನಾಡಲು ಸಜ್ಜಾಗಿದ್ದಾರೆ.

ಇದನ್ನೂ ಓದಿ IND vs SL : ಲಂಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲೂ ಭಾರತಕ್ಕೆ ಜಯ, ಸರಣಿ ಕ್ಲೀನ್ ಸ್ವೀಪ್ ಮಾಡಿದ ಸೂರ್ಯಕುಮಾರ್ ಪಡೆ

ಮುಂದಿನ ವರ್ಷ ಪಾಕ್​ ಆತಿಥ್ಯದಲ್ಲಿ ನಡೆಯುವ ಏಕದಿನ ಮಾದರಿಯ ಐಸಿಸಿ ಚಾಂಪಿಯನ್ಸ್​ ಟ್ರೋಫಿ ಟೂರ್ನಿಯ ನಿಟ್ಟಿನಲ್ಲಿ ಭಾರತಕ್ಕೆ ಈ ಸರಣಿ ಮಹತ್ವದ್ದಾಗಿದೆ. ಟಿ20 ಕ್ರಿಕೆಟ್​ಗೆ ವಿದಾಯ ಹೇಳಿರುವ ವಿರಾಟ್​ ಕೊಹ್ಲಿ ಮತ್ತು ನಾಯಕ ರೋಹಿತ್​ ಅವರು 2027ರ ಏಕದಿನ ವಿಶ್ವಕಪ್​ ಆಡಬೇಕಿದ್ದರೆ ಈ ಸರಣಿಯಿಂದಲೇ ತಮ್ಮ ಸಾಮರ್ಥ್ಯ ತೋರಬೇಕಿದೆ. ನೂತನ ಕೋಚ್​ ಗಂಭೀರ್​ ಮಾರ್ಗದರ್ಶನಲ್ಲಿ ಆಡುತ್ತಿರುವ ಮೊದಲ ಏಕದಿನ ಸರಣಿ ಕೂಡ ಇದಾಗಿದೆ.

ಭಾರತ ಟಿ20 ಕ್ರಿಕೆಟ್​ ತಂಡದಿಂದ ಕೈಬಿಟ್ಟಿರುವ ಕನ್ನಡಿಗ ಕೆ.ಎಲ್​ ರಾಹುಲ್(KL Rahul)​ ಅವರಿಗೆ ತಂಡದಲ್ಲಿ ಭದ್ರ ಸ್ಥಾನವೊಂದನ್ನು ಗಿಟ್ಟಿಸಿಕೊಳ್ಳಲು ಈ ಸರಣಿ ಮುಖ್ಯವಾಗಿದೆ. ತೀವ್ರ ಪೈಪೋಟಿಯ ಮಧ್ಯೆಯೂ ಅವರು ಏಕದಿನ ಸರಣಿಯಲ್ಲಿ ಅವಕಾಶ ಗಿಟ್ಟಿಸಿಕೊಂಡು ನಿರೀಕ್ಷಿತ ಬ್ಯಾಟಿಂಗ್​ ಪ್ರದರ್ಶನ ತೋದರೇ ಹೋದರೆ ಏಕದಿನ ತಂಡದಲ್ಲಿಯೂ ಅವರಿಗೆ ಬಾಗಿಲು ಬಂದ್​ ಆಗುವುದು ಖಚಿತ. ಈ ಹಿಂದೆ ಪಂತ್​ ಅನುಪಸ್ಥಿತಿಯಲ್ಲಿ ರಾಹುಲ್​ಗೆ ಕೀಪಿಂಗ್​ ಜವಾಬ್ದಾರಿ ನೀಡಿ ತಂಡದಲ್ಲಿ ಸ್ಥಾನ ನೀಡಲಾಗಿತ್ತು. ಆದರೆ ಈಗ ಪಂತ್​ ತಂಡಕ್ಕೆ ಆಗಮಿಸಿದ್ದಾರೆ.

ವಿರಾಟ್​ ಕೊಹ್ಲಿಗೆ(Virat Kohli) ಶ್ರೀಲಂಕಾ(India tour of Sri Lanka) ವಿರುದ್ಧದ ಏಕದಿನ ಸರಣಿಯಲ್ಲಿ ವಿಶೇಷ ದಾಖಲೆಯೊಂದನ್ನು ಬರೆಯುವ ಅವಕಾಶವಿದೆ. ಹೌದು, ಕೊಹ್ಲಿ 152 ರನ್ ಗಳಿಸಿದರೆ ಏಕದಿನ ಕ್ರಿಕೆಟ್​ನಲ್ಲಿ 14 ಸಾವಿರ ರನ್ ಪೂರೈಸಲಿದ್ದಾರೆ. ಈ ಸಾಧನೆ ಮಾಡಿದ ವಿಶ್ವದ ಮೂರನೇ ಬ್ಯಾಟರ್​ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಸದ್ಯ 292* ಏಕದಿನ ಪಂದ್ಯಗಳನ್ನಾಡಿರುವ ವಿರಾಟ್​ ಕೊಹ್ಲಿ 13,848* ರನ್(virat kohli odi runs)​ ಬಾರಿಸಿದ್ದಾರೆ. ಲಂಕಾ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಕೊಹ್ಲಿ 152 ರನ್​ ಬಾರಿಸಿದರೆ 14 ಸಾವಿರ ರನ್​ ಮೈಲುಗಲ್ಲು ತಲುಪಲಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ 14000ಕ್ಕೂ ಹೆಚ್ಚು ರನ್ ಗಳಿಸಿದ ಸಾರ್ವಕಾಲಿದ ದಾಖಲೆ ಸಚಿನ್ ತೆಂಡೂಲ್ಕರ್ ಮತ್ತು ಕುಮಾರ ಸಂಗಕ್ಕಾರ ಹೆಸರಿನಲ್ಲಿದೆ. ಸಚಿನ್ 463 ಏಕದಿನ ಪಂದ್ಯಗಳಲ್ಲಿ 18,426 ರನ್ ಗಳಿಸಿದ್ದರೆ, ಕುಮಾರ ಸಂಗಕ್ಕಾರ 404 ಪಂದ್ಯಗಳನ್ನಾಡಿ 14,234 ರನ್ ಬಾರಿಸಿದ್ದಾರೆ. ಕೊಹ್ಲಿಗೆ ಸಂಗಕ್ಕಾರ ದಾಖಲೆ ಮುರಿಯುವ ಅವಕಾಶವಿದೆ. ಆದರೆ ಸಚಿನ್​ ದಾಖಲೆ ಮುರಿಯುವುದು ಕಷ್ಟ ಸಾಧ್ಯ.

Continue Reading

ಕ್ರೀಡೆ

Paris Olympics: ನೇರಳೆ ಟ್ರ್ಯಾಕ್​ನಲ್ಲಿ ಕಮಾಲ್​ ಮಾಡಲು ಸಜ್ಜಾದ ಅಥ್ಲೀಟ್​ಗಳು

Paris Olympics: ​1976ರಿಂದಲೂ ಇಟಲಿಯ ಮೊಂಡೊ ಸಂಸ್ಥೆಯು ಒಲಿಂಪಿಕ್ಸ್‌ಗೆ ಟ್ರ್ಯಾಕ್‌ ಅಳವಡಿಕೆ ಕಾರ್ಯ ಮಾಡುತ್ತಿದ್ದು, ನೇರಳೆ ಬಣ್ಣದ ಟ್ರ್ಯಾಕ್‌ ಅನ್ನು ಆಧುನಿಕ ತಂತ್ರಜ್ಞಾನ ಬಳಸಿ ತಯಾರಿಸಿದೆ. ಈ ಟ್ರ್ಯಾಕ್​ನಲ್ಲಿ ವಿಶ್ವ ಹಾಗೂ ಒಲಿಂಪಿಕ್ಸ್‌ ದಾಖಲೆಗಳು ನಿರ್ಮಾಣಗೊಳ್ಳಲಿವೆ ಎಂದು ಮೊಂಡೊ ಸಂಸ್ಥೆ ವಿಶ್ವಾಸ ವ್ಯಕ್ತಪಡಿಸಿದೆ.

VISTARANEWS.COM


on

Koo

ಪ್ಯಾರಿಸ್​: ಒಲಿಂಪಿಕ್ಸ್​ ಕ್ರೀಡಾಕೂಟದಲ್ಲಿ ಅತ್ಯಂತ ಖ್ಯಾತಿ ಗಳಿಸಿರುವ(Paris Olympics) ಅಥ್ಲೆಟಿಕ್ಸ್​ ಸ್ಪರ್ಧೆಗಳು(paris olympic athletics) ಇಂದಿನಿಂದ ಆರಂಭಗೊಳ್ಳಲಿದೆ. ಉಳಿದೆಲ್ಲ ಸ್ಪರ್ಧೆಗಳಿಗಿಂತ ಅಥ್ಲೆಟಿಕ್ಸ್​ನಲ್ಲಿ ಗರಿಷ್ಠ 48 ಪದಕ ಸ್ಪರ್ಧೆ ನಡೆಯಲಿದೆ. ಈ ಪೈಕಿ ತಲಾ 23 ಪುರುಷರ ಮತ್ತು ಮಹಿಳಾ ಸ್ಪರ್ಧೆಯಾಗಿದೆ. 2 ಮಿಶ್ರ ವಿಭಾಗದ ಸ್ಪರ್ಧೆಯಾಗಿದೆ. ಈ ಬಾರಿ ಸಂಪ್ರದಾಯಿಕ ಇಟ್ಟಿಗೆ-ಕೆಂಪು ಬಣ್ಣದ ಟ್ರ್ಯಾಕ್‌ ಬದಲಾಗಿ ವಿನೂತ ಶೈಲಿಯ ನೇರಳೆ ಬಣ್ಣದ(purple track) ಸಿಂಥೆಟಿಕ್‌ ಟ್ರ್ಯಾಕ್​ನಲ್ಲಿ ಅಥ್ಲೀಟ್​ಗಳು ಕಣಕ್ಕಿಳಿಯಲಿದ್ದಾರೆ.

ಇದೇ ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಲ್ಯಾವೆಂಡರ್​ ಬಣ್ಣದ ಟ್ರ್ಯಾಕ್​ನಲ್ಲಿ(purple track) ಸ್ಪರ್ಧಿಸಲಿದ್ದಾರೆ. ಭಾರತದ ಜಾವೆಲಿನ್​ ಥ್ರೋ ತಾರೆ ನೀರಜ್​ ಚೋಪ್ರಾ ಅವರ ಎಸೆತದ ಶೈಲಿಗೂ ಈ ಟ್ರ್ಯಾಕ್​ ನೆರವಾಗಲಿದೆ ಎಂದು ಹೇಳಲಾಗಿದೆ. ಜತೆಗೆ ಈ ಟ್ರ್ಯಾಕ್​ನಲ್ಲಿ ಹಲವು ದಾಖಲೆಗಳು ನಿರ್ಮಾಣಗೊಳ್ಳಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ನೇರಳ ಬಣ್ಣ ಬಳಕೆಗೆ ಕಾರಣವೇನು?

ಪ್ಯಾರಿಸ್​ ಒಲಿಂಪಿಕ್ಸ್​ನ ಅಥ್ಲೆಟಿಕ್ಸ್​ ಟ್ರ್ಯಾಕ್​ಗೆ ನೇರಳೆ ಬಣ್ಣ ಬಳಸಲು ಕೂಡ ಒಂದು ಪ್ರಮುಖ ಕಾರಣವಿದೆ. ಅದೇನೆಂದರೆ, ಈ ಸಲದ ಒಲಿಂಪಿಕ್ಸ್​ ಗೇಮ್ಸ್​ ನೀಲಿ, ಹಸಿರು ಮತ್ತು ನೇರಳ ಬಣ್ಣದ ಥೀಮ್​ ಒಳಗೊಂಡಿದೆ. ಕ್ರೀಡಾಕೂಟದ ಎಲ್ಲ ತಾಣಗಳಲ್ಲಿ ಇದೇ ಬಣ್ಣಗಳು ಎದ್ದು ಕಾಣಲಿವೆ. ಇದೇ ನಿಟ್ಟಿನಲ್ಲಿ ಅಥ್ಲೆಟಿಕ್ಸ್​ ಟ್ರ್ಯಾಕ್​ಗೂ ದೃಶ್ಯ ಆಕರ್ಷಣೆಯ ನೇರಳ ಬಣ್ಣವನ್ನು ನೀಡಲಾಗಿದೆ. ಜತೆಗೆ ಮನೋವೈಜ್ಞಾನಿಕ ಕಾರಣವೂ ಇದೆ. ನೇರಳೆ ಬಣ್ಣವನ್ನು ಧೈರ್ಯಶಾಲಿ, ಶಕ್ತಿಯುತ ಮತ್ತು ಸೃಜನಾತ್ಮಕತೆಯ ಪ್ರತಿಕ ಎನ್ನಲಾಗಿದೆ.

ಇದನ್ನೂ ಓದಿ Paris Olympics Boxing: ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ ಬಾಕ್ಸರ್‌ ನಿಶಾಂತ್‌ ದೇವ್‌; ಟಿಟಿಯಲ್ಲಿ ಶ್ರೀಜಾ ಅಕುಲಾ ಪರಾಭವ

​1976ರಿಂದಲೂ ಇಟಲಿಯ ಮೊಂಡೊ ಸಂಸ್ಥೆಯು ಒಲಿಂಪಿಕ್ಸ್‌ಗೆ ಟ್ರ್ಯಾಕ್‌ ಅಳವಡಿಕೆ ಕಾರ್ಯ ಮಾಡುತ್ತಿದ್ದು, ನೇರಳೆ ಬಣ್ಣದ ಟ್ರ್ಯಾಕ್‌ ಅನ್ನು ಆಧುನಿಕ ತಂತ್ರಜ್ಞಾನ ಬಳಸಿ ತಯಾರಿಸಿದೆ. ಈ ಟ್ರ್ಯಾಕ್​ನಲ್ಲಿ ವಿಶ್ವ ಹಾಗೂ ಒಲಿಂಪಿಕ್ಸ್‌ ದಾಖಲೆಗಳು ನಿರ್ಮಾಣಗೊಳ್ಳಲಿವೆ ಎಂದು ಮೊಂಡೊ ಸಂಸ್ಥೆ ವಿಶ್ವಾಸ ವ್ಯಕ್ತಪಡಿಸಿದೆ.

2016ರಲ್ಲಿ ನೀಲಿ ಟ್ರ್ಯಾಕ್​ ಬಳಕೆ


ಸಾಮಾನ್ಯವಾಗಿ ಒಲಿಂಪಿಕ್ಸ್​ ಅಥ್ಲೆಟಿಕ್ಸ್​ ಸ್ಪರ್ಧೆಗಳು ಹೆಚ್ಚಾಗಿ ಇಟ್ಟಿಗೆ ಬಣ್ಣದ ಟ್ರ್ಯಾಕ್​ನಲ್ಲಿ ನಡೆಯುತ್ತಿತ್ತು. ಆದರೆ, ಇಂಥದ್ದೇ ರ್ನಿದಿಷ್ಟ ಬಣ್ಣದ ಟ್ರ್ಯಾಕ್​ನಲ್ಲಿ ಅಥ್ಲೆಟಿಕ್ಸ್​ ಸ್ಪರ್ಧೆ ನಡೆಸಬೇಕೆಂಬ ನಿಯಮವಿಲ್ಲ. 2016ರ ರಿಯೋ ಒಲಿಂಪಿಕ್ಸ್​ ವೇಳೆ ಮೊದಲ ಬಾರಿಗೆ ಇಟ್ಟಿಗೆ ಬಣ್ಣದ ಸಿಂಥೆಟಿಕ್​ ಟ್ರ್ಯಾಕ್​ ಬದಲು ನೀಲಿ ಟ್ರ್ಯಾಕ್​ ಮೇಲೆ ಅಥ್ಲೆಟಿಕ್ಸ್​ ಸ್ಪರ್ಧೆ ನಡೆದಿತ್ತು. ಈ ಬಾರಿ ನೇರಳೆ ಬಣ್ಣದ ಟ್ರ್ಯಾಕ್​ನಲ್ಲಿ ಅಥ್ಲೆಟಿಕ್ಸ್​ ಸ್ಪರ್ಧೆ ನಡೆಯಲಿದೆ. ಈ ವಿನೂತನ ತಂತ್ರಜ್ಞಾನದ ಹೊಸ ಟ್ರ್ಯಾಕ್​ಗಳು ಅಥ್ಲೀಟ್​ಗಳಿಗೆ ಅತ್ಯಂತ ವೇಗವಾಗಿ ಓಡಲು ನೆರವಾಗಲಿದೆ ಎಂದು ಮೊಂಡೋ ಕಂಪನಿ ತಿಳಿಸಿದೆ. ನೇರಳೆ ಬಣ್ಣದ ಅಥ್ಲೆಟಿಕ್ಸ್​ ಟ್ರ್ಯಾಕ್​ನಲ್ಲಿ ಲೇನ್​ಗಳ ಸಂಖ್ಯೆಯನ್ನು 8ರಿಂದ 9ಕ್ಕೆ ಏರಿಸಲಾಗಿದೆ. ಕ್ರೀಡಾಂಗಣದಲ್ಲಿ ಒಟ್ಟಾರೆ 17,000 ಚದರ ಮೀಟರ್​ ವಿಸ್ತೀರ್ಣದಲ್ಲಿ ಈ ನೇರಳೆ ಬಣ್ಣ ವ್ಯಾಪಿಸಿದೆ.

ಈ ಬಾರಿ ಪ್ಯಾರಿಸ್​ಗೆ ಕಳುಹಿಸಿದ 117 ಕ್ರೀಡಾಪಟುಗಳ ಪಟ್ಟಿಯಲ್ಲಿ ಅಥ್ಲೆಟಿಕ್ಸ್​ ದೊಡ್ಡ ತಂಡವಾಗಿದೆ. ಒಟ್ಟು 29 ಸ್ಪರ್ಧಿಗಳು ಭಾರತವನ್ನು ಈ ವಿಭಾಗದಿಂದ ಪ್ರತಿನಿಧಿಸಲಿದ್ದಾರೆ. ಇವರಿಂದ ಹಲವು ಪದಕಗಳನ್ನು ಕೂಡ ಈ ಬಾರಿ ನಿರೀಕ್ಷೆ ಮಾಡಲಾಗಿದೆ. 18 ಪುರುಷರು ಹಾಗೂ 11 ಮಹಿಳೆಯರು ಸೇರಿದ್ದಾರೆ. ಇಂದು ನಡೆಯುವ ಪುರುಷರ ಮತ್ತು ಮಹಿಳೆಯರ 20 ಕಿಮೀ ಓಟದ ನಡಿಗೆ ಸ್ಪರ್ಧೆಯಲ್ಲಿ ಐತಿಹಾಸಿಕ ಪದಕವೊಂದನ್ನು ನಿರೀಕ್ಷೆ ಮಾಡಲಾಗಿದೆ. ಅಕ್ಷದೀಪ್ ಸಿಂಗ್, ವಿಕಾಶ್ ಸಿಂಗ್ ,ಪರಮ್ಜೀತ್ ಸಿಂಗ್ ಬಿಷ್ತ್ ಪುರುಷರ ವಿಭಾಗದಲ್ಲಿ ಕಣಕ್ಕಿಳಿದರೆ, ಮಹಿಳಾ ವಿಭಾಗದಲ್ಲಿ ಏಕೈಕ ಓಟಗಾರ್ತಿ ಪ್ರಿಯಾಂಕಾ ಗೋಸ್ವಾಮಿ(priyanka goswami) ಸ್ಪರ್ಧಿಸಲಿದ್ದಾರೆ.

Continue Reading

ಕ್ರೀಡೆ

IPL 2025: ಇಂದು ಐಪಿಎಲ್ ಮೆಗಾ ಹರಾಜು ಕುರಿತು ಸಭೆ; ಫ್ರಾಂಚೈಸಿಗಳಿಂದ ಹಲವು ಬೇಡಿಕೆ!

IPL 2025:: ಸನ್​ರೈಸರ್ಸ್​ ಹೈದರಾಬಾದ್​, ಚೆನ್ನೈ ಸೂಪರ್​ ಕಿಂಗ್ಸ್​, ಹಾಲಿ ಚಾಂಪಿಯನ್​ ಕೆಕೆಆರ್ ಫ್ರಾಂಚೈಸಿ ಮಾಲಿಕರು​ ಕನಿಷ್ಠ 7 ಆಟಗಾರರನ್ನಾದರೂ ತಂಡದಲ್ಲಿ ಉಳಿಸಿಕೊಳ್ಳುವ ಅವಕಾಶ ನೀಡಬೇಕೆಂದು ಬೇಡಿಕೆ ಇರಿಸಿವೆ ಎಂದು ವರದಿಯಾಗಿದೆ.

VISTARANEWS.COM


on

IPL 2025
Koo

ಮುಂಬಯಿ: ಮುಂದಿನ ವರ್ಷದ ಐಪಿಎಲ್(IPL 2025)​ 18ನೇ ಆವೃತ್ತಿಗೆ ನಡೆಯುವ ಆಟಗಾರರ ಮೆಗಾ ಹರಾಜು(IPL 2025 Mega Auction) ಪ್ರಕ್ರಿಯೆ ಕುರಿತು ಇಂದು ಬಿಸಿಸಿಐ ಮತ್ತು ಐಪಿಎಲ್​ ಆಡಳಿತ ಮಂಡಳಿ ಎಲ್ಲ 10 ಫ್ರಾಂಚೈಸಿಗಳ ಜತೆ ಮುಂಬಯಿಯಲ್ಲಿ ಸಭೆ ನಡೆಸಲಿ ಎನ್ನಲಾಗಿದೆ. ಈ ಸಭೆಯಲ್ಲಿ ಹಲವು ಫ್ರಾಂಚೈಸಿಗಳು 8 ಆಟಗಾರರನ್ನು ರಿಟೇನ್​ ಮಾಡಿಕೊಳ್ಳಲು ಅನುಮತಿ ನೀಡುವಂತೆ ಪಟ್ಟು ಹಿಡಿಯಲಿದೆ ಎಂದು ತಿಳಿದುಬಂದಿದೆ.

ಸನ್​ರೈಸರ್ಸ್​ ಹೈದರಾಬಾದ್​, ಚೆನ್ನೈ ಸೂಪರ್​ ಕಿಂಗ್ಸ್​, ಹಾಲಿ ಚಾಂಪಿಯನ್​ ಕೆಕೆಆರ್ ಫ್ರಾಂಚೈಸಿ ಮಾಲಿಕರು​ ಕನಿಷ್ಠ 7 ಆಟಗಾರರನ್ನಾದರೂ ತಂಡದಲ್ಲಿ ಉಳಿಸಿಕೊಳ್ಳುವ ಅವಕಾಶ ನೀಡಬೇಕೆಂದು ಬೇಡಿಕೆ ಇರಿಸಿವೆ ಎಂದು ವರದಿಯಾಗಿದೆ. ಈ ಕುರಿತು ಕೆಲ ಟ್ವೀಟ್​ಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ.

ಐಪಿಎಲ್​ ಮುಖ್ಯಸ್ಥ ಅರುಣ್​ ಧುಮಾಲ್(Arun Dhumal) ಈ ಹಿಂದೆ ಹೇಳಿದ ಪ್ರಕಾರ ಈ ಬಾರಿ ಪ್ರತಿ ತಂಡಕ್ಕೆ 3-4 ಆಟಗಾರರನ್ನು ಮಾತ್ರ ರಿಟೇನ್​ ಮಾಡಿಕೊಳ್ಳಲು ಮಾತ್ರ ಅವಕಾಶ ಸಿಗಲಿದೆ ಎನ್ನಲಾಗಿದೆ. ಆದರೆ ಇದಕ್ಕೆ ಫ್ರಾಂಚೈಗಳು ಭಾರೀ ವಿರೋಧ ವ್ಯಕ್ತಪಡಿಸಿವೆ. ಇದು ಮಾತ್ರವಲ್ಲದೆ ಮೆಗಾ ಹರಾಜಿನಲ್ಲಿ ಮತ್ತೊಮ್ಮೆ RTM(ರೈಟ್ ಟು ಮ್ಯಾಚ್ ಕಾರ್ಡ್ ಬಳಕೆ) ಕಾರ್ಡ್ ಬಳಸುವ ಬಗ್ಗೆಯೂ ಫ್ರಾಂಚೈಸಿ ಡಿಮ್ಯಾಂಡ್ ಮಾಡಲಿದೆ. 2018ರ ಮೆಗಾ ಹರಾಜಿನಲ್ಲಿ RTMಗೆ ಅವಕಾಶವಿತ್ತು. ಆದರೆ 2022ರಲ್ಲಿ ನಡೆದ ಮೆಗಾ ಹರಾಜಿನಲ್ಲಿ ಇದನ್ನು ಕೈಬಿಡಲಾಗಿತ್ತು, ಇದೀಗ ಮತ್ತೆ ಈ ನಿಯವನ್ನು ಜಾರಿಗೆ ತರಲು ಫ್ರಾಂಚೈಸಿಗಳು ಒಳವು ತೋರಿದೆ ಎನ್ನಲಾಗಿದೆ.

ಇದನ್ನೂ ಓದಿ IPL 2025: ಬಿಸಿಸಿಐ ಈ ನಿಯಮ ಜಾರಿಗೆ ತಂದರೆ ಧೋನಿ ಮುಂದಿನ ಐಪಿಎಲ್​ ಆಡುವುದು ಅನುಮಾನ!

ಏನಿದು ಆರ್​ಟಿಎಂ ಕಾರ್ಡ್​?


ಆರ್​ಟಿಎಂ ಅನ್ವಯ ಫ್ರಾಂಚೈಸಿಯೊಂದು ತನ್ನ ತಂಡದ ಆಟಗಾರನೊಬ್ಬ ಬೇರೆ ತಂಡಕ್ಕೆ ಹೆಚ್ಚಿನ ಮೊತ್ತಕ್ಕೆ ಮಾರಾಟವಾದಾಗ ಅದೇ ಮೊತ್ತಕ್ಕೆ ಆತನನ್ನು ತನ್ನ ತಂಡದಲ್ಲಿ ಉಳಿಸಿಕೊಳ್ಳಲು ಅವಕಾಶ ನೀಡಲಾಗುತ್ತದೆ. ಇದನ್ನು ಆರ್​ಟಿಎಂ ಎನ್ನಲಾಗುತ್ತದೆ. ಈ ಬಾರಿ ಒಂದೇ ಕಾರ್ಡ್​ ಬಳಕೆಗೆ ಅವಕಾಶ ನೀಡುವುದಾಗಿ ಹೇಳಲಾಗಿದೆ. ಹೆಚ್ಚಿನ ಆರ್​ಟಿಎಂ ಬಳಸಲು ಅವಕಾಶ ನೀಡಿದರೆ ಹರಾಜು ಪ್ರಕ್ರಿಯೆ ಮಹತ್ವ ಕಳೆದುಕೊಳ್ಳುತ್ತದೆ ಎಂದು ಬಿಸಿಸಿಐ ಅಧಿಕಾರಿಗಳ ಅಭಿಪ್ರಾಯ. ಐಪಿಎಲ್​ನಲ್ಲಿ ಇದುವರೆಗೆ ವಿರಾಟ್​ ಕೊಹ್ಲಿ (ಆರ್​ಸಿಬಿ), ಜಸ್​ಪ್ರೀತ್​ ಬುಮ್ರಾ(ಮುಂಬೈ) ಮಾತ್ರ ಒಂದೇ ತಂಡದ ಪರ ಆಡಿದ್ದಾರೆ. ಉಳಿದ ಆಟಗಾರರು ಬೇರೆ ಬೇರೆ ಫ್ರಾಂಚೈಸಿ ಪರ ಕನಿಷ್ಠ ಒಂದೆರಡು ವರ್ಷಗಳ ಕಾಲ ಆಡಿದ್ದಾರೆ.

5 ವರ್ಷಗಳಿಗೊಮ್ಮೆ ಮೆಗಾ ಹರಾಜು?

ಐಪಿಎಲ್ ಮೆಗಾ ಹರಾಜನ್ನು ಇನ್ನು ಮುಂದೆ ಐದು ವರ್ಷಗಳಿಗೊಮ್ಮೆ ನಡೆಸುವಂತೆಯೂ ಕೆಲವು ಫ್ರಾಂಚೈಸಿಗಳು ಮನವಿ ಮಾಡಿದೆ ಎನ್ನಲಾಗಿದೆ. ಈ ಹಿಂದೆ ಪ್ರತಿ ಮೂರು ವರ್ಷಗಳಿಗೊಮ್ಮೆ ಮೆಗಾ ಹರಾಜು ಆಯೋಜಿಸಲಾಗುತ್ತಿತ್ತು. ಒಂದೊಮ್ಮೆ ಈ ಬೇಡಿಕೆಗೆ ಬಿಸಿಸಿಐ ಸಮ್ಮತಿಸಿದರೆ. ಮುಂದಿನ ಮೆಗಾ ಹರಾಜು 2029ರಲ್ಲಿ ನಡೆಯಲಿದೆ. ಇದರ ನಡುವೆ ಮಿನಿ ಹರಾಜು ಮಾತ್ರ ನಡೆಯಲಿದೆ. ಈ ತಿಂಗಳಾಂತ್ಯದಲ್ಲಿ ಐಪಿಎಲ್ ಮಾಲೀಕರೊಂದಿಗೆ ಬಿಸಿಸಿಐ ಸಭೆ ನಡೆಸಿ ಮೆಗಾ ಹರಾಜಿನ ಅಂತಿಮ ರೂಪುರೇಷೆಗಳ ಬಗ್ಗೆ ಚರ್ಚಿಸಲಿದೆ ಎಂದು ವರದಿಯಾಗಿದೆ

Continue Reading

ಕ್ರೀಡೆ

Anshuman Gaekwad: ಮಾಜಿ ಕ್ರಿಕೆಟಿಗ ಅಂಶುಮಾನ್‌ ಗಾಯಕ್ವಾಡ್‌ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ

Anshuman Gaekwad: ಭಾರತ ತಂಡದ ಮಾಜಿ ನಾಯಕರಾಗಿದ್ದ ದತ್ತಾಜಿರಾವ್‌ ಗಾಯಕ್ವಾಡ್‌ ಅವರ ಪುತ್ರನಾಗಿರುವ ಅಂಶುಮಾನ್‌ ಗಾಯಕ್ವಾಡ್‌, 1975 -1985ರ ಅವಧಿಯಲ್ಲಿ ಭಾರತದ ಪರ 40 ಟೆಸ್ಟ್‌ ಆಡಿದ್ದರು. ಮಧ್ಯಮ ಕ್ರಮಾಂಕದಲ್ಲಿ ಟೆಸ್ಟ್‌ ಬದುಕು ಆರಂಭಿಸಿದ ಗಾಯಕ್ವಾಡ್‌, ಬಳಿಕ ಆರಂಭಿಕನಾಗಿ ಭಡ್ತಿ ಪಡೆದಿದ್ದರು

VISTARANEWS.COM


on

Anshuman Gaekwad
Koo

ಮುಂಬಯಿ: ರಕ್ತದ ಕ್ಯಾನ್ಸರ್​ನಿಂದ ಬಳಲುತ್ತಿದ್ದ ಟೀಮ್​ ಇಂಡಿಯಾದ ಮಾಜಿ ಕ್ರಿಕೆಟಿಗ ಹಾಗೂ ಮಾಜಿ ಕೋಚ್‌ ಆಗಿದ್ದ ಅಂಶುಮಾನ್‌ ಗಾಯಕ್ವಾಡ್‌(Anshuman Gaekwad) ನಿಧನ ಹೊಂದಿದ್ದಾರೆ. ಕೆಲವು ವಾರಗಳ ಹಿಂದಷ್ಟೇ ಅವರ ಚಿಕಿತ್ಸೆಗೆ ಬಿಸಿಸಿಐ ಒಂದು ಕೋಟಿ ರೂ. ಆರ್ಥಿಕ ನೆರವು ಘೋಷಿಸಿತ್ತು. ಮಾಜಿ ಕ್ರಿಕೆಟಿಗರಾದ ಕಪಿಲ್‌ದೇವ್‌, ಸಂದೀಪ್‌ ಪಾಟೀಲ್‌ ಮೊದಲಾದವರ ಮನವಿ ಹಾಗೂ ಕಳಕಳಿಗೆ ಸ್ಪಂದಿಸಿದ ಬಿಸಿಸಿಐ ಈ ಮಾನವೀಯ ನಿರ್ಧಾರಕ್ಕೆ ಪ್ರಕಟಿಸಿತ್ತು. ಆದರೆ, ಇದೀಗ ಅವರು ನಮ್ಮನ್ನು ಅಗಲಿದ್ದಾರೆ. ನಿನ್ನೆ(ಬುಧವಾರ ಜುಲೈ 31) ತಡರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ.

ಅಂಶುಮಾನ್‌ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮಾಜಿ ಆಟಗಾರರಾದ ಕಪಿಲ್‌ದೇವ್‌, ಸುನೀಲ್‌ ಗಾವಸ್ಕರ್‌, ಸಚಿನ್​ ತೆಂಡೂಲ್ಕರ್​, ರವಿಶಾಸ್ತ್ರಿ, ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ, ಬಿಸಿಸಿಐ ಅಧ್ಯಕ್ಷ ರೋಜರ್​ ಬಿನ್ನಿ ಸೇರಿದಂತೆ ಹಲವು ಹಾಲಿ ಮತ್ತು ಮಾಜಿ ಕ್ರಿಕೆಟಿಗರು ಸಂತಾಪ ಸೂಚಿಸಿದ್ದಾರೆ.

ಭಾರತ ತಂಡದ ಮಾಜಿ ನಾಯಕರಾಗಿದ್ದ ದತ್ತಾಜಿರಾವ್‌ ಗಾಯಕ್ವಾಡ್‌ ಅವರ ಪುತ್ರನಾಗಿರುವ ಅಂಶುಮಾನ್‌ ಗಾಯಕ್ವಾಡ್‌, 1975 -1985ರ ಅವಧಿಯಲ್ಲಿ ಭಾರತದ ಪರ 40 ಟೆಸ್ಟ್‌ ಆಡಿದ್ದರು. ಮಧ್ಯಮ ಕ್ರಮಾಂಕದಲ್ಲಿ ಟೆಸ್ಟ್‌ ಬದುಕು ಆರಂಭಿಸಿದ ಗಾಯಕ್ವಾಡ್‌, ಬಳಿಕ ಆರಂಭಿಕನಾಗಿ ಭಡ್ತಿ ಪಡೆದಿದ್ದರು. ಸುನೀಲ್‌ ಗಾವಸ್ಕರ್‌ ಅವರೊಂದಿಗೆ ಅನೇಕ ಉತ್ತಮ ಜತೆಯಾಟ ನಡೆಸಿದ್ದರು. 1999 ರ ವಿಶ್ವಕಪ್ ಸಮಯದಲ್ಲಿ ಕೀನ್ಯಾ ಕ್ರಿಕೆಟ್ ತಂಡಕ್ಕೆ ತರಬೇತುದಾರರಾಗಿದ್ದರು.

“ಅಂಶುಮಾನ್ ಗಾಯಕ್ವಾಡ್ ಭಾರತೀಯ ಕ್ರಿಕೆಟ್‌ಗೆ ನೀಡಿದ ಕೊಡುಗೆ ಅಪಾರ. ಪ್ರತಿಭಾನ್ವಿತ ಆಟಗಾರ ಮತ್ತು ಅತ್ಯುತ್ತಮ ತರಬೇತುದಾರರಾಗಿದ್ದರು. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ” ಎಂದು ಮೋದಿ ಟ್ವೀಟ್​ ಮೂಲಕ ಸಂತಾಪ ಸೂಚಿಸಿದ್ದಾರೆ.

“ಭಾರತೀಯ ಕ್ರಿಕೆಟ್‌ನ ಹೆಮ್ಮೆಯನ್ನು ಹೆಚ್ಚಿಸಿದ ಕ್ರಿಕೆಟ್ ಕೌಶಲವನ್ನು ಹೆಚ್ಚಿಸಿದ ದಿಗ್ಗಜ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅವರ ಅಭಿಮಾನಿಗಳಿಗೆ ನನ್ನ ಹೃತ್ಪೂರ್ವಕ ಸಂತಾಪವಿದೆ. ಓಂ ಶಾಂತಿ” ಎಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ ಸಂತಾಪ ಸೂಚಿಸಿದ್ದಾರೆ.

Continue Reading
Advertisement
Gold Rate Today
ಚಿನ್ನದ ದರ3 mins ago

Gold Rate Today: ಮತ್ತೆ ಶಾಕ್‌ ಕೊಟ್ಟ ಚಿನ್ನದ ದರ; ಬಂಗಾರ ಇಂದು ಇಷ್ಟು ದುಬಾರಿ

Road Accident
ಚಿಕ್ಕಬಳ್ಳಾಪುರ9 mins ago

Road Accident : ಲಾರಿ ಗುದ್ದಿದ ರಭಸಕ್ಕೆ ಸ್ಥಳದಲ್ಲೇ ಪ್ರಾಣಬಿಟ್ಟ ಬೈಕ್‌ ಸವಾರರು

IND vs SL 1st ODI
ಕ್ರೀಡೆ30 mins ago

IND vs SL 1st ODI: ವಿಶ್ವಕಪ್​ ಫೈನಲ್​ ಸೋಲಿನ ಬಳಿಕ ಮೊದಲ ಏಕದಿನ ಆಡಲು ಸಜ್ಜಾದ ಕೊಹ್ಲಿ, ರೋಹಿತ್​, ಬುಮ್ರಾ

Heavy Rain
ದೇಶ35 mins ago

Heavy Rain: ನೋಡ ನೋಡುತ್ತಿದ್ದಂತೆ ನದಿಯಲ್ಲಿ ಕೊಚ್ಚಿ ಹೋಯ್ತು ಬಹುಮಹಡಿ ಕಟ್ಟಡ; ಭೀಕರ ದೃಶ್ಯ ಇಲ್ಲಿದೆ

India Couture Week 2024 Vicky Kaushal Rashmika Mandanna turn showstoppers
ಬಾಲಿವುಡ್35 mins ago

India Couture Week 2024: ಕೌಚರ್ ವೀಕ್ ಗ್ರ್ಯಾಂಡ್ ಫಿನಾಲೆಯಲ್ಲಿ ಮಿಂಚಿದ ರಶ್ಮಿಕಾ- ವಿಕ್ಕಿ ಕೌಶಲ್!

Self Harming
ಬೆಂಗಳೂರು43 mins ago

Self Harming : ವಯಸ್ಸಲ್ಲದ ವಯಸ್ಸಲ್ಲಿ ಲವ್; 15ನೇ ವರ್ಷಕ್ಕೆ ಮದುವೆ ಆದವಳು 17ನೇ ವರ್ಷಕ್ಕೆ ಆತ್ಮಹತ್ಯೆ

Urfi Javed Octopus Dress Is The Most EPIC Thing Of The Day
ವೈರಲ್ ನ್ಯೂಸ್55 mins ago

Urfi Javed: ಚಿಟ್ಟೆ, ಬ್ರಹ್ಮಾಂಡ ಎಲ್ಲಾ ಆಯ್ತು! ಈಗ ಅಕ್ಟೋಪಸ್​​ನಂತೆ ಬಂದ ಉರ್ಫಿ!

Hindu Girl Murder
ಕ್ರೈಂ56 mins ago

Yashashree Shinde Murder: ಮುಂಬಯಿಯ ಯಶಶ್ರೀ ಶಿಂಧೆಯನ್ನು ಕರ್ನಾಟಕದ ದಾವೂದ್ ಶೇಖ್ ಕೊಂದಿದ್ದು ಹೇಗೆ? ಆಘಾತಕಾರಿ ಮಾಹಿತಿ

Terror Attack
ದೇಶ1 hour ago

Terror Attack: ಒಂದು ತಿಂಗಳಲ್ಲಿ ಬ್ಯಾಕ್‌ ಟು ಬ್ಯಾಕ್‌ ಉಗ್ರರ ದಾಳಿ; 14 ಯೋಧರು ಹುತಾತ್ಮ

ಕ್ರೀಡೆ1 hour ago

Paris Olympics: ನೇರಳೆ ಟ್ರ್ಯಾಕ್​ನಲ್ಲಿ ಕಮಾಲ್​ ಮಾಡಲು ಸಜ್ಜಾದ ಅಥ್ಲೀಟ್​ಗಳು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ2 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ3 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ3 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ3 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ4 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ4 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ4 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ4 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌